Category Archives: Blog

Your blog category

ಬೀದರ್‌ ಪಶು ವಿವಿ ಘಟಿಕೋತ್ಸವ: 16 ಚಿನ್ನದ ಪದಕ ಬಾಚಿಕೊಂಡ ಮೀನು ವ್ಯಾಪಾರಿಯ ಮಗಳು – Kannada News | Bidar Veterinary University Convocation: Fishmonger daughter wins 16 gold medals

ಬೀದರ್​​​, ಫೆಬ್ರವರಿ 27: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿ ಚಿನ್ನದ ವಿದ್ಯಾರ್ಥಿಯಾಗಿದ್ದಾರೆ. ಪಶು ವೈದ್ಯಕೀಯ ಪದವಿಯಲ್ಲಿ 16 ಚಿನ್ನದ ಪದಕಗಳನ್ನ (gold medals) ಬಾಚಿಕೊಂಡ ಉಡುಪಿಯ ಖುಷಿ, 6 ಚಿನ್ನದ ಪದಕ ಪಡೆದ ತುಮಕೂರಿನ ಭೂಮಿಕಾರ ಯಶೋಗಾಥೆ ಎಂತಹವರನ್ನೂ ಪ್ರೇರೇಪಿಸುತ್ತದೆ.

ಮೀನು ವ್ಯಾಪಾರಿಯ ಮಗಳು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ

ಉಡುಪಿಯ ಮಂದಾರ್ತಿ ಗ್ರಾಮದ ಖುಷಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ಪದವಿಯಲ್ಲಿ 16 ಚಿನ್ನದ ಪದಕವನ್ನ ಪಡೆದುಕೊಂಡು ಇಡೀ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಪಾಸಾಗಿದ್ದಾರೆ. ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವದಲ್ಲಿ ಖುಷಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು.

ಇದನ್ನೂ ಓದಿ: ಬೀದರ್​​​ನ ಅದೊಂದು ಗ್ರಾಮದಲ್ಲಿ ಭೂಮಿಯಿಂದ ಹೊರಹೊಮ್ಮುತ್ತಿದೆ ವಿಚಿತ್ರ ಶಬ್ಧ

ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ 2023-24ನೇ ಬ್ಯಾಚ್‌ನ ವಿದ್ಯಾರ್ಥಿನಿ ಖುಷಿ, ಚಿನ್ನದ ಪದಕ ಪಡೆಯುವ ನಿಟ್ಟಿನಲ್ಲಿ ಕಷ್ಟಪಟ್ಟು ಓದಿದ್ದಾರೆ. ಆದರೆ, 16 ಚಿನ್ನದ ಪದಕಗಳು ಒಲಿದು ಬರುತ್ತವೆ ಎಂದು ಕನಸು ಮನಸ್ಸಿನಲ್ಲೂ ಯೋಚಿಸಿರಲಿಲ್ಲ. ಈ ವಿಷಯ ಗೊತ್ತಾದ ನಂತರ ‘ಖುಷಿ’ ವ್ಯಕ್ತಪಡಿಸಲು ಪದಗಳು ಸಾಲುತ್ತಿಲ್ಲ ಎಂದು ಅವರು ಟಿವಿ9 ಜೊತೆಗೆ ಸಂತಸ ಹಂಚಿಕೊಂಡಿದ್ದಾರೆ.

ವಿಶ್ವವಿದ್ಯಾಲಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡ ಭೂಮಿಕಾ 

ಇನ್ನು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವದಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮದ ರೈತನ ಮಗಳು ಭೂಮಿಕಾ 6 ಚಿನ್ನದ ಪದಕ ಪಡೆದುಕೊಂಡು ವಿಶ್ವವಿದ್ಯಾಲಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.

ಭೂಮಿಕಾ 

ಭೂಮಿಕಾ ಅವರು 2024-25ನೇ ಸಾಲಿನಲ್ಲಿ ಬೆಂಗಳೂರಿನ ಹೆಬ್ಬಾಳದ ಹೈನು ವಿಜ್ಞಾನ ಕಾಲೇಜಿನ ಬಿ.ಟೆಕ್ (ಹೈನು ತಂತ್ರಜ್ಞಾನ) ಪದವಿಯಲ್ಲಿ ಈ ಸಾಧನೆ ಮಾಡಿದ್ದಾರೆ. ತಂದೆ ಕೃಷಿ ಕಾಯಕ ಮಾಡುತ್ತಿದ್ದಾರೆ, ತಾಯಿ ಕೃಷಿ ಕಾಯಕದ ಜೊತೆಗೆ ಮನೆಯ ಕೆಲಸವನ್ನ ಕೂಡ ಮಾಡಿಕೊಂಡು ಮಕ್ಕಳ ಓದುಗೆ ಪ್ರೋತ್ಸಾಹ ನೀಡಿದ ಪರಿಣಾಮ ಇಂದು ಭೂಮಿಕಾ ಈ ಸಾಧನೆ ಮಾಡಲು ಸಾಧ್ಯವಾಗಿದೆ.

ನಾಗರಿಕ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವಾಸೆ: ಭೂಮಿಕಾ

ತನಗೆ ಆರು ಚಿನ್ನ ಪದಕ ಸಿಕ್ಕಿರುವ ಖುಷಿಯನ್ನ ಹಂಚಿಕೊಂಡಿರುವ ಭೂಮಿಕಾ, ಕಾಲೇಜಿನಲ್ಲಿ ಪ್ರಾಧ್ಯಾಪಕರ ಉತ್ತಮ ಪಾಠ, ಮನೆಯಲ್ಲಿ ಉತ್ತಮ ಬೆಂಬಲ ಸಿಕ್ಕಿದ್ದರಿಂದ ನಿತ್ಯ ಆರೇಳು ತಾಸು ಓದುತ್ತಿದ್ದೆ. ಭವಿಷ್ಯದಲ್ಲಿ ಐಎಎಸ್ ಮಾಡಿ, ನಾಗರಿಕ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಕಲಿಯುವ, ಸಾಧಿಸುವ ಛಲವಿದ್ದವರಿಗೆ ಯಾವುದು ಕಷ್ಟವಲ್ಲ. ಸಲೀಸು ಅನ್ನೋದಕ್ಕೆ ಈ ಚಿನ್ನದ ಹುಡುಗಿಯರೇ ಸಾಕ್ಷಿ. ಅಲ್ಲದೇ ಬಡತನ ಗುರಿ ಮುಟ್ಟೋಕೆ ಅಡ್ಡಿಯಾಗಲ್ಲ ಅನ್ನೋದಕ್ಕೆ ತಾಜಾ ನಿದರ್ಶನವಾಗಿದ್ದಾರೆ. ಅದೇನೇ ಇದ್ದರೂ ಈ ಚಿನ್ನದ ಹುಡುಗಿಯರ ಮತ್ತಷ್ಟು ಸಾಧನೆ ಮಾಡಲಿ ಎನ್ನುವುದು ನಮ್ಮ ಆಶಯ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ’ ಎಂದು ಚಿತ್ರತಂಡ ಹೇಳಿದೆ.

ಈ ಸಿನಿಮಾದಲ್ಲಿ ಸಿದ್ದಿ ಸಮುದಾಯ ಸೆಲ್ವಿನ್ ದೇಸಾಯಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಊರಲ್ಲಿ ಟ್ರಾಕ್ಟರ್ ಓಡಿಸುತ್ತಿದ್ದ ಅವರಿಗೆ ಈ ಚಿತ್ರದ ಮೂಲಕ ಹೀರೋ ಆಗುವ ಅವಕಾಶ ಸಿಕ್ಕಿದೆ. 2 ವರ್ಷಗಳ‌ ತರಬೇತಿ ಪಡೆದು ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯ ಆಹಾನ್‌ ಗೌಡ ಹಾಗೂ ಬಿಂಬಿಕಾ ಜೆ. ರಾವ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸಿನಿಮಾದಲ್ಲಿ 150ಕ್ಕೂ ಹೆಚ್ಚು ಸಿದ್ದಿ ಕಲಾವಿದರು ನಟಿಸಿರುವುದು ವಿಶೇಷ.

‘ದೇವಸಸ್ಯ’ ಸಿನಿಮಾಗಾಗಿ 1995ರ ಕಾಲಘಟ್ಟದ ಹಳ್ಳಿಯೊಂದರ ಸೆಟ್ ಹಾಕಿ 93 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಚಿತ್ರದ ಬಗ್ಗೆ ನಿರ್ಮಾಪಕ ಅನಂತಮೂರ್ತಿ ಹೆಗಡೆ ಅವರು ಮಾತನಾಡಿದರು. ‘ಮೊದಲಿಂದಲೂ ನನಗೆ ಸಿನಿಮಾ ಮೇಲೆ ಬಹಳ ಆಸಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಉತ್ತರ ಕನ್ನಡದಲ್ಲೇ ಬಹುತೇಕ ಚಿತ್ರೀಕರಣ ನಡೆಸಿದ್ದೇವೆ. ಅದ್ಭುತವಾದ, ವಿಶೇಷವಾದ ಸಂಜೀವಿನಿ ಗಿಡವೇ ದೇವಸಸ್ಯ. ಇಂತಹ ವಿಶಿಷ್ಟವಾದ ಸ್ಕ್ರಿಪ್ಟ್ ಸಿಕ್ಕಿರೋದು ನಮ್ಮ ಅದೃಷ್ಟ. ನಿರ್ದೇಶಕರು ಈ ಸಿನಿಮಾಗಾಗಿ 3 ವರ್ಷ ಕಷ್ಟಪಟ್ಟಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಕೆಲವು ಸಿನಿಮಾ, ಸೀರಿಯಲ್‌ಗಳಿಗೆ ಬರಹಗಾರನಾಗಿ ಕೆಲಸ ಮಾಡಿ ಅನುಭವ ಹೊಂದಿರುವ ಕಾರ್ತಿಕ್ ಭಟ್ ಅವರು ಮೊದಲ ಬಾರಿಗೆ ನಿರ್ದೇಶಕನಾಗಿ ‘ದೇವಸಸ್ಯ’ ಸಿನಿಮಾ ಮಾಡುತ್ತಿದ್ದಾರೆ. ‘ಶಿರಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಬಗ್ಗೆ ಸಿನಿಮಾದಲ್ಲಿ ಹೇಳಲಿದ್ದೇವೆ. ಎರಡು ಊರುಗಳ ಮಧ್ಯೆ ನಡೆಯುವ ಕಥೆಯಿದು’ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’

ನಟ ಸೆಲ್ವಿನ್ ದೇಸಾಯಿ ಮಾತನಾಡಿ, ‘ನಾನು ಊರಲ್ಲಿ ಟ್ರ‍್ಯಾಕ್ಟರ್ ಓಡಿಸಿಕೊಂಡಿದ್ದೆ. ನಿರ್ದೇಶಕರು ಬಂದು ಸಿನಿಮಾದಲ್ಲಿ ಆಕ್ಟ್ ಮಾಡ್ತೀಯಾ ಅಂತ ಕೇಳಿದರು. ನನ್ನಂಥವನಿಂದ ಸಾಧ್ಯವಾ ಅಂತ ನಕ್ಕಿದ್ದೆ. ನಂತರ ಅವರೇ ಕರೆದುಕೊಂಡು ಹೋಗಿ ಅಭಿನಯ, ಸಾಹಸ ಕಲಿಸಿದರು’ ಎಂದರು. ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಅಯ್ಯಪ್ಪ ಶರ್ಮ, ರವಿ ಮೂರೂರು, ಮಂಜುನಾಥ ಹೆಗಡೆ, ಗೀತಾ ಸಿದ್ಧಿ ಮುಂತಾದವರ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾಗೆ ಯಶವಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಹರಿ ಅಜಯ್ ಅವರು ಸಂಗೀತ ನೀಡಿದ್ದಾರೆ. ಶ್ರೀಕಾಂತ್ ಅವರು ಸಂಕಲನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 4:48 pm, Fri, 27 February 26

Source link

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ’ ಎಂದು ಚಿತ್ರತಂಡ ಹೇಳಿದೆ.

ಈ ಸಿನಿಮಾದಲ್ಲಿ ಸಿದ್ದಿ ಸಮುದಾಯ ಸೆಲ್ವಿನ್ ದೇಸಾಯಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಊರಲ್ಲಿ ಟ್ರಾಕ್ಟರ್ ಓಡಿಸುತ್ತಿದ್ದ ಅವರಿಗೆ ಈ ಚಿತ್ರದ ಮೂಲಕ ಹೀರೋ ಆಗುವ ಅವಕಾಶ ಸಿಕ್ಕಿದೆ. 2 ವರ್ಷಗಳ‌ ತರಬೇತಿ ಪಡೆದು ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯ ಆಹಾನ್‌ ಗೌಡ ಹಾಗೂ ಬಿಂಬಿಕಾ ಜೆ. ರಾವ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸಿನಿಮಾದಲ್ಲಿ 150ಕ್ಕೂ ಹೆಚ್ಚು ಸಿದ್ದಿ ಕಲಾವಿದರು ನಟಿಸಿರುವುದು ವಿಶೇಷ.

‘ದೇವಸಸ್ಯ’ ಸಿನಿಮಾಗಾಗಿ 1995ರ ಕಾಲಘಟ್ಟದ ಹಳ್ಳಿಯೊಂದರ ಸೆಟ್ ಹಾಕಿ 93 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಚಿತ್ರದ ಬಗ್ಗೆ ನಿರ್ಮಾಪಕ ಅನಂತಮೂರ್ತಿ ಹೆಗಡೆ ಅವರು ಮಾತನಾಡಿದರು. ‘ಮೊದಲಿಂದಲೂ ನನಗೆ ಸಿನಿಮಾ ಮೇಲೆ ಬಹಳ ಆಸಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಉತ್ತರ ಕನ್ನಡದಲ್ಲೇ ಬಹುತೇಕ ಚಿತ್ರೀಕರಣ ನಡೆಸಿದ್ದೇವೆ. ಅದ್ಭುತವಾದ, ವಿಶೇಷವಾದ ಸಂಜೀವಿನಿ ಗಿಡವೇ ದೇವಸಸ್ಯ. ಇಂತಹ ವಿಶಿಷ್ಟವಾದ ಸ್ಕ್ರಿಪ್ಟ್ ಸಿಕ್ಕಿರೋದು ನಮ್ಮ ಅದೃಷ್ಟ. ನಿರ್ದೇಶಕರು ಈ ಸಿನಿಮಾಗಾಗಿ 3 ವರ್ಷ ಕಷ್ಟಪಟ್ಟಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಕೆಲವು ಸಿನಿಮಾ, ಸೀರಿಯಲ್‌ಗಳಿಗೆ ಬರಹಗಾರನಾಗಿ ಕೆಲಸ ಮಾಡಿ ಅನುಭವ ಹೊಂದಿರುವ ಕಾರ್ತಿಕ್ ಭಟ್ ಅವರು ಮೊದಲ ಬಾರಿಗೆ ನಿರ್ದೇಶಕನಾಗಿ ‘ದೇವಸಸ್ಯ’ ಸಿನಿಮಾ ಮಾಡುತ್ತಿದ್ದಾರೆ. ‘ಶಿರಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಬಗ್ಗೆ ಸಿನಿಮಾದಲ್ಲಿ ಹೇಳಲಿದ್ದೇವೆ. ಎರಡು ಊರುಗಳ ಮಧ್ಯೆ ನಡೆಯುವ ಕಥೆಯಿದು’ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’

ನಟ ಸೆಲ್ವಿನ್ ದೇಸಾಯಿ ಮಾತನಾಡಿ, ‘ನಾನು ಊರಲ್ಲಿ ಟ್ರ‍್ಯಾಕ್ಟರ್ ಓಡಿಸಿಕೊಂಡಿದ್ದೆ. ನಿರ್ದೇಶಕರು ಬಂದು ಸಿನಿಮಾದಲ್ಲಿ ಆಕ್ಟ್ ಮಾಡ್ತೀಯಾ ಅಂತ ಕೇಳಿದರು. ನನ್ನಂಥವನಿಂದ ಸಾಧ್ಯವಾ ಅಂತ ನಕ್ಕಿದ್ದೆ. ನಂತರ ಅವರೇ ಕರೆದುಕೊಂಡು ಹೋಗಿ ಅಭಿನಯ, ಸಾಹಸ ಕಲಿಸಿದರು’ ಎಂದರು. ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಅಯ್ಯಪ್ಪ ಶರ್ಮ, ರವಿ ಮೂರೂರು, ಮಂಜುನಾಥ ಹೆಗಡೆ, ಗೀತಾ ಸಿದ್ಧಿ ಮುಂತಾದವರ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾಗೆ ಯಶವಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಹರಿ ಅಜಯ್ ಅವರು ಸಂಗೀತ ನೀಡಿದ್ದಾರೆ. ಶ್ರೀಕಾಂತ್ ಅವರು ಸಂಕಲನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಜಯಪುರ: ಜೆಡಿಎಸ್ ಕಾರ್ಯಕ್ರಮಕ್ಕೆ ಪಿಸ್ತೂಲ್ ಇಟ್ಟುಕೊಂಡ ಬಂದ ಕಾರ್ಯಕರ್ತ, ವಿಡಿಯೋ ವೈರಲ್ – Kannada News | JDS Worker Attends Vijayapura Event With Licensed Pistol; Police Escort Him Out, Video Goes Viral

ವಿಜಯಪುರ, ಫೆಬ್ರವರಿ 27: ವಿಜಯಪುರದಲ್ಲಿ ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮ ನಡೆಯುತ್ತಿರುವಾಗ ಕಾರ್ಯಕರ್ತನೊಬ್ಬ ಪರವಾನಗಿ ಇರುವ ಪಿಸ್ತೂಲ್ ಜೇಬಲ್ಲಿಟ್ಟುಕೊಂಡು ಬಂದಿದ್ದಾರೆ. ಸೊಂಟದಲ್ಲಿ ಪಿಸ್ತೂಲ್ ಇಟ್ಟುಕೊಂಡು ವೇದಿಕೆ ಮುಂಭಾಗ ಬಂದಾಗ, ಭದ್ರತೆಯ ಕಾರಣಕ್ಕೆ ಪೊಲೀಸರು ಆತನನ್ನು ಹೊರ ಕಳುಹಿಸಿದ್ದಾರೆ. ಸದ್ಯ ಜೆಡಿಎಸ್ ಕಾರ್ಯಕರ್ತ ಪಿಸ್ತೂಲ್​ನೊಂದಿಗೆ ಬಂದ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ.

ಬರೋಬ್ಬರಿ 69 ಸಾವಿರ ಸತ್ತವರ ಬ್ಯಾಂಕ್ ಖಾತೆಗಳಿಗೆ  79 ಕೋಟಿ ರೂ. ಗೃಹಲಕ್ಷ್ಮಿ ಹಣ ಪಾವತಿ ಆಗಿರುವುದನ್ನು ಸರ್ಕಾರ ಪತ್ತೆ ಮಾಡಿದ್ದು, ಈ ಹಣವನ್ನು ಇದೀಗ ವಾಪಸ್ ಪಡೆದುಕೊಳ್ಳಲು ಸರ್ಕಾರ, ಬ್ಯಾಂಕ್ ಅಧಿಕಾರಿಗಳ ಜೊತೆಯೂ ಸಂಪರ್ಕ ಸಾಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಿಂಗಳಿಗೆ 82,000 ರೂ., ವರ್ಷಕ್ಕೆ 9.84 ಲಕ್ಷ ರೂ.: ಇದು ಬೆಂಗಳೂರು ಸಿಎ ಖರ್ಚು, ತುಂಬಾ ಜಾಸ್ತಿ ಆಯಿತು ಎಂದ ನೆಟ್ಟಿಗರು – Kannada News | Is Bengaluru’s ‘Silicon Tax’ Real? Viral Post on Rs 82K Monthly Expenses

ಬೆಂಗಳೂರು: ಬೆಂಗಳೂರಿನಲ್ಲಿ ಒಳ್ಳೆಯ ಉದ್ಯೋಗ, ಜತೆಗೆ ಸಂಪಾದನೆ ಕೂಡ ಚೆನ್ನಾಗಿದ್ರೆ ಖರ್ಚು ಕೂಡ ಅಷ್ಟೇ ಇರುತ್ತದೆ. ಸಂಪಾದನೆ ಅಥವಾ ಸಂಬಳ ಹೆಚ್ಚಾದಂತೆ, ಖರ್ಚು ಹಾಗೂ ನಿರೀಕ್ಷೆಗಳು ಕೂಡ ಇರುತ್ತದೆ. ಭಾರತದ ಸಿಲಿಕಾನ್ ವ್ಯಾಲಿ ಎಂದೇ ಕರೆಯಲ್ಪಡುವ ಬೆಂಗಳೂರಿನಲ್ಲಿ ಜೀವನ ವೆಚ್ಚ (Cost of Living) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಇದೀಗ ಬೆಂಗಳೂರು ಮೂಲದ ಚಾರ್ಟರ್ಡ್ ಅಕೌಂಟೆಂಟ್ ಮೀನಲ್ ಗೋಯಲ್ ಅವರು ಹಂಚಿಕೊಂಡಿರುವ ತಮ್ಮ ಕುಟುಂಬದ ಮಾಸಿಕ ಖರ್ಚಿನ ಪಟ್ಟಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಕೇವಲ ಇಬ್ಬರು ಇರುವ ಕುಟುಂಬಕ್ಕೆ ತಿಂಗಳಿಗೆ 82,000 ರೂಪಾಯಿ ಖರ್ಚಾಗುತ್ತದೆ ಎಂದು ಅವರು ವಿವರ ನೀಡಿದ್ದಾರೆ.

ಮೀನಲ್ ಅವರು ಲಿಂಕ್ಡ್‌ಇನ್‌ನಲ್ಲಿ ಹಂಚಿಕೊಂಡಿರುವ ಖರ್ಚಿನ ಪಟ್ಟಿ ನೋಡಿದ್ರೆ ಶಾಕ್​​ ಆಗುವುದು ಖಂಡಿತ. 2 ಬಿಹೆಚ್​​ಕೆ ಮನೆಯ ಬಾಡಿಗೆ 37,000 ರೂ, ಆಹಾರ ಮತ್ತು ದಿನಸಿ 15,000 ರೂ., ವಾಹನದ ಖರ್ಚು 5,000 ರೂ., ವಿದ್ಯುತ್, ನೀರು ಮತ್ತು ಇತರ ಬಿಲ್‌ಗಳು 4 ಸಾವಿರ ರೂ. ಮನೆಗೆಲಸದ ಸಹಾಯಕಿಗೆ 4,000 ರೂ. ಮನೋರಂಜನೆ, ಜಿಮ್ ಮತ್ತು ಹೊರಗಿನ ಊಟ 17,000 ರೂ. ಒಟ್ಟು ಖರ್ಚು ತಿಂಗಳಿಗೆ 82,000 ರೂ., ಇದು ವರ್ಷಕ್ಕೆ ಸುಮಾರು 9.84 ಲಕ್ಷ ರೂ. ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಈ ಪೋಸ್ಟ್ ನೋಡಿದ ನೆಟ್ಟಿಗರು “ಸಿಲಿಕಾನ್ ಟ್ಯಾಕ್ಸ್” ಅನ್ವಯವಾಗುತ್ತಿದೆ ಎಂದು ತಮಾಷೆ ಮಾಡಿದ್ದಾರೆ. ತಿಂಗಳಿಗೆ 25,000 ರೂ. ಸಂಪಾದಿಸುವವರೂ ಬೆಂಗಳೂರಿನಲ್ಲಿ ಬದುಕುತ್ತಿದ್ದಾರೆ. ಖರ್ಚು ಮಾಡುವುದು ನಮ್ಮ ಜೀವನಶೈಲಿಗೆ ಬಿಟ್ಟಿದ್ದು ಎಂದು ಕೆಲವರು ಹೇಳಿದ್ದಾರೆ. 90 ಸಾವಿರ ಖರ್ಚು ಮಾಡುವ ಬದಲು 45 ಸಾವಿರಕ್ಕೆ ಮಿತಿಗೊಳಿಸಿ, ಉಳಿದ ಹಣವನ್ನು ಎಸ್‌ಐಪಿ (SIP) ಮಾಡಿದರೆ 5 ವರ್ಷದಲ್ಲಿ ದೊಡ್ಡ ಮೊತ್ತ ಸೇರಿಸಬಹುದು ಎಂದು ಹಣಕಾಸು ಸಲಹೆ ನೀಡಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್ ಅಥವಾ ಇತರೆ ಐಟಿ ಹಬ್‌ಗಳಲ್ಲಿ 2BHK ಮನೆಗೆ 37,000 ರೂ. ಬಾಡಿಗೆ ಸಾಮಾನ್ಯವಾಗಿದೆ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ಹೊರಗೆ ಹೆಚ್ಚು ತಿನ್ನುವುದು ಮತ್ತು ಜಿಮ್‌ನಲ್ಲಿ ಖರ್ಚು ಮಾಡುವುದು. ನೀವು ವೆಚ್ಚದಲ್ಲಿ ಯಾವುದನ್ನಾದರೂ ಕಡಿತಗೊಳಿಸಬಹುದು ಎಂದು ಒಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:25 pm, Fri, 27 February 26

Source link

ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ! – Kannada News | SSLC Exam Fear: 5 Haveri Students Missing from Morarji School, Cover up Alleged

ಹಾವೇರಿ, ಫೆಬ್ರವರಿ 27: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್​​ಗಳೂ ಕೆಲವೆಡೆ ತಮ್ಮದೇ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿವೆ. ಹೀಗಿದ್ದರೂ ಹತ್ತನೇ ತರಗತಿ ಪರೀಕ್ಷೆಗೆ ಹೆದರಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 5 ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲೂಕು ಸುಣಕಲಬಿದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಅಂಜಿ ಹಾಸ್ಟೆಲ್​​ನಿಂದ ನಾಪತ್ತೆಯಾಗಿದ್ದು, ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಮುಚ್ಚಿಟ್ಟಿರುವ ಆರೋಪ ಕೇಳಿಬಂದಿದೆ. ಮಕ್ಕಳು ಇದ್ದಾರೆ, ಸಿಕ್ಕಿದ್ದಾರೆ ಎಂದು ವಸತಿ ಶಾಲೆಯವರು ಹೇಳುತ್ತಿದ್ದು, ಅವರು ಬೇರೆಡೆ ಇದ್ದಾರೆಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆಯೂ ದೂರಲಾಗಿದೆ. ರಾತ್ರಿ ವೇಳೆ ವಾಚ್​​ಮೆನ್​​ ಇಲ್ಲದಿರೋದನ್ನು ಗಮನಿಸಿದ್ದ ವಿದ್ಯಾರ್ಥಿಗಳು, ಇಂದು ನಸುಕಿನ ಜಾವ ವಸತಿ ಶಾಲೆ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಶಾಲೆಯಲ್ಲಿ ಪೂರ್ವಸಿದ್ಧತಾ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ ಇವುಗಳಿಗೆ ಹೆದರಿ ಅವರು ವಸತಿಶಾಲೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

Bangaluru Karaga 2026: ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ – Kannada News | Bengaluru Karaga 2026 Dates Confirmed: April 1st Procession, 11 Day Festival

ಬೆಂಗಳೂರು ಕರಗ (ಸಂಗ್ರಹ ಚಿತ್ರ)Image Credit source: google

ಬೆಂಗಳೂರು, ಫೆಬ್ರವರಿ 27: ವಿಶ್ವವಿಖ್ಯಾತ ಬೆಂಗಳೂರು ಕರಗ (Bangaluru Karaga) ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್​​ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಆ ಮೂಲಕ ದಿನಗಣನೆ ಆರಂಭವಾಗಿದೆ. ಇನ್ನು 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ.

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ

ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿಯಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಇನ್ನು ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಕಳೆದ ವರ್ಷ ಬೆಂಗಳೂರು ಕರಗ ಹೊತ್ತಿದ್ದ ಅರ್ಚಕರು ಎ.ಜ್ಞಾನೇಂದ್ರ ಸ್ವಾಮಿ ಅವರು 16ನೇ ಬಾರಿಗೆ ಕರಗ ಹೊರಲಿದ್ದಾರೆ.

ಇದನ್ನೂ ಓದಿ: Bangalore Karaga: ಬೆಂಗಳೂರು ಕರಗ ಮಹೋತ್ಸವ ಇಂದಿನಿಂದ ಶುರು, ಯಾವಾಗ ಏನೇನು ಕಾರ್ಯಕ್ರಮ? ಇಲ್ಲಿದೆ ವಿವರ

ಸಿಲಿಕಾನ್​ ಸಿಟಿಯ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಸದ್ಯ ದಿನಾಂಕ ನಿಗದಿಯಾಗಿದೆ. ಆ ಮೂಲಕ ಸಿಟಿ ಮದಿ ಕರಗ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಬೆಂಗಳೂರು ಕರಗ ದಕ್ಷಿಣ ಭಾರತದ ಅತ್ಯಂತ ಪುರಾತನ ಮತ್ತು ವೈಶಿಷ್ಟ್ಯಪೂರ್ಣ ಹಬ್ಬಗಳಲ್ಲಿ ಒಂದಾಗಿದೆ. ಸುಮಾರು ಶತಮಾನಗಳ ಪರಂಪರೆಯನ್ನು ಹೊಂದಿರುವ ಈ ಆಚರಣೆ, ದ್ರೌಪದಿ ದೇವಿಯ ಭಕ್ತಿಭಾವದೊಂದಿಗೆ ಆಳವಾದ ಸಂಪರ್ಕ ಹೊಂದಿದೆ. ಪ್ರತೀ ವರ್ಷ ಚೈತ್ರ ಮಾಸದ ಪೌರ್ಣಮಿಯ ಸಂದರ್ಭದಲ್ಲಿ ನಡೆಯುವ ಈ ಉತ್ಸವವು ಸಾಮಾನ್ಯವಾಗಿ 9 ರಿಂದ 11 ದಿನಗಳವರೆಗೆ ನಡೆಯುತ್ತದೆ.

ಮಹೋತ್ಸವದ ಕೇಂದ್ರಬಿಂದು ಆಗಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಮತ್ತು ವಿಧಿವಿಧಾನಗಳು ನೆರವೇರುತ್ತವೆ. ತಿಗಳ ಸಮುದಾಯದವರು ಈ ಹಬ್ಬದ ಮುಖ್ಯ ಆಯೋಜಕರಾಗಿದ್ದು, ಶತಮಾನಗಳಿಂದ ಬಂದಿರುವ ಆಚರಣೆಗಳನ್ನು ಶ್ರದ್ಧೆಯಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಇದು ಸಮುದಾಯಗಳ ಏಕತೆ, ಶಕ್ತಿಯ ಆರಾಧನೆ ಮತ್ತು ನಗರ ಸಾಂಸ್ಕೃತಿಕ ಗುರುತಿನ ಪ್ರತೀಕವಾಗಿದೆ. ವಿವಿಧ ಧರ್ಮಗಳ ಜನರು ಭಾಗವಹಿಸುವ ಈ ಉತ್ಸವವು ಸಹಭಾವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ.

ಇದನ್ನೂ ಓದಿ: ಬೆಂಗಳೂರು ಕರಗ: ಸರ್ಕಾರದಿಂದ ಹಣ ಬಿಡುಗಡೆ ವಿಚಾರದಲ್ಲಿ ಗೊಂದಲ, ಯಾರು ಏನಂದರು ನೋಡಿ

ಚೈತ್ರ ಪೌರ್ಣಮಿಯ ಮಧ್ಯರಾತ್ರಿ ಆದಿಶಕ್ತಿ ದ್ರೌಪದಿದೇವಿಯ ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಇದರ ಪ್ರಥಮ ಭಾಗವಾಗಿ ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಹಸಿಕರಗಕ್ಕೆ ಚಾಲನೆ ದೊರೆಯಲಿದೆ. ತಿಗಳರ ಸಮಾಜದ ನಂಬಿಕೆಯಂತೆ ದ್ರೌಪದಿದೇವಿಯೂ ಹಸಿಕರಗದ ರೂಪದಲ್ಲಿ ಬೆಳಿಗ್ಗೆ ಭೂಮಿಗೆ ಬಂದು ಮೂರು ದಿನಗಳ ಕಾಲ ಭಕ್ತರಿಗೆ ದರ್ಶನ ಮತ್ತು ಬೇಡಿದ ವರಗಳನ್ನು ಕರುಣಿಸುತ್ತಾಳೆ ಎಂಬ ನಂಬಿಕೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:07 pm, Fri, 27 February 26

Source link

ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್ ಪತ್ತೆ: ಮುಂದೇನಾಯ್ತು? – Kannada News | Gun Found In Bengaluru sheep selling merchant, Two Arrested By CCB

ಬೆಂಗಳೂರು, (ಫೆಬ್ರವರಿ 27): ಕುರಿ ವ್ಯಾಪಾರ (sheep selling merchant) ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ (Bengaluru) ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಿ ಸೈಯದ್ ಮಸೂದ್ ಹಾಗೂ ಜಾವೇದ್ ಆಲಂ ಎನ್ನುವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಭೋಪಾಲ್ ಮೂಲದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿರುವುದಾಗಿ ಮಸೂದ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಿಸಿಬಿ, ಬಂಧಿತರಿಂದ 0.32 MM ಪಿಸ್ತೂಲ್, 50 ಜೀವಂತ ಗುಂಡುಗಳು ವಶಕ್ಕೆ ಪಡೆದುಕೊಂಡಿದ್ದು, ಆದ್ರೆ, ಮಸೂದ್ ಯಾವ ಕಾರಣಕ್ಕೆ ಗನ್ ತರಿಸಿಕೊಂಡಿದ್ದ ಎಂಬ ಬಗ್ಗೆ ತನಿಖೆ ಮುಂದುವರೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್, ಸಿಸೋಡಿಯಾ ವಿಚಾರದಲ್ಲಿ ಕಾನೂನು ಏನು ಹೇಳುತ್ತದೆ? – Kannada News | Arvind Kejriwal Sisodia and others discharged in liquor policy case How it is different from acquittal

ನವದೆಹಲಿ, ಫೆಬ್ರವರಿ 27: ನವದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಮನೀಶ್ ಸಿಸೋಡಿಯಾ ದೋಷಮುಕ್ತರೆಂದು ಘೋಷಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಹೆಸರಿಸಿದ್ದ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ರಾಜಕಾರಣಿ ಕೆ. ಕವಿತಾ ಮತ್ತು ಎಎಪಿ ನಾಯಕರಾದ ವಿಜಯ್ ನಾಯರ್ ಸೇರಿದಂತೆ ಎಲ್ಲಾ 23 ಜನರನ್ನು ವಿಶೇಷ ನ್ಯಾಯಾಧೀಶ ಜಿತೇಂದರ್ ಸಿಂಗ್ ದೋಷಮುಕ್ತಗೊಳಿಸಿದ್ದಾರೆ.

ಅಬಕಾರಿ ನೀತಿಯ ಹಿಂದೆ ಯಾವುದೇ ಪಿತೂರಿ ಅಥವಾ ಕ್ರಿಮಿನಲ್ ಉದ್ದೇಶ ಇರಲಿಲ್ಲ. ಸಿಬಿಐ ಸಾಕ್ಷಿಗಳಿಗಿಂತ ಊಹೆಯ ಆಧಾರದ ಮೇಲೆ ಅವರ ಮೇಲೆ ಪಿತೂರಿಯನ್ನು ನಿರ್ಮಿಸಲು ಪ್ರಯತ್ನಿಸಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದರಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರನ್ನು ಸಂಪೂರ್ಣವಾಗಿ ‘ಮುಕ್ತಗೊಳಿಸಲಾಗಿದೆ’ ಎಂಬ ಪದ ಬಳಸಿದೆ. ಆದರೆ, ಅವರನ್ನು “ಖುಲಾಸೆಗೊಳಿಸಲಾಗಿಲ್ಲ” ಎಂಬುದು ಗಮನಿಸಬೇಕಾದ ಸಂಗತಿ.

ಇದನ್ನೂ ಓದಿ: Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

ಡಿಸ್ಚಾರ್ಜ್ಡ್​ ಅಥವಾ ಮುಕ್ತಗೊಳಿಸಲಾಗಿದೆ ಎಂದರೆ ಕೇವಲ ಅಪರಾಧ ಅಥವಾ ಅವರ ನಿರಪರಾಧದ ಮೇಲಿನ ತೀರ್ಪನ್ನು ಸೂಚಿಸುವುದಿಲ್ಲ. ಅದು ವಿಚಾರಣೆಯ ಸಂಪೂರ್ಣ ಮುಕ್ತಾಯವಾಗಿದೆ ಎಂದರ್ಥ. ಈ ಬಗ್ಗೆ ವಿವರಿಸಿರುವ ಸುಪ್ರೀಂ ಕೋರ್ಟ್ ವಕೀಲ ಅನಸ್ ತನ್ವೀರ್, “ಪ್ರಾಥಮಿಕ ಪ್ರಕರಣವನ್ನು ನಿರೂಪಿಸಲು ಸಾಕಷ್ಟು ಪುರಾವೆಗಳಿಲ್ಲದ ಕಾರಣದಿಂದ ಆರೋಪಗಳನ್ನು ಹೊತ್ತಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಬಹುದು” ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಯಾವುದಾದರೂ ಒಂದು ಪ್ರಕರಣ ದಾಖಲಿಸುವಾಗ 4 ಹಂತಗಳಿರುತ್ತವೆ. ಮೊದಲನೆಯದು ಎಫ್‌ಐಆರ್ ಅಥವಾ ದೂರು ದಾಖಲಿಸುವುದು, ಪೊಲೀಸ್ ಅಥವಾ ತನಿಖಾ ಸಂಸ್ಥೆಯು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸುವುದು, ಆರೋಪಗಳು ಸತ್ಯವಾಗಿದೆಯೇ ಎಂದು ನಿರ್ಧರಿಸಲು ನ್ಯಾಯಾಲಯವು ಚಾರ್ಜ್‌ಶೀಟ್ ಪರಿಶೀಲಿಸುತ್ತದೆ, ವಿಚಾರಣೆಗೆ ಆರೋಪಗಳನ್ನು ರೂಪಿಸಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುತ್ತದೆ. ನಂತರ ವಿಚಾರಣೆಯನ್ನು ನಡೆಸಲಾಗುತ್ತದೆ. ಈ ವಿಚಾರಣೆ ಮುಗಿದ ಬಳಿಕ ಶಿಕ್ಷೆ ಅಥವಾ ಖುಲಾಸೆಯ ತೀರ್ಪು ಪ್ರಕಟವಾಗುತ್ತದೆ.

ಇದನ್ನೂ ಓದಿ: ಚಂಡೀಗಢದಲ್ಲಿ 2 ಎಕರೆ ಜಾಗದಲ್ಲಿ ಅರವಿಂದ್ ಕೇಜ್ರಿವಾಲ್ ಹೊಸ ‘ಶೀಷ್ ಮಹಲ್’ ನಿರ್ಮಾಣ; ಬಿಜೆಪಿ ಆರೋಪ

ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ, ನ್ಯಾಯಾಲಯವು ಮೂರನೇ ಹಂತದಲ್ಲಿಯೇ ವಿಚಾರಣೆಯನ್ನು ನಿಲ್ಲಿಸಿದೆ. ಅಂದರೆ ವಿಚಾರಣೆಗೆ ಚೌಕಟ್ಟನ್ನು ನಿರ್ಮಿಸಲು ಅಗತ್ಯವಾದ ಯಾವುದೇ ಆರೋಪಗಳು ಕಂಡುಬಂದಿಲ್ಲ. ಹೊಸ ಪುರಾವೆಗಳು ಸಿಕ್ಕಿದರೆ ಅಥವಾ ಉನ್ನತ ನ್ಯಾಯಾಲಯದಲ್ಲಿ ಆದೇಶವನ್ನು ಪ್ರಶ್ನಿಸಲು ಅದು ಆಧಾರಗಳನ್ನು ಹೊಂದಿದ್ದರೆ, ಬಿಡುಗಡೆ ಅಥವಾ ಮುಕ್ತವಾದರೂ ಆರೋಪಗಳನ್ನು ಮರು ಸಲ್ಲಿಸಲು ಅವಕಾಶವಿರುತ್ತದೆ. ಇದು ಖುಲಾಸೆ ಮತ್ತು ಮುಕ್ತಗೊಳಿಸುವಿಕೆಗೂ ಇರುವ ವ್ಯತ್ಯಾಸ.

ಇಂದು ದೆಹಲಿ ಕೋರ್ಟ್ ಕೇಜ್ರಿವಾಲ್ ಅವರನ್ನು ಆರೋಪದಿಂದ ಮುಕ್ತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪರಿಷ್ಕರಣಾ ಅರ್ಜಿಯ ಮೂಲಕ ರೌಸ್ ಅವೆನ್ಯೂ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲು ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಲು ನಿರ್ಧರಿಸಿದೆ. ಸಿಬಿಐ ಆಗಸ್ಟ್ 2022ರಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಸಾಕ್ಷ್ಯಗಳ ನಾಶ ಹಾಗೆಯೇ ಭ್ರಷ್ಟಾಚಾರ ತಡೆ ಕಾಯ್ದೆಯನ್ನು ಒಳಗೊಂಡ ಕಾನೂನು ವಿಭಾಗಗಳ ಅಡಿಯಲ್ಲಿ ತನ್ನ ಪ್ರಕರಣವನ್ನು ದಾಖಲಿಸಿತು. ಒಟ್ಟು 3 ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಎರಡನೆಯದರಲ್ಲಿ ಕೇಜ್ರಿವಾಲ್ ಅವರನ್ನು ನಿರ್ದಿಷ್ಟವಾಗಿ ಹೆಸರಿಸಲಾಗಿದೆ.

ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣವನ್ನು ಮುಂದುವರಿಸುತ್ತಿದೆ. ಇದು ಮುಖ್ಯ ಪ್ರಕರಣಕ್ಕೆ ಸಂಬಂಧಿಸಿದ ಹವಾಲಾ ವರ್ಗಾವಣೆ ಮತ್ತು ಶೆಲ್ ಕಂಪನಿಗಳ ತನಿಖೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್ ಎರಡೂ ಪ್ರಕರಣಗಳಲ್ಲಿ ಜಾಮೀನು ನೀಡುವ ಮೊದಲು ಕೇಜ್ರಿವಾಲ್ ಅವರನ್ನು ಮಾರ್ಚ್ 2024ರಲ್ಲಿ ಇಡಿ ಮತ್ತು ನಂತರ ಸಿಬಿಐ ಬಂಧಿಸಿತು. ಅವರು 5 ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link