Headlines

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

‘ಟಟೀರೀ’ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ವಿವಾದಕ್ಕೆ ಸಿಲುಕಿದ ಗಾಯಕ ಬಾದ್​ಶಾ

ಖ್ಯಾತ ಗಾಯಕ ಬಾದ್‌ಶಾ (Badshah) ಅವರು ಮತ್ತೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹರಿಯಾಣ್ವಿ ಭಾಷೆಯಲ್ಲಿ ಅವರ ಹೊಸ ಹಾಡು ‘ಟಟೀರಿ’ (Tateeree) ಇತ್ತೀಚೆಗೆ ಬಿಡುಗಡೆ ಆಯಿತು. ಈ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನ ಮಾಡುವ ಮತ್ತು ಅಶ್ಲೀಲ ಸಾಹಿತ್ಯ ಬಳಸಲಾಗಿದೆ ಎಂಬ ಆರೋಪದ ಮೇಲೆ ಹರಿಯಾಣ ರಾಜ್ಯ ಮಹಿಳಾ ಆಯೋಗ (HSCW) ಸಮನ್ಸ್ ಜಾರಿ ಮಾಡಿದೆ. ಈ ಮೊದಲು ಕೂಡ ಬಾದ್​ಶಾ ಅವರ ಹಾಡುಗಳ ಸಾಹಿತ್ಯದ ಬಗ್ಗೆ ಅನೇಕರಿಂದ ತಕರಾರು ವ್ಯಕ್ತವಾಗಿತ್ತು. ಕೆಲವೇ ದಿನಗಳ ಹಿಂದಷ್ಟೇ ಬಿಡುಗಡೆಯಾದ ‘ಟಟೀರಿ’…

Read More

GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ಕೇಂದ್ರಕ್ಕಿಂತ ರಾಜ್ಯದ ಬೆಳವಣಿಗೆ ಉತ್ತಮ ಎಂದ ಸಿದ್ದು

ಬೆಂಗಳೂರು, ಮಾರ್ಚ್​​ 06: ಜಿಎಸ್‌ಟಿ ಹಣ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್​​ ಮಂಡನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026-27ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿದ್ದೇನೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ. ಕೆಲ ರಾಜ್ಯಗಳು ಇನ್ನೂ ಚೇತರಿಸಿಕೊಂಡಿಲ್ಲ, ಮೈನಸ್ ಗ್ರೋತ್‌ನಲ್ಲಿದ್ದಾವೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ನಂಬರ್ ಒನ್ ಸ್ಥಾನದಲ್ಲಿದೆ ಎಂದು…

Read More

ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಬೆಂಗಳೂರು, (ಮಾರ್ಚ್ 06): ಚಿಕ್ಕ ಮಕ್ಕಳನ್ನು (children) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (social media) ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು…

Read More

ಬೆಂಗಳೂರಿನಲ್ಲಿ ಸೈನ್ಸ್ ಸಿಟಿ, ಎಲ್ಲಾ ಜಿಲ್ಲೆಗಳಲ್ಲಿ ಸೈನ್ಸ್ ಸೆಂಟರ್, 11 ಜಿಲ್ಲೆಗಳಲ್ಲಿ ಪ್ಲಾನಿಟೇರಿಯಂ ಸ್ಥಾಪನೆ: ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ (Bio Technology), ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜಿಸಲು ಬಜೆಟ್​ನಲ್ಲಿ ಸಿದ್ದರಾಮಯ್ಯ (Siddaramaiah) ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಸೈನ್ಸ್ ಸಿಟಿ ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಇಂದು ನಾಲ್ಕೂವರೆ ಲಕ್ಷ ಕೋಟಿ ರೂ ಮೊತ್ತದ ದಾಖಲೆಯ ಬಜೆಟ್ (Karnataka Budget 2026) ಮಂಡಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ‘ವಿಜ್ಞಾನ ನಗರ’ (Science City) ಸ್ಥಾಪಿಸಲಾಗುವುದು ಎಂದಿದ್ದಾರೆ. ಈ ಸೈನ್ಸ್ ಸಿಟಿಯನ್ನು 233 ಕೋಟಿ…

Read More

ತ್ರಿಷಾನ ರಾಜಕುಮಾರಿ ಎಂದು ಕರೆದಿದ್ದ ದಳಪತಿ ವಿಜಯ್

ದಳಪತಿ ವಿಜಯ್ ಹಾಗೂ ಸಂಗೀತಾ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ, ಸಂಗೀತಾ ಅವರು ಕೌಟುಂಬಿಕ ನ್ಯಾಯಾಲದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಈ ವಿಷಯ ಚರ್ಚೆ ಹುಟ್ಟುಹಾಕಿದೆ. ದಂಪತಿ ಬೇರೆ ಆಗಲು ತ್ರಿಷಾ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಹೀಗಿರುವಾಗಲೇ ಇವರಿಬ್ಬರೂ ವಿವಾಹ ಕಾರ್ಯಕ್ರಮ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಬಳಿಕೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ. ತ್ರಿಷಾ ಹಾಗೂ ವಿಜಯ್ ಒಟ್ಟಾಗಿ ಕಾಣಿಸಿಕೊಂಡ…

Read More

ಅಂದಿನ ಗೊರಜು ಭೂಮಿಗೆ ಇಂದು ಬಂಗಾರದ ಬೆಲೆ: ಏನಿದು ನೂರಾರು ಕೋಟಿ ಬೆಲೆಬಾಳುವ ಭೂಮಿಯ ಕಥೆ

ಕೋಲಾರ, ಮಾರ್ಚ್​​ 06: ಅದು ಬೆಟ್ಟಗುಡ್ಡಗಳಿರುವ ಭೂಮಿ (land). ಅಲ್ಲಿ ಕೃಷಿ ಮಾಡಲು ಯೋಗ್ಯವಲ್ಲ, ಹಾಗಾಗಿ ಅದನ್ನು ರೈತರಿಗೆ ಮಂಜೂರು ಮಾಡುವುದು ಬೇಡ ಎಂದು ಅಧಿಕಾರಿಗಳೇ ತಿರಸ್ಕರಿಸಿದ್ದರು. ಆದರೆ ಇಂದು ಆ ಭೂಮಿಗೆ ಬಂಗಾರದ ಬೆಲೆ ಬಂದ ಹಿನ್ನಲೆ ಅಧಿಕಾರಿಗಳೇ ಶಾಮೀಲಾಗಿ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ರಾತ್ರೋರಾತ್ರಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ಬಹುತೇಕ ಬೆಂಗಳೂರಿಗೆ ಹೊಂದಿಕೊಂಡಿರುವ ತಾಲ್ಲೂಕು. ಹಾಗಾಗಿ ಮಾಲೂರು ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ….

Read More

ಅಂತಾರಾಷ್ಟ್ರೀಯ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ ಸಿಎನ್​ಜಿ, ಪಿಎನ್​ಜಿ ಗ್ಯಾಸ್ ಬೆಲೆಗಳ ಏರಿಕೆ ಮಾಡದ ಅದಾನಿ ಕಂಪನಿ

ನವದೆಹಲಿ, ಮಾರ್ಚ್ 6: ಇರಾನ್ ಯುದ್ಧದಿಂದಾಗಿ ಜಾಗತಿಕವಾಗಿ ತೈಲ ಪೂರೈಕೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿದ್ದರೂ ಭಾರತದಲ್ಲಿ ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ ಸಂಸ್ಥೆ (Adani Total Gas Ltd) ತನ್ನ ಸಿಎನ್​ಜಿ ಮತ್ತು ಪಿಎನ್​ಜಿ ಅನಿಲಗಳ ಬೆಲೆ ಏರಿಕೆ ಮಾಡಿಲ್ಲ. ಔದ್ಯಮಿಕ ಗ್ರಾಹಕರಿಗೆ ಅದಾನಿ ಕಂಪನಿ ಎಲ್​ಎನ್​ಜಿ ಪೂರೈಕೆಯನ್ನು ಮಿತಿಗೊಳಿಸಿದೆ. ಅದು ಬಿಟ್ಟರೆ ಗೃಹಬಳಕೆಗೆ ಎಟಿಜಿಎಲ್​ನಿಂದ ಸರಬರಾಜಾಗುವ ಕೊಳವೆ ಅಡುಗೆ ಅನಿಲ ಹಾಗೂ ವಾಹನಗಳಿಗೆ ಬಳಕೆಯಾಗುವ ಸಿಎನ್​ಜಿ ಗ್ಯಾಸ್​ನ ಪೂರೈಕೆಯಲ್ಲಿ ಯಾವ ನಿರ್ಬಂಧ ಇಲ್ಲ. ಬೆಲೆಯಲ್ಲೂ ವ್ಯತ್ಯಯವಾಗಿಲ್ಲ. ಅದಾನಿ…

Read More

ಬೆಂಗಳೂರಿನಲ್ಲಿ ವಾಕಿಂಗ್ ಹೋದ ಮಹಿಳೆ 25 ಅಡಿ ಗುಂಡಿಗೆ ಬಿದ್ದು ಪರದಾಟ: ಪತ್ತೆ ಮಾಡಿ ರಕ್ಷಿಸಿದ್ದೇ ರೋಚಕ!

ಬೆಂಗಳೂರು, (ಮಾರ್ಚ್ 06): ವಾಕಿಂಗ್ ಹೋಗಿದ್ದ ಮಹಿಳೆ 25 ಅಡಿ ಆಳದ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ 56 ವರ್ಷದ ಮಹಿಳೆಯನ್ನು (Woman) ಬೆಂಗಳೂರಿನ (Bengaluru) ಚಂದ್ರಲೇಔಟ್ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. 56 ವರ್ಷದ ಮಹಿಳೆಯೊಬ್ಬರು ಇಂದು (ಮಾರ್ಚ್ 06) ವಾಕಿಂಗ್ ಹೋಗುವಾಗ ನಾಗರಭಾವಿ ಪಾರ್ಕ್ ಸಮೀಪದ ಸುಮಾರು 25 ಅಡಿ ಆಳದ ಗುಂಡಿಗೆ ಬಿದ್ದು ಮೇಲೆ ಬರಲಾಗದೇ ಒಳಗೆ ಅಪಾಯಕ್ಕೆ ಸಿಲುಕಿದ್ದರು. ಬಳಿಕ ಮಗ ತಾಯಿ ಮನೆಗೆ ಬರದಿರುವುದರಿಂದ ಆತಂಕಗೊಂಡು…

Read More

IND vs NZ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಟಿ20 ವಿಶ್ವಕಪ್ ಫೈನಲ್

2026 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಈ ಫೈನಲ್ ಪಂದ್ಯದ ಮತ್ತೊಂದು ವಿಶೇಷ ಕ್ಷಣವಾಗಿದೆ. ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಸತತ ಎರಡನೇ ಪ್ರಶಸ್ತಿಯತ್ತ ಗುರಿ ಇಟ್ಟಿದೆ. ಇತ್ತ ನ್ಯೂಜಿಲೆಂಡ್ ತನ್ನ ಮೊದಲ ಟಿ20 ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಇನ್ನೊಂದು…

Read More