SA vs NZ: ಆಲೆನ್ ಅಬ್ಬರ..! ಸೆಮೀಸ್ನಲ್ಲಿ ದಿಕ್ಕು ತಪ್ಪಿದ ದಕ್ಷಿಣ ಆಫ್ರಿಕಾ; ಕಿವೀಸ್ಗೆ ಫೈನಲ್ ಟಿಕೆಟ್ – Kannada News | Finn Allen’s World Record Century Propels New Zealand to T20 World Cup 2026 Final
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲೂ ಗೆದ್ದು ಸತತ ಎರಡನೇ ಬಾರಿಗೆ ಫೈನಲ್ಗೇರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಆರಂಭಿಕ ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತಕದ ನೆರವಿನಿಂದ ಏಕಪಕ್ಷೀಯವಾಗಿ ಗೆದ್ದು ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಟೂರ್ನಿಯಲ್ಲಿ ಮೊದಲ…