ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು – Kannada News | Devanahalli Robbery: 9 Arrested for 24 Lakh Fraud Posing as Fake Anti Corruption Officials
ದೇವನಹಳ್ಳಿ ಪೊಲೀಸ್ ಠಾಣೆImage Credit source: tv9 kannada ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ,…