Karnataka Budget 2026: ದಾಖಲೆಯ 17ನೇ ಬಜೆಟ್ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ – Kannada News | Karnataka Budget 2026: CM Siddaramaiah Set to Present Record 17th Budget, Key Facts You Should Know
ಬೆಂಗಳೂರು, ಮಾರ್ಚ್ 5: ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239…