World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?
ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…