UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ
ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ದೇಶದಾದ್ಯಂತ ಕುತೂಹಲಕ್ಕೆ ತೆರೆ ಎಳೆದಿದೆ. ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅನುಜ್ ಅಗ್ನಿಹೋತ್ರಿ ಅವರು ಮೊದಲ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ಅವರ ಬೆನ್ನಲ್ಲೇ ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ. ಕಳೆದ ವರ್ಷದ ಮೇ 25 ರಂದು ಪೂರ್ವಭಾವಿ ಪರೀಕ್ಷೆ ಆರಂಭವಾಗಿತ್ತು. ನಂತರ ಆಗಸ್ಟ್ 22 ರಿಂದ…