Headlines

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ – Kannada News | PM Narendra Modi to visit Tamil Nadu on March 11

ತಿರುಚ್ಚಿ, ಮಾರ್ಚ್ 4: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ಮುಂದಿನ ವಾರ ತಮಿಳುನಾಡು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ತಮಿಳುನಾಡು ಶೀಘ್ರದಲ್ಲೇ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವುದರಿಂದ ವಿವಿಧ…

Read More

ಮನೆ ಲೀಸ್​​ ಹಣದ ವಿಚಾರಕ್ಕೆ ಕಿರಿಕ್​​: ಅಳಿಯನಿಂದಲೇ ಹೋಯ್ತು ಮಾವನ ಜೀವ – Kannada News | Lease Money Row Turns Fatal: Nephew Murders Disabled Uncle in Austin Town, Bengaluru

ಮೃತ ವ್ಯಕ್ತಿ ಮತ್ತು ಆರೋಪಿImage Credit source: Tv9 Kannada ಬೆಂಗಳೂರು, ಮಾರ್ಚ್​ 04: ಮನೆ ಲೀಸ್​​ ಹಣದ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿವೇಕನಗರ ಪೊಲೀಸ್​​ ಠಾಣಾ ವ್ಯಾಪ್ತಿಯ ಆಸ್ಟಿನ್ ಟೌನ್​​ನಲ್ಲಿ ನಡೆದಿದೆ. ಅಕ್ಕ-ತಮ್ಮನ ಗಲಾಟೆ ವೇಳೆ ಮಧ್ಯಪ್ರವೇಶಿದ್ದ ಅಳಿಯನೇ ಮಾವನ ಮೇಲೆ ದಾರುಣವಾಗಿ ದಾಳಿ ನಡೆಸಿ ಕೊಂದಿದ್ದಾನೆ. ಇನಾಯತ್ ಪಾಷಾ ಮೃತ ದುರ್ದೈವಿಯಾಗಿದ್ದು, ಆರೋಪಿ ಮಶ್ರೂರ್ ಅಹ್ಮದ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 11 ವರ್ಷಗಳಿಂದ ವಿವೇಕನಗರದ ಆಸ್ಟಿನ್ ಟೌನ್‌ನಲ್ಲಿರುವ…

Read More

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಬೆಚ್ಚಿಬೀಳಿಸುವ ವಿಡಿಯೋ ವೈರಲ್ – Kannada News | Horrific Accident on Agra Lucknow Expressway; Two Killed, Video Goes Viral

ಉನ್ನಾವೊ, ಮಾರ್ಚ್​ 4: ಉತ್ತರ ಪ್ರದೇಶದ ಉನ್ನಾವೊದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದ ಗಹರ್ ಪೂರ್ವಾ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಪಿಕಪ್ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಪಿಕಪ್ ಚಾಲಕ ಮತ್ತು 3 ವರ್ಷದ ಬಾಲಕಿ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಪಿಕಪ್​ನಲ್ಲಿದ್ದ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾದ ಭಯಾನಕ ವಿಡಿಯೋ ಇಲ್ಲಿದೆ….

Read More

KSP Recruitment 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ; 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ! – Kannada News | KSP Recruitment 2025: Apply for 8176 Constable and SI Posts in Karnataka Police Dept

ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಹುದ್ದೆಗಳ ವರ್ಗೀಕರಣ ಮತ್ತು ವಿವರಗಳು: ಈ ನೇಮಕಾತಿಯಲ್ಲಿ ವಿವಿಧ…

Read More

ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ – Kannada News | PCB Axes Babar Azam from ODI Team, Announces New Squad for Bangladesh Series

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup  2026) ಪಾಕಿಸ್ತಾನ ತಂಡದ ಪ್ರದರ್ಶನ ಸಾಧಾರಣವಾಗಿತ್ತು. ಲೀಗ್ ಸುತ್ತನ್ನು ದಾಟಿ, ಸೂಪರ್ 8 ಸುತ್ತಿಗೆ ಬಂದಿದ್ದ ಪಾಕ್ ತಂಡಕ್ಕೆ ಈ ಸುತ್ತನ್ನು ಮೀರಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡದ ಕಳಪೆ ಪ್ರದರ್ಶನದಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇತ್ತೀಚೆಗಷ್ಟೇ ಆಟಗಾರರಿಗೆ ದಂಡ ವಿಧಿಸಿತ್ತು. ಏತನ್ಮಧ್ಯೆ, ಅಲೀಮ್ ದಾರ್ ಆಯ್ಕೆದಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ತಂಡದ ಸ್ಟಾರ್ ಆಟಗಾರ ಬಾಬರ್ ಆಝಂ (Babar Azam) ವಿರುದ್ಧ…

Read More

ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ – Kannada News | Bhatkal Fuel Crisis: Debunking War Rumors and Artificial Scarcity in Coastal Karnataka

ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ ಭಟ್ಕಳ, ಮಾ.4 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ತೈಲ ಬೆಲೆಯ ಮೇಲೆ ಭಾರಿ ಹೊಡೆತ ನೀಡಲಿವೆ ಎಂಬ ವದಂತಿ ಭಟ್ಕಳದಲ್ಲಿ ಸಂಚಲನ (Bhatkal Petrol Panic) ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಜನರು ಆತಂಕಗೊಂಡು ಇದೀಗ ಪೆಟ್ರೋಲ್ ಬಂಕ್‌ಗಳಿಗೆ ನೂಕುನುಗ್ಗಲು ಮಾಡುತ್ತಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ….

Read More

ಹೆಮ್ಮೆಯಿಂದ ತಾಳಿ ಧರಿಸಿ ಬಂದ ರಶ್ಮಿಕಾ; ಸಿಂದೂರ ನೋಡಿ ಫ್ಯಾನ್ಸ್ ಖುಷ್ – Kannada News | Rashmika Mandanna flaunts Mangalsutra and Sindoor with husband Vijay Deverakonda

ಮದುವೆ ಸಂಭ್ರಮದ ಸಲುವಾಗಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಮದುವೆ ಬಳಿಕ ಅವರು ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ಹೋದಲ್ಲೆಲ್ಲ ಜಗಸಾಗರ ಸೇರುತ್ತಿದೆ. ಇತ್ತೀಚೆಗೆ ಅವರು ತೆಲಂಗಾಣದ ವಿಜಯ್ ಅವರ ಹಳ್ಳಿಗೆ ಭೇಟಿ ನೀಡಿದ್ದರು. ಅಲ್ಲಿಂದ ಮರಳಿದ ಈ ಜೋಡಿ, ಹೈದರಾಬಾದ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಮದುವೆಯ ನಂತರ ರಶ್ಮಿಕಾ (Rashmika Mandanna) ಮುಖದಲ್ಲಿ ಕಳೆ ಎದ್ದು ಕಾಣುತ್ತಿದೆ. ಅಲ್ಲದೇ, ಅವರ ತಾಳಿ (Mangalsutra) ಮತ್ತು…

Read More

‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್ – Kannada News | Shreya Ghoshal responds to trolling over chikni chameli and objectifying lyrics

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ‘ಚಿಕ್ನಿ ಚಮೇಲಿ’ (Chikni Chameli) ರೀತಿಯ ಹಾಡುಗಳ ಬಗ್ಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ನಾನು ಇನ್ಮುಂದೆ ಇಂತಹ ಹಾಡುಗಳನ್ನು ಹಾಡುವುದಿಲ್ಲ’ ಎಂದು ಅವರು ಹೇಳಿದ್ದನ್ನು ಕೆಲವರು ಟ್ರೋಲ್ ಮಾಡಿದ್ದರು. ಈಗ ಈ ಎಲ್ಲಾ ಟ್ರೋಲ್‌ಗಳಿಗೆ ಶ್ರೇಯಾ ಖಡಕ್ ಆಗಿಯೇ ಉತ್ತರ ನೀಡಿದ್ದು, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಾಜ್ ಶಾಮನಿ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶ್ರೇಯಾ ಘೋಷಾಲ್ (Shreya Ghoshal), ಚಿತ್ರರಂಗದಲ್ಲಿ ಮಹಿಳೆಯರನ್ನು ಅತಿ…

Read More

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ – Kannada News | Bengaluru Road Closures: MG Road Resurfacing and University Road Diversions from Tomorrow

ಬೆಂಗಳೂರು, ಮಾರ್ಚ್​​ 04: ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ.  ಮಾಹಿತಿಯ ಪ್ರಕಾರ, ಮಾರ್ಚ್ 4ರ ಸಂಜೆ (ಇಂದು) ಪೂರ್ವಸಿದ್ಧತಾ ಕಾಮಗಾರಿಗಳು ಆರಂಭವಾಗಲಿವೆ. ಟ್ರಾಫಿಕ್ ಪೊಲೀಸ್ ಅನುಮತಿ ಬಾಕಿ ಇರುವುದರಿಂದ ಸ್ವಲ್ಪ ವಿಳಂಬ ಸಾಧ್ಯತೆ ಇದೆ. ಹೀಗಿದ್ದರೂ 15 ದಿನಗಳೊಳಗೆ ಕಾಮಗಾರಿ…

Read More

ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್ – Kannada News | Israel Defence Minister threatens to assassinate Irans New Supreme Leader

ಜೆರುಸಲೇಂ, ಮಾರ್ಚ್ 4: ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಇಂದು ಇರಾನ್​ನ ನೂತನ ಸುಪ್ರೀಂ ನಾಯಕ ಮೊಜ್ತಾಬಾಗೆ ಜೀವ ಬೆದರಿಕೆ ಹಾಕಿದ್ದಾರೆ. ಟೆಹ್ರಾನ್ ಮೇಲೆ ನಡೆದ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ (Ayatollah Ali Khamenei) ಉತ್ತರಾಧಿಕಾರಿಯಾಗಿ ಆಯ್ಕೆಯಾಗುವ ಇರಾನಿನ ನಾಯಕನನ್ನು ಹತ್ಯೆ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಅಯತೊಲ್ಲಾ ಅಲಿ ಖಮೇನಿಯ ಹತ್ಯೆಯ ನಂತರ ಖಾಲಿಯಾಗಿರುವ ನಾಯಕತ್ವ ಸ್ಥಾನವನ್ನು ವಹಿಸಿಕೊಳ್ಳಲು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ…

Read More