ನಿಲ್ಲದ ಮಾನವ-ಆನೆ ಸಂಘರ್ಷ: ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ, ಭುಗಿಲೆದ್ದ ಆಕ್ರೋಶ – Kannada News | Kodagu Tragedy: Wild Elephant Kills PUC Student; Human Elephant Conflict Escalates
ಕೊಡಗು, ಮಾರ್ಚ್ 01: ಆ ವಿದ್ಯಾರ್ಥಿನಿ ಈಗಷ್ಟೇ ಪಿಯುಸಿ ಪರೀಕ್ಷೆ ಬರೆದಿದ್ದಳು. ಇನ್ನೆರಡು ತಿಂಗಳು ರಜೆಯನ್ನ ಆರಾಮವಾಗಿ ಕಳೆಯುವ ಆಸೆಯಲ್ಲಿದ್ದಳು. ನಿನ್ನೆ ಕೂಡ ಅಪ್ಪ-ಅಮ್ಮನ ಜೊತೆಗೆ ಬೇಗ ಮನೆ ಸೇರುವ ಆಸೆಯಲ್ಲಿದ್ದಳು. ಆದರೆ ಕಾಡಾನೆ (Elephant) ರೂಪದಲ್ಲಿ ಬಂದ ಯಮರಾಯ ಆ ಮುಗ್ಧ ಯುವತಿಯನ್ನ ಬಲಿ (death) ಪಡೆದಿದೆ. ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗುಡ್ಡಗಾಡು ಗ್ರಾಮ ಬೆಟ್ಟತ್ತೂರಿನಲ್ಲಿ ಘಟನೆ ನಡೆದಿದೆ. ಕ್ಷಣಾರ್ಧದಲ್ಲಿ ವಿದ್ಯಾರ್ಥಿನಿಯ ಜೀವ ತೆಗೆದ ಕಾಡಾನೆ ಕೊಡಗು ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ತಾರಕಕ್ಕೇರಿದೆ. ಕಾಡಾನೆ ದಾಳಿಗೆ…