ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು – Kannada News | Maharaja T20 Trophy: Rahul Dravid Praises Vaibhav Sooryavanshi as Unique Talent
ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ (Maharaja T20 Trophy) ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಈಗಾಗಲೇ ಹರಾಜು ಕೂಡ ನಡೆದಿದೆ. ಈ ಲೀಗ್ನಲ್ಲಿ ಭಾಗವಹಿಸುತ್ತಿರುವ ಐದು ಫ್ರಾಂಚೈಸಿಗಳು ಕೂಡ ಬಲಿಷ್ಠ ತಂಡಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ. ಅದರ ಭಾಗವಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಟೂರ್ನಿಯ ಟ್ರೋಫಿ ಅನಾವರಣ ಕಾರ್ಯಕ್ರಮವನ್ನು ಜೂನ್ 11 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ…