Category Archives: Blog

Your blog category

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್​ ಅಲ್ಲಿ ಗಮನ ಸೆಳೆದ ಫ್ಯಾಮಿಲಿ ಫೋಟೋ

Source link

ದುಬೈನಿಂದ ಬೆಂಗಳೂರಿಗೆ ಬಂದಿಳಿದ 5ನೇ ವಿಮಾನ: 3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್ – Kannada News | 5th Flight from Dubai Lands in Bengaluru; 1,500 Indians Return Safely in 3 Days Amid Iran Israel War

3 ದಿನಗಳಲ್ಲಿ 1,500 ಮಂದಿ ಸುರಕ್ಷಿತವಾಗಿ ವಾಪಸ್Image Credit source: tv9

ಬೆಂಗಳೂರು, ಮಾರ್ಚ್ 5: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿಯಿಂದ ದುಬೈ, ಅಬುಧಾಬಿ, ಜೆದ್ದಾ, ದೋಹಾ ಸೇರಿ ಹಲವೆಡೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಕ್ಕಿಹಾಕಿರುವ ಆಗಿರುವ ಸಾವಿರಾರು ಜನ ಪ್ರಯಾಣಿಕರನ್ನು ಕಳೆದ ಸೋಮವಾರ ರಾತ್ರಿಯಿಂದ ಎಮಿರೇಟ್ಸ್, ಎತಿಹಾದ್ ಮತ್ತು ಇಂಡಿಗೋ ಏರ್ಲೈನ್ಸ್‌ಗಳ ಮೂಲಕ ಬೆಂಗಳೂರಿಗೆ (Bangalore) ಕರೆತರಲಾಗುತ್ತಿದೆ. ದಿನಕ್ಕೆ ಒಂದು ಅಥವಾ ಎರಡು ವಿಮಾನಗಳು ದುಬೈ ಮತ್ತ ಅಬುಧಾಬಿಯಿಂದ ಬೆಂಗಳೂರಿಗೆ ಟೇಕ್ ಆಫ್ ಆಗುತ್ತಿವೆ. ತವರಿಗೆ ಬರಲು ನಾ ಮುಂದು ತಾ ಮುಂದು ಎಂದು ಪ್ರಯಾಣಿಕರು ಮುಗಿಬೀಳುತ್ತಿದ್ದಾರೆ. ಮಂಗಳವಾರ ರಾತ್ರಿ 5ನೇ ವಿಮಾನದಲ್ಲಿ 246 ಮಂದಿ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಇನ್ನು ಅಮೆರಿಕಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಫ್ಲೈಟ್‌ ಕ್ಯಾನ್ಸಲ್‌ ಆಗಿದ್ದರಿಂದ ದುಬೈನಲ್ಲೇ ಸಿಲುಕಿಕೊಂಡಿದ್ದರು. ಇದೀಗ ಯುಎಸ್‌ಗೆ ತೆರಳದೆ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

ಮತ್ತೊಂದೆಡೆ ಯುಎಸ್‌ನಿಂದ ಬಂದು ದುಬೈನಲ್ಲಿ 2 ದಿನ ಪ್ರವಾಸ ಮುಗಿಸಿ ಬರುವ ಪ್ಲ್ಯಾನ್‌ನಲ್ಲಿದ್ದವರು ವಿಧಿಯಿಲ್ಲದೆ ಬೆಂಗಳೂರಿಗೆ ಮರಳಿದ್ದಾರೆ.

ಇದನ್ನೂ ಓದಿ: ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ

ಕಳೆದ ಸೋಮವಾರ 2ನೇ ತಾರೀಕು ರಾತ್ರಿ 9.40ಕ್ಕೆ ಬಂದ ಮೊದಲ ಫ್ಲೈಟ್‌ನಲ್ಲಿ 213 ಜನ ವಾಪಸ್ ಆಗಿದ್ದರೆ, 3ನೇ ತಾರೀಕು ಮುಂಜಾನೆ 3 ಗಂಟೆಗೆಬಂದ 2ನೇ ಫ್ಲೈಟ್‌ನಲ್ಲಿ 490 ಜನ, ಹಾಗೇ ಅದೇ ದಿನ ಸಂಜೆ 7 ಗಂಟೆಗೆ ಬಂದ 3ನೇ ಫ್ಲೈಟ್‌ನಲ್ಲಿ 350 ಮಂದಿ, ನಾಲ್ಕನೇ ತಾರೀಕು ಮಧ್ಯರಾತ್ರಿ 1 ಗಂಟೆಗೆ ಬಂದ ಫ್ಲೈಟ್‌ನಲ್ಲಿ 200 ಜನ, ಉಳಿದಂತೆ ಬುಧವಾರ ಸಂಜೆ 7 ಗಂಟೆಗೆ ಬಂದ ವಿಮಾನದಲ್ಲಿ 246 ಪ್ರಯಾಣಿಕರು ವಾಪಸಾಗಿದ್ದು ಈವರೆಗೆ 1500 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ.

ಸೀಮಿತ ವಿಮಾನಗಳು ದುಬೈನಿಂದ ಬರುತ್ತಿರುವುದರಿಂದ ಇನ್ನೂ ಸಾಕಷ್ಟು ಕನ್ನಡಿಗರು ಅಲ್ಲಿನ ಏರ್‌ಪೋರ್ಟ್‌ಗಳಲ್ಲೇ ಸಿಲುಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಪ್ರಚಾರದಿಂದ ಗೆಲ್ಲುವುದು ಕಷ್ಟ – Kannada News | Horoscope March 05 Thursday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ಕೋಪವನ್ನು ಮಾತಿನಿಂದ ಹೊರಹಾಕಲಾರಿರಿ. ಇಂದು ನಿಮ್ಮ ಮಾತುಗಳಿಗೆ ತೂಕವು ಕಡಿಮೆ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ಕಷ್ಟದ ಸಮಯದಲ್ಲಿ ಆಪ್ತರು ನಿಮ್ಮನ್ನು ಬೆಂಬಲಿಸುತ್ತಾರೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ಹೊಸ ವಸ್ತುಗಳು ಖರೀದಿಯಿಂದ ತೃಪ್ತಿ ಸಿಗುವುದು.

ವೃಷಭ ರಾಶಿ:

ಯಾರ ಮಾತೂ ನಿಮಗೆ ಸಾಂತ್ವನವನ್ನು ನೀಡದು. ಹಿರಿಯರ ಮೂಲಕ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ. ಹಿಂದೆ ಬಾಕಿ ಇರುವ ಹಣವನ್ನು ವಸೂಲಿ ಮಾಡಲಾಗುತ್ತದೆ. ಐಷಾರಾಮಿ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ನಿಮ್ಮ ಇಂದಿನ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಕಲಾವಿದರು ಸನ್ಮಾನಕ್ಕೆ ಭಾಜರಾಗುವರು. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ.

ಮಿಥುನ ರಾಶಿ:

ಹೂಡಿಕೆಗಳತ್ತ ಸರಿಯಾಗಿ ಗಮನ ಹರಿಸಿ. ಆರ್ಥಿಕ ನೆರವು ಸಾಕಾಗುವುದಿಲ್ಲ. ನಿಮ್ಮ ಆದ್ಯತೆಗಳನ್ನು ಮೃದುವಾಗಿ ವ್ಯಕ್ತಪಡಿಸಿ. ಕೆಲಸಗಳು ಆತುರದಿಂದ ನಡೆಯುತ್ತಿವೆ. ಸಂಗತಿಯನ್ನು ಹಣಕ್ಕಾಗಿ ಪೀಡಿಸುವಿರಿ.ಇಷ್ಟವಿಲ್ಲದ ಕಡೆ ಬಲವಂತವಾಗಿ ಹೋಗುವಿರಿ. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ. ಅತಿಥಿಗಳ ಆಗಮನದಿಂದ ಸಂತೋಷವಾಗುವುದು. ನಿಮ್ಮ ಬಲದ ಪ್ರದರ್ಶನವನ್ನು ಮಾಡುವಿರಿ. ಸಂಗಾತಿಯ ಜೊತೆ ಸಣ್ಣ ವಿಚಾರಕ್ಕೂ ಕಲಹ ಮಾಡಿಕೊಳ್ಳುವಿರಿ. ಹೂಡಿಕೆಯ ಬಗ್ಗೆ ಸರಿಯಾದ ನಿರ್ಧಾರವಿರಲಿ.

ಕರ್ಕಾಟಕ ರಾಶಿ:

ನಿರೀಕ್ಷೆಗಳು ನಿಜವಾಗುತ್ತವೆ. ಕೆಲಸಗಳು ಸ್ಥಿರವಾಗಿ ಪೂರ್ಣಗೊಳ್ಳುತ್ತವೆ. ದಾಖಲೆಗಳಲ್ಲಿನ ಬದಲಾವಣೆಗಳು ಅನುಕೂಲಕರವಾಗಿರುತ್ತವೆ. ಎಲ್ಲರೊಂದಿಗೆ ಮಿತವಾಗಿ ಮಾತನಾಡಿ. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ನಿಮ್ಮ ಮೌನವು ಅಸಹಾಯಕತೆಯನ್ನು ತೋರಿಸಬಹುದು. ನಿಮ್ಮ ಕಾರ್ಯದಲ್ಲಿ ಉದ್ದೇಶವು ಸ್ಪಷ್ಟವಾಗಿ ಇರಲಿ. ಕೆಲಸವು ಪೂರ್ಣವಾಗದೇ ಒದ್ದಾಡಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಸಂಗಾತಿಯ ಕೋಪವನ್ನು ನೀವು ಕಡಿಮೆ ಮಾಡುವಿರಿ.

ಸಿಂಹ ರಾಶಿ:

ಪ್ರೀತಿಪಾತ್ರರ ಆಗಮನವು ಸಂತೋಷವನ್ನು ತರುತ್ತದೆ. ಅವಕಾಶಗಳನ್ನು ತಕ್ಷಣವೇ ಬಳಸಿಕೊಳ್ಳಿ. ನಿಮ್ಮ ಮಾತನ್ನು ನಿಯಂತ್ರಿಸಿ. ಅಸಹಜ ವರ್ತನೆಯ ಬಗ್ಗೆ ನೀವು ಏನನ್ನೂ ಹೇಳುವುದು ಬೇಡ. ಮಕ್ಕಳಿಂದ ನಿಮಗೆ ಆರ್ಥಿಕ ನೆರವು ಸಿಗುವುದು. ನೀವು ಇಂದು ವಿದ್ಯುತ್ ಉಪಕರಣದ ಮಾರಟಗಾರರಾಇದ್ದರೆ ಅಧಿಕ ಲಾಭವು ಸಿಗುವುದು. ಸಾರ್ವಜನಿಕವಾಗಿ ಹೆಚ್ಚು ಪ್ರಭಾವ ಉಳ್ಳವರಾಗಿದ್ದು ಗೌರವವು ಸಿಗಲಿದೆ. ಬೆಳವಣಿಗೆಗೆ ಅವಕಾಶಗಳು ಸಿಕ್ಕರೂ ಅದು ನಿಮಗೆ ಸರಿಯಾಗದು.

ಕನ್ಯಾ ರಾಶಿ:

ನೀವು ಎಲ್ಲರನ್ನೂ ಸಮಾನವಾಗಿ ನಡೆಸಿಕೊಳ್ಳುತ್ತೀರಿ. ಕೈಗೊಂಡ ಕೆಲಸಗಳು ಸಕ್ರಿಯವಾಗಿ ಮುಂದುವರಿಯುತ್ತವೆ. ಸಂಬಂಧಿಕರು ಮತ್ತು ಸ್ನೇಹಿತರ ಭೇಟಿ ಸಾಧ್ಯತೆ. ನಿಮ್ಮ ಬಗ್ಗೆ ಯಾವುದನ್ನೂ ಹೇಳಿಕೊಳ್ಳದೇ ಮಾಡುವ ಕಾರ್ಯದ ಕಡೆ ಗಮನ ಇರಲಿ. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿವಾರಿಸಬಹುದು. ಸಂಗಾತಿಯ ಮಾತಿಗೆ ನೀವು ಉತ್ತರಿಸಲಾರಿರಿ. ನಿಮ್ಮ ಲಾಭಾಂಶದ ಕೆಲವು ಭಾಗವನ್ನು ನೀವು ದಾನ ಮಾಡುವಿರಿ.

ತುಲಾ ರಾಶಿ:

ನಿಮ್ಮ ಅಮೂಲ್ಯ ದಾಖಲೆಗಳ ವಿಚಾರದಲ್ಲಿ ಜಾಗರೂಕರಾಗಿರಿ. ಟೀಕೆಗಳನ್ನು ನಿರ್ಲಕ್ಷಿಸಿ. ಶುಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೀರಿ. ನಿಮಗೆ ಬೇಡದ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು. ಸೊಂಟದ ನೋವು ಅಧಿಕವಾಗಿ ಕಾಡಬಹುದು. ಸಂಗಾತಿಯ ಮೇಲೆ ಯಾರದೋ ಕಾರಣಕ್ಕೆ ಮುನಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ:

ನಿಮ್ಮ ಆಲೋಚನೆಗಳಲ್ಲಿ ಬದಲಾವಣೆ ಉಂಟಾಗಲಿದೆ. ನಿಮ್ಮ ವೃತ್ತಿಯಲ್ಲಿ ಭವಿಷ್ಯವನ್ನು ಹೆಚ್ಚಿಸಲು ನಿಮ್ಮ ಪರಿಣತಿಯನ್ನು ಬಳಸಿ. ಇಂದು ನಿಮ್ಮ ಮಾರ್ಗದರ್ಶನವನ್ನು ಕೇಳಿಕೊಂಡು ಬರಬಹುದು. ಇಂದಿನ ನಿಮ್ಮ ಕೆಲಸಗಳು ಬಹಳ ವಿಳಂಬವಾಗುದು. ಶಿಸ್ತಿನ ವ್ಯವಹಾರವನ್ನು ಬಿಡದೇ ಮುಂದುವರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳಿ. ಹೊಸ ವಸ್ತುವಿಗೆ ಧನವನ್ನು ವ್ಯಯಮಾಡುವುದು ಬೇಡ.

ಧನು ರಾಶಿ:

ಮೇಲಾಧಿಕಾರಿಗಳಿಗೆ ನಿಮ್ಮ ಮೇಲೆ ಕೆಲವು ತಪ್ಪುಕಲ್ಪನೆ ಇರಬಹುದು. ಯಾವುದೇ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಪ ಸೂಕ್ತವಲ್ಲ. ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ. ಕುಟುಂಬದಲ್ಲಿ ನಿಮ್ಮ ಪ್ರಾಮುಖ್ಯವು ಅರಿವಿಗೆ ಬರಬಹುದು. ಬೇಡದ ಆಲೋಚನೆಯನ್ನು ದೂರಮಾಡಿಕೊಳ್ಳಿ. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು. ಮನೋ ವ್ಯಥೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಸಂಬಂಧಗಳಲ್ಲಿ ವಿಷಮತೆ ಕಾಣಿಸಿಕೊಂಡೀತು. ನಿಮ್ಮ ಗುರಿಯನ್ನು ತಲುಪಲು ಬೇರೆ ಮಾರ್ಗವನ್ನೂ ಅನುಸರಿಸುವಿರಿ.

ಮಕರ ರಾಶಿ:

ಸರಿಯಾದ ಹೊಂದಾಣಿಕೆಯನ್ನು ಮಾಡಿಕೊಳ್ಳುವಿರಿ. ಆತ್ಮೀಯ ಸಂಬಂಧವು ಕಾರಣಾಂತರಗಳಿಂದ ಕಡಿತವಾಗಿದ್ದು ನೀವು ಪುನಃ ಸ್ಥಾಪಿಸಿಕೊಂಡು ಎಂದಿನಂತೆ ನೆಮ್ಮದಿಯಿಂದ ಇರುವಿರಿ. ಯಾರಾದರೂ ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ. ದೈವದ ಮೇಲೆ ಭಕ್ತಿ ಉಂಟಾದೀತು. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಂಡು ಕೂಗಾಡಬಹುದು. ನಿಮ್ಮ ಅಭಿಪ್ರಾಯವನ್ನು ಹೇಳಬೇಕಾದಲ್ಲಿ ಹೇಳುವ ರೀತಿಯಲ್ಲಿ ಹೇಳಿ.

ಕುಂಭ ರಾಶಿ:

ಪ್ರೀತಿಪಾತ್ರರಿಗೆ ಆರ್ಥಿಕ ನೆರವು ನೀಡುತ್ತೀರಿ. ನಿಮ್ಮ ಒಳಗೊಳ್ಳುವಿಕೆಯಿಂದ ಸಮಸ್ಯೆ ಸಕಾರಾತ್ಮಕವಾಗುತ್ತದೆ. ಸ್ನೇಹ ಸಂಬಂಧ ಬಲಗೊಳ್ಳುತ್ತವೆ. ಸಂಗಾತಿಯ ಬೇಸರವನ್ನು ಮಾತುಗಳಿಂದ ಸರಿಮಾಡುವಿರಿ. ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ. ಮಿತ್ರರೆಂದು ಹೇಳಿಕೊಂಡು ಯಾರಾದರೂ ಬರಬಹುದು. ಸರಿಯಾದ ಮೂಲದಿಂದ ಬಂದ ಸುದ್ದಿ ಮಾತ್ರ ನಂಬಲು ಅರ್ಹವಾಗಿರುವುದು.

ಮೀನ ರಾಶಿ:

ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಹೂಡಿಕೆಗಳು ಹೆಚ್ಚಾಗುವುದಿಲ್ಲ. ಬೇಜವಾಬ್ದಾರಿ ನಿರ್ಧಾರಗಳು ಹಾನಿಯನ್ನುಂಟುಮಾಡಬಹುದು. ಅನುಭವಿ ಜನರ ಸಲಹೆಯನ್ನು ಅನುಸರಿಸಿ. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಶೂಲಿ, ಕರಣ : ಗರಜ, ಸೂರ್ಯೋದಯ – 06 – 39 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:05 – 15:34, ಯಮಗಂಡ ಕಾಲ 06:40 – 08:09, ಗುಳಿಕ ಕಾಲ 09:38 – 11:07

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 5ರ ದಿನಭವಿಷ್ಯ

ಮನೆಯನ್ನು ಒರೆಸುವ ನೀರಿಗೆ ಸ್ವಲ್ಪ ಕಲ್ಲು ಉಪ್ಪನ್ನು ಸೇರಿಸಿ. ಇದು ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು (Negative Energy) ದೂರ ಮಾಡುತ್ತದೆ. ವಿನಾಕಾರಣ ಜಗಳ- ಕಲಹ ಆಗುತ್ತಿದ್ದಲ್ಲಿ ಆ ಸಮಸ್ಯೆ ನಿವಾರಣೆ ಆಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ ಎಂದಾದಲ್ಲಿ ಆ ಬಗ್ಗೆ ಮಾಹಿತಿ ದೊರೆಯಲಿದೆ. ನೀರು ಮಾರಾಟದ ಮೂಲಕ ಆದಾಯವನ್ನು ಪಡೆಯುತ್ತಾ ಇರುವವರಿಗೆ ದೀರ್ಘಾವಧಿಗೆ- ದೊಡ್ಡ ಪ್ರಮಾಣದ ಆರ್ಡರ್ ದೊರೆಯುವಂಥ ಸಾಧ್ಯತೆ ಇದೆ. ಕನಿಷ್ಠ ಪ್ರಮಾಣದ ಹೂಡಿಕೆ ಜತೆಗೆ ಆರಂಭಿಸಿದ ವ್ಯವಹಾರವೊಂದು ಹೆಚ್ಚಿನ ಪ್ರಮಾಣದ ಲಾಭ ತಂದುಕೊಡಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಂತ ನಿಲವಿನಲ್ಲೇ ನಿಮ್ಮ ಅಭಿಪ್ರಾಯ ತಿಳಿಸಿಬಿಡಬೇಕು ಎಂದು ಪಟ್ಟು ಹಿಡಿಯುವಂಥವರ ಜತೆಗಿನ ವ್ಯವಹಾರ ಮುಂದುವರಿಸಲಿಕ್ಕೆ ಹೋಗಬೇಡಿ. ಬ್ಯಾಂಕ್ ಗೆ ಕಟ್ಟಲೇಬೇಕಾದ ಹಣವನ್ನು ಹೊಂದಿಸಲು ಹೆಚ್ಚು ಶ್ರಮ ಹಾಕಲಿದ್ದೀರಿ. ಇನ್ನು ನಿಮ್ಮಲ್ಲಿ ಕೆಲವರು ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು, ಸಾಲವನ್ನು ಚುಕ್ತಾ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 5ರ ದಿನಭವಿಷ್ಯ

ಈ ದಿನ ಕನಿಷ್ಠ 15 ನಿಮಿಷಗಳ ಕಾಲ ಸಂಪೂರ್ಣ ಮೌನವಾಗಿರಿ. ಹೀಗೆ ಮಾಡುವುದರಿಂದ ಅಭಿಪ್ರಾಯ ಭೇದ- ಮನಸ್ತಾಪಗಳು ಆಗುವ ಸಂಭವವನ್ನು ದೂರ ಮಾಡುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಭರತನಾಟ್ಯ ಕಲಾವಿದರಿಗೆ ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡುವುದಕ್ಕೆ ಅವಕಾಶ ದೊರೆಯಲಿದೆ. ಇಷ್ಟು ಕಾಲ ಯಾವುದು ನಿಮಗೆ ಹವ್ಯಾಸ ಆಗಿತ್ತೋ ಅದನ್ನೇ ಆದಾಯ ಮೂಲ ಆಗುವಂಥ ವೃತ್ತಿಯಾಗಿ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಬರಲಿದೆ. ಪಶು ಸಾಕಣೆ ಮಾಡುತ್ತಾ ಇರುವವರಿಗೆ ವ್ಯವಹಾರ ವಿಸ್ತಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ನಿಮ್ಮ ಬಗ್ಗೆ ಹರಿದಾಡುವಂಥ ಗಾಸಿಪ್ ಗಳ ಕುರಿತು ತಲೆ ಕೆಡಿಸಿಕೊಳ್ಳಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪರಿಚಿತರ ಅಗತ್ಯಗಳಿಗೆ ನೆರವು ನೀಡಲಿದ್ದೀರಿ. ಸೈಟು- ಮನೆ ಖರೀದಿ ಮಾಡಬೇಕು ಎಂದಿರುವವರು ತಮ್ಮ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೌಕಾಶಿ ಮಾಡಿ, ಈ ದಿನ ಕೆಲವು ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಬರೀ ಮಾತಿನಿಂದ ಆಗುವುದಿಲ್ಲ ಎಂಬಂಥ ಕಡೆಗಳಲ್ಲಿ ಕೆಲಸ- ಕಾರ್ಯಗಳನ್ನು ಪೂರ್ಣ ಮಾಡುವುದಕ್ಕೆ ಪ್ರಭಾವ ಬಳಕೆ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ಮಕ್ಕಳನ್ನು ಹಾಸ್ಟೆಲ್ ನಲ್ಲಿ ಬಿಟ್ಟು ಓದಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮ್ಮ ಹಳೇ ಚಿನ್ನದ ಆಭರಣಗಳ ವಿನಿಮಯಕ್ಕೆ ನಿರ್ಧಾರ ಕೈಗೊಳ್ಳುವ ಯೋಗ ಇದೆ. ಸ್ವಲ್ಪ ಪ್ರಮಾಣದಲ್ಲಿಯಾದರೂ ಸಾಲ ಮಾಡುವ ಸಾಧ್ಯತೆ ಇದೆ. ಅಥವಾ ಕೆಲವರು ಪಿಎಫ್, ಎಫ್.ಡಿ., ಇಂಥವುಗಳಿಂದ ಹಣ ತೆಗೆದುಕೊಳ್ಳಲು ಪ್ರಯತ್ನ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 5ರ ದಿನಭವಿಷ್ಯ

ಈ ದಿನ ಹಣೆಯ ಮಧ್ಯಭಾಗದಲ್ಲಿ (ಆಜ್ಞಾ ಚಕ್ರ) ಕುಂಕುಮ, ಶ್ರೀಗಂಧ ಅಥವಾ ವಿಭೂತಿಯನ್ನು ಇಟ್ಟುಕೊಳ್ಳಿ. ಇದು ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು ಖರೀದಿಸುವ ಸಾಧ್ಯತೆ ಇದೆ. ಚರ್ಮ- ಕೂದಲಿನ ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯ ನೀಡಬೇಕು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ತಲೆಹೊಟ್ಟಿನ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣ ಆಗಬಹುದು. ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳುವುದಕ್ಕೆ ಪ್ರಾಮುಖ್ಯ ನೀಡಿ. ಪಿತ್ರಾರ್ಜಿತ ಆಸ್ತಿ ಹಂಚಿಕೆ ಬಗ್ಗೆ ಈ ಹಿಂದೆ ಯಾವಾಗಲೋ ನಿಮಗೆ ಇಂಥದ್ದನ್ನು ನೀಡುತ್ತೇನೆ ಎಂದು ಹೇಳಿದ್ದಿದ್ದು, ಈಗ ತೀರ್ಮಾನ ಬದಲಾವಣೆ ಮಾಡಿಕೊಂಡಿರುವುದಾಗಿ ಹೇಳಲಿದ್ದಾರೆ. ಅಡ್ವರ್ಟೈಸ್ ಮೆಂಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಒತ್ತಡ ಇರಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕುಟುಂಬಕ್ಕೆ ಅಗತ್ಯ ಇರುವ ವಸ್ತುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಸಮಯವನ್ನು ಇಡಲಿದ್ದೀರಿ. ನಿಮ್ಮಲ್ಲಿ ಕೆಲವರು ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳಲಿದ್ದು, ಹೋಟೆಲ್ ಬುಕ್ಕಿಂಗ್, ಕಾರು ಬುಕ್ಕಿಂಗ್ ಇಂಥವು ಮಾಡಿಕೊಳ್ಳುವುದಕ್ಕೆ ಸ್ನೇಹಿತರ ಸಹಾಯವನ್ನು ಕೇಳಲಿದ್ದೀರಿ. ಆದಾಯ ತೆರಿಗೆಗೆ ಸಂಬಂಧಿಸಿದ ವಿಷಯದ ಬಗ್ಗೆ ಚರ್ಚೆ ಮಾಡುವುದಕ್ಕೆ ಆ ಕ್ಷೇತ್ರದಲ್ಲಿ ಪರಿಣತ ಆದಂಥ ವ್ಯಕ್ತಿಗಳ ಜತೆಗೆ ಮಾತುಕತೆ ನಡೆಸಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ – Kannada News | Megastar Chiranjeevi graces the Wedding Reception of Rashmika Mandanna and Vijay Deverakonda

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ರಿಸೆಪ್ಷನ್ ಹೈದರಾಬಾದ್​​ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ (Megastar Chiranjeevi), ಆಶಿಕಾ ರಂಗನಾಥ್, ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕಂಗೊಳಿಸಿದರು. ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಬಂದ ರಶ್ಮಿಕಾ ಮಂದಣ್ಣ ಅವರು ದೊಡ್ಡ ಯಶಸ್ಸು ಕಂಡಿದ್ದೇ ತೆಲುಗು ಚಿತ್ರರಂಗದಲ್ಲಿ. ತಮಿಳಿನಲ್ಲೂ ಅವರು ಬೇಡಿಕೆ ಹೊಂದಿದ್ದಾರೆ. ಟಾಲಿವುಡ್, ಕಾಲಿವುಡ್ ಮುಂತಾದ ಚಿತ್ರರಂಗದಿಂದ ಅನೇಕ ಸೆಲೆಬ್ರಿಟಿಗಳು ಆರತಕ್ಷತೆಗೆ (Wedding Reception) ಬಂದು ನವ ದಂಪತಿಗೆ ಶುಭ ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

Source link

ಕುಂಭ ರಾಶಿಯವರಿಗೆ ಮಾರ್ಚ್​​​ನಲ್ಲಿ ಸುಖ, ಸಂಪತ್ತಿನ ಭೋಗ – Kannada News | Kumbha Rashi March Predictions: Unlock Wealth, Success and Navigate Planetary Effects

ಈ ತಿಂಗಳಲ್ಲಿ ಕುಂಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಅತ್ಯಂತ ರೋಚಕವಾಗಿದ್ದು, ಇದು ಸವಾಲು ಮತ್ತು ಅವಕಾಶಗಳ ಮಿಶ್ರಣವಾಗಿರಲಿದೆ. ವಿಶೇಷವಾಗಿ ಈ ತಿಂಗಳಲ್ಲಿ ಕುಂಭ ರಾಶಿಯ ಲಗ್ನದಲ್ಲಿಯೇ ಮಂಗಳ ಮತ್ತು ರಾಹುವಿನ ಸಂಯೋಗವಿರುವುದರಿಂದ, ಜೀವನದ ವೇಗ ಹೆಚ್ಚಾಗಲಿದೆ. ಪರಿವರ್ತನೆಯನ್ನು ಕಾಣುವ ಅವಕಾಶ ನಿಮ್ಮದು. ಯಾವ ಗ್ರಹರ ದಶೆ ಈ ತಿಂಗಳಲ್ಲಿ ಉತ್ತಮ‌ ಎನ್ನುವುದು ತಿಳಿದರೆ ಅದಕ್ಕೆ ಬೇಕಾದ ಪರಿಹಾರೋಪಾಯಗಳು ಲಭ್ಯ. ತೊಂದರೆಯನ್ನು ಆ ಮೂಲಕ ಕಡಿಮೆ ಮಾಡಿಕೊಳ್ಳಬಹುದು.

​ಶುಭ ಫಲ

​ಶುಕ್ರ :

ಮಾರ್ಚ್ ದ್ವಿತೀಯದಲ್ಲಿ ಶುಕ್ರನು ಮೀನ ರಾಶಿಯಲ್ಲಿ ಉಚ್ಚನಾಗುತ್ತಾನೆ. ಇದು ಧನ ಯೋಗವನ್ನು ಸೃಷ್ಟಿಸುತ್ತದೆ. ಆರ್ಥಿಕವಾಗಿ ಲಾಭ, ಕುಟುಂಬದಲ್ಲಿ ಸಂತೋಷ ಮತ್ತು ಸುಖ-ಭೋಗಗಳ ಹೆಚ್ಚಳಕ್ಕೆ ಇದು ಅತ್ಯುತ್ತಮ ಸಮಯ.

​ಗುರು :

ಗುರು ಗ್ರಹವು ನಿಮ್ಮ ರಾಶಿಯಿಂದ 5ನೇ ಮನೆಯಲ್ಲಿದ್ದು ನೇರ ಸಂಚಾರದಲ್ಲಿರುತ್ತಾನೆ. ಇದು ವಿದ್ಯಾರ್ಥಿಗಳಿಗೆ, ಸಂತಾನ ಅಪೇಕ್ಷಿತರಿಗೆ ಮತ್ತು ಹೂಡಿಕೆದಾರರಿಗೆ ಉತ್ತಮ ಫಲ ನೀಡುತ್ತದೆ. ಬುದ್ಧಿಶಕ್ತಿ ತೀಕ್ಷ್ಣವಾಗಿರಲಿದೆ.

​ಬುಧ :

ಮಾರ್ಚ್ ಮಧ್ಯಭಾಗದ ಅನಂತರ ಬುಧನು ನಿಮ್ಮ ರಾಶಿಯಲ್ಲಿ ನೇರವಾಗಿ ಸಂಚರಿಸುವುದರಿಂದ ಸಂವಹನ ಕಲೆ ಸುಧಾರಿಸುತ್ತದೆ ಮತ್ತು ವ್ಯಾಪಾರದಲ್ಲಿ ಲಾಭ ತರುತ್ತದೆ.

ಅಶುಭ

​ಮಂಗಳ ಮತ್ತು ರಾಹು :

ನಿಮ್ಮ ರಾಶಿಯಲ್ಲೇ ಮಂಗಳ ಮತ್ತು ರಾಹುವಿನ ಯುತಿ ಇರುವುದರಿಂದ ಅಂಗಾರಕ ಯೋಗ ಉಂಟಾಗುತ್ತದೆ. ಇದು ಅತಿಯಾದ ಆತುರ, ಕೋಪ ಮತ್ತು ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ವಾಹನ ಚಾಲನೆಯಲ್ಲಿ ಜಾಗ್ರತೆ ಅಗತ್ಯ.

​ಶನಿ :

ಸಾಡೇ ಸಾಥ್ ನ ಅಂತಿಮ ಹಂತದಲ್ಲಿ ಶನಿಯು ನಿಮ್ಮ ರಾಶಿಯಿಂದ 2ನೇ ಮನೆಯಲ್ಲಿ ಇರುವುದರಿಂದ ಸಾಡೇ ಸಾತಿಯ ಅಂತಿಮ ಹಂತದ ಪ್ರಭಾವವಿರುತ್ತದೆ. ಇದು ಆರ್ಥಿಕ ಶಿಸ್ತನ್ನು ಮತ್ತು ಕಠಿಣ ಪರಿಶ್ರಮವನ್ನು ಬೇಡುತ್ತದೆ.

ಮಿಶ್ರ ಫಲಗಳು

​ಸೂರ್ಯ:

ಮಾರ್ಚ್ 15ರವರೆಗೆ ಸೂರ್ಯನು ನಿಮ್ಮ ರಾಶಿಯಲ್ಲಿರುತ್ತಾನೆ, ನಂತರ 2ನೇ ಮನೆಗೆ ಪ್ರವೇಶಿಸುತ್ತಾನೆ. ಇದು ಸರ್ಕಾರಿ ಕೆಲಸಗಳಲ್ಲಿ ಲಾಭ ನೀಡಿದರೂ, ಕಣ್ಣಿನ ಸಮಸ್ಯೆ ಅಥವಾ ತಲೆನೋವಿನಂತಹ ಆರೋಗ್ಯ ಕಿರಿಕಿರಿ ನೀಡಬಹುದು.

​ಚಂದ್ರಗ್ರಹಣ :

ತಿಂಗಳ ಆರಂಭದಲ್ಲೇ ಸಂಭವಿಸುವ ಚಂದ್ರಗ್ರಹಣವು ಮಾನಸಿಕವಾಗಿ ಸ್ವಲ್ಪ ಗೊಂದಲ ಉಂಟುಮಾಡಬಹುದು, ಆದರೆ ಆಧ್ಯಾತ್ಮಿಕ ಚಿಂತನೆಗೆ ಇದು ಪೂರಕವಾಗಿದೆ.

ಮಂಗಳ ಮತ್ತು ರಾಹುವಿನ ಪ್ರಭಾವದಿಂದ ತಪ್ಪು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇರುತ್ತದೆ, ಆದ್ದರಿಂದ ಶಾಂತವಾಗಿರಿ. ಕೋಪಕ್ಕೆ ಆಸ್ಪದ ಬೇಡವೇ ಬೇಡ. ಮಂಗಳ ಮತ್ತು ಶನಿಯ ನಕಾರಾತ್ಮಕ ಪ್ರಭಾವ ತಗ್ಗಿಸಲು ಪ್ರತಿ ಶನಿವಾರ ಮತ್ತು ಮಂಗಳವಾರ ಹನುಮಂತನ ಆರಾಧನೆ ಮಾಡಿ. ಅಗತ್ಯವಿರುವವರಿಗೆ ಕೆಂಪು ಬಣ್ಣದ ಹೊಸ ಬಟ್ಟೆಯನ್ನು ದಾನ ಮಾಡಿ. ಇದಂ‌‌ ನ ಮಮ ಎಂಬ ಭಾವ ಇರಲಿ.

– ಲೋಹಿತ ಹೆಬ್ಬಾರ್

Source link

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link