ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ – Kannada News | Karnataka Bomb Threats: Bengaluru City Civil Court Targeted in Email Hoax, Police Investigate
ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್‌ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು…