Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ
ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಇಂದು ಬೆಳಿಗ್ಗೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ದೇವಿಯ ಮೂರ್ತಿಯನ್ನ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗದ್ದುಗೆಗೆ ತರಲಾಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ದ ಮಾರಿಕಾಂಬಾ ಜಾತ್ರಾ ಮಹೋತ್ಸವ ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಜಾತ್ರಾ ಮಹೋತ್ಸವ ಎನ್ನುವ ಖ್ಯಾತಿ ಪಡೆದಿದೆ. ಸದ್ಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ….