Category Archives: Blog

Your blog category

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Heat wave alert in Bengaluru, clear sky in Bengaluru

ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ

ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ.

ಸೈಬರ್ ಭದ್ರತೆಯನ್ನು ಹೆಚ್ಚಿಸಲು ಮತ್ತು ಆನ್‌ಲೈನ್ ವಂಚನೆಗಳನ್ನು ತಡೆಯಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಯಮದಿಂದ, ಕದ್ದ OTP ಗಳನ್ನು ಬಳಸಿ ವಂಚನೆ ನಡೆಸುತ್ತಿದ್ದ ಸೈಬರ್ ಖದೀಮರಿಗೆ ಕಡಿವಾಣ ಬೀಳಲಿದೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಮ್ ಬೈಂಡಿಂಗ್ ಗಡುವನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದಲ್ಲದೆ, ಮಾರ್ಚ್ 1 ರಿಂದ ವಾಟ್ಸ್​ಆ್ಯಪ್ ವೆಬ್ ಮತ್ತು ಡೆಸ್ಕ್‌ಟಾಪ್ ಸೆಷನ್‌ಗಳು ಪ್ರತಿ ಆರು ಗಂಟೆಗಳಿಗೊಮ್ಮೆ ಸ್ವಯಂಚಾಲಿತವಾಗಿ ಲಾಗೌಟ್ ಆಗಲಿವೆ. ಕಚೇರಿ ಕೆಲಸಗಳಿಗೆ ವಾಟ್ಸ್​ಆ್ಯಪ್ ಬಳಸುವವರು ಪ್ರತಿ ಆರು ಗಂಟೆಗೊಮ್ಮೆ ತಮ್ಮ ಫೋನ್ ಮೂಲಕ QR ಕೋಡ್ ಸ್ಕ್ಯಾನ್ ಮಾಡಿ OTP ಪರಿಶೀಲನೆ ಮಾಡಬೇಕಾಗುತ್ತದೆ. ಈ ನಿಯಮಗಳಿಂದ ಸಾಮಾನ್ಯ ಬಳಕೆದಾರರು ಆತಂಕಪಡಬೇಕಿಲ್ಲ, ಆದರೆ ತಮ್ಮ ಪ್ರಾಥಮಿಕ ಮೊಬೈಲ್‌ನಲ್ಲಿ ಸಿಮ್ ಕಾರ್ಡ್ ಇರಿಸಿಕೊಳ್ಳುವುದು ಮತ್ತು ಆ್ಯಪ್‌ಗಳನ್ನು ಅಪ್ಡೇಟ್ ಮಾಡುವುದು ಅನಿವಾರ್ಯ. ಇನ್ನಷ್ಟು ವಿವರಗಳಿಗೆ ವಿಡಿಯೋ ನೋಡಿ.

ಇನ್ನಷ್ಟು ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Source link

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ – Kannada News | Trump Claims Khamenei Is Dead, Calls It Turning Point for Iran

ವಾಷಿಂಗ್ಟನ್, ಮಾರ್ಚ್​ 1:ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei ) ಇಸ್ರೇಲ್ ಮತ್ತು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ. ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.

ಪಶ್ಚಿಮ ಏಷ್ಯಾ, ವಿಶೇಷವಾಗಿ ಗಲ್ಫ್ ಪ್ರದೇಶವು ದಶಕಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ ಅಮೆರಿಕ-ಇಸ್ರೇಲಿ ದಾಳಿಗಳು, ಪ್ರಾದೇಶಿಕ ಪ್ರತೀಕಾರ ಮತ್ತು ಈಗ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಸಾವು ಇವೆಲ್ಲವೂ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಹೇಳಿಕೆಗಳು, ಇರಾನಿನ ಮಾಧ್ಯಮ ಪ್ರತಿಕ್ರಿಯೆಗಳು ಮತ್ತು ಬೀದಿ ಆಚರಣೆಗಳ ವೀಡಿಯೊಗಳು ಇವೆಲ್ಲವೂ ಇಡೀ ಜಗತ್ತನ್ನು ಅನಿಶ್ಚಿತ ಮತ್ತು ಅಪಾಯಕಾರಿ ಪರಿಸ್ಥಿತಿಗೆ ತಳ್ಳಿದೆ.

ಏತನ್ಮಧ್ಯೆ, ಇಸ್ರೇಲ್, ಗಲ್ಫ್ ರಾಷ್ಟ್ರಗಳು ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಎಂಬ ವರದಿಗಳು ಸಹ ಹೊರಬರುತ್ತಿವೆ, ಆದರೆ ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.

ಮತ್ತಷ್ಟು ಓದಿ: ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ?

ಇಸ್ರೇಲ್ ಪ್ರಧಾನಿ ನೆತನ್ಯಾಹು ಇದೇ ರೀತಿಯ ಹೇಳಿಕೆಯನ್ನು ನೀಡಿದರು, ಆದರೂ ಅವರು ಟ್ರಂಪ್‌ಗಿಂತ ಹೆಚ್ಚು ಜಾಗರೂಕರಾಗಿ ಕಾಣಿಸಿಕೊಂಡರು. ಖಮೇನಿ ಈಗ ಜೀವಂತವಾಗಿಲ್ಲ ಎಂದು ಹಲವು ಸೂಚನೆಗಳು ಸೂಚಿಸುತ್ತವೆ ಎಂದು ನೆತನ್ಯಾಹು ಹೇಳಿದರು. ಇರಾನಿನ ಸರ್ಕಾರಿ ಮಾಧ್ಯಮವು ಖಮೇನಿ ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ. ಖಮೇನಿಯವರ ಸಾವಿನ ಕುರಿತಾದ ಹೇಳಿಕೆಗಳು ನಿಜವೋ ಸುಳ್ಳೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಒಂದು ತಪ್ಪು ನಡೆ ಇಡೀ ಜಗತ್ತನ್ನು ಪೂರ್ಣ ಪ್ರಮಾಣದ ಯುದ್ಧಕ್ಕೆ ತಳ್ಳಬಹುದಾದ ಮಹತ್ವದ ತಿರುವು ಪಡೆದುಕೊಂಡಿದೆ. ಮುಂಬರುವ ಗಂಟೆಗಳು ಈ ಸಂಘರ್ಷ ಇಲ್ಲಿಗೆ ಕೊನೆಗೊಳ್ಳುತ್ತದೆಯೇ ಅಥವಾ ಇತಿಹಾಸದಲ್ಲಿ ಅತ್ಯಂತ ಅಪಾಯಕಾರಿ ಅಧ್ಯಾಯವನ್ನು ಬರೆಯುತ್ತದೆಯೇ ಎಂಬುದನ್ನು ನಿರ್ಧರಿಸುತ್ತದೆ. ಇದು ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ನಿಖರವಾದ ಮಾಹಿತಿಯನ್ನು ಬಳಸಿಕೊಂಡು ನಡೆಸಲಾದ “ಸರ್ಜಿಕಲ್ ಸ್ಟ್ರೈಕ್” ಎಂದು ಇಸ್ರೇಲಿ ಗುಪ್ತಚರ ಮೂಲಗಳು ಹೇಳಿಕೊಂಡಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್ – Kannada News | The Kerala Story 2 Box Office Collection day 1 and 2 amid controversy

ಬಿಡುಗಡೆಗೂ ಮುನ್ನ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಖತ್ ವಿವಾದ ಸೃಷ್ಟಿ ಮಾಡಿತ್ತು. ಈ ಸಿನಿಮಾದ ವಿವಾದವು ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಕಾರಣದಿಂದ ಚಿತ್ರದ ಬಿಡುಗಡೆ ಸ್ವಲ್ಪ ತಡವಾಯಿತು. ಶುಕ್ರವಾರ (ಫೆಬ್ರವರಿ 27) ಸಂಜೆ ಕೆಲವೇ ಕೆಲವು ಕಡೆಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಯಿತು. ಶನಿವಾರ (ಫೆ.28) ಎಂದಿನಂತೆ ಎಲ್ಲ ಕಡೆಗಳಲ್ಲಿ ರಿಲೀಸ್ ಆಯಿತು. ಈ ಎರಡೂ ದಿನಗಳು ಸೇರಿ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಒಟ್ಟು ಕಲೆಕ್ಷನ್ (Box Office Collection) ಅಂದಾಜು 5.40 ಕೋಟಿ ರೂಪಾಯಿ ಆಗಿದೆ.

ಚಿತ್ರದ ಬಿಡುಗಡೆಗೆ ಕೋರ್ಟ್ ಅನುಮತಿ ತಡವಾಗಿ ಸಿಕ್ಕಿದ್ದರಿಂದ ಫೆ.27ರಂದು ಬೆರಳೆಣಿಕೆಯಷ್ಟು ಚಿತ್ರಮಂದಿರಗಳಲ್ಲಿ ಮಾತ್ರ ರಿಲೀಸ್ ಆಯಿತು. Sacnilk ವರದಿ ಪ್ರಕಾರ ಅಂದು ಈ ಸಿನಿಮಾ ಗಳಿಸಿದ್ದು 75 ಲಕ್ಷ ರೂಪಾಯಿ ಮಾತ್ರ. ಎರಡನೇ ದಿನವಾದ ಶನಿವಾರ (ಫೆ.28) 4.65 ಕೋಟಿ ರೂಪಾಯಿ ಗಳಿಸಿದೆ. ಭಾನುವಾರ (ಮಾರ್ಚ್ 1) ಎಷ್ಟು ಕಲೆಕ್ಷನ್ ಆಗಲಿದೆ ಎಂಬ ಕೌತುಕ ಇದೆ.

2023ರಲ್ಲಿ ರಿಲೀಸ್ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಮೊದಲ ದಿನವೇ 8.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ಚಿತ್ರದ ಒಟ್ಟು ಕಲೆಕ್ಷನ್ 242 ಕೋಟಿ ರೂಪಾಯಿ ಆಗಿತ್ತು. ಆ ಯಶಸ್ಸಿನ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾ ಮಾಡಲಾಯಿತು. ಆದರೆ ಸೀಕ್ವೆಲ್​​ಗೆ ನಿರೀಕ್ಷಿತ ಪ್ರಮಾಣದಲ್ಲಿ ಓಪನಿಂಗ್ ಸಿಕ್ಕಿಲ್ಲ. ವಿವಾದಿಂದ ಸಾಕಷ್ಟು ಸುದ್ದಿ ಆಗಿದ್ದರೂ ಕೂಡ ಜನರು ಈ ಚಿತ್ರಕ್ಕೆ ಆಸಕ್ತಿ ತೋರಿಸಿಲ್ಲ.

‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂಬ ಆರೋಪ ಇದೆ. ಹಾಗಾಗಿ ಈ ಚಿತ್ರವನ್ನು ವಿರೋಧಿಸಿ ಕೇರಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದ್ದರಿಂದ ಅನೇಕ ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ಕ್ಯಾನ್ಸಲ್ ಮಾಡಲಾಗಿದೆ. ಇದರಿಂದಾಗಿ ಕೇರಳದಲ್ಲಿ ಈ ಚಿತ್ರಕ್ಕೆ ಹೀನಾಯ ಕಲೆಕ್ಷನ್ ಆಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಉಲ್ಕಾ ಗುಪ್ತಾ, ಐಶ್ವರ್ಯಾ ಊಜಾ, ಅದಿತಿ ಭಾಟಿಯಾ ಅವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ? – Kannada News | Daily Devotional: Can Innate Nature Truly Be Changed

ಬೆಂಗಳೂರು, ಮಾರ್ಚ್​​ 01: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹುಟ್ಟಿನಿಂದ ಬಂದ ಗುಣಗಳು ದೇಹ ನಾಶವಾದರೂ ಹೋಗುವುದಿಲ್ಲ ಎಂಬುದು ಈ ಗಾದೆಯ ಅರ್ಥ. ಆದರೆ, ಈ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಇದು ಸಂಪೂರ್ಣ ಸತ್ಯವಲ್ಲ ಎಂದು ತಿಳಿದುಬರುತ್ತದೆ. ಮಾನವನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿದೆ.

ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ ಮಾತು ಅನ್ವಯಿಸುವುದಿಲ್ಲ. ನಮ್ಮ ಸ್ವಭಾವ ದೋಷಗಳನ್ನು ಪ್ರಯತ್ನ, ದೇವರ ಕೃಪೆ, ಸತ್ಸಂಗ ಮತ್ತು ದೇವತಾ ಕಾರ್ಯಗಳಲ್ಲಿ ಭಾಗವಹಿಸುವುದರ ಮೂಲಕ ಬದಲಾಯಿಸಿಕೊಳ್ಳಬಹುದು. ನಮಗೆ ಯಾರಾದರೂ ನಿನ್ನ ಹುಟ್ಟುಗುಣ ಸುಟ್ಟರೂ ಹೋಗಲ್ಲ ಎಂದು ಹೇಳಿದಾಗ, ಆ ಮಾತನ್ನು ಕೇಳಿ ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಪ್ರೇರಣೆ ಪಡೆಯಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

Iran Israel War: ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ – Kannada News | Iran–Israel War: CM Siddaramaiah Prioritises Rescue of Stranded Kannadigas in Dubai and Middle East

ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯImage Credit source: tv9

ಬೆಂಗಳೂರು, ಮಾರ್ಚ್ 1: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದಾಗಿ (Iran–Israel War) ವಿಮಾನ ಸಂಚಾರ ರದ್ದಾಗಿದ್ದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ.

ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
https://www.youtube.com/watch?v=4Scoodep-G0
ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಸಂದೇಶ

ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ, ದುಬೈನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರ ಸಂಕಷ್ಟ

ವಿಮಾನ ಸಂಚಾರ ರದ್ದಾದ ಕಾರಣ ದುಬೈನಲ್ಲಿ ಐವತ್ತಕ್ಕೂ ಹೆಚ್ಚು ಕನ್ನಡಿಗರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ ಬಳ್ಳಾರಿ ಮತ್ತು ದಾವಣಗೆರೆಯ ಪ್ರವಾಸಿಗರು ಇದ್ದಾರೆ. ತಮ್ಮನ್ನು ಹೇಗಾದರೂ ಮಾಡಿ ಸಂದೇಶಕ್ಕೆ ಕರೆಸಿಕೊಳ್ಳುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ – Kannada News | Mangaluru–Gulf Flights Cancelled Amid West Asia Crisis; More than 50 Kannadigas Stranded in Dubai

ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು ಹಾಗೂ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಪ್ರಕಟಣೆಯ ಪ್ರತಿImage Credit source: tv9

ಮಂಗಳೂರು, ಮಾರ್ಚ್ 1: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಇಸ್ರೇಲ್ (Iran Israel War) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಿಮಾನಗಳು ರದ್ದಾಗಿದ್ದರೆ, ಕೆಲವು ಟೇಕಾಫ್ ಬಳಿಕ ವಾಪಸ್ ಮಂಗಳೂರಿಗೆ ಮರಳಿದವು, ಕೆಲವು ವಿಮಾನಗಳನ್ನು ಬೇರೆ ಕಡೆಗಳಿಗೆ ಡೈವರ್ಟ್ ಮಾಡಲಾಗಿದೆ.

ವಿಮಾನ ಸಂಚಾರ ಸ್ಥಗಿತಗೊಂಡ ಪರಿಣಾಮವಾಗಿ, ಗಲ್ಫ್ ದೇಶಗಳಿಂದ ಮಂಗಳೂರಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳೂ ರದ್ದಾಗಿವೆ. ಮಧ್ಯಪ್ರಾಚ್ಯಕ್ಕೆ ನೇರ ಮಾರ್ಗ ಲಭ್ಯವಿಲ್ಲದ ಕಾರಣ ವಿಮಾನಯಾನ ಸಂಸ್ಥೆಗಳು ತಾತ್ಕಾಲಿಕವಾಗಿ ಈ ಕ್ರಮ ಕೈಗೊಂಡಿವೆ.

ರದ್ದು/ಡೈವರ್ಟ್ ಆದ ವಿಮಾನಗಳ ವಿವರ

ಮಂಗಳೂರಿನಿಂದ ಹೊರಡಬೇಕಿದ್ದ ವಿಮಾನಗಳು

  • IX 831 (ಮಂಗಳೂರು–ದುಬೈ) – 13:20ಕ್ಕೆ ಹೊರಡಬೇಕಿದ್ದ ವಿಮಾನ ಟೇಕಾಫ್ ಬಳಿಕ ಮಂಗಳೂರಿಗೆ ವಾಪಸ್; ಬಳಿಕ ರದ್ದು. (174 ಪ್ರಯಾಣಿಕರು + 6 ಸಿಬ್ಬಂದಿ ಸುರಕ್ಷಿತ)
  • IX 847 (ಮಂಗಳೂರು–ದಮ್ಮಾಮ್) – 23:10ಕ್ಕೆ ಹೊರಡಬೇಕಿದ್ದ ವಿಮಾನ ರದ್ದು
  • IX 813 (ಮಂಗಳೂರು–ದುಬೈ) – 20:15ಕ್ಕೆ ಹೊರಡಬೇಕಿದ್ದ ವಿಮಾನ ರದ್ದು
  • IX 851 (ಮಂಗಳೂರು–ಕುವೈತ್) – 22:05ಕ್ಕೆ ಹೊರಡಬೇಕಿದ್ದ ವಿಮಾನ ರದ್ದು
  • IX 815 (ಮಂಗಳೂರು–ಅಬುಧಾಬಿ) – 23:20ಕ್ಕೆ ಹೊರಡಬೇಕಿದ್ದ ವಿಮಾನ ರದ್ದು
  • 6E 1467 (ಮಂಗಳೂರು–ದುಬೈ) – 19:15ಕ್ಕೆ ಹೊರಡಬೇಕಿದ್ದ ವಿಮಾನ ರದ್ದು
  • IX 821 (ಮಂಗಳೂರು–ದೋಹಾ) – ಮುಂಬೈಗೆ ಡೈವರ್ಟ್

ಮಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು

  • IX 822 (ದೋಹಾ–ಮಂಗಳೂರು) – 20:45 ಆಗಮನ; ರದ್ದು
  • IX 832 (ದುಬೈ–ಮಂಗಳೂರು) – 22:10 ಆಗಮನ; ರದ್ದು

ದುಬೈನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರ ಸಂಕಷ್ಟ

ಯುದ್ಧದ ಹಿನ್ನೆಲೆ ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ದುಬೈನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯ ಪ್ರವಾಸಿಗರು ಫೆಬ್ರವರಿ 23ರಂದು ವಿದೇಶ ಪ್ರವಾಸಕ್ಕೆ ತೆರಳಿದ್ದರು. ವಾಪಸ್ಸು ಬರಲು ಟಿಕೆಟ್ ಬುಕ್ ಮಾಡಿದ್ದರೂ, ಶಾರ್ಜಾ ಮತ್ತು ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಸಂಚಾರ ಸ್ಥಗಿತಗೊಂಡಿರುವುದರಿಂದ ಅವರು ಹೋಟೆಲ್‌ಗಳಲ್ಲಿ ತಂಗಬೇಕಾದ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ: ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಘಟ್ಟ ಗ್ರಾಮದ 15 ಮಂದಿ ಹಾಗೂ ಬಳ್ಳಾರಿ ಸುತ್ತಮುತ್ತಲಿನ ಹಳ್ಳಿಗಳ 35 ಮಂದಿ ಸೇರಿ ಒಟ್ಟು 50 ಜನರು ದುಬೈನಲ್ಲಿ ಸಿಲುಕಿದ್ದಾರೆ. ಪ್ರವಾಸದಲ್ಲಿ ಹಣ ಖರ್ಚಾಗಿ ಇದೀಗ ತಂಗುವ ವ್ಯವಸ್ಥೆಗೂ ಹಣದ ಕೊರತೆ ಎದುರಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಖಾಸಗಿ ಕಟ್ಟಡದಲ್ಲಿ ಒಂದೇ ಕೊಠಡಿಯಲ್ಲಿ ಮೂವರು ತಂಗಿದ್ದು, ದಿನಕ್ಕೆ ಸುಮಾರು 10,000 ರೂಪಾಯಿ ವೆಚ್ಚವಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ತುರ್ತು ನೆರವು ನೀಡಬೇಕು, ಶೀಘ್ರವೇ ಸ್ವದೇಶಕ್ಕೆ ಮರಳುವ ವ್ಯವಸ್ಥೆ ಮಾಡಬೇಕು ಎಂದು ಪ್ರವಾಸಿಗರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು – Kannada News | Horoscope March 01 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ಮನೆಯ ನಿರ್ಮಾಣದ ಕನಸು ನನಸು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳಲು ಸಮಯ ಬೇಕಾಗುವುದು.

ವೃಷಭ ರಾಶಿ:

ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ನಿಮ್ಮ ನಮಗೆ ಗೊತ್ತಿರಲಿ. ಕುರುಡನಂತೆ ಹೋಗುವುದು ಬೇಡ. ಸ್ನೇಹಿತರ ಬೆಂಬಲವನ್ನು ನೀವು ನಿರಾಕರಿಸಬಹುದು. ಹೊಸ ಹೂಡಿಕೆಯ ಬಗ್ಗೆ ಆಸಕ್ತಿಯಿರದು.

ಮಿಥುನ ರಾಶಿ:

ದಾಂಪತ್ಯದ ಸಮಸ್ಯೆಯನ್ನು ಸರಿಯಾಗಿ ಬಗೆಹರಿಸಿಕೊಳ್ಳಿ. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ಗಣ್ಯರ ಭೇಟಿಯನ್ನು ಮಾಡುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಭವಿಷ್ಯವನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ಮುಂದುವರಿಯಿರಿ.

ಕರ್ಕಾಟಕ ರಾಶಿ:

ಯಾರ ಜೊತೆ ಸ್ಪರ್ಧಿಸಲೂ ನೀವು ತಯಾರಿರುವಿರಿ. ಗಂಭೀರವಾದ ಸಣ್ಣ ವಿಚಾರವೂ ಮುಂದೆ ದೊಡ್ಡದಾಗಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ಅನಪೇಕ್ಷಿತ ಮಾತು ನಿಮ್ಮ ದಾರಿ ತಪ್ಪಿಸಬಹುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗುವುದು. ಒಬ್ಬೊಂಟಿಯಾಗಿ ಇಂದು ನಿರ್ಜನ ಪ್ರದೇಶದಲ್ಲಿ ವಿಹಾರ ಮಾಡುವಿರಿ. ವಿವಾಹಕ್ಕೆ ಅಪರಿಚಿತರಿಂದ ತಡೆ ಬರಬಹುದು.

ಸಿಂಹ ರಾಶಿ:

ವಿನಯದಿಂದ ಇದ್ದರೆ ಮಾತ್ರ ನೀವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ. ಇಂದಿನ ಖರ್ಚಿನ ಬಗ್ಗೆ ಅಂದಾಜಿರಲಿ. ನಿಮ್ಮ ವಸ್ತುಗಳು ಕಣ್ಮರೆಯಾದೀತು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ನಿಮ್ಮನ್ನು ಅತಿಥಿಗಳಾಗಿ ಆಹ್ವಾನಿಸಬಹುದು. ಹಾಗೆಯೇ ಬಿಟ್ಟರೆ ನಿಮ್ಮ ಪ್ರೇಮಸಂಬಂಧವು ಸಡಿಲಾಗಬಹುದು. ನಿಮ್ಮ‌ ಜವಾಬ್ದಾರಿಗೆ ಬೆನ್ನು ಹಾಕಿಹೋಗುವುದು ಬೇಡ.‌ ಬರುವುದನ್ನು ಎದುರಿಸುವ ಬಲವನ್ನೂ ಬೆಳೆಸಿಕೊಳ್ಳಿ.

ಕನ್ಯಾ ರಾಶಿ:

ಹಿರಿಯರಿಂದ ಸಕಾಲದಲ್ಲಿ ಮಾರ್ಗದರ್ಶನ.‌ ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ಹಳೆಯ ವಿದ್ಯುತ್ ಉಪಕರಣಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವಿರಿ. ಇಂದು ಅಧಿಕ ಮಾತನ್ನು ಆಡುವುದು ಬೇಡ. ಕಲಾವಿದರು ಕೆಲವು ಅವಕಾಶದಿಂದ ವಂಚಿತರಾಗಬಹುದು. ಹಣಕಾಸಿನ ಹೂಡಿಕೆಯು ಹೊಸ ತಿರುವನ್ನು ಪಡೆದೀತು.

ತುಲಾ ರಾಶಿ:

ಯಾವುದಾದರೂ ದುರಂತದಲ್ಲಿ ಸಿಕ್ಕಿಬೀಳಬಹುದು. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದ್ದು ಹಿರಿಯರಿಂದ ಕೇಳಿಪಡೆಯುವಿರಿ. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು.

ವೃಶ್ಚಿಕ ರಾಶಿ:

ಗೃಹನಿರ್ಮಾಣ ಕಾರ್ಯವನ್ನು ಪರಿಶೀಲನೆ ಮಾಡುವಿರಿ. ಅವಕಾಶಗಳು ಬಂದು ಬಾಗಿಲು ತಟ್ಟಿದರೂ ತೆರೆಯುವ ಕಲ್ಪನೆಯೂ ಬಾರದು. ಹೊಂದಾಣಿಕೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಬಹುದು. ಗುರಿಯ ಸಾಧನೆಗೆ ಅಲ್ಪವಾದರೂ ಶ್ರಮ ಬೇಕು.‌ ಧಾರ್ಮಿಕ ನಂಬಿಕೆಯನ್ನು ಬಲವಾಗಿಸಿಕೊಳ್ಳಬೇಕಾಗುವುದು.

ಧನು ರಾಶಿ:

ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಸ್ವಾರ್ಥವು ನಿಮ್ಮ ಯಶಸ್ಸನ್ನು ತಿನ್ನುವುದು. ಆರಂಭಿಸಿದ ಕಾರ್ಯವು ಪೂರ್ಣ ಸಫಲವಾಗುವವರೆಗೂ ನೀವು ನಿಲ್ಲಿಸುವುದಿಲ್ಲ. ಶುಭ ಸಮಾರಂಭಗಳಿಗೆ ಹೋಗಬೇಕು ಎಂದುಕೊಂಡರೂ ಆಗದೇಹೋಗುವುದು. ಸಂತಾನದ ಖುಷಿಯು ಇರಲಿದೆ. ಸಹೋದರರ ಬಗ್ಗೆ ನಿಮ್ಮಲ್ಲಿ ನಕಾರಾತ್ಮಕ ಗುಣಗಳು ಕಾಣಿಸಿಕೊಳ್ಳಬಹುದು.

ಮಕರ ರಾಶಿ:

ನಿಮಗೆ ನ್ಯಾಯಾಲಯದಿಂದ ನ್ಯಾಯಯವನ್ನು ಪಡೆಯುವ ಸನ್ನಿವೇಶ ಬರಲಿದೆ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಬಹುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ಮಕ್ಕಳ ಯಶಸ್ಸು ನೀವು ನಿರೀಕ್ಷಿಸಿದಂತೆ ಆಗುವುದು ಕಷ್ಟ. ಕೃಷಿಗೆ ಚಟುವಟಿಕೆಗಲ್ಲಿ ಆಸಕ್ತಿ ಹೆಚ್ಚಿರುವುದು. ನಿಮಗೆ ಸಂಬಂಧಿಸಿದ ಕಾರ್ಯವನ್ನು ಮಾತ್ರ ಮಾಡಿ.

ಕುಂಭ ರಾಶಿ:

ನ್ಯಾಯಾಲಯದಲ್ಲಿ ನಿಮ್ಮ ವಾದ ಬೀಳಬಹುದು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಇಂದು ಬಂಧುಗಳ ಮನೆಯಲ್ಲಿ ವಾಸಮಾಡಬೇಕಾಗಬಹುದು. ಉತ್ಸಾಹದ ಭರದಲ್ಲಿ ಏನ್ನಾದರೂ ಮಾಡಿಕೊಂಡೀರ. ದಾಂಪತ್ಯದಲ್ಲಿ ಪರಸ್ಪರ ಅನುರಾಗದ ಕೊರತೆ ಕಾಣಿಸಬಹುದು. ಪರರಕಾರ್ಯಕ್ಕೆ ಸಹಾಯ ಮಾಡಲಿದ್ದೀರಿ.

ಮೀನ ರಾಶಿ:

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಶ್ರಮದಿಂದ ಮಾಡುವ ಬದಲು ಜಾಣತನದಿಂದ ಎದುರಿಸಬೇಕು. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಉಪಕಾರಕ್ಕೆ ಕೃತಜ್ಞತೆಯಾದರೂ ಇರಲಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಶೋಭನ, ಕರಣ : ಕೌಲವ, ಸೂರ್ಯೋದಯ – 06 – 42 am, ಸೂರ್ಯಾಸ್ತ – 06 – 31 pm, ಇಂದಿನ ಶುಭಾಶುಭ ಕಾಲ : ರಾಹು 17:03 – 18:31, ಯಮಗಂಡ ಕಾಲ 12:37 – 14:05, ಗುಳಿಕ ಕಾಲ 15:34 – 17:03

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ

ಶಿವ ಅಷ್ಟಕವನ್ನು ಪಠಣ ಅಥವಾ ಶ್ರವಣ ಮಾಡುವುದರಿಂದ ನಿಮ್ಮ ಮೇಲಿನ ಆರ್ಥಿಕ ಒತ್ತಡ ನಿವಾರಣೆ ಆಗಲಿದ್ದು, ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಕುಟುಂಬದಲ್ಲಿ ಆಗುವಂಥ ಕೆಲವು ಬೆಳವಣಿಗೆಗಳಿಂದ ನಿಮಗೆ ನಿರಾಶೆ ಮೂಡಲಿದೆ. ಅದರಲ್ಲೂ ನೀವು ನೀಡಿದ ಸಲಹೆಗಳಿಂದ ಅನುಕೂಲ ಆಗಲಿದೆ ಎಂದು ಗೊತ್ತಾದರೂ ನಿರ್ಲಕ್ಷ್ಯ ಮಾಡುವವರಿಂದ ಬೇಸರ ಆಗಲಿದೆ. ಮಕ್ಕಳಿಗೆ ಏನು ಆಹಾರ ನೀಡುತ್ತೀರಿ ಎಂಬ ಬಗ್ಗೆ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಲಕ್ಷ್ಯವನ್ನು ವಹಿಸಿ. ಉದ್ಯೋಗಸ್ಥರಿಗೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಲಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕೆಲಸ- ಕಾರ್ಯ ಪೂರ್ಣ ಮಾಡುವುದಕ್ಕೆ ವಿಳಂಬ ಆಗಲಿದೆ. ಇಷ್ಟು ಸಮಯದೊಳಗೆ ಕೆಲಸ ಮಾಡಿಕೊಡುವುದಾಗಿ ಮಾತು ನೀಡುವ ಮುಂಚೆ ಅದು ಸಾಧ್ಯವಾ ಎಂಬ ಬಗ್ಗೆ ಆಲೋಚನೆ ಮಾಡುವುದು ಮುಖ್ಯವಾಗುತ್ತದೆ. ನಿಮ್ಮ ವ್ಯಾಪ್ತಿಯ ಹೊರಗೆ ಇರುವಂಥದ್ದರ ಬಗ್ಗೆ ಖಡಾಖಂಡಿತವಾಗಿ ಅಭಿಪ್ರಾಯಗಳನ್ನು ಹೇಳುವುದಕ್ಕೆ ಹೋಗಬೇಡಿ. ಭಾವುಕ ಕ್ಷಣಗಳಲ್ಲಿ ನೀವಾಡುವ ಕೆಲವು ಮಾತುಗಳು ಹಾಗೂ ನೀಡುವ ಭರವಸೆಗಳು ಭವಿಷ್ಯದಲ್ಲಿ ಸಮಸ್ಯೆಗಳನ್ನು ತಂದೊಡ್ಡಲಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಹೊಸದಾಗಿ ಕೆಲಸದ ಹುಡುಕಾಟದಲ್ಲಿ ಇರುವವರು ಉದ್ಯೋಗ ಬದಲಾವಣೆಗಾಗಿ ತೀವ್ರವಾದ ಪ್ರಯತ್ನ ಮಾಡಲು ಆರಂಭಿಸುವಿರಿ. ಸಿ.ವಿ. ಸಿದ್ಧತೆ ಮಾಡಿಕೊಳ್ಳುವುದು ಹಾಗೂ ಸೋಷಿಯಲ್ ನೆಟ್ ವರ್ಕ್ ಮೂಲಕ ಏನು ರೆಫರೆನ್ಸ್ ಪಡೆದುಕೊಳ್ಳಲು ಸಾಧ್ಯವೋ ಆ ಎಲ್ಲವನ್ನೂ ಒಂದರ ನಂತರ ಒಂದರಂತೆ ಎಂಬ ರೀತಿಯಲ್ಲಿ ತೆಗೆದುಕೊಳ್ಳುವುದು ಇಂಥವುಗಳನ್ನು ಮಾಡುವುದಕ್ಕೆ ದಿನದ ಹೆಚ್ಚಿನ ಸಮಯ ಹೋಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು ಮುಖ್ಯ ಆಗುತ್ತದೆ. ಕ್ರೆಡಿಟ್ ಕಾರ್ಡ್ ಗಾಗಿ ಅಪ್ಲೈ ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನೀವು ನಿರೀಕ್ಷೆ ಕೂಡ ಮಾಡಿರದಂಥ ಹಣ ಕೈ ಸೇರಲಿದೆ. ಪ್ರತಿ ತಿಂಗಳು ಇಂತಿಷ್ಟು ಆದಾಯ ಬರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆಲೋಚಿಸುತ್ತಾ ಇರುವವರು ಅದಕ್ಕೆ ಬೇಕಾದ ಪ್ರಯತ್ನ ಆರಂಭ ಮಾಡುತ್ತೀರಿ. ಸಂಗಾತಿ ಜೊತೆಗೆ ಸಂಬಂಧಿಕರ ಕಾರಣದಿಂದ ಸಣ್ಣ ಪುಟ್ಟ ಮನಸ್ತಾಪ ಆಗಬಹುದು. ಆದರೆ ಇದನ್ನು ಕೂತು ಮಾತನಾಡುವ ಮೂಲಕ ಬಗೆಹರಿಸಿಕೊಳ್ಳುತ್ತೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮಷ್ಟಕ್ಕೆ ನೀವು ಅಂತ ಇದ್ದರೂ ಕೆಲವು ವಾದ- ವಿವಾದಗಳಿಗೆ ಕೆಲವರು ಎಳೆಯುತ್ತಾರೆ. ದೊಡ್ಡ ಗುಂಪಿನಲ್ಲಿ ಜನರು ಇರುವ ಕಡೆಗೆ ನೀವು ಹೋಗದಿರುವುದು ಉತ್ತಮ. ಇದನ್ನು ಮೀರಿಯೂ ಅಂಥ ಸ್ಥಳದಲ್ಲಿ ನೀವು ಇದ್ದೀರಿ ಅಂತಾದಲ್ಲಿ ಮೌನವಾಗಿ ಇರುವುದು ಕ್ಷೇಮ. ಸಹನೆ ಇಟ್ಟುಕೊಂಡು ಬಹಳ ಸಮಯದಿಂದ ಕಾಯುತ್ತಾ ಬಂದಿದ್ದಕ್ಕೂ ಸಾರ್ಥಕ ಎಂಬಂತೆ ಕೆಲವು ಕಾರ್ಯಗಳು ನಿಮ್ಮಂತೆಯೇ- ನಿಮಗೆ ಬೇಕಾದಂತೆಯೇ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Published On – 12:20 am, Sun, 1 March 26

Source link