Category Archives: Blog

Your blog category

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​ – Kannada News | Bengaluru Road Accident: Father and Kids Fall Due to Anekal Bad Roads

ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್​ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್​​ನಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು… – Kannada News | From Cash payment to withdrawal, 16 financial transactions that Income Tax department observes

ಜನರು ಮತ್ತು ಸಂಸ್ಥೆಗಳ ಆದಾಯಕ್ಕೆ ಕಾನೂನಿನ ಪ್ರಕಾರ ತೆರಿಗೆ ಪಾವತಿಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಐಟಿ ಇಲಾಖೆಯದ್ದಾಗಿರುತ್ತದೆ. ಜನರು ದೊಡ್ಡ ಮಟ್ಟದ ಆದಾಯ ಹೊಂದಿದ್ದರೆ ಅದನ್ನು ಪತ್ತೆ ಮಾಡಲು ಇಲಾಖೆ (Income Tax) ಬಳಿ ವಿವಿಧ ಮಾರ್ಗೋಪಾಯಗಳಿವೆ. ಅದಕ್ಕಾಗಿ ಬ್ಯಾಂಕು, ಪೋಸ್ಟ್ ಆಫೀಸ್ ಇತ್ಯಾದಿ ಹಣಕಾಸು ಸಂಸ್ಥೆಗಳ ನೆರವನ್ನು ಐಟಿ ಇಲಾಖೆ ಪಡೆಯುತ್ತದೆ. ಒಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ಆದಾಗ ಸ್ಟೇಟ್ಮೆಂಟ್ ಆಫ್ ಫೈನಾನ್ಷಿಯಲ್ ಟ್ರಾನ್ಸಾಕ್ಷನ್ ಎನ್ನುವ ಮಾರ್ಗದ ಮೂಲಕ ಮಾಹಿತಿ ಪಡೆಯುತ್ತದೆ. ಆಗ ಇಲಾಖೆಯು ಆ ವ್ಯಕ್ತಿಯ ಹಣಕಾಸು ಚಟುವಟಿಕೆ, ಆದಾಯ ಮೂಲಗಳನ್ನು ಶೋಧಿಸುವ ಕಾರ್ಯ ಆರಂಭಿಸಲು ಸಾಧ್ಯವಾಗುತ್ತದೆ. ಅಂಥ ಕೆಲ ಹಣಕಾಸು ವಹಿವಾಟುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಕ್ಯಾಷ್ ಪೇಮೆಂಟ್

ಬ್ಯಾಂಕ್ ಡ್ರಾಫ್ಟ್, ಪೇ ಆರ್ಡರ್, ಬ್ಯಾಂಕರ್ಸ್ ಚೆಕ್​ಗಳಿಗೆ ಮಾಡುವ ಒಟ್ಟಾರೆ ಕ್ಯಾಷ್ ಪೇಮೆಂಟ್ ಒಂದು ಹಣಕಾಸು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚಿದ್ದರೆ, ಅದನ್ನು ಸಂಬಂಧಪಟ್ಟ ಹಣಕಾಸು ಸಂಸ್ಥೆಗಳು ಆದಾಯ ತೆರಿಗೆ ಇಲಾಖೆ ಗಮನಕ್ಕೆ ತರಬೇಕು ಎನ್ನುತ್ತದೆ ನಿಯಮ.

ಪಿಪಿಐಗಳಿಗೆ ಪಾವತಿ

ಆರ್​ಬಿಐನಿಂದ ನೀಡಲಾದ ಪಿಪಿಐಗೆ (ಪ್ರೀಪೇಡ್ ಇನ್​ಸ್ಟ್ರುಮೆಂಟ್ಸ್) ಕ್ಯಾಷ್ ಪಾವತಿ ಒಂದು ವರ್ಷದಲ್ಲಿ 10 ಲಕ್ಷ ರೂ ಮೀರಿದರೆ ಅದು ಐಟಿ ಗಮನಕ್ಕೆ ಹೋಗುತ್ತದೆ.

ಕ್ಯಾಷ್ ಡೆಪಾಸಿಟ್

ಒಬ್ಬ ವ್ಯಕ್ತಿಯ ಒಂದು ಅಥವಾ ಹೆಚ್ಚಿನ ಚಾಲ್ತಿ ಖಾತೆಗಳಿಗೆ (ಕರೆಂಟ್ ಅಕೌಂಟ್) ಒಂದು ಹಣಕಾಸು ವರ್ಷದಲ್ಲಿ ಒಟ್ಟಾರೆ 50 ಲಕ್ಷ ರೂಗೂ ಹೆಚ್ಚಿನ ಕ್ಯಾಷ್ ಡೆಪಾಸಿಟ್ ಆದರೆ…

ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ಕ್ಯಾಷ್ ವಿತ್​ಡ್ರಾಯಲ್

ಒಬ್ಬ ವ್ಯಕ್ತಿಯ ಕರೆಂಟ್ ಅಕೌಂಟ್​ಗಳಿಂದ ವರ್ಷದಲ್ಲಿ ಒಟ್ಟು 50 ಲಕ್ಷಕ್ಕೂ ಅಧಿಕ ಮೊತ್ತದ ಕ್ಯಾಷ್ ಅನ್ನು ವಿತ್​ಡ್ರಾ ಮಾಡಿದಾಗ…

ಸೇವಿಂಗ್ ಅಕೌಂಟ್​ಗಳಿಗೆ ಕ್ಯಾಷ್ ಡೆಪಾಸಿಟ್

ಕರೆಂಟ್ ಅಕೌಂಟ್ ಅಲ್ಲದ ಮತ್ತು ಫಿಕ್ಸೆಡ್ ಡೆಪಾಸಿಟ್ ಹೊರತುಪಡಿಸಿ, ಇತರ ಅಕೌಂಟ್​ಗಳಿಗೆ ಒಂದು ವರ್ಷದಲ್ಲಿ ಇಡಲಾದ ಕ್ಯಾಷ್ ಡೆಪಾಸಿಟ್ 10 ಲಕ್ಷ ರೂ ಮೀರಿದಾಗ ಅದನ್ನು ಐಟಿ ಗಮನಕ್ಕೆ ತರಲಾಗುತ್ತದೆ.

ಕ್ಯಾಷ್ ಪೇಮೆಂಟ್ ಮಿತಿ

ಸರಕು ಮತ್ತು ಸೇವೆಗಳ ಮಾರಾಟದಲ್ಲಿ ಒಂದು ವಹಿವಾಟಿನಲ್ಲಿ 2 ಲಕ್ಷ ರೂಗಿಂತ ಅಧಿಕ ಕ್ಯಾಷ್ ಪೇಮೆಂಟ್ ಬಂದಾಗ ಅದು ಐಟಿ ಗಮನಕ್ಕೆ ಹೋಗಬಹುದು.

ಕ್ರೆಡಿಟ್ ಕಾರ್ಡ್​ಗೆ ಕ್ಯಾಷ್ ಪೇಮೆಂಟ್

ಕ್ರೆಡಿಟ್ ಕಾರ್ಡ್​ಗಳಿಗೆ ಒಂದು ವರ್ಷದಲ್ಲಿ ಒಂದು ಲಕ್ಷ ರೂಗಿಂತ ಅಧಿಕ ಪಾವತಿಯನ್ನು ಕ್ಯಾಷ್​ನಲ್ಲಿ ಮಾಡಿದಾಗ…

ಕ್ರೆಡಿಟ್ ಕಾರ್ಡ್​ಗೆ ಇತರ ಪೇಮೆಂಟ್

ಕ್ರೆಡಿಟ್ ಕಾರ್ಡ್​ಗೆ ಕ್ಯಾಷ್ ಹೊರತುಪಡಿಸಿ ಇತರ ಮಾರ್ಗಗಳಲ್ಲಿ ಪೇಮೆಂಟ್ ಮಾಡಿದಾಗ ಅದು ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಅಧಿಕ ಇದ್ದಾಗ, ಐಟಿ ಗಮನಕ್ಕೆ ಹೋಗುತ್ತದೆ.

ನಿಶ್ಚಿತ ಠೇವಣಿ

ಟೈಮ್ ಡೆಪಾಸಿಟ್ ಅಥವಾ ಫಿಕ್ಸೆಡ್ ಡೆಪಾಸಿಟ್​ಗಳಿಗೆ ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚಿನ ಮೊತ್ತ ಹಾಕಿದಾಗ…

ಬಾಂಡ್ ಅಥವಾ ಡಿಬಂಚರ್

ಬಾಂಡ್ ಅಥವಾ ಡಿಬಂಚರ್​ಗಳ ಖರೀದಿಗೆ ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚು ಹಣ ವ್ಯಯಿಸಿದಾಗ…

ಷೇರು ಖರೀದಿಗೆ…

ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚಿನ ಮೊತ್ತದ ಷೇರುಗಳನ್ನು ಖರೀದಿಸಿದಾಗ…

ಷೇರು ಮರುಖರೀದಿ…

ಓಪನ್ ಮಾರ್ಕೆಟ್ ಖರೀದಿ ಹೊರತಾಗಿ, ಷೇರುಗಳ ಮರುಖರೀದಿಗೆ ಒಂದು ವರ್ಷದಲ್ಲಿ 10 ಲಕ್ಷ ರೂ ಮೊತ್ತವಾದಾಗ…

ಮ್ಯೂಚುವಲ್ ಫಂಡ್ ಖರೀದಿ

ಒಂದು ವರ್ಷದಲ್ಲಿ 10 ಲಕ್ಷ ರೂಗಿಂತ ಹೆಚ್ಚಿನ ಮೊತ್ತದ ಮ್ಯೂಚುವಲ್ ಫಂಡ್ ಯುನಿಟ್​​ಗಳನ್ನು ಖರೀದಿಸಿದಾಗ…

ಇದನ್ನೂ ಓದಿ: Money Secrets: ಹಣಕಾಸು ಸಂಕಷ್ಟ ಬರಬಾರದೆಂದಿದ್ದರೆ ಈ ಮನಿ ಸೀಕ್ರೆಟ್ಸ್ ತಿಳಿದಿರಿ…

ಸ್ಥಿರಾಸ್ತಿಯ ಖರೀದಿ ಅಥವಾ ಮಾರಾಟ

ನಿವೇಶನ, ಮನೆ ಇತ್ಯಾದಿ ಚಿರಾಸ್ತಿಯ ವಹಿವಾಟು ಮೌಲ್ಯ ಅಥವಾ ಸ್ಟ್ಯಾಂಪ್ ವ್ಯಾಲ್ಯುಯೇಶನ್ 30 ಲಕ್ಷ ರೂಗಿಂತ ಹೆಚ್ಚಿದ್ದಾಗ…

ಫಾರೆಕ್ಸ್ ವಹಿವಾಟು

ವಿದೇಶೀ ಕರೆನ್ಸಿಯ ಮಾರಾಟ ಅಥವಾ ಫಾರೆಕ್ಸ್ ಕಾರ್ಡ್ ಕ್ರೆಡಿಟ್ ಒಂದು ವರ್ಷದಲ್ಲಿ 10 ಲಕ್ಷ ರೂ ಮೀರಿದಾಗ…

ವಿದೇಶೀ ಕರೆನ್ಸಿ ಖರೀದಿ…

ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್, ಟ್ರಾವೆಲರ್ಸ್ ಚೆಕ್, ಡ್ರಾಫ್ಟ್ ಅಥವಾ ಇನ್ಯಾವುದೇ ಇನ್ಸ್​ಟ್ರುಮೆಂಟ್ ಮೂಲಕ ವಿದೇಶೀ ಕರೆನ್ಸಿ ಖರೀದಿಗೆ ಮಾಡುವ ವೆಚ್ಚ ಒಂದು ವರ್ಷದಲ್ಲಿ 10 ಲಕ್ಷ ರೂ ಮೀರಿದಾಗ…

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಶ್…‌ ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಶೇರ್‌ ಮಾಡಬೇಡಿ – Kannada News | Chanakya Niti: Chanakya says that these personal secrets should not be shared with anyone

ಉತ್ತಮ ಜೀವನ ನಡೆಸಬೇಕೆಂಬುದು ಪ್ರತಿಯೊಬ್ಬರ ಆಸೆ. ಆದರೆ ಅದಕ್ಕೆ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಮುಖ್ಯವಾಗಿ ಒಳ್ಳೆಯ, ಯಶಸ್ವಿ ಜೀವನ ನಡೆಸಬೇಕು ಎಂದಾದರೆ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದಿದ್ದಾರೆ. ಏಕೆಂದರೆ ಈ ರೀತಿ ಎಲ್ಲಾ ರಹಸ್ಯಗಳನ್ನು ಇತರರ ಬಳಿ ಹಂಚಿಕೊಂಡಾಗ ತೊಂದರೆಗಳಾಗುವುದೇ ಹೆಚ್ಚು. ಹಾಗಿದ್ರೆ ಯಾವ ವೈಯಕ್ತಿಕ ವಿಚಾರಗಳನ್ನು ರಹಸ್ಯವಾಗಿಡುವುದೇ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ.

ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ:

ಸಂಪತ್ತು ಮತ್ತು ಆದಾಯ: ಒಬ್ಬ ವ್ಯಕ್ತಿಯು ತನ್ನ ಗಳಿಕೆ, ಉಳಿತಾಯ, ಹೂಡಿಕೆಗಳು ಅಥವಾ ಆಸ್ತಿಗಳ ಬಗ್ಗೆ ಇತರರೊಂದಿಗೆ ಬಹಿರಂಗವಾಗಿ ಹಂಚಿಕೊಳ್ಳುವುದನ್ನು ತಪ್ಪಿಸಬೇಕು. ಇದು ಇನ್ನೊಬ್ಬರಿಗೆ ನಿಮ್ಮ ಮೇಲೆ ಅಸೂಯೆ ಭಾವನೆ ಮಾತ್ರವಲ್ಲ, ನಿಮ್ಮ ಮೇಲೆ ಬೆದರಿಕೆಯನ್ನೂ ಒಡ್ಡುತ್ತದೆ ಎನ್ನುತ್ತಾರೆ ಚಾಣಕ್ಯ. ಭದ್ರತೆಯ ದೃಷ್ಟಿಯಿಂದ ಸಂಪತ್ತನ್ನು ರಹಸ್ಯವಾಗಿಡುವುದು ಒಳ್ಳೆಯದು.

ನಿಮ್ಮ ದೌರ್ಬಲ್ಯಗಳು: ತಮ್ಮ ನ್ಯೂನತೆಗಳನ್ನು ಬಹಿರಂಗವಾಗಿ ಬಹಿರಂಗಪಡಿಸುವ ವ್ಯಕ್ತಿಯೇ ಹೆಚ್ಚಾಗಿ ಶತ್ರುಗಳ ದಾಳಕ್ಕೆ ಮೊದಲ ಗುರಿಯಾಗುತ್ತಾನೆ. ಶತ್ರು ಮೊದಲು ದೌರ್ಬಲ್ಯಗಳನ್ನು ಹುಡುಕುತ್ತಾನೆ ಎಂದು ಚಾಣಕ್ಯ ಹೇಳುತ್ತಾನೆ, ಆದ್ದರಿಂದ ನಿಮ್ಮ ದೌರ್ಬಲ್ಯಗಳನ್ನು ನಿಮ್ಮಲ್ಲಿಯೇ ಇಟ್ಟುಕೊಳ್ಳುವುದು ಉತ್ತಮ.

ಭವಿಷ್ಯದ ಯೋಜನೆಗಳು: ನಿಮ್ಮ ದೀರ್ಘಾವಧಿಯ ಯೋಜನೆಗಳನ್ನು  ಇತರರೊಂದಿಗೆ ಹಂಚಿಕೊಳ್ಳುವುದು ದೊಡ್ಡ ತಪ್ಪು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಗುರಿಯನ್ನು ಸಾಧಿಸುವ ಮೊದಲು ಅವುಗಳನ್ನು ಬಹಿರಂಗಪಡಿಸುವುದು ಅಡ್ಡಿಗಳಿಗೆ ಕಾರಣವಾಗಬಹುದು. ಆದ್ದರಿಂದ, ನಿಮ್ಮ ಯೋಜನೆಗಳನ್ನು ರಹಸ್ಯವಾಗಿಡುವುದು ಉತ್ತಮ.

ಕುಟುಂಬ ವಿವಾದಗಳು ಮತ್ತು ಸಂಘರ್ಷಗಳು: ಕುಟುಂಬದೊಳಗಿನ ವಿವಾದಗಳು, ಸಂಘರ್ಷಗಳ ಕುರಿತು ಇತರರೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ. ಇದರಿಂದ ಸಮಸ್ಯೆಗಳು ಇನ್ನಷ್ಟು ಹದಗೆಡುತ್ತದೆ. ಹೊರಗಿನವರು ಇದರ ಲಾಭವನ್ನು ಪಡೆಯುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕುಟುಂಬದ ಗಲಾಟೆಗಳನ್ನು ಯಾರೊಂದಿಗೂ ಹಂಚಿಕೊಳ್ಳದಿರುವುದು ಉತ್ತಮ.

ಇದನ್ನೂ ಓದಿ: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು

ವೈಫಲ್ಯಗಳು: ನಿಮ್ಮ ವೈಫಲ್ಯಗಳ ಬಗ್ಗೆ ಇತರರ ಬಳಿ ಯಾವುದೇ ಕಾರಣಕ್ಕೂ ಶೇರ್‌ ಮಾಡಬೇಡಿ. ಇದು ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ. ವೈಫಲ್ಯದಿಂದ ಜೀವನ ಪಾಠವನ್ನು ಕಲಿಯಿರಿ, ಆದರೆ ಆ ವೈಫಲ್ಯಗಳ ಬಗ್ಗೆ ಎಲ್ಲರೊಂದಿಗೆ ಹಂಚಿಕೊಂಡು ಬರಬೇಡಿ, ಇದರಿಂದ ನಿಮಗೆಯೇ ಹಾನಿ ಎಂದಿದ್ದಾರೆ ಆಚಾರ್ಯ ಚಾಣಕ್ಯ.

ಆರ್ಥಿಕ ನಷ್ಟ: ನಿಮಗಾದ ಆರ್ಥಿಕ ನಷ್ಟದ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ರೀತಿ ಹೇಳುವುದರಿಂದ ಕಷ್ಟದ ಸಮಯದಲ್ಲಿ ನಿಮಗೆ ಯಾರೂ ಸಹಾಯ ಮಾಡುವುದಿಲ್ಲ, ಬದಲಾಗಿ ನಿಮ್ಮಿಂದ ದೂರ ಉಳಿಯುವುದೇ ಉತ್ತಮ ಎಂದು ಭಾವಿಸುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು – Kannada News | Over 200 passengers stuck on IndiGo Wait Inside Flight at Chennai airport for 5 hours

ಚೆನ್ನೈ, ಫೆಬ್ರವರಿ 25: ಇಂಡಿಗೋ ವಿಮಾನವು ಚೆನ್ನೈನಿಂದ ಸಿಂಗಾಪುರಕ್ಕೆ ಹೊರಡುವ ಮೊದಲು 200ಕ್ಕೂ ಹೆಚ್ಚು ಪ್ರಯಾಣಿಕರು ಇಂಡಿಗೋ (IndiGo) ವಿಮಾನದೊಳಗೆ 5 ಗಂಟೆಗಳ ಕಾಲ ಕಾಯುವಂತಾಯಿತು. ವಿಮಾನ ಹತ್ತಿದ ನಂತರ ಸುಮಾರು 5 ಗಂಟೆಗಳ ಕಾಲ ಅಂದರೆ ಚೆನ್ನೈನಿಂದ ಸಿಂಗಾಪುರ ತಲುಪುವ ಸಮಯಕ್ಕಿಂತ ಹೆಚ್ಚು ಕಾಲ ವಿಮಾನದೊಳಗೆ ಕುಳಿತು ಕಾಯುವಂತಾಯಿತು. ಇದರಿಂದ ಹತಾಶೆಗೊಂಡ ಪ್ರಯಾಣಿಕರು ಅಸಮಾಧಾನ ಹೊರಹಾಕಿದರು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ವಿಮಾನಯಾನ ಸಿಬ್ಬಂದಿಯ ಮೇಲೆ ಕೋಪ ವ್ಯಕ್ತಪಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಇಂಡಿಗೋ ವಿಮಾನಕ್ಕೆ ಬಾಂಬ್​​ ಬೆದರಿಕೆ: ವಿಮಾನದ ಶೌಚಾಲಯದಲ್ಲಿ ಸಿಕ್ತು ಅಚ್ಚರಿಯ ಪತ್ರ

ಈ ಘಟನೆ ನಡೆದ ನಂತರ ಇಂಡಿಗೋ ಸ್ಪಷ್ಟನೆಯನ್ನೂ ನೀಡಿದೆ. ಕ್ಯಾಬಿನ್ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರುವುದನ್ನು ಪೈಲಟ್ ಗಮನಿಸಿ ಎಂಜಿನಿಯರಿಂಗ್ ತಂಡಕ್ಕೆ ಎಚ್ಚರಿಕೆ ನೀಡಿದ್ದರಿಂದ ವಿಳಂಬ ಸಂಭವಿಸಿದೆ ಎಂದು ಇಂಡಿಗೋ ವಿವರಿಸಿದೆ. ಈ ವೇಳೆ ಕಾಕ್‌ಪಿಟ್ ಸಿಬ್ಬಂದಿ ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೆಷನ್‌ಗಳನ್ನು (ಎಫ್‌ಡಿಟಿಎಲ್) ಮೀರಿದ್ದರು. ಹೀಗಾಗಿ, ಬದಲಿ ಸಿಬ್ಬಂದಿಯ ವ್ಯವಸ್ಥೆ ಮಾಡಬೇಕಿತ್ತು. ಇದು ವಿಮಾನ ಹಾರಾಟದ ಮತ್ತಷ್ಟು ವಿಳಂಬಕ್ಕೆ ಕಾರಣವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:25 pm, Wed, 25 February 26

Source link

ಕೊರೊನಾ ಬಳಿಕ ಮೊದಲ ಬಾರಿಗೆ ರೇಷ್ಮೆ ಗೂಡಿಗೆ ಬಂಗಾರದ ಬೆಲೆ: ದಾಖಲೆ ದರಕ್ಕೆ ರೈತರು ಫುಲ್ ಖುಷ್ – Kannada News | Kolar: Record Silk Cocoon Prices; Farmers Get Boost Amidst Production Challenges

ಕೋಲಾರ, ಫೆಬ್ರವರಿ 25: ಕೋಲಾರ ಸಿಲ್ಕ್ ಮತ್ತು ಮಿಲ್ಕ್​ ಉತ್ಪಾದನೆಯಲ್ಲಿ ಹೆಸರುವಾಸಿಯಾದ ಜಿಲ್ಲೆ. ಅಪರೂಪಕ್ಕೆ ಒಮ್ಮೆ ಸಿಲ್ಕ್ (Silk) ಉತ್ಪಾದನೆ ಮಾಡುವ ರೈತರ ಮುಖದಲ್ಲಿ ಸಂತಸ ಮೂಡುವಂತ ಬೆಲೆ ರೈತರಿಗೆ ಸಿಗುತ್ತಿದೆ. ಕೊರೊನಾ ನಂತರದ ದಿನಗಳಲ್ಲಿ ಇದೇ ಮೊದಲ ಬಾರಿಗೆ ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿದೆ. ಕೆಜಿಗೆ ಸಾವಿರಾರು ರೂ ಮಾರಾಟ ಹಿನ್ನೆಲೆ ರೇಷ್ಮೆ ಬೆಳೆಗಾರರು ಸಂತಸಗೊಂಡಿದ್ದಾರೆ.

800 ರಿಂದ 1000 ರೂ

ಕಳೆದ ಎರಡು ಮೂರು ದಿನಗಳಿಂದ ಕೋಲಾರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರ ಮುಖದಲ್ಲಿ ನಗು ದುಪ್ಪಟ್ಟಾಗಿದೆ. ಅದಕ್ಕೆ ಕಾರಣ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೇಷ್ಮೆಗೆ ಉತ್ತಮ ಬೆಲೆ ಸಿಗುತ್ತಿದೆ. ಕೆಜಿ ಬಯೋಲ್ಟಿನ್​ ರೇಷ್ಮೆ 800 ರಿಂದ 1000 ರೂಪಾಯಿ ವರೆಗೆ ಮಾರಾಟವಾಗುತ್ತಿದೆ. ಹೀಗಾಗಿ ಕಷ್ಟಪಟ್ಟು ಬೆಳೆದ ರೇಷ್ಮೆ ಬೆಳೆಗಾರರ ಮುಖದಲ್ಲಿ ಸಂತೋಷ ಹಿಮ್ಮಡಿಯಾಗುತ್ತಿದೆ.

ಇದನ್ನೂ ಓದಿ: ದೇಶ-ವಿದೇಶಗಳಿಗೆ ಹಣ್ಣು, ತರಕಾರಿ, ಹೂವು ರಫ್ತು ಮಾಡುವ ‘ಕೃಷಿ ಕಣಜ’ ಕೋಲಾರಕ್ಕೆ ದೊಡ್ಡ ಸಂಕಷ್ಟ

ಕೊರೊನೊ ಕಾಲದಲ್ಲಿ ಚೀನಾ ರೇಷ್ಮೆಯ ಆಮದು ನಿಲ್ಲಿಸಿದ್ದ ಸಮಯದಲ್ಲಿ ರೇಷ್ಮೆಗೆ ಈ ರೀತಿಯ ಬೆಲೆ ಬಂದಿತ್ತು. ಅದಾದ ನಂತರ ಇಷ್ಟು ಬೆಲೆ ಬಂದಿರುವುದು ರೇಷ್ಮೆ ಬೆಳೆಗಾರರಲ್ಲಿ ಸಂತೋಷಕ್ಕೆ ಕಾರಣವಾಗಿದೆ. ಆದರೆ ರೇಷ್ಮೆ ಬೆಲೆ ಏರಿಕೆಯಾಗಲು ಕಾರಣ ವಾತಾವರಣದಲ್ಲಿನ ಏರುಪೇರು. ಹಿಪ್ಪುನೇರಳೆ ಬೆಳೆ ಗುಣಮಟ್ಟ ಕುಸಿತ ಹಾಗೂ ರೇಷ್ಮೆ ಗೂಡು ಉತ್ಪಾದನೆಯಲ್ಲೂ ತೀವ್ರ ಕುಸಿತ ಕಂಡಿದ್ದು, ಮಾರುಕಟ್ಟೆಯಲ್ಲಿ ಬಯೋಲ್ಟಿನ್ ರೇಷ್ಮೆಗೆ ಬೇಡಿಕೆ ಹೆಚ್ಚಿರುವ ಕಾರಣದಿಂದ ರೇಷ್ಮೆ ನೂಲು ತೆಗೆಯುವ ರೀಲರ್ಸ್ ಹೆಚ್ಚಿನ ಬೆಲೆ ಕೊಟ್ಟು ರೇಷ್ಮೆ ಗೂಡು ಖರೀದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ರೇಷ್ಮೆಗೆ ಉತ್ತಮ ಬೆಲೆ ಸಿಗುತ್ತಿದೆ. ಹೀಗಾಗಿ ರೇಷ್ಮೆ ಬೆಳೆಗಾರರು ಕೂಡ ಸಂತೋಷಗೊಂಡಿದ್ದಾರೆ.

ಇನ್ನು ಕೋಲಾರ ಜಿಲ್ಲೆಯಲ್ಲಿ ಹಲವು ದಶಕಗಳಿಂದ ರೇಷ್ಮೆ ಬೆಳೆಯನ್ನೇ ನಂಬಿಕೊಂಡು ಸಾವಿರಾರು ಕುಟುಂಬಗಳು ಅವಲಂಬಿತವಾಗಿವೆ. ಜಿಲ್ಲೆಯಲ್ಲಿ ಸುಮಾರು 20,134 ಹೆಕ್ಟೇರ್​ ಪ್ರದೇಶದಲ್ಲಿ ಹಿಪ್ಪುನೇರಳಿ ಅಥವಾ ಮಲ್ಬರಿ ಬೆಳೆ ಬೆಳೆಯಲಾಗುತ್ತಿದ್ದು, 11,500  ಮೆಟ್ರಿಕ್​ ಟನ್​ನಷ್ಟು ರೇಷ್ಮೆ ಉತ್ಪಾದನೆ ಮಾಡಲಾಗುತ್ತದೆ. ಇನ್ನು ಜಿಲ್ಲೆಯಲ್ಲಿ ಸುಮಾರು 1477 ಗ್ರಾಮಗಳ 19,739 ಜನ ರೈತರು ರೇಷ್ಮೆ ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೂಲಿಕಾರರ ಸಮಸ್ಯೆ, ವಾತಾವರಣದಲ್ಲಿನ ಏರುಪೇರಿನ ಪರಿಣಾಮವಾಗಿ ರೇಷ್ಮೆ ಬೆಳೆಗಾರರ ಸಂಖ್ಯೆ ಕ್ಷೀಣಿಸುತ್ತಿದೆ.

ರೇಷ್ಮೆ ಮಾರುಕಟ್ಟೆ ಉಪನಿರ್ದೇಶಕ ಶ್ರೀನಿವಾಸ್ ಹೇಳಿದ್ದಿಷ್ಟು

ಮೊದಲೆಲ್ಲಾ ಒಂದು ಟನ್ ರೇಷ್ಮೆ​ ಉತ್ಪಾದನೆ ಮಾಡುತ್ತಿದ್ದ ರೈತರು ಈಗ 400 ರಿಂದ 500 ಕೆಜಿ ರೇಷ್ಮೆ ಉತ್ಪಾದನೆ ಮಾಡುವ ಸ್ಥಿತಿಗೆ ತಲುಪಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರೇಷ್ಮೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಉತ್ತಮ ಬೇಡಿಕೆ ಇರುವ ಹಿನ್ನೆಲೆ ಜೊತೆಗೆ ರೇಷ್ಮೆ ಬೆಲೆ ಕೂಡ ಉತ್ತಮ ಬೆಲೆ ಕಾಪಾಡಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ರೇಷ್ಮೆ ಬೆಳೆಯತ್ತ ರೈತರು ಒಲವು ತೋರಿದಲ್ಲಿ ಉತ್ತಮ ಆದಾಯ ಗಳಿಸಬಹುದು ಅನ್ನೋದು ರೇಷ್ಮೆ ಮಾರುಕಟ್ಟೆ ಉಪನಿರ್ದೇಶಕ ಶ್ರೀನಿವಾಸ್ ಮಾತು.

ಲಕ್ಷಾಂತರ ರೂ ಸಂಪಾದನೆ ಮಾಡಲು ಅವಕಾಶವಿದೆ: ಆಂಜನೇಯರೆಡ್ಡಿ

ಕಳೆದ ಕೆಲವು ವರ್ಷಗಳಿಂದ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ರೇಷ್ಮೆಗೆ ಒಳ್ಳೆಯ ಬೆಲೆ ಸಿಗುತ್ತಿದ್ದು, ರೇಷ್ಮೆ ಬೆಳೆಗಾರರು ಲಕ್ಷ ಲಕ್ಷ ಹಣ ಸಂಪಾದನೆ ಮಾಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ರೇಷ್ಮೆ ಇಲಾಖೆಯಿಂದ ರೈತರಿಗೆ ರೇಷ್ಮೆ ಬೆಳೆ ಬೆಳೆಯಲು ಸಹ ಹಲವು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಅನ್ನೋದು ರೇಷ್ಮೆ ಇಲಾಖೆ ಉಪನಿರ್ದೇಶಕ ಆಂಜನೇಯರೆಡ್ಡಿ ಮಾತು.

ಇದನ್ನೂ ಓದಿ: ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ

ಸದ್ಯ ರೇಷ್ಮೆ ಬೆಳೆಗಾರರಿಗೆ ಉತ್ತಮ ಬೆಲೆ ಸಿಕ್ಕಿದ್ದು, ಇತ್ತೀಚೆಗೆ ರೇಷ್ಮೆ ಬೆಳೆಯಿಂದಲೇ ದೂರ ಸರಿಯಬೇಕು ಎಂದುಕೊಂಡಿದ್ದ ರೈತರಿಗೆ ಈ ಬೆಲೆ ಏರಿಕೆ ಹೊಸ ಉತ್ಸಾಹವನ್ನು ತುಂಬಿದೆ. ರೇಷ್ಮೆ ಬೆಳೆಗಾರರಿಗೆ ಪ್ರೇರಣೆ ನೀಡುವಲ್ಲಿ ಈ ಉತ್ತಮ ಬೆಲೆ ಸಹಕಾರಿಯಾಗಿರುವುದರಲ್ಲಿ ಎರಡು ಮಾತಿಲ್ಲ. ರೇಷ್ಮೆ ಇಲಾಖೆ ರೇಷ್ಮೆ ಬೆಳೆಗಾರರಿಗೆ ಬೇಕಾದ ಸಹಕಾರ ನೀಡಬೇಕು ಎನ್ನುವುದು ಬೆಳೆಗಾರರ ಆಗ್ರಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ – Kannada News | Gadag Police Station ASI caught taking Rs 5 thousand bribe by Lokayukta

ಗದಗ, (ಫೆಬ್ರವರಿ 25): ಲೋಕಾಯುಕ್ತ (Lokayukta) ಅಧಿಕಾರಿಗಳ ದಾಳಿ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani) ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ. ಇದರ ಬೆನ್ನಲ್ಲೇ ಇದೀಗ ಗದಗ (Gadag)  ಶಹರ ಠಾಣೆ ASI ಚನ್ನಬಸಪ್ಪ ಇಂಗಳಳ್ಳಿ ಸಹ ಲೋಕಾಯುಕ್ತ ಬಲೆಬಿದ್ದಿದ್ದಾರೆ. ಪಿಟಿಷನ್ ಅರ್ಜಿ ವಿಚಾರಣೆಗೆ ಲಂಚ 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್​​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಗದಗ ಶಹರ ಪೊಲೀಸ್ ಠಾಣೆಯ ಎಎಸ್ಐ ಚೆನ್ನಬಸಪ್ಪ ಇಂಗಳಳ್ಳಿ ಅವರು ಪಿಟಿಷನ್ ಅರ್ಜಿ ವಿಚಾರಣೆಗೆ ಸುಮಾರು ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವೀರೇಶ ಪೂಜಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಈ ದೂರಿನ ಹಿನ್ನೆಲೆ, ಇಂದು (ಫೆಬ್ರವರಿ 25) ಪೊಲೀಸ್ ಠಾಣೆಯಲ್ಲಿ ಹತ್ತು ಸಾವಿರ ಲಂಚ ಪಡೆಯುವಾಗ ರೆಡ್​​ಹ್ಯಾಂಡ್ ಆಗಿ ಲಾಕ್​ ಆಗಿದ್ದಾರೆ. ಲೋಕಾಯುಕ್ತ ಡಿವೈಎಸ್​ಪಿ ವಿಜಯ ಬಿರಾದಾರ ನೇತೃತ್ವದ ತಂಡ ದಾಳಿ ಮಾಡಿದೆ.

ಇದನ್ನೂ ಓದಿ: ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

ಇನ್ನೊಂದೆಡೆ ಚಿಕ್ಕಮಗಳೂರಿನಲ್ಲೂ ಸಹ ಲೋಕಾಯುಕ್ತ ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಪಿಡಿಓ ಬಲೆಗೆ ಬಿದ್ದಿದ್ದಾರೆ. ಸೈಟ್​​ ಒಂದಕ್ಕೆ ಎನ್​​ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ ಹಣ ಸ್ವೀಕರಿಸುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ತಿಮ್ಮಶೆಟ್ಟಿ ಎನ್ನುವರು ಲೋಕಾಯಯಕ್ತ ಪೋಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿ ರೆಡ್​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಮೊನ್ನೆ ಮೊನ್ನೆಯಷ್ಟೇ ಇದೇ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಸುಮಾರು ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್​ ಹ್ಯಾಂಡ್​ ಆಗಿ ಲಾಕ್​ ಆಗಿದ್ದರು. ಈ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ, ಇಂತಹ ಘಟನೆಗಳಿಂದ ಎಚ್ಚರಗೊಳ್ಳದ ಕೆಲ ಲಂಚಬಾಕ ಅಧಿಕಾರಿಗಳು ಜನರಿಂದ ಲಂಚ ಸ್ವೀಕರಿಸುವುದನ್ನು ಮುಂದುವರಿಸಿದ್ದಾರೆ. ಇನ್ನು ಲಂಚಬಾಕ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಹ ಸಮರ ಸಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ – Kannada News | Madras High Court upholds acquittal of Veerappan associates in Dr Rajkumar abduction case

ಕನ್ನಡದ ವರನಟ ಡಾ. ರಾಜ್‌ಕುಮಾರ್ (Dr Rajkumar) ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ (Veerappan) ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ (ಫೆಬ್ರವರಿ 26) ವಜಾಗೊಳಿಸಿದೆ. ಇದರೊಂದಿಗೆ, 2018ರಲ್ಲಿ ಗೋಪಿಶೆಟ್ಟಿಪಾಳ್ಯದ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ (Madras High Court) ಎತ್ತಿಹಿಡಿದಂತಾಗಿದೆ. ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಮತ್ತು ಎಂ. ಜ್ಯೋತಿರಾಮನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ.

2000ನೇ ಇಸವಿಯ ಜುಲೈ 30ರಂದು ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ದೊಡ್ಡಗಾಜನೂರಿನಲ್ಲಿ ಇರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ತಂಗಿದ್ದ ಡಾ. ರಾಜ್‌ಕುಮಾರ್ ಅವರನ್ನು ವೀರಪ್ಪನ್ ಮತ್ತು ಆತನ ತಂಡ ಅಪಹರಿಸಿತ್ತು. ಸುಮಾರು 108 ದಿನಗಳ ಕಾಲ ಅವರನ್ನು ಅರಣ್ಯದಲ್ಲಿ ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿತ್ತು. ಈ ಘಟನೆಯು ಅಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಈ ಪ್ರಕರಣದಲ್ಲಿ ವೀರಪ್ಪನ್ ಸೇರಿದಂತೆ ಒಟ್ಟು 14 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಆದರೆ, 2004ರಲ್ಲಿ ವೀರಪ್ಪನ್, ಸೇತುಕುಳಿ ಗೋವಿಂದನ್, ಚಂದ್ರಗೌಡ ಮತ್ತು ಸೇತುಮಣಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದರು. ಮತ್ತೊಬ್ಬ ಆರೋಪಿ ರಮೇಶ್ ಎಂಬಾತ ಇದುವರೆಗೂ ಪತ್ತೆಯಾಗಿಲ್ಲ. ಉಳಿದ 9 ಮಂದಿಯಾದ ಗೋವಿಂದರಾಜ್, ಅಂದ್ರಿಲ್, ಪಸುವಣ್ಣ, ಪುಟ್ಟುಸ್ವಾಮಿ, ಕಾಲ್ಮಂದಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಮತ್ತು ನಾಗರಾಜ್ ವಿರುದ್ಧ ಸುದೀರ್ಘ 18 ವರ್ಷಗಳ ಕಾಲ ವಿಚಾರಣೆ ನಡೆದಿತ್ತು.

ಇದನ್ನೂ ಓದಿ: ಯಾರಿಗೂ ತೊಂದರೆ ಮಾಡ್ಬೇಡ, ನಾನೇ ನಿಂಜೊತೆ ಬರ್ತೀನೀ ಅಂತ ವೀರಪ್ಪನ್​ಗೆ ಹೇಳಿದ್ರಂತೆ ರಾಜ್​ಕುಮಾರ್

ಸುಮಾರು 10 ನ್ಯಾಯಮೂರ್ತಿಗಳು ಬದಲಾದ ಈ ಸುದೀರ್ಘ ಕಾನೂನು ಹೋರಾಟವು 2018ರ ಸೆಪ್ಟೆಂಬರ್‌ನಲ್ಲಿ ಅಂತ್ಯಗೊಂಡಿತ್ತು. ಅಂದು ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದ ಒಂಬತ್ತು ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ತೀರ್ಪಿನಿಂದ ಅತೃಪ್ತಗೊಂಡಿದ್ದ ತಮಿಳುನಾಡು ಸರ್ಕಾರ 2019ರಲ್ಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಐದು ವರ್ಷಗಳ ನಂತರ ಹೈಕೋರ್ಟ್ ಮೇಲ್ಮನವಿಯನ್ನು ತಿರಸ್ಕರಿಸುವ ಮೂಲಕ ಕೆಳ ನ್ಯಾಯಾಲಯದ ತೀರ್ಪನ್ನು ಅಂತಿಮಗೊಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕನ್ನಡಿಗನಿಗೆ ಡಿಚ್ಚಿ ಹೊಡೆದಿದ್ದ ಜೆಕೆ ನಾಯಕನಿಗೆ ಭಾರಿ ಮೊತ್ತದ ದಂಡ ವಿಧಿಸಿದ ಬಿಸಿಸಿಐ – Kannada News | Ranji Final Shocker: J&K Captain Paras Dogra Fined for Headbutt on Karnataka Fielder

ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Karnataka vs J&K) ನಡುವೆ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ಒಂದೆಡೆ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ (Ranji Trophy Final) ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು ಎಂಟು ಬಾರಿಯ ರಣಜಿ ಚಾಂಪಿಯನ್ ಕರ್ನಾಟಕದ ವಿರುದ್ಧ ಅತ್ಯದ್ಭುತ ಪ್ರದರ್ಶನ ನೀಡಿದೆ. ಆದರೆ ಈ ಪಂದ್ಯದಲ್ಲಿ ಆಟದ ನಿಯಮದ ವಿರುದ್ಧ ನಡೆದುಕೊಂಡ ಜಮ್ಮು ಮತ್ತು ಕಾಶ್ಮೀರದ ನಾಯಕ ಪರಾಸ್ ಡೋಗ್ರಾ ವಿರುದ್ಧ ಬಿಸಿಸಿಐ ಕಠಿಣ ಕ್ರಮ ತೆಗೆದುಕೊಂಡಿದ್ದು, ಪಂದ್ಯ ಶುಲ್ಕದ ಶೇ. 50 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿದೆ.

ನಿಯಮ ಮುರಿದ ಪರಾಸ್ ಡೋಗ್ರಾ

ವಾಸ್ತವವಾಗಿ ರಣಜಿ ಫೈನಲ್ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಪರಾಸ್ ಡೋಗ್ರಾ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದನ್ನು ಗಮನಿಸಿದ ಅಂಪೈರ್​ಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಮಾತಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಇನ್ನಿಂಗ್ಸ್‌ನ 100 ನೇ ಓವರ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಸಿದ್ಧ್ ಕೃಷ್ಣ ಎಸೆತವನ್ನು ಪರಾಸ್ ಡೋಗ್ರಾ ಗಲ್ಲಿ ದಿಕ್ಕಿನಲ್ಲಿ ಆಡಿದರು. ಅಲ್ಲಿದ್ದ ಫೀಲ್ಡರ್ ಡೈವ್ ಮಾಡಿ ಚೆಂಡನ್ನು ತಡೆಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಹೀಗಾಗಿ ಚೆಂಡು ಬೌಂಡರಿ ಗೆರೆ ದಾಟಿತು. ಈ ನಡುವೆ ಸಿಲ್ಲಿ ಪಾಯಿಂಟ್‌ನಲ್ಲಿ ಫಿಲ್ಡಿಂಗ್ ಮಾಡುತ್ತಿದ್ದ ಕರ್ನಾಟಕದ ಕೆವಿ ಅನೀಶ್ ಹಾಗೂ ಪರಾಸ್ ಡೋಗ್ರಾ ನಡುವೆ ಮಾತಿನ ಚಕಮಕಿ ಪ್ರಾರಂಭವಾಗಿದೆ. ಇದೇ ವೇಳೆ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಕ್ಕಿ ಹೊಡೆದಿದ್ದಾರೆ.

Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ

ಈ ಹಂತದಲ್ಲಿ, ಮಾಯಾಂಕ್ ಅಗರ್ವಾಲ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಆದರೆ, ಸ್ವಲ್ಪ ಸಮಯದವರೆಗೆ ವಾದ ಮುಂದುವರೆಯಿತು. ಕೊನೆಗೆ, ಅಂಪೈರ್‌ಗಳು ಮಧ್ಯಪ್ರವೇಶಿಸಿ ಡೋಗ್ರಾ ಮತ್ತು ಅನೀಶ್ ಅವರನ್ನು ಬೇರ್ಪಡಿಸಿದರು. ನಂತರ, ಪರಾಸ್ ಡೋಗ್ರಾ ಅನೀಶ್ ಕೆವಿ ಅವರ ಬಳಿ ಕ್ಷಮೆಯಾಚಿಸಲು ಪ್ರಯತ್ನಿಸಿದರು. ಆದರೆ ಬದಲಿ ಫೀಲ್ಡರ್ ಅನೀಶ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಆಸಕ್ತಿ ತೋರಲಿಲ್ಲ. ಅಂಪೈರ್ ಪರಿಸ್ಥಿತಿಯನ್ನು ವಿವರಿಸುವ ಮೂಲಕ ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು? – Kannada News | H.D. Deve Gowda Favors Contesting All Upcoming Elections Along with NDA

ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್​ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆ ಮತ್ತು ಯಾವ ಭಾವನೆ ವ್ಯಕ್ತಪಡಿಸುತ್ತಾರೆ ಎಂಬುದರ ಮೇಲೆ ಜೆಡಿಎಸ್ ತನ್ನ ಮುಂದಿನ ಹೆಜ್ಜೆ ಇಡಲಿದೆ. ಸಂಸತ್ ಮತ್ತು ಅಸೆಂಬ್ಲಿ ಚುನಾವಣೆಗಳಲ್ಲಿ ಎನ್​ಡಿಎ ಜೊತೆಗೇ ಹೋಗೋದಾಗಿಯೂ ಅವರು ಈ ವೇಳೆ ತಿಳಿಸಿದ್ದಾರೆ.

ಕೇಂದ್ರ ನಾಯಕರೊಂದಿಗೆ ಚರ್ಚಿಸಲು ಹೆಚ್.ಡಿ.ಕುಮಾರಸ್ವಾಮಿಯವರು ದೆಹಲಿಗೆ ತೆರಳಿದ್ದಾರೆ. ಅವರು ವಾಪಸ್ ಬಂದ ನಂತರ ನಿಖಿಲ್ ಕುಮಾರಸ್ವಾಮಿ, ತಿಪ್ಪೇಸ್ವಾಮಿ, ಬಾಬು ಹಾಗೂ ಇತರ ನಾಯಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವೇಗೌಡರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Is Walking After Eating Good or Bad?

ಅನೇಕರು ಊಟ ಮಾಡಿದ ತಕ್ಷಣ ವಾಕಿಂಗ್ ಮಾಡಲು ಹೋಗುತ್ತಾರೆ. ಇದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆ ಭಾರವಾಗುವುದನ್ನು ತಡೆಯುತ್ತದೆ ಎಂಬುದು ಅವರು ನಂಬಿಕೆಯಾಗಿರುತ್ತದೆ. ಇನ್ನು ಕೆಲವರು ತೂಕವನ್ನು ನಿಯಂತ್ರಿಸಲು, ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಅಥವಾ ಆಲಸ್ಯವನ್ನು ಹೋಗಲಾಡಿಸಲು ಈ ರೀತಿ ಮಾಡುತ್ತಾರೆ. ಆಫೀಸ್ ಅಥವಾ ಮನೆಯಲ್ಲಿ ದೀರ್ಘಕಾಲ ಕುಳಿತು ಕೆಲಸ ಮಾಡುವವರು ಊಟದ ನಂತರ ಸ್ವಲ್ಪ ನಡೆಯುವುದು ಅಗತ್ಯವೆಂದು ಭಾವಿಸುತ್ತಾರೆ. ಗ್ಯಾಸ್, ಆಮ್ಲೀಯತೆ ಅಥವಾ ಮಲಬದ್ಧತೆಯನ್ನು (Constipation) ತಪ್ಪಿಸಲು ಅನೇಕರು ಈ ಅಭ್ಯಾಸವನ್ನು ಅಳವಡಿಸಿಕೊಂಡಿರುತ್ತಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಜೀರ್ಣಕ್ರಿಯೆಯ ಸಾಮರ್ಥ್ಯವಿಭಿನ್ನವಾಗಿರುತ್ತದೆ ಮತ್ತು ದೇಹದ ಅಗತ್ಯತೆಗಳು ಸಹ ಬದಲಾಗಬಹುದು. ಇತ್ತೀಚಿನ ದಿನಗಳಲ್ಲಿ, ಈ ಫಿಟ್ನೆಸ್ ಪ್ರವೃತ್ತಿಗಳಿಂದಾಗಿ, ಜನ ಇಂತಹ ಅಭ್ಯಾಸವನ್ನು ಹೆಚ್ಚೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಆದರೆ ನಿಮಗೆ ತಿಳಿದಿರಲಿ ಸರಿಯಾದ ಮಾಹಿತಿಯಿಲ್ಲದೆ ಯಾವುದೇ ಅಭ್ಯಾಸವನ್ನು ಅಳವಡಿಸಿಕೊಳ್ಳುವುದು ಒಳ್ಳೆಯದಲ್ಲ. ಆದ್ದರಿಂದ, ವಾಕಿಂಗ್ ಮಾಡಲು ಸರಿಯಾದ ಸಮಯ ತಿಳಿದುಕೊಳ್ಳುವುದು ಬಹಳ ಮುಖ್ಯ.

ಊಟ ಮಾಡಿದ ತಕ್ಷಣ ನಡೆಯುವುದು ಸರಿಯೋ ತಪ್ಪೋ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಊಟ ಮಾಡಿದ ತಕ್ಷಣ ಚುರುಕಾದ ನಡಿಗೆ ಸಾಮಾನ್ಯವಾಗಿ ಸೂಕ್ತವಲ್ಲ. ಊಟದ ನಂತರ, ದೇಹದಲ್ಲಿನ ಹೆಚ್ಚಿನ ರಕ್ತದ ಹರಿವು ಸರಿಯಾದ ಜೀರ್ಣಕ್ರಿಯೆಗೆ ಸಹಾಯ ಮಾಡಲು ಜೀರ್ಣಾಂಗ ವ್ಯವಸ್ಥೆಯ ಕಡೆಗೆ ನಿರ್ದೇಶಿಸಲ್ಪಡುತ್ತದೆ. ಅಂತಹ ಸಂದರ್ಭಗಳಲ್ಲಿ, ಊಟ ಮಾಡಿದ ತಕ್ಷಣ ವೇಗವಾಗಿ ನಡೆಯುವುದು ಅಥವಾ ಭಾರೀ ಚಟುವಟಿಕೆಯಲ್ಲಿ ತೊಡಗುವುದು ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಕೆಲವರಿಗೆ ಹೊಟ್ಟೆ ನೋವು, ಭಾರ ಅಥವಾ ಆಮ್ಲೀಯತೆ ಉಂಟಾಗಬಹುದು. ಆದರೆ ಕೆಲವು ನಿಮಿಷ ನಿಧಾನವಾಗಿ ನಡೆಯುವುದು ಹಾನಿಕಾರಕವಲ್ಲ. ಅದರಲ್ಲಿಯೂ ಊಟ ಮಾಡಿದ 10 ರಿಂದ 15 ನಿಮಿಷಗಳ ನಂತರ ಆರಾಮದಾಯಕ ನಿಧಾನ ನಡಿಗೆ ಮಾಡುವುದು ಬಹಳ ಉತ್ತಮ.

ಇದನ್ನೂ ಓದಿ: ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ?

ಎಷ್ಟು ಹೊತ್ತು ನಡೆಯಬೇಕು?

ಊಟದ ನಂತರ 10 ರಿಂದ 20 ನಿಮಿಷಗಳ ಕಾಲ ಲಘು ನಡಿಗೆ ಮಾಡಿ. ತುಂಬಾ ವೇಗವಾಗಿ ಅಥವಾ ದೂರ ನಡೆಯುವ ಅಗತ್ಯವಿಲ್ಲ. ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರದಂತೆ ನಿಧಾನವಾಗಿ ನಡೆಯುವುದು ಉತ್ತಮ. ಊಟ ಭಾರವಾಗಿದ್ದರೆ, ಮೊದಲ 10- 15 ನಿಮಿಷಗಳ ಕಾಲ ವಿಶ್ರಾಂತಿ ಪಡೆಯಿರಿ ಮತ್ತು ನಂತರ ನಿಧಾನಗತಿಯಲ್ಲಿ ನಡೆಯಿರಿ. ನಿಯಮಿತ ಮತ್ತು ಸಮತೋಲಿತ ದೈನಂದಿನ ನಡಿಗೆ ಹೆಚ್ಚು ಪ್ರಯೋಜನಕಾರಿ.

ಊಟದ ನಂತರ ನಡೆಯುವುದರಿಂದಾಗುವ ಪ್ರಯೋಜನಗಳು:

ಸಾಮಾನ್ಯವಾಗಿ ಊಟದ ನಂತರ ಲಘುವಾಗಿ ನಡೆಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಗ್ಯಾಸ್ ಅಥವಾ ಉಬ್ಬುವುದು ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ನಿಧಾನ ವೇಗದಲ್ಲಿ ನಡೆಯುವುದರಿಂದ ದೇಹವು ಸಕ್ರಿಯವಾಗಿರುತ್ತದೆ ಮತ್ತು ಸೋಮಾರಿತನ ಕಡಿಮೆಯಾಗುತ್ತದೆ. ನಿಯಮಿತ ಅಭ್ಯಾಸದಿಂದ, ಇದು ತೂಕವನ್ನು ನಿಯಂತ್ರಿಸಲು ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link