ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಪಾಡಿಕೊಂಡು ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಗಲಕೋಟೆ, ಮಾರ್ಚ್ 06: ಜಿಲ್ಲೆಯ ಜಮಖಂಡಿ (Bagalakot) ಪಟ್ಟಣದ ಮೋಮಿನ್ ಗಲ್ಲಿಯಲ್ಲಿ ಬದುಕಿದ್ದ ವ್ಯಕ್ತಿಯನ್ನು ಸತ್ತನೆಂದು ಭಾವಿಸಿ ಅಂತ್ಯ ಸಂಸ್ಕಾರಕ್ಕೆ ಕರೆದೊಯ್ದ ಘಟನೆ ನಡೆದಿದೆ. ಊರಿಗೆ ಕರೆತರುತ್ತಿದ್ದ ವ್ಯಕ್ತಿಯಲ್ಲಿ ಮಾರ್ಗ ಮಧ್ಯೆ ಮತ್ತೆ ಉಸಿರಾಟ ಕಂಡುಬಂದಿದ್ದು, ಸಂಬಂಧಿಕರು ಗಲಿಬಿಲಿಗೊಂಡಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಳಿ ಸಾವಿರಾರು ಜನರು ರಾತ್ರಿ ವೇಳೆ ಜಮಾಯಿಸಿದ್ದರು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ!
ಮೋಮಿನ್ ಗಲ್ಲಿಯ ನಿವಾಸಿ ಹಾಜಿ ಮುಬಾರಕ್ ಅವಟಿ (65) ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರಿಗೆ ಹೃದಯಾಘಾತವೂ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯಾದ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಮೇಲೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದ್ದು ಬದುಕುವ ಸಾಧ್ಯತೆ ಕಡಿಮೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ವೈದ್ಯರ ಸಲಹೆಗೆ ವಿರುದ್ಧವಾಗಿ ಮುಬಾರಕ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಕೊಂಡು ಊರಿಗೆ ಕರೆತರಲು ನಿರ್ಧರಿಸಿದರು. ವೆಂಟಿಲೇಟರ್ ತೆಗೆದ ಬಳಿಕ ಉಸಿರಾಟ ಕಾಣಿಸದ ಹಿನ್ನೆಲೆ ಮುಬಾರಕ್ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಭಾವಿಸಿ ಅಂತ್ಯಸಂಸ್ಕಾರಕ್ಕೆ ಜಮಖಂಡಿಗೆ ಕರೆತರುತ್ತಿದ್ದರು. ಆದರೆ ಲೋಕಾಪುರ ಸಮೀಪ ರಸ್ತೆಯ ಹಂಪ್ಸ್ ಬಳಿ ವಾಹನ ದಡಕಿದಾಗ ಮುಬಾರಕ್ ಅವಟಿ ಮತ್ತೆ ಉಸಿರಾಡಿದಂತೆ ಕಂಡುಬಂದಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಅವರನ್ನು ಜಮಖಂಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.
ಜಮಖಂಡಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಕೃಷ್ಣಾ ಬಣ್ಣದ ಅವರು ಈ ಕುರಿತು ಮಾಹಿತಿ ನೀಡಿ, ರಾತ್ರಿ ಸುಮಾರು 7.30 ರಿಂದ 8 ಗಂಟೆ ವೇಳೆಗೆ ಮುಬಾರಕ್ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಅವರ ಬಳಿ ಇದ್ದ ಕೇಸ್ ಪೇಪರ್‌ಗಳನ್ನು ಪರಿಶೀಲಿಸಿದಾಗ ಬೆಳಗಾವಿಯ ಆಸ್ಪತ್ರೆ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಎಲ್ಲಿಯೂ ಉಲ್ಲೇಖ ಮಾಡಿರಲಿಲ್ಲ. ಮುಬಾರಕ್ ಅವರಿಗೆ ಕಿಡ್ನಿ ಫೇಲ್ಯೂರ್ ಪರಿಣಾಮವಾಗಿ ಹೃದಯಾಘಾತವಾಗಿತ್ತು.
ವೆಂಟಿಲೇಟರ್ ತೆಗೆದ ಬಳಿಕ ಉಸಿರಾಟ ಕಾಣಿಸದ ಕಾರಣ ಸಂಬಂಧಿಕರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಮನೆಗೆ ಕರೆತರುತ್ತಿದ್ದರು. ಮಾರ್ಗ ಮಧ್ಯೆ ಹಂಪ್ಸ್ ಬಳಿ ಮತ್ತೆ ಉಸಿರಾಟ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ ಎಂದು ವೈದ್ಯರು ವಿವರಿಸಿದರು. ಜಮಖಂಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮುಬಾರಕ್ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಪಾಡಿಕೊಂಡು ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್‌ನಲ್ಲಿ ಮಾಡಲಾಗಿದೆ.
ಕರ್ನಾಟಕ ಬಜೆಟ್ 2026-27 ಪಿಡಿಎಫ್ ಪ್ರತಿ ಇಲ್ಲಿ ಡೌನ್ಲೋಡ್ ಮಾಡಿ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್‌ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.
ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
T20 World Cup 2026: ಟಿ20 ವಿಶ್ವಕಪ್ ಮುಕ್ತಾಯಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಮಾರ್ಚ್ 8 ರಂದು ನಡೆಯಲಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಫೈನಲ್ ಪಂದ್ಯದೊಂದಿಗೆ ವಿಶ್ವಕಪ್ಗೆ ತೆರೆ ಬೀಳಲಿದೆ. ಅದಕ್ಕೂ ಮುನ್ನ ಈ ಬಾರಿಯ ಟೂರ್ನಿಯ ಶ್ರೇಷ್ಠ ಆಟಗಾರನ ಪ್ರಶಸ್ತಿಗೆ ನಾಮನಿರ್ದೇಶನವಾಗಿರುವ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ 8 ಆಟಗಾರರಲ್ಲಿ ಒಬ್ಬರು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆಯಲಿದ್ದಾರೆ. ಈ ಪಟ್ಟಿಯಲ್ಲಿರುವ ಆಟಗಾರರು ಈ ಕೆಳಗಿನಂತಿದೆ..
ವಿಲ್ ಜ್ಯಾಕ್ಸ್: ಇಂಗ್ಲೆಂಡ್ ತಂಡದ ಆಲ್ರೌಂಡರ್ ವಿಲ್ ಜ್ಯಾಕ್ಸ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜ್ಯಾಕ್ಸ್ ಈ ಬಾರಿಯ ವಿಶ್ವಕಪ್ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 9 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 226 ರನ್ಗಳನ್ನು ಕಲೆಹಾಕಿದ್ದಾರೆ.
ಸಾಹಿಬ್ಝಾದ ಫರ್ಹಾನ್: ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್ಝಾದ ಫರ್ಹಾನ್ ಕೂಡ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸುತ್ತಿನಲ್ಲಿದ್ದಾರೆ. ಪಾಕ್ ಪರ 7 ಪಂದ್ಯಗಳನ್ನಾಡಿದ್ದ ಸಾಹಿಬ್ 160ರ ಸ್ಟ್ರೈಕ್ ರೇಟ್ನಲ್ಲಿ ಒಟ್ಟು 383 ರನ್ ಕಲೆಹಾಕಿದ್ದಾರೆ.
ಲುಂಗಿ ಎನ್ಗಿಡಿ: ಸೌತ್ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಈ ಬಾರಿಯ ವಿಶ್ವಕಪ್ನಲ್ಲಿ 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದು ಈ ವೇಳೆ 7.19 ಎಕಾನಮಿಯಲ್ಲಿ ರನ್ ನೀಡಿ ಒಟ್ಟು 12 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.
ಟಿಮ್ ಸೈಫರ್ಟ್: ನ್ಯೂಝಿಲೆಂಡ್ ತಂಡದ ಆರಂಭಿಕ ದಾಂಡಿಗ ಟಿಮ್ ಸೈಫರ್ಟ್ 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 161.17ರ ಸ್ಟ್ರೈಕ್ ರೇಟ್ನಲ್ಲಿ 274 ರನ್ಗಳನ್ನು ಕಲೆಹಾಕಿದ್ದಾರೆ.
ಶ್ಯಾಡ್ಲಿ ವ್ಯಾನ್ ಶಾಲ್ಕ್ವಿಕ್: ಯುಎಸ್ಎ ತಂಡದ ವೇಗಿ ಶ್ಯಾಡ್ಲಿ ವ್ಯಾನ್ ಶಾಲ್ಕ್ವಿಕ್ ಈ ಬಾರಿಯ ವಿಶ್ವಕಪ್ನಲ್ಲಿ ಆಡಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಈ ವೇಳೆ 6.80 ಎಕಾನಮಿಯಲ್ಲಿ ರನ್ ನೀಡಿ ಒಟ್ಟು 13 ವಿಕೆಟ್ಗಳನ್ನು ಕಬಳಿಸಿದ್ದಾರೆ ಎಂಬುದೇ ವಿಶೇಷ.
ರಚಿನ್ ರವೀಂದ್ರ: ನ್ಯೂಝಿಲೆಂಡ್ ತಂಡದ ಯುವ ಆಲ್ರೌಂಡರ್ ರಚಿನ್ ರವೀಂದ್ರ ಈವರೆಗೆ ಆಡಿದ 8 ಪಂದ್ಯಗಳಿಂದ ಒಟ್ಟು 11 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 128 ರನ್ಗಳನ್ನು ಕಲೆಹಾಕಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದಾರೆ.
ಐಡೆನ್ ಮಾರ್ಕ್ರಾಮ್: ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಈ ಬಾರಿಯ ವಿಶ್ವಕಪ್ನಲ್ಲಿ 8 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಬ್ಯಾಟಿಂಗ್ ಮೂಲಕ 286 ರನ್ ಕಲೆಹಾಕಿದರೆ, ಬೌಲಿಂಗ್ ಮೂಲಕ ಒಂದು ವಿಕೆಟ್ ಪಡೆದಿದ್ದಾರೆ.
ಸಂಜು ಸ್ಯಾಮ್ಸನ್: ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಈ ಬಾರಿಯ ವಿಶ್ವಕಪ್ನಲ್ಲಿ ಆಡಿರುವುದು ಕೇವಲ 4 ಮ್ಯಾಚ್ಗಳನ್ನು ಮಾತ್ರ. ಈ ವೇಳೆ 201ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 232 ರನ್ ಕಲೆಹಾಕಿದ್ದಾರೆ. ಈ ಮೂಲಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.
ಬೆಂಗಳೂರು, ಮಾರ್ಚ್ 06: ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ.
ಮರುನಾಮಕರಣದ ಜೊತೆಗೆ, ರಾಜ್ಯದ ವಿವಿಧ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಹಲವಾರು ಹೊಸ ಯೋಜನೆಗಳನ್ನು ಸಹ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಅದರಂತೆ, ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ ವೆಚ್ಚದಲ್ಲಿ ಎರಡು ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ಇವು ಸ್ಥಳೀಯ ಜನರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲಿವೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 6: ದಾಖಲೆಯ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 2026–27ನೇ ಸಾಲಿನ ಕರ್ನಾಟಕ ಆಯವ್ಯಯದಲ್ಲಿ (Karnataka Budget 2026) ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಗೆ ಬೆಂಬಲ ನೀಡುವಂತೆ ನಗರ ಅಭಿವೃದ್ಧಿಗೆ ಒಟ್ಟು 7,000 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.
ಬೆಂಗಳೂರು ನಗರದಲ್ಲಿ ರಸ್ತೆ, ಮೂಲಸೌಕರ್ಯ, ಪಾದಚಾರಿ ಮಾರ್ಗ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ನಗರದ ಐದು ನಗರ ಪಾಲಿಕೆಗಳಲ್ಲಿ 1,233 ಕೋಟಿ ರೂಪಾಯಿ ವೆಚ್ಚದಲ್ಲಿ ವಾರ್ಡ್ ಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.
1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್
ಇದರ ಜೊತೆಗೆ 1,700 ಕೋಟಿ ರೂಪಾಯಿ ವೆಚ್ಚದಲ್ಲಿ 158 ಕಿಲೋಮೀಟರ್ ಉದ್ದದ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲಾಗುತ್ತದೆ. ಮತ್ತೊಂದೆಡೆ 1,936 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಮುಖ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲು ಸರ್ಕಾರ ಯೋಜನೆ ರೂಪಿಸಿದೆ.
ಸಿಲ್ಕ್ ಬೋರ್ಡ್ ಟು ಕೆಆರ್ ಪುರಂ ಔಟರ್ ರಿಂಗ್ ರೋಡ್ಗೆ 450 ಕೋಟಿ ರೂ.
ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್ ಪುರಂ ಮೆಟ್ರೋ ನಿಲ್ದಾಣದವರೆಗೆ ಹೊರವರ್ತುಲ ರಸ್ತೆ (Outer Ring Road) ಅಭಿವೃದ್ಧಿಗೆ 450 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಜೊತೆಗೆ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕೆರೆಗಳ ಅಭಿವೃದ್ಧಿಗಾಗಿ 273 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರಿನ 450 ಕಿಲೋಮೀಟರ್‌ಗೂ ಹೆಚ್ಚು ರಸ್ತೆಗೆ ವೈಟ್ ಟಾಪಿಂಗ್ ಮಾಡುವ ಯೋಜನೆಯೂ ಸರ್ಕಾರದ ಗಮನ ಸೆಳೆದಿದೆ. ಇದಕ್ಕಾಗಿ ಸುಮಾರು 3,000 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ನಗರದ ಪಾದಚಾರಿಗಳ ಸುರಕ್ಷತೆ ಮತ್ತು ಸೌಲಭ್ಯ ಹೆಚ್ಚಿಸಲು 500 ಕಿಲೋಮೀಟರ್ ಉದ್ದದ ಪಾದಚಾರಿ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ಯೋಜನೆ ರೂಪಿಸಲಾಗಿದೆ. ಇದೇ ವೇಳೆ ಸಂಚಾರ ಸುಗಮತೆಗೆ ಹಾಗೂ ಸುರಕ್ಷತೆಗೆ 100 ಸ್ಕೈವಾಕ್‌ಗಳನ್ನು ನಿರ್ಮಿಸುವುದಕ್ಕೂ ಸರ್ಕಾರ ನಿರ್ಧರಿಸಿದೆ.
ಇದರ ಜೊತೆಗೆ ನಗರ ಸೌಂದರ್ಯ ಹೆಚ್ಚಳಕ್ಕೂ ಒತ್ತು ನೀಡಲಾಗಿದ್ದು, 175 ಪ್ರಮುಖ ಜಂಕ್ಷನ್‌ಗಳನ್ನು ಆಧುನಿಕವಾಗಿ ಅಭಿವೃದ್ಧಿಪಡಿಸುವ ಯೋಜನೆ ಕೂಡ ಬಜೆಟ್‌ನಲ್ಲಿ ಪ್ರಕಟವಾಗಿದೆ.
ಬೆಂಗಳೂರಿಗೆ ಇನ್ನೂ ಏನೇನು ಕೊಡುಗೆ?
ಬೆಂಗಳೂರು ಹೊರವಲಯದ ವಸತಿ ಪ್ರದೇಶಗಳಲ್ಲಿ ಸೆರೆಹಿಡಿದ ಚಿರತೆಗಳ ಪುನರ್ವಸತಿಗಾಗಿ ಬನ್ನೇರುಘಟ್ಟದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಘೋಷಿಸಲಾಗಿದೆ. ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಜೈವಿಕ ಉದ್ಯಾನ ನಿರ್ಮಾಣ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ.
ಒಟ್ಟಾರೆ, ಈ ಬಜೆಟ್‌ನಲ್ಲಿ ಘೋಷಿಸಲಾದ ವಿವಿಧ ಯೋಜನೆಗಳು ಡಿ.ಕೆ. ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ಕನಸಿಗೆ ಮತ್ತಷ್ಟು ಬಲ ನೀಡುವಂತೆ ಕಂಡುಬಂದಿವೆ. ರಸ್ತೆ, ಸಂಚಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ನೀಡಿರುವ ಹೆಚ್ಚಿನ ಅನುದಾನದಿಂದ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ವೇಗ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದೇಶಿಗರಿಗೆ ಭಾರತದ ಅಂದ್ರೆ (foreigner) ಅದೇನೋ ಸೆಳೆತ. ಹೀಗಾಗಿ ಆಚಾರ ವಿಚಾರ, ಉಡುಗೆ ತೊಡುಗೆಯನ್ನು ಇಷ್ಟ ಪಟ್ಟು ತಮ್ಮ ಕುಟುಂಬದೊಂದಿಗೆ ಇಲ್ಲೇ ಜೀವನ ಕಟ್ಟಿಕೊಳ್ಳೋದು ಇದೆ. ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ವಾಸಿಸುತ್ತಿರುವ ಕೆನಡಾದ ವ್ಯಕ್ತಿಯೊಬ್ಬರು ತಾನು ಮಾತ್ರ ಭಾರತದಲ್ಲಿ ನೆಲೆಸಲು ಯಾಕೆ ಆಯ್ಕೆ ಮಾಡಿಕೊಂಡೆ ಎಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ.
ಕ್ಯಾಲೆಬ್ ಫ್ರೀಸೆನ್ (@caleb_friesen) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ವಾಸಿಸುವ ಕ್ಯಾಲೆಬ್ ಫ್ರೈಸೆನ್ ಎಂಬ ವ್ಯಕ್ತಿಯೂ ಆಗಾಗ್ಗೆ ಕೇಳುವ ಪ್ರಶ್ನೆಗೆ ಉತ್ತರಿಸಿದ್ದಾರೆ. ನೀವು ಭಾರತದಲ್ಲಿ ವಾಸಿಸಲು ಏಕೆ ಆಯ್ಕೆ ಮಾಡುತ್ತೀರಿ? ನನಗೆ ಈ ಪ್ರಶ್ನೆ ತುಂಬಾ ಬರುತ್ತದೆ. ಆದರೆ ಈ ಪ್ರಶ್ನೆಯೂ ಅಪನಂಬಿಕೆಯ ಭಾವನೆಯನ್ನು ಹೊಂದಿರುತ್ತದೆ. ನೀವು ಭಾರತದಲ್ಲಿ ಏಕೆ ವಾಸಿಸುತ್ತಿದ್ದೀರಿ ಎಂಬುದು ಮಾತ್ರವಲ್ಲ? ಯಾರಾದರೂ ಸ್ವಯಂಪ್ರೇರಣೆಯಿಂದ ಭಾರತದಲ್ಲಿರಲು ಏಕೆ ಬಯಸುತ್ತಾರೆ ಎಂಬುದು ಕೂಡ ಅದೇ ಆಗಿದೆ?. ಈ ಪ್ರಶ್ನೆಯೂ ಕೆಲವು ಭಾರತೀಯರಲ್ಲಿ ವಿದೇಶಿ ಆಯ್ಕೆಗಳನ್ನು ಅಂತರ್ಗತವಾಗಿ ಉತ್ತಮವೆಂದು ನೋಡುವ ವಿಶಾಲ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ
ಭಾರತೀಯ ಪೋಷಕರಲ್ಲಿ ಬಹುತೇಕರು ತಮ್ಮ ಮಕ್ಕಳು ವಿದೇಶದಲ್ಲಿ ನೆಲೆಸಬೇಕೆಂದು ಬಯಸುತ್ತಾರೆ. ಪೋಷಕರೊಂದಿಗಿನ ಸಂಭಾಷಣೆಗಳು ಹೆಚ್ಚಾಗಿ ಹೆಚ್ಚಿನ ಸಂಬಳ ಗಳಿಸುವುದು ಅಥವಾ ವಿದೇಶದಲ್ಲಿ ಮನೆ ಖರೀದಿಸುವತ್ತ ಕೇಂದ್ರೀಕರಿಸುತ್ತವೆ. ಇದೆಲ್ಲವೂ ಮೇಲ್ನೋಟದ ವಿಷಯ. ವಿದೇಶದಲ್ಲಿ ಯಶಸ್ಸು ಅಗತ್ಯವಾಗಿ ತೃಪ್ತಿ ಅಥವಾ ಸಂತೋಷಕ್ಕೆ ಕಾರಣವಾಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಹೆಚ್ಚು ಅಭಿವೃದ್ಧಿ ಹೊಂದಿದ ದೇಶದಲ್ಲಿ ವಾಸಿಸುವುದರಿಂದ ಸ್ವಯಂಚಾಲಿತವಾಗಿ ಉತ್ತಮ ಜೀವನ ಸಿಗುತ್ತದೆ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಹೆಚ್ಚು ಅಭಿವೃದ್ಧಿ ಹೊಂದಿದ ಸ್ಥಳದಲ್ಲಿ ವಾಸಿಸುವುದರಿಂದ ನೀವು ಸಂತೋಷವಾಗಿರುತ್ತೀರಿ ಎಂಬ ಅಭಿಪ್ರಾಯವು ಇದೆ. ಆದರೆ ಆ ಸ್ಥಳಗಳಲ್ಲಿಯೂ ಸಮಸ್ಯೆಗಳಿವೆ. ನ್ಯೂಯಾರ್ಕ್, ಲಂಡನ್, ಸಿಂಗಾಪುರ ಈ ಎಲ್ಲಾ ದೇಶಗಳಲ್ಲಿ ವಿಭಿನ್ನ ರೀತಿಯ ಸಮಸ್ಯೆಗಳಿವೆ. ನಾನು ಇರುವ ಸ್ಥಳ ಭಾರತ. ನಾನು ಎಲ್ಲೇ ಇದ್ದರೂ, ನಾನು ಆಶಾವಾದಿಯಾಗಿರಲು ಮತ್ತು ನನಗಿರುವ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.
ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ನಿಮ್ಮ ಮಾತು ಸತ್ಯ, ಸಂಬಳ ಆಸ್ತಿ ಗಳಿಕೆಗಿಂತ ಸಂತೋಷ ಮುಖ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು, ಹೆಚ್ಚಿನ ಪೋಷಕರಿಗೆ ಮಕ್ಕಳನ್ನು ಒಳ್ಳೆಯ ಉದ್ಯೋಗ ಸಿಗುವ ಸಂಬಳದಲ್ಲಿ ನೋಡುವುದರಲ್ಲಿ ಖುಷಿ. ಹೀಗಾಗಿ ವಿದೇಶಕ್ಕೆ ಓದಲು ಹಾಗೂ ಉದ್ಯೋಗಕ್ಕೆ ಕಳುಹಿಸಿಕೊಡುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೀವು ಹೇಳಿದ್ದು ತುಂಬಾ ಸರಿ… ಇದೆಲ್ಲ ಮನಸ್ಥಿತಿಗೆ ಸಂಬಂಧ ಪಟ್ಟದ್ದು. ನಿಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಸುಧಾರಿಸಬಹುದಾದ ಯಾವುದೇ ದೇಶವನ್ನು ನೀವು ಇಡೀ ಜಗತ್ತಿನಲ್ಲಿ ಕಾಣಲು ಸಾಧ್ಯವಿಲ್ಲ. ನಿಸ್ಸಂಶಯವಾಗಿ ಪ್ರತಿಯೊಂದು ದೇಶದಲ್ಲೂ ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ಇದು ಭಾರತಕ್ಕೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.6) ತಮ್ಮ 17ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರ ರೂಪಿಸಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ (Revenue) ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.
ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ (Ex-factory) ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ.
ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ.
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಉದ್ಯೋಗ ನೇಮಕಾತಿಯಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಗಮನಿಸಿ, ಅಭ್ಯರ್ಥಿಗಳಿಗೆ ಒಂದು ಬಾರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಕರ್ನಾಟಕದ ಆರ್ಥಿಕ ಪ್ರಗತಿಗಾಗಿ ಕಾರ್ಮಿಕ ಕಲ್ಯಾಣ, ಪ್ರಾದೇಶಿಕ ಸಮಾನತೆ, ವ್ಯಾಪಾರ ಮತ್ತು ಕೈಗಾರಿಕೆ ವೃದ್ಧಿ, ಪ್ರವಾಸೋದ್ಯಮ, ಹಸಿರು ಆರ್ಥಿಕತೆ, ಹಾಗೂ ನಗರ ಕೇಂದ್ರಿತ ಸುಸ್ಥಿರ ಆರ್ಥಿಕತೆ ಸೇರಿದಂತೆ ಹಲವು ಆರ್ಥಿಕ ಪ್ರಮೇಯಗಳನ್ನು ಸರ್ಕಾರ ಅನುಸರಿಸುತ್ತಿದೆ. ರಾಜ್ಯದ 45ಕ್ಕೂ ಹೆಚ್ಚು ಉತ್ಪನ್ನಗಳಿಗೆ ಭೌಗೋಳಿಕ ಸೂಚಕ (GI) ಮಾನ್ಯತೆ ದೊರೆತಿದ್ದು, ಇದು ಹೊಸ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಕಳೆದ ವರ್ಷ 8,600 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 2026-27ರಲ್ಲಿ 4,000 ಕೋಟಿ ರೂ. ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ