Category Archives: Blog

Your blog category

“ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ – Kannada News | Police Inaction: Parents Kidnap Registered Wife in Hangal Love Marriage Case

ಹಾನಗಲ್ ಮಾ.4: ಹೆಚ್ಚಿನ ಹೆತ್ತವರು ಮಕ್ಕಳ ಪ್ರೀತಿ ಒಪ್ಪುವುದಿಲ್ಲ. ಜಾತಿ ಪ್ರೇಮ, ಸಮಾಜ ಏನು ಹೇಳುತ್ತೋ ಎಂಬೆಲ್ಲ ಭಯ ಇರುತ್ತದೆ. ಅದರಲ್ಲೂ ಸಂಬಂಧಿಕ ಕಾಟ ಯಾರಿಗೂ ಬೇಡ. ಪ್ರೀತಿಸಿ ಓಡಿ ಹೋಗಿ ಮದುವೆಯಾದರೆ ಎರಡು ಕುಟುಂಬಗಳು ಸಂಬಂಧ ಕಳೆದುಕೊಳ್ಳಬೇಕು ಎಂಬ ಹೆದರಿಕೆ. ಇದರ ನಡುವೆ ಧೈರ್ಯ ಮಾಡಿ ಮದುವೆಯಾದರೆ ಈ ಪರಿಸ್ಥಿತಿ ನೋಡಿ. ಪ್ರೀತಿಸಿ ಅಧಿಕೃತವಾಗಿ ರಿಜಿಸ್ಟರ್ ಮ್ಯಾರೇಜ್ ಯಾಗಿದ್ದ ನವಜೋಡಿಯನ್ನು ಯುವತಿಯ ಪೋಷಕರು ಮತ್ತು ಸಂಬಂಧಿಕರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಬೇರ್ಪಡಿಸಿರುವ ಘಟನೆ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ. “ನಾನು ಪ್ರೀತಿಸಿ ಮದುವೆಯಾಗಿದ್ದೇನೆ, ನನಗೆ ನನ್ನ ಗಂಡ ಬೇಕು” ಎಂದು ಯುವತಿ ಗೋಳಾಡಿದರೂ ಕಿವಿಗೊಡದ ಪೋಷಕರು ಆಕೆಯನ್ನು ಹೊಡೆದು ಎಳೆದೊಯ್ದಿದ್ದಾರೆ.

ಮಣಿಕಂಠ ಮತ್ತು ಸೃಷ್ಟಿ ಎಂಬುವವರು ಕಳೆದ ಕೆಲವು ಕಾಲದಿಂದ ಪ್ರೀತಿಸುತ್ತಿದ್ದರು. ಪೋಷಕರ ವಿರೋಧದ ನಡುವೆಯೂ ಈ ಜೋಡಿ ಇತ್ತೀಚೆಗೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಮದುವೆಯಾದ ಬಳಿಕ ಸೃಷ್ಟಿ ತನ್ನ ಪತಿ ಮಣಿಕಂಠನ ಮನೆಯಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸೃಷ್ಟಿಯ ತಂದೆ ಮತ್ತು ಸಂಬಂಧಿಕರು ಮಣಿಕಂಠನ ಮನೆಗೆ ನುಗ್ಗಿದ್ದಾರೆ. ಅಲ್ಲಿ ಸೃಷ್ಟಿಯನ್ನು ಬಲವಂತವಾಗಿ ಹೊಡೆದು, ಎಳೆದಾಡಿ ಕಾರಿಗೆ ಹಾಕಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

ಇಲ್ಲಿದೆ ನೋಡಿ ವಿಡಿಯೋ:

“ಅಪ್ಪಾ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ” ಎಂದು ಸೃಷ್ಟಿ ಕಣ್ಣೀರಿಟ್ಟು ಬೇಡಿಕೊಂಡ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಕುರಿತು ದೂರು ನೀಡಲು ಹೋದರೆ ಆಡೂರು ಪೊಲೀಸ್ ಠಾಣೆಯ ಅಧಿಕಾರಿಗಳು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಮಣಿಕಂಠ ಆರೋಪಿಸಿದ್ದಾರೆ. ಕಾನೂನುಬದ್ಧವಾಗಿ ಮದುವೆಯಾಗಿದ್ದರೂ ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:56 pm, Wed, 4 March 26

Source link

ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that keep the body cool on hot summer

ಮಾರ್ಚ್‌ ತಿಂಗಳ ಆರಂಭದೊಂದಿಗೆ ಬೇಸಿಗೆಯೂ (summer) ಶುರುವಾಗಿದೆ. ಈ ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಇನ್ನೂ ತಾಪಮಾನ ಹೆಚ್ಚಾದಂತೆ ನಿರ್ಜಲೀಕರಣ, ಶಾಖದ ಹೊಡೆತ ಮತ್ತು ಆಯಾಸದಂತಹ ಸಮಸ್ಯೆಗಳು ಕಾಣಿಸಿಕೊಳ್ಳಲು ಆರಂಭಿಸುತ್ತದೆ. ಹೀಗಿರುವಾಗ ದೇಹವನ್ನು ತಂಪಾಗಿರಿಸಲು ದೇಹದಲ್ಲಿ ನೀರಿನಾಂಶವನ್ನು ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದರ  ಜೊತೆಗೆ ಈ ಬೇಸಿಗೆಯಲ್ಲಿ ಕೆಲವೊಂದಷ್ಟು ಹಣ್ಣುಗಳನ್ನು ಸೇವನೆ ಮಾಡಬೇಕು. ಇದು ನಿರ್ಜಲೀಕರಣವನ್ನು ತಡೆಯುವುದು ಮಾತ್ರವಲ್ಲದೆ ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ.

ಬೇಸಿಗೆಯಲ್ಲಿ ಸೇವನೆ ಮಾಡಲೇಬೇಕಾದ ಹಣ್ಣುಗಳಿವು:

ಕಲ್ಲಂಗಡಿ: ಕಲ್ಲಂಗಡಿ ಹಣ್ಣಿನಲ್ಲಿ ಸುಮಾರು ಶೇ. 92 ರಷ್ಟು ನೀರು ಇದ್ದು, ಇದು ದೇಹಕ್ಕೆ ಜಲಸಂಚಯನ ಒದಗಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಚರ್ಮವನ್ನು ಆರೋಗ್ಯಕರವಾಗಿಡುವುದರ ಜೊತೆಗೆ ನಿರ್ಜಲೀಕರಣವನ್ನು ತಡೆಯುತ್ತದೆ. ಕಲ್ಲಂಗಡಿ ದೇಹವನ್ನು ತಂಪಾಗಿಸುವ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಈ ಬೇಸಿಗೆಯಲ್ಲಿ ಈ ಹಣ್ಣನ್ನು ಸೇವನೆ ಮಾಡಲೇಬೇಕು.

ದಾಳಿಂಬೆ: ದಾಳಿಂಬೆ ಬೇಸಿಗೆ ಕಾಲದಲ್ಲಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದ್ದು, ಇದು ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿ ನೀರಿನ ಅಂಶ ಸಮೃದ್ಧವಾಗಿದ್ದು, ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ. ಹೆಚ್ಚುವರಿಯಾಗಿ, ದಾಳಿಂಬೆ ಮಲಬದ್ಧತೆ, ಹೊಟ್ಟೆ ನೋವು ಮತ್ತು ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಶಾಖದ ಹೊಡೆತವನ್ನು ತಪ್ಪಿಸಲು, ದಾಳಿಂಬೆ ಮತ್ತು ದಾಳಿಂಬೆ ಜ್ಯೂಸ್‌ ಸೇವಿಸಿ.

ಕಿತ್ತಳೆ: ಕಿತ್ತಳೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅವುಗಳಲ್ಲಿರುವ ವಿಟಮಿನ್ ಸಿ ದೇಹಕ್ಕೆ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ. ಕಿತ್ತಳೆ ತಿನ್ನುವುದರಿಂದ ಆಯಾಸ ಕಡಿಮೆಯಾಗುತ್ತದೆ ಮತ್ತು ದೇಹಕ್ಕೆ ಉಲ್ಲಾಸ ದೊರೆಯುತ್ತದೆ. ಬೇಸಿಗೆಯಲ್ಲಿ ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸುತ್ತದೆ.

ದ್ರಾಕ್ಷಿಗಳು:  ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ದ್ರಾಕ್ಷಿ ಹಣ್ಣನ್ನು ಬೇಸಿಗೆಯಲ್ಲಿ ಸೇವನೆ ಮಾಡುವುದು ಉತ್ತಮ. ದ್ರಾಕ್ಷಿ ಶೇಕಡಾ 70 ಕ್ಕಿಂತ ಹೆಚ್ಚು ನೀರನ್ನು ಹೊಂದಿದ್ದು, ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ. ಶಾಖದ ಹೊಡೆತವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ ನೀವು ಉಪಾಹಾರ, ಮಧ್ಯಾಹ್ನದ ಭೋಜನ  ಮತ್ತು ಸಂಜೆ ತಿಂಡಿ ಸಮಯದಲ್ಲಿ ದ್ರಾಕ್ಷಿಯನ್ನು ಸೇವಿಸಬಹುದು.

ಸೌತೆಕಾಯಿ: ಬೇಸಿಗೆಯಲ್ಲಿ ದೇಹವನ್ನು ಕೂಲ್‌ ಆಗಿರಿಸಲು ಸೌತೆಕಾಯಿ ಸೇವನೆ ಮಾಡುವುದು ಸಹ ಬೆಸ್ಟ್.‌ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ನಿರ್ಜಲೀಕರಣವನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಸೌತೆಕಾಯಿಯಲ್ಲಿರುವ ಎಲೆಕ್ಟ್ರೋಲೈಟ್‌ಗಳು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಣ್ಣಿನ ಮಡಿಕೆ ನೀರು ಕುಡಿಯೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

 ತೆಂಗಿನ ನೀರು: ದೇಹವನ್ನು ನೈಸರ್ಗಿಕವಾಗಿ ತಂಪಾಗಿಸಲು ಮತ್ತು ಹೈಡ್ರೇಟ್ ಮಾಡಲು ಎಳನೀರು ಸೇವನೆ ಮಾಡುವುದು ಬೆಸ್ಟ್.‌ ಎಲೆಕ್ಟ್ರೋಲೈಟ್‌ಗಳಲ್ಲಿ ಸಮೃದ್ಧವಾಗಿರುವ ಇದು ಈ ಬಿಸಿಲ ಶಾಖದಲ್ಲಿ ಆಯಾಸವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ದೇಹವನ್ನು ನಿರ್ವಿಷಗೊಳಿಸಲು ಸಹ ಸಹಾಯ ಮಾಡುತ್ತದೆ.

ಪಪ್ಪಾಯಿ: ಪಪ್ಪಾಯಿ ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಇದರಲ್ಲಿ ದೇಹವನ್ನು ಚೈತನ್ಯಪೂರ್ಣವಾಗಿಡುವ ಉತ್ಕರ್ಷಣ ನಿರೋಧಕಗಳಿದ್ದು, ಇದು ಬೇಸಿಗೆಯಲ್ಲಿ ದೇಹವನ್ನು ಕೂಲ್‌ ಆಗಿಡುತ್ತದೆ.

ಲಿಚಿ: ಲಿಚಿ ನೀರಿನಲ್ಲಿ ಸಮೃದ್ಧವಾಗಿದ್ದು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಇದರ ವಿಟಮಿನ್ ಸಿ ಮತ್ತು ಬಿ-ಕಾಂಪ್ಲೆಕ್ಸ್ ಅಂಶವು ದೇಹವನ್ನು ಚೈತನ್ಯಗೊಳಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಹಾರ್ಮುಜ್ ಜಲಸಂಧಿ ಬಂದ್: ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ! – Kannada News | Russia Steps In as India Faces Oil Supply Fears After Iran Closes Strait of Hormuz

ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!Image Credit source: TV9 Network

ನವದೆಹಲಿ, ಮಾರ್ಚ್​ 4: ಇರಾನ್-ಇಸ್ರೇಲ್ ಸೇನಾ ಸಂಘರ್ಷದ (Iran Isreal Conflict) ಕಾರಣ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಇದರ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆ ಮೇಲೂ ಆಗಿದೆ. ಇರಾನ್ ಹಾರ್ಮುಜ್ ಜಲಸಂಧಿ ಬಂದ್ ಮಾಡಿರುವ ಕಾರಣ ಕಚ್ಚಾ ತೈಲ ಪೂರೈಕೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಯಾಗಿದೆ. ಉದ್ಯಮ ವಲಯದ ಮೂಲಗಳ ಪ್ರಕಾರ, ಸುಮಾರು 9.5 ಮಿಲಿಯನ್ ಬ್ಯಾರೆಲ್ ರಷ್ಯನ್ ಕಚ್ಚಾ ತೈಲ ಈಗಾಗಲೇ ಭಾರತೀಯ ಸಮುದ್ರ ಗಡಿಯ ಸಮೀಪದಲ್ಲಿರುವ ಹಡಗುಗಳಲ್ಲಿ ಲಭ್ಯವಿದ್ದು, ಇದು ಕೆಲವು ವಾರಗಳಲ್ಲಿ ಭಾರತಕ್ಕೆ ತಲುಪುವ ಸಾಧ್ಯತೆ ಇದೆ. ಈ ಮೂಲಕ ಮಧ್ಯಪ್ರಾಚ್ಯದಿಂದ ಉಂಟಾದ ಪೂರೈಕೆ ವ್ಯತ್ಯಯವನ್ನು ಭಾಗಶಃ ಸಮತೋಲನಗೊಳಿಸಲು ಭಾರತಕ್ಕೆ ಸಾಧ್ಯವಾಗಬಹುದು ಎನ್ನಲಾಗಿದೆ.

ಭಾರತವು ಪ್ರಸ್ತುತ ಕೇವಲ 25 ದಿನಗಳ ಬೇಡಿಕೆಗೆ ತಕ್ಕಷ್ಟು ಕಚ್ಚಾ ತೈಲ ಸಂಗ್ರಹ ಹೊಂದಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸೇರಿದಂತೆ ಇತರೆ ಇಂಧನಗಳ ಸಂಗ್ರಹವೂ ಸೀಮಿತವಾಗಿದೆ. ಹೀಗಾಗಿ ಭಾರತಕ್ಕೆ ಪೂರೈಕೆ ಆತಂಕ ಎದುರಾಗಿದೆ.

ಭಾರತದ ಸುಮಾರು ಶೇಕಡಾ 40ರಷ್ಟು ಕಚ್ಚಾ ತೈಲ ಆಮದು ಹಾರ್ಮುಜ್ ಜಲಸಂಧಿ ಮೂಲಕ ಸಾಗುತ್ತದೆ. ಇದು ಬಂದ್ ಆಗಿರುವುದರಿಂದ ಭಾರತ ಪರ್ಯಾಯ ಮೂಲಗಳನ್ನು ಹುಡುಕಲು ಮುಂದಾಗಿದೆ. ಭಾರತೀಯ ರಿಫೈನರಿಗಳು ದಿನಕ್ಕೆ ಸುಮಾರು 5.6 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುತ್ತಿವೆ.

ರಷ್ಯಾದಿಂದ ಕಚ್​ಚಾ ತೈಲ ಆಮದು ಕಡಿಮೆ ಮಾಡಿದ್ದ ಭಾರತ

ಉದ್ಯಮ ಮೂಲಗಳ ಪ್ರಕಾರ, ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲದ ಶೇಕಡಾ 40 ರವರೆಗೆ ಪೂರೈಸಲು ರಷ್ಯಾ ಸಿದ್ಧವಿದೆ. ಜನವರಿಯಲ್ಲಿ ರಷ್ಯಾದಿಂದ ಭಾರತಕ್ಕೆ ಪ್ರತಿ ದಿನ ಸುಮಾರು 1.1 ಮಿಲಿಯನ್ ಬ್ಯಾರೆಲ್ ಆಮದು ಮಾಡಲಾಗಿತ್ತು. ಅದು 2022 ರ ನವೆಂಬರ್ ನಂತರದ ಕನಿಷ್ಠ ಮಟ್ಟವಾಗಿತ್ತು. ಆದರೆ ಫೆಬ್ರವರಿಯಲ್ಲಿ ಈ ಪ್ರಮಾಣವು ಮತ್ತೆ 30 ಶೇಕಡಾ ಮಟ್ಟಕ್ಕೆ ಏರಿಕೆಯಾಗಿದೆ ಎಂಬುದು ಅಂಕಿಅಂಶಗಳಿಂದ ತಿಳಿದುಬಂದಿದೆ.

ರಷ್ಯಾ ತೈಲ ಖರೀದಿಗೆ ಅಡ್ಡಿಯಾಗಿದ್ದ ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದ

ಭಾರತೀಯ ತೈಲ ಸಂಸ್ಕರಣಾಗಾರಗಳು ರಷ್ಯಾದ ತೈಲ ಮಾರಾಟಗಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರೂ, ಆಮದು ಪ್ರಮಾಣ ಹೆಚ್ಚಿಸುವ ಬಗ್ಗೆ ಅಂತಿಮ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಅಮೆರಿಕದೊಂದಿಗೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳೂ ಈ ನಿರ್ಧಾರಕ್ಕೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ಭಾರತ ತೈಲ ಖರೀದಿಯನ್ನು ನಿಲ್ಲಿಸುವ ಭರವಸೆ ನೀಡಿದೆ ಎಂದು ಹೇಳಿದ್ದರು. ಆದರೆ, ಭಾರತ ಮಾತ್ರ ತನ್ನ ತೈಲ ಖರೀದಿ ತಂತ್ರವು ಮಾರುಕಟ್ಟೆ ಪರಿಸ್ಥಿತಿ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಆಧಾರದಲ್ಲಿಯೇ ಇರಲಿದೆ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರಾಚ್ಯ ಉದ್ವಿಗ್ನತೆ ಇನ್ನೂ ಕೆಲವು ದಿನಗಳ ಮಟ್ಟಿಗೆ ಹೀಗೆಯೇ ಮುಂದುವರಿದರೆ, ಭಾರತ ತನ್ನ ಇಂಧನ ಭದ್ರತೆಯನ್ನು ಕಾಯ್ದುಕೊಳ್ಳಲು ಪರ್ಯಾಯ ಪೂರೈಕೆ ಮಾರ್ಗಗಳನ್ನು ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 6:36 pm, Wed, 4 March 26

Source link

10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್, ಹೊರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ – Kannada News | Iran Attacks 10 Oil Tankers, Imposes Strait of Hormuz Blockade; 37 Indian Ships Stranded

ಹೊರ್ಮುಜ್ ಜಲಸಂಧಿಗೆ ನಿರ್ಬಂಧ ಹೇರಿರುವುದಾಗಿ ಇರಾನ್ ಘೋಷಿಸಿದ್ದು, ಈ ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮಾಹಿತಿ ನೀಡಿದೆ. ಈ ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಈ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಹಾಕಿಕೊಂಡಿವೆ. ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದರೂ, ತೈಲ ಕೊರತೆ ಮತ್ತು ಬೆಲೆ ಏರಿಕೆಯ ಲಕ್ಷಣಗಳು ಗೋಚರಿಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ – Kannada News | Pakistan openly reminds Iran of its defence pact with Saudi Arabia

ಇಸ್ಲಾಮಾಬಾದ್, ಮಾರ್ಚ್ 4: ಸೌದಿ ಅರೇಬಿಯಾ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆಯ ಸಂದೇಶ ರವಾನಿಸಿದೆ. ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ಮಿಲಿಟರಿ ಒಪ್ಪಂದ (Pakistan Saudi Arabia bilateral defence pact) ಹೊಂದಿದೆ. ಈ ಒಪ್ಪಂದದ ಪ್ರಕಾರ ಈ ಇಬ್ಬರಲ್ಲಿ ಯಾರ ಮೇಲೆ ಆಕ್ರಮಣವಾದರೂ ಮತ್ತೊಬ್ಬರು ನೆರವಿಗೆ ಧಾವಿಸಬೇಕು. ಈಗ ಸೌದಿ ಅರೇಬಿಯಾದ ಪ್ರಮುಖ ನಗರಗಳ ಮೇಲೆ ಇರಾನ್ ದಾಳಿ ಎಸಗುತ್ತಿರುವುದರಿಂದ ಪಾಕಿಸ್ತಾನವು ಒಪ್ಪಂದದ ಕಟ್ಟುಪಾಡುಗಳಿಗೆ ಒಳಗಾಗಬೇಕಾಗಬಹುದು. ಹೀಗಾಗಿ, ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ ಕೊಟ್ಟಿದೆ.

ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ವಿಶ್ವಕ್ಕೆ ಗೊತ್ತಿದೆ. ಒಪ್ಪಂದಕ್ಕೆ ಪಾಕಿಸ್ತಾನ ಕಟ್ಟುಬಿದ್ದಿದೆ. ಈ ಒಪ್ಪಂದವು ಇರಾನ್ ಗಮನಕ್ಕಿರಬೇಕು. ಇರಾನ್​ನ ನಾಯಕತ್ವ ಸ್ಥಾನದಲ್ಲಿರುವ ನಮ್ಮ ಸಹೋದರರಿಗೆ ಇದನ್ನು ನೆನಪಿಸಲು ಇಚ್ಛಿಸುತ್ತೇನೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದರ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ

ಸೌದಿ ಅರೇಬಿಯಾದಲ್ಲಿ ಇಸ್ಲಾಮ್ ಧರ್ಮದ ಆತ್ಮ ಇದೆ. ಮೆಕ್ಕಾ ಮಸೀದಿ ಮತ್ತು ಮದೀನಾದಲ್ಲಿ ಪ್ರವಾದಿಗಳ ಮಸೀದಿ ಇರುವುದು ಸೌದಿಯಲ್ಲೇ. ಇಸ್ಲಾಮ್ ಧರ್ಮ ಹುಟ್ಟಿದ್ದೂ ಇಲ್ಲೇ. ತನಗೆ ಈ ಧಾರ್ಮಿಕ ಸ್ಥಳದ ರಕ್ಷಣೆಯೇ ಮೊದಲ ಆದ್ಯತೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪ್ರತಿಯೊಂದು ವೇದಿಕೆಯಲ್ಲೂ, ಪ್ರತಿಯೊಂದು ಕ್ಷೇತ್ರದಲ್ಲೂ ಸೌದಿ ಅರೇಬಿಯಾಗೆ ಬೆಂಬಲವಾಗಿ ನಿಂತಿದ್ದೇವೆ ಎಂದೂ ಪಾಕಿಸ್ತಾನ ಹೇಳುತ್ತಿದೆ.

ಪಾಕಿಸ್ತಾನದ ವಿರುದ್ಧ ಭಾರತ, ಅಫ್ಗಾನ್ ಮತ್ತು ಇರಾನ್ ಅನ್ನು ಛೂಬಿಡುವ ಪಿತೂರಿ: ಖವಾಜ ಆಸಿಫ್

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್ ಸ್ಫೋಟಕ ಆರೋಪವೊಂದನ್ನು ಮಾಡಿದ್ದಾರೆ. ಇರಾನ್​ನಲ್ಲಿ ಆಡಳಿತ ಬದಲಾವಣೆ ಮಾಡುತ್ತಿರುವುದು ಪಾಕಿಸ್ತಾನವನ್ನು ಸಾಮಂತ ನಾಡನ್ನಾಗಿ ಮಾಡಲು ಝಯೋನಿಸ್ಟರು (ಇಸ್ರೇಲಿಗರು) ಮಾಡಿರುವ ಪಿತೂರಿ ಎಂದು ಸಚಿವರು ಆಪಾದಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ

ಇರಾನ್​ನಲ್ಲಿ ಆಡಳಿತ ಬದಲಾದರೆ ಇರಾನ್, ಅಫ್ಗಾನಿಸ್ತಾನ್ ಮತ್ತು ಭಾರತದ ಮೂಲಕ ಪಾಕಿಸ್ತಾನಕ್ಕೆ ತೊಂದರೆ ಕೊಡುವ ಸಂಚು ನಡೆದಿದೆ. ಪಾಕಿಸ್ತಾನದ 25 ಕೋಟಿ ಜನರು ಈ ವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ಶತ್ರುಗಳ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆಸಿಫ್ ಖವಾಜ ಕರೆ ನೀಡಿದ್ದಾರೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್ – Kannada News | Director S Narayan reaction to viral video of Kannada actresses

ಪಾಪರಾಜಿಗಳ ವರ್ತನೆ ವಿರುದ್ಧ ಕನ್ನಡ ಚಿತ್ರರಂಗ (Kannada Film Industry) ಗರಂ ಆಗಿದೆ. ನಟಿಯರ ದೇಹದ ಭಾಗಗಳನ್ನು ಅಸಭ್ಯ ರೀತಿಯಲ್ಲಿ ಚಿತ್ರಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವವರಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಧ್ವನಿ ಎತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್. ನಾರಾಯಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಲಾವಿದರನ್ನು ಗೌರವದಿಂದ ಕಾಣಬೇಕು. ಚೌಕಟ್ಟನ್ನು ಮೀರಿ ಯಾರೂ ಹೊರಗೆ ಬರಬಾರದು. ಸೋಶಿಯಲ್ ಮೀಡಿಯಾ ಅತಿರೇಕಕ್ಕೆ ಹೋಗುತ್ತಿದೆ. ಪ್ರತಿಯೊಬ್ಬರಿಗೂ ಮಾನ, ಮರ್ಯಾದೆ, ಗೌರವ ಇರುತ್ತದೆ. ಅದನ್ನು ಅವರು ಗಳಿಸಿರುತ್ತಾರೆ, ಕೊಂಡುಕೊಂಡಿರಲ್ಲ. ಅದನ್ನು ಗಳಿಸಲು ಪರಿಶ್ರಮ, ತ್ಯಾಗ ಇರುತ್ತದೆ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು’ ಎಂದು ಎಸ್. ನಾರಾಯಣ್ (S Narayan) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ – Kannada News | Thousand Of Muslims Protest Infront of basavakalyana police station for Action Action Against Hindu Youths Who assaulted On moulvi

ಬೀದರ್ (ಮಾರ್ಚ್ 04): ಜಿಲ್ಲೆಯ ಬಸವಕಲ್ಯಾಣದಲ್ಲಿ (basavakalyana) ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ (Muslims Protest) ನಡೆಸಿದ್ದು, ಮೌಲ್ವಿಗಳ ಮೇಲೆ ಹಲ್ಲೆ ಮಾಡಿದ ಹಿಂದೂ ಯುವಕರನ್ನು ನಮ್ಮ ವಶಕ್ಕೆ ಕೊಡುವಂತೆ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗದ್ದಲ ಗಲಾಟೆ ಮಾಡಬೇಡಿ ಎಂದು ಪೊಲೀಸರು ಮೈಕ್​​ನಲ್ಲಿ ಅನೌನ್ಸ್ ಮಾಡಿದರೂ ಸಹ ಕ್ಯಾರೇ ಎನ್ನದೇ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ.

ಮಾಹಿತಿಯ ಪ್ರಕಾರ, ಕೆಲವು ಹಿಂದೂ ಯುವಕರು ಮುಸ್ಲಿಂ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಚಾರ ನಗರದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಿಂದ ಕೆರಳಿದ ಮುಸ್ಲಿಂ ಸಮುದಾಯದ ಸಾವಿರಾರು ಯುವಕರು ಮತ್ತು ಮುಖಂಡರು ನಗರದ ಗಾಂಧಿ ವೃತ್ತದಲ್ಲಿರುವ ಪೊಲೀಸ್ ಠಾಣೆಯತ್ತ ಧಾವಿಸಿದ್ದಾರೆ. ‘ಹಲ್ಲೆ ನಡೆಸಿದವರ ವಿರುದ್ಧ ಎಫ್​​​ಐಆರ್ ದಾಖಲಾಗಬೇಕು. ಇಲ್ಲ ಅವರನ್ನು ನಮ್ಮ ವಶಕ್ಕೆ ವಶಕ್ಕೆ ನೀಡಬೇಕು’ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಠಾಣೆಯ ಮುಂಭಾಗದಲ್ಲಿ ಭಾರಿ ಗದ್ದಲ ಸೃಷ್ಟಿಸಿದ್ದಾರೆ.  ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಹಿಂದೂ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಮುಸ್ಲಿಮರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇನ್ನು ಏಕಾಏಕಿ ಪ್ರತಿಭಟನೆ ಮಾಡಿದ್ದವರ ಪೈಕಿ  49 ಮುಸ್ಲಿಮರ ವಿರುದ್ಧವೂ ಸಹ ಪ್ರಕರಣ ದಾಖಲಲಾಗಿದೆ. ಈ ಪ್ರತಿಭಟನೆ ಹಿನ್ನೆಲೆ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ಭಾರತವನ್ನು ಸೋಲಿಸಲು ಒಳ ಸಂಚು? ಪಿಚ್ ಕ್ಯುರೇಟರ್ ಜೊತೆ ಗಂಭೀರ್ ಜಗಳ – Kannada News | T20 World Cup Semifinal: Wankhede Pitch Controversy Ahead of India vs England Match

ಟಿ20 ವಿಶ್ವಕಪ್ ಸೆಮಿಫೈನಲ್‌ನ (T20 World Cup Semi-final) ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Pitch) ನಡೆಯಲಿದೆ. ಒಂದೆಡೆ ತವರಿನ ಲಾಭ ಪಡೆದು ಫೈನಲ್​ಗೇರುವ ಇರಾದೆಯೊಂದಿಗೆ ಟೀಂ ಇಂಡಿಯಾ ಇದ್ದರೆ, ಇತ್ತ ಇಂಗ್ಲೆಂಡ್, ಕಳೆದ ಟಿ20 ವಿಶ್ವಕಪ್ ಸೆಮಿಫೈನಲ್‌ ಸೋಲಿಗೆ ಸೇಡು ತೀರಿಸಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋವೊಂದು ಚರ್ಚೆಗೆ ಗ್ರಾಸವಾಗಿದ್ದು, ಟೀಂ ಇಂಡಿಯಾವನ್ನು ಮಣಿಸಲು ಒಳ ಸಂಚು ನಡೆದಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಅಷ್ಟಕ್ಕೂ ಈ ಅನುಮಾನ ಹುಟ್ಟಲು ಕಾರಣವೇನು? ವೈರಲ್ ಆಗುತ್ತಿರುವ ಫೋಟೋದಲ್ಲಿ ಅಂತದ್ದೇನಿದೆ ಎಂಬುದನ್ನು ನೋಡುವುದಾದರೆ..

ಪಿಚ್‌ನಲ್ಲಿ ಹಸಿರು ಹುಲ್ಲಿನ ಪದರ

ವಾಸ್ತವವಾಗಿ ವಾಂಖೆಡೆ ಪಿಚ್ ಯಾವಾಗಲೂ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಅಂದರೆ ಈ ಪಿಚ್​ನಲ್ಲಿ ರನ್ ಮಳೆ ಹರಿಯುವುದು ವಾಡಿಕೆ. ಆದರೆ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಪಿಚ್ ಅಧ್ಯಯನ ನಡೆಸುವ ವೇಳೆ ಪಿಚ್ ಕ್ಯುರೇಟರ್ ಜೊತೆ ವಾಗ್ವಾದ ನಡೆಸಿರುವುದು ಅಭಿಮಾನಿಗಳಲ್ಲಿ ಆತಂಕ ಹುಟ್ಟಿಹಾಕಿದೆ. ವರದಿಯ ಪ್ರಕಾರ, ವಾಂಖೆಡೆ ಪಿಚ್‌ನಲ್ಲಿ ಹಸಿರು ಹುಲ್ಲಿನ ಪದರ ಗೋಚರಿಸುತ್ತಿದೆ. ಇದು ವೇಗದ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ಆದ್ದರಿಂದ, ಸೆಮಿಫೈನಲ್ ಪಂದ್ಯದಲ್ಲಿ ವೇಗದ ಬೌಲರ್‌ಗಳು ದೊಡ್ಡ ಪಾತ್ರವನ್ನು ವಹಿಸುವ ಸಾಧ್ಯತೆಯಿದ್ದು, ಪವರ್ ಪ್ಲೇನಲ್ಲಿ ರನ್ ವೇಗಕ್ಕೆ ಕಡಿವಾಣ ಹಾಕಲಿದ್ದಾರೆ.

ವೇಗದ ಬೌಲರ್‌ಗಳಿಗೆ ಹೆಚ್ಚು ಪ್ರಯೋಜನ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೋದಲ್ಲಿ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ಜೊತೆ ಚರ್ಚಿಸುತ್ತಿರುವುದು ಕಂಡುಬರುತ್ತದೆ. ಈ ಸಮಯದಲ್ಲಿ, ಗೌತಮ್ ಗಂಭೀರ್ ಕೋಪಗೊಂಡವರಂತೆ ಕಾಣುತ್ತಿದ್ದಾರೆ. ಗೌತಮ್ ಗಂಭೀರ್ ಈ ಪಿಚ್ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಪಿಚ್​ ಹುಲ್ಲಿನ ಮೇಲ್ಮೈ ಹೊಂದಿದ್ದರೆ, ಅದು ವೇಗದ ಬೌಲರ್‌ಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಆದ್ದರಿಂದ, ಪವರ್‌ಪ್ಲೇನಲ್ಲಿ ರನ್ ಗಳಿಸುವುದು ಕಷ್ಟಕರವಾಗಬಹುದು. ಇದರ ಲಾಭವನ್ನು ಇಂಗ್ಲೆಂಡ್‌ ತಂಡ ಪಡೆಯಬಹುದು.

IND vs ENG: ಭಾರತ- ಇಂಗ್ಲೆಂಡ್‌ ಮುಖಾಮುಖಿ ದಾಖಲೆ ಹೇಗಿದೆ? ಇಲ್ಲಿದೆ ಪೂರ್ಣ ಜಾತಕ

ಏಕೆಂದರೆ ಇಂಗ್ಲೆಂಡ್‌ನಲ್ಲಿ ಎಲ್ಲಾ ಪಿಚ್​ಗಳು ಹುಲ್ಲಿನ ಪದರವನ್ನು ಹೊಂದಿರುತ್ತವೆ. ಹಾಗಾಗಿ ಇಂಗ್ಲೆಂಡ್‌ ಆಟಗಾರರು ಅಂತಹ ಪಿಚ್​ಗಳಲ್ಲಿ ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಮತ್ತೊಂದೆಡೆ, ಪ್ರಸ್ತುತ ಇಂಗ್ಲೆಂಡ್‌ ತಂಡದ ಅನೇಕ ಆಟಗಾರರು ಐಪಿಎಲ್ ಪಂದ್ಯಾವಳಿಯಲ್ಲಿ ಆಡಿದ್ದಾರೆ. ಆದ್ದರಿಂದ, ಅವರಿಗೆ ಭಾರತೀಯ ಪಿಚ್‌ಗಳ ಬಗ್ಗೆ ಅರಿವಿದೆ. ಇಂತಹ ಪರಿಸ್ಥಿತಿಯಲ್ಲಿ, ಇಂಗ್ಲೆಂಡ್, ಭಾರತ ತಂಡಕ್ಕೆ ಕಠಿಣ ಸವಾಲು ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:16 pm, Wed, 4 March 26

Source link

ಅತಿಯಾಗಿ ತಿಂದ್ರೆ ಮಾತ್ರ ಬೊಜ್ಜು ಬರುತ್ತೆ ಅಂತಾ ಅಂದ್ಕೊಂಡ್ ಇದ್ದೀರಾ? ಇಲ್ಲಿದೆ ನೋಡಿ ಅಚ್ಚರಿ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಒಬೆಸಿಟಿ (ಬೊಜ್ಜು) ಅಥವಾ ಸ್ಥೂಲಕಾಯತೆ (Obesity) ಹೆಚ್ಚಾಗುತ್ತಿದ್ದು ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಕೆಲವರು ಅತಿಯಾಗಿ ತಿನ್ನುವುದೇ ಈ ಸಮಸ್ಯೆ ಕಾರಣ ಎಂದು ತಿಳಿದುಕೊಂಡಿರುತ್ತಾರೆ. ಆದರೆ ಈ ಸಮಸ್ಯೆ ಪ್ರತಿಯೊಬ್ಬರಿಗೂ ಒಂದೇ ರೀತಿಯಾಗಿ ಪರಿಣಾಮ ಬೀರುವುದಿಲ್ಲ. ವಿಶೇಷವಾಗಿ ಮೆಟಾಬಾಲಿಸಂ ಸರಿಯಾಗಿರದವರಲ್ಲಿ ತೂಕ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದರೆ ಇದರ ಹೊರತಾಗಿಯೂ ಇನ್ನೂ ಹಲವು ಕಾರಣಗಳಿವೆ. ಅವುಗಳನ್ನು ತಿಳಿದುಕೊಂಡರೆ ಸ್ಥೂಲಕಾಯವನ್ನು ಅಂದರೆ ಬೊಜ್ಜನ್ನು ಸರಿಯಾಗಿ ನಿಯಂತ್ರಿಸಬಹುದಾಗಿದೆ.

ಡಾ. ದೀಪಕ್ ಕುಮಾರ್ ಸುಮನ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಹೆಚ್ಚು ತಿನ್ನುವುದು ಸ್ಥೂಲಕಾಯಕ್ಕೆ ಕಾರಣವಾದರೂ, ಕೆಲವರು ಕಡಿಮೆ ಆಹಾರ ಸೇವನೆ ಮಾಡಿದರೂ ತೂಕ ಹೆಚ್ಚಾಗುತ್ತದೆ. ಇದಕ್ಕೆ ಹಾರ್ಮೋನ್ ಅಸಮತೋಲನ, ಮಾನಸಿಕ ಒತ್ತಡ ಮತ್ತು ನಿದ್ರಾಹೀನತೆ ಪ್ರಮುಖ ಕಾರಣಗಳಾಗಿವೆ. ಕೆಲವರಲ್ಲಿ ಥೈರಾಯ್ಡ್ ಸಮಸ್ಯೆ, ಪಿಸಿಓಎಸ್ (PCOS) ಅಥವಾ ಇನ್ಸುಲಿನ್ ರೆಸಿಸ್ಟೆನ್ಸ್‌ನಿಂದ ತೂಕ ವೇಗವಾಗಿ ಹೆಚ್ಚಾಗುತ್ತದೆ. ಕಳೆದ ಕೆಲವು ವರ್ಷಗಳಲ್ಲಿ ಥೈರಾಯ್ಡ್ ಹಾಗೂ ಇನ್ಸುಲಿನ್ ರೆಸಿಸ್ಟೆನ್ಸ್‌ನಿಂದ ತೂಕ ಹೆಚ್ಚಾಗುವ ರೋಗಿಗಳ ಸಂಖ್ಯೆ ಕೂಡ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.

ನಿದ್ರಾಹೀನತೆ ಮತ್ತು ಬೊಜ್ಜಿಗಿರುವ ಸಂಬಂಧ:

ಡಾ. ದೀಪಕ್ ಅವರ ಪ್ರಕಾರ, ದಿನಕ್ಕೆ 5 ಗಂಟೆಗಳಿಗಿಂತಲೂ ಕಡಿಮೆ ನಿದ್ರೆ ಮಾಡುವವರಲ್ಲಿ ಘ್ರೆಲಿನ್ (Ghrelin) ಹಾರ್ಮೋನ್ ಮಟ್ಟದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಈ ಹಾರ್ಮೋನ್ ಹಸಿವನ್ನು ಹೆಚ್ಚಿಸುತ್ತದೆ. ಹಸಿವು ಹೆಚ್ಚಾದಾಗ ವ್ಯಕ್ತಿ ಹೆಚ್ಚು ಆಹಾರ ಸೇವಿಸುತ್ತಾನೆ, ಇದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಕೂಡ ಹೆಚ್ಚಾಗುತ್ತದೆ. ನಿದ್ರೆ ಪೂರ್ತಿಯಾಗದವರಲ್ಲಿ ಕ್ರಮೇಣ ಸ್ಥೂಲಕಾಯದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬರಲ್ಲೂ ಇದೇ ರೀತಿಯ ಪರಿಣಾಮ ಕಾಣಿಸಿಕೊಳ್ಳುವುದಿಲ್ಲ. ಅಷ್ಟು ಮಾತ್ರವಲ್ಲ, ಬೊಜ್ಜಿಗೆ ಮಾನಸಿಕ ಒತ್ತಡವೂ ಕಾರಣವಾಗುತ್ತದೆ. ಏಕೆಂದರೆ ಒತ್ತಡ ದೇಹದಲ್ಲಿ ಕಾರ್ಟಿಸೋಲ್ (Cortisol) ಹಾರ್ಮೋನ್ ಮಟ್ಟ ಹೆಚ್ಚಾಗುತ್ತದೆ. ಈ ಹಾರ್ಮೋನ್ ಹೆಚ್ಚಾದಾಗ ಹೊಟ್ಟೆ ಸುತ್ತಲಿನ ಕೊಬ್ಬು ಹೆಚ್ಚಾಗುತ್ತದೆ. ಈ ರೀತಿಯ ಕೊಬ್ಬು ಅನೇಕ ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಸರಿಯಾದ ಜೀವನಶೈಲಿ ಮತ್ತು ಸಮಯೋಚಿತ ವೈದ್ಯಕೀಯ ಸಲಹೆಯಿಂದ ತೂಕವನ್ನು ನಿಯಂತ್ರಣದಲ್ಲಿಡುವುದು ಅತ್ಯಂತ ಮುಖ್ಯವಾಗಿದೆ.

ಇದನ್ನೂ ಓದಿ: ಬೊಜ್ಜಿಗೆ ಕಾರಣವೇನು? ಯೋಗಾಸನದ ಮೂಲಕ ಈ ಸಮಸ್ಯೆಯನ್ನು ಹೇಗೆ ನಿವಾರಿಸಬಹುದು ಎನ್ನುತ್ತಾರೆ ಡಾ. ವಂದನಾ

ಬೊಜ್ಜನ್ನು ತಡೆಗಟ್ಟಲು ಸಲಹೆ:

  • ಆಹಾರ ಪದ್ಧತಿಯಲ್ಲಿ ನಿಯಂತ್ರಣ ಇಟ್ಟುಕೊಳ್ಳಿ
  • ಮಾನಸಿಕ ಒತ್ತಡದಿಂದ ದೂರವಿರಿ
  • ಪ್ರತಿದಿನ ವ್ಯಾಯಾಮ ಮಾಡಿ
  • ತೂಕ ಹೆಚ್ಚಾದರೆ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ – Kannada News | Ballari Swelters: Early Heatwave Sees 38°C, Rising Hospital Visits

ಬಳ್ಳಾರಿ, ಮಾರ್ಚ್​​ 04: ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದ್ರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೇ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತೀ ಹೆಚ್ಚು ಬಿಸಿ ಗಾಳಿ ಸಾಧ್ಯತೆ ಇದ್ದು, ಜನ ಜಾಗೃತಿಯಿಂದಿರುವಂತೆ ತಿಳಿಸಲಾಗಿದೆ.

ಆಸ್ಪತ್ರೆ ಸೇರುತ್ತಿರುವ ಮಂದಿ

ಇನ್ನು ಸೆಕೆ ತಾಳಲಾರದೆ ಜನ ತಂಪುನೀಯಗಳ ಮೊರೆ ಹೋಗುತ್ತಿದ್ದಾರೆ. ಎಳನೀರು, ಜ್ಯೂಸ್​​ನಂತಹ ಪೇಯಗಳ ಜೊತೆಗೆ ಕಲ್ಲಂಗಡಿ ತಿಂದು ಬಿಸಿಲ ಧಗೆಯಿಂದ ತಮ್ಮನ್ನ ತಾವು ಕಾಪಾಡಿಕೊಳ್ಳುತ್ತಿದ್ದಾರೆ. ಬಿಸಿಲಿನ ಶಾಖಕ್ಕೆ ನಿರ್ಜಲೀಕರಣ, ಕಣ್ಣು ಉರಿ, ಆಯಾಸ, ತೆಲೆ ನೋವು ಮುಂತಾದ ಕಾರಣಗಳಿಗೆ ಆಸ್ಪತ್ರೆಯತ್ತ ಮುಖ ಮಾಡುವವರ ಸಂಖ್ಯೆಯೂ ಹೆಚ್ಚಿದೆ.  ಜನ ಮನೆ ಬಿಟ್ಟು ಹೊರ ಬರಲು ಭಯ ಪಡುವ ಪರಿಸ್ಥಿತಿ ಉದ್ಭವಿಸಿದೆ. ಈಗಲೇ ಇಷ್ಟು ಸೆಕೆಯಾದರೆ ನಡು ಬೇಸಿಗೆಯಲ್ಲಿ ದೇವರೇ ನಮ್ಮನ್ನು ಕಾಪಾಡಬೇಕು. ಈಗಲೇ ಊಟ-ತಿಂಡಿ ಬಿಟ್ಟು ಕೇವಲ ತಂಪುಪಾನೀಯಗಳ ಸೇವಿಸಿ ಜೀವನ ಮಾಡುತ್ತಿದ್ದೇವೆ ಎಂದು ಜನರು ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು

ಟ್ರಾಫಿಕ್ ಸಿಗ್ನಲ್​​ಗಳ ಬಳಿ ನೆರಳಿಗೆ ಆಗ್ರಹ

ಬಿಸಿಲ ಬೇಗೆಯಿಂದ ವಾಹನ ಸವರಾರರನ್ನು ರಕ್ಷಿಸಲು ಜಿಲ್ಲಾಡಳಿತ ಟ್ರಾಫಿಕ್ ಸಿಗ್ನಲ್​​ಗಳ ಬಳಿ ನೆರಳಿಗೆ ವ್ಯವಸ್ಥೆ ಮಾಡಿಕೊಡಬೇಕು. ಅಲ್ಲಲ್ಲಿ ನೀರಿನ ಕುಟೀರಗಳನ್ನ ಸ್ಥಾಪಿಸಿ ಜನರ ದಾಹ ತೀರಿಸುವ ಕೆಲಸ ಮಾಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಬಿಸಿಲಿನ ಕಾರಣ ಜನ ಹೆಚ್ಚಾಗಿ ತಂಪು ಪಾನೀಯಗಳ ಮೊರೆ ಹೋಗ್ತಿರೋದ್ರಿಂದ ಇದನ್ನೇ ಬಂಡವಾಳ ಮಾಡಿಕೊಂಡ ವ್ಯಾಪಾರಿಗಳು ಅವುಗಳ ದರವನ್ನೂ ಏರಿಕೆ ಮಾಡಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಸೆಕೆಗೆ ಹೈರಾಣಾಗಿರುವ ಗಣಿ ನಾಡಿನ ಮಂದಿ ಒಮ್ಮೆ ಮಳೆ ಬರಲಪ್ಪಾ ಎಂದು ಪ್ರಾರ್ಥನೆ ಕೂಡ ಮಾಡುತ್ತಿದ್ದಾರೆ. ಈ ಹಿಂದೆ ಯಾವ ವರ್ಷವು ಇಷ್ಟು ಪ್ರಮಾಣದ ಬಿಸಿಲು ಇರಲಿಲ್ಲ. ಈ ವರ್ಷ ಮಾತ್ರ ಅಬ್ಬಾ ಅದೆಂತಾ ಸೆಕೆ ಎಂಬು ಉದ್ಗಾರದ ಮಾತುಗಳೂ ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:55 pm, Wed, 4 March 26

Source link