ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು – Kannada News | Nelamangala Chain Snatching: Woman Dies After Attack in Huskoor Village
ನೆಲಮಂಗಲ, ಫೆಬ್ರವರಿ 09: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಸರಗಳ್ಳತನ ಪ್ರಕರಣಗಳು ಸಾರ್ವಜನಿಕರ ನಿದ್ದೆಗೆಡಿಸಿವೆ. ಈ ನಡುವೆ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಸ್ಪ್ರೇ ಹೊಡೆದು ದುಷ್ಕರ್ಮಿಗಳು ಒಡವೆ ದೋಚಿ ಪರಾರಿಯಾಗಿದ್ದಾರೆ. ಇತ್ತ ಕುಸಿದು ಬಿದ್ದ ಮಹಿಳೆ ಮೃತಪಟ್ಟಿದ್ದು, ಮೃತ ಜ್ಯೋತಿ(45) ಕತ್ತಲ್ಲಿದ್ದ ಮಾಂಗಲ್ಯ ಸರ ಮತ್ತು ಓಲೆಯನ್ನು ದುಷ್ಕರ್ಮಿಗಳು ದೋಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು…