ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್ – Kannada News | Finance Minister Nirmala Sitharaman reacts on gold, silver rates hike, us tariff change effect
ನವದೆಹಲಿ, ಫೆಬ್ರುವರಿ 23: ಕಳೆದ ಕೆಲ ತಿಂಗಳಲ್ಲಿ, ಅದರಲ್ಲೂ ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ರಾಕೆಟ್ನಂತೆ ಆಗಸಕ್ಕೆ ಚಿಮ್ಮಿದ್ದು ಜನಸಾಮಾನ್ಯರಿಗೆ ಆತಂಕ ಮೂಡಿಸಿತ್ತು. ಜಾಗತಿಕವಾಗಿ ಚಿನ್ನಕ್ಕೆ ಬಹಳ ಬೇಡಿಕೆ ಬಂದಿದ್ದರಿಂದ ಈ ಅತಿಯಾದ ಬೆಲೆ ಏರಿಕೆ ಆಗಿತ್ತು. ಚಿನ್ನ ಮತ್ತು ಬೆಳ್ಳಿಗೆ ಈ ಪರಿ ಬೇಡಿಕೆ ಬರಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರಣ ಬಿಚ್ಚಿಟ್ಟಿದ್ದಾರೆ. ಆರ್ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ…