Category Archives: Blog

Your blog category

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು?

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ ಶಾಖೆಯ ಸಿಬ್ಬಂದಿಯಿಂದ ವಂಚನೆ ನಡೆದಿರುವ ಆರೋಪ ಇದೆ. ಹರ್ಯಾಣ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಸಂಸ್ಥೆಗಳ ಅಕೌಂಟ್​ಗಳಲ್ಲಿ ಅನಧಿಕೃತ ವಹಿವಾಟುಗಳು ನಡೆದಿರುವುದು ಬೆಳಕಿಗೆ ಬಂದಿದೆ. ಸರ್ಕಾರವು ಈ ಅಕೌಂಟ್​ಗಳನ್ನು ಮುಚ್ಚಲು ಹೋದಾಗ ಅಕೌಂಟ್ ಬ್ಯಾಲನ್ಸ್​ನಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಆಗ ಒಟ್ಟು 590 ಕೋಟಿ ರೂ ಹಣಕಾಸು ಅಕ್ರಮ ನಡೆದಿರುವುದು ಗೊತ್ತಾಗಿದೆ. ಈ ಬ್ಯಾಂಕ್​ನ ಮೂರನೇ ಕ್ವಾರ್ಟರ್​ನ ನಿವ್ವಳ ಆದಾಯವೇ 503 ಕೋಟಿ ರೂ ಇದೆ. ಅದಕ್ಕಿಂತಲೂ ಹೆಚ್ಚಿನ ಮೊತ್ತದ ಅಕ್ರಮವನ್ನು ಕೆಲ ಸಿಬ್ಬಂದಿ ಎಸಗಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ

ಸದ್ಯ ಐಡಿಎಫ್​ಸಿ ಬ್ಯಾಂಕ್​ನ ಚಂಡೀಗಡ ಬ್ರ್ಯಾಂಚ್​ನಿಂದ ಅನಧಿಕೃತವಾಗಿ ನಡೆದಿರುವ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ಈ ಹಣವನ್ನು ಫ್ರೀಜ್ ಮಾಡುವಂತೆ ಸಂಬಂಧಿಸಿದ ಎಲ್ಲಾ ಬ್ಯಾಂಕುಗಳಿಗೂ ಮನವಿ ಮಾಡಲಾಗಿದೆ. ಎಷ್ಟು ಸಾಧ್ಯವೋ ಎಷ್ಟು ಹಣ ರಿಕವರ್ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಹರ್ಯಾಣ ಸರ್ಕಾರವು ತನ್ನ ಎಂಪ್ಯಾನಲ್ ಪಟ್ಟಿಯಿಂದ ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಅನ್ನು ತೆಗೆದುಹಾಕಿದೆ. ತನ್ನ ಅಧೀನದ ಇಲಾಖೆಗಳು ಈ ಬ್ಯಾಂಕ್​ನಲ್ಲಿ ಹೊಂದಿರುವ ಅಕೌಂಟ್​ಗಳನ್ನು ಮುಚ್ಚುವಂತೆಯೂ ಸರ್ಕಾರ ತಿಳಿಸಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಈ ಅಕ್ರಮದ ಬಗ್ಗೆ ತನ್ನ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ತಿಳಿಸಿದೆ. ಬ್ಯಾಂಕ್​ನ ಸಿಸ್ಟಂನಲ್ಲಿ ಯಾವುದೇ ಲೋಪ ಇಲ್ಲ. ನಿರ್ದಿಷ್ಟ ಬ್ರ್ಯಾಂಚ್​ನ ಕೆಲ ಸಿಬ್ಬಂದಿ ಹಾಗೂ ನಿರ್ದಿಷ್ಟ ಖಾತೆಗಳಿಗೆ ಮಾತ್ರವೇ ಈ ಅಕ್ರಮ ಸೀಮಿತವಾಗಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಹಾಗೆಯೇ, ಬ್ಯಾಂಕ್ ಆಂತರಿಕ ತನಿಖೆ ನಡೆಸಿದ್ದು, ಅಕ್ರಮ ಎಸಗಿದ ಶಂಕೆಯ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಅಮಾನತಿನಲ್ಲಿ ಇಡಲಾಗಿದೆ. ಬ್ಯಾಂಕ್​ನಿಂದ ಪೊಲೀಸ್ ದೂರು ಕೂಡ ಸಲ್ಲಿಕೆಯಾಗಿದೆ. ಸರ್ಕಾರಿ ಆಡಿಟಿಂಗ್​ಗೆ ಸೂಚಿಸಲಾಗಿದೆ. ಸ್ವತಂತ್ರವಾದ ಫೋರೆನ್ಸಿಕ್ ತನಿಖೆ ನಡೆಸುವಂತೆ ಕೆಪಿಎಂಜಿ ಸಂಸ್ಥೆಗೂ ತಿಳಿಸಲಾಗಿದೆ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ಸರ್ಕಾರದ ಷೇರುಪಾಲು ಅಧಿಕ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ಅತಿಹೆಚ್ಚು ಷೇರುಮಾಲಿಕತ್ವ ಹೊಂದಿರುವುದು ಸರ್ಕಾರವೇ. ಶೇ. 7.75 ಷೇರುಪಾಲು ಹೊಂದಿದೆ. 66 ಕೋಟಿಗೂ ಅಧಿಕ ಷೇರುಗಳನ್ನು ಸರ್ಕಾರ ಹೊಂದಿದೆ. ಎಲ್​ಐಸಿ, ಟಾಟಾ ಎಐಎ ಲೈಫ್ ಇನ್ಷೂರೆನ್ಸ್, ಐಸಿಐಸಿಐ ಪ್ರುಡೆನ್ಷಿಯಲ್ ಲೈಫ್ ಇನ್ಷೂರೆನ್ಸ್, ಎಚ್​ಡಿಎಫ್​ಸಿ ಲೈಫ್ ಇನ್ಷೂರೆನ್ಸ್ ಸಂಸ್ಥೆಗಳು ಗಣನೀಯ ಪ್ರಮಾಣದ ಷೇರುಪಾಲು ಹೊಂದಿವೆ. ರೀಟೇಲ್ ಹೂಡಿಕೆದಾರರ ಬಳಿ 129 ಕೋಟಿಗೂ ಅಧಿಕ ಷೇರುಗಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್! – Kannada News | Power Sharing Rift in Karnataka Congress: Is Another Power Centre Emerging Within the Party in the name of Satish Jarkiholi

ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!Image Credit source: tv9

ಬೆಂಗಳೂರು, ಫೆಬ್ರವರಿ 23: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಪವರ್ ಸೆಂಟರ್‌ ರೂಪುಗೊಳ್ಳುತ್ತಿದೆಯಾ ಎಂಬ ಅನುಮಾನ ಬಲವಾಗಿದೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಂದು ಪವರ್ ಸೆಂಟರ್ ರೂಪದಲ್ಲಿ ಮುನ್ನುಗ್ಗುತ್ತಿರುವ ಲಕ್ಷಣ ಕಾಣಿಸಿದೆ. ಹೈಕಮಾಂಡ್ ಮಟ್ಟದಲ್ಲೂ ಬಲ ಪ್ರದರ್ಶನ ಮಾಡಲು ಸತೀಶ್ ಜಾರಕಿಹೊಳಿ ಮುಂದಾಗಿರುವುದು ಇತ್ತೀಚಿನ ಬೆಳವಣಿಗೆಗಳಿಂದ ಸ್ಪಷ್ಟವಾಗಿದೆ.

ಅಂತಾರಾಜ್ಯ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಸಜ್ಜು

ಆಪ್ತ ಶಾಸಕರು ಹಾಗೂ ಆಪ್ತ ಡಿಸಿಸಿ ಅಧ್ಯಕ್ಷರೊಂದಿಗೆ ದೆಹಲಿಗೆ ಎರಡು ಬಾರಿ ಭೇಟಿ ನೀಡಿರುವ ಅವರು, ಬಜೆಟ್ ಅಧಿವೇಶನದ ಆಸುಪಾಸಿನಲ್ಲಿ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ. ಇದಲ್ಲದೆ, ಮತ್ತೊಂದು ಸುತ್ತಿನ ಅಂತಾರಾಜ್ಯ ಪ್ರವಾಸಕ್ಕೂ ಬೆಂಬಲಿಗರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಈ ಪ್ರವಾಸಗಳ ಮೂಲಕ ಪರ್ಯಾಯ ನಾಯಕತ್ವದ ಸಂದೇಶ ರವಾನಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಕೇಳಿಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ಕಣ್ಣು

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರದಲ್ಲೂ ಸತೀಶ್ ಪ್ರಯತ್ನ ಆರಂಭಿಸಿರುವುದು ಕುತೂಹಲ ಹೆಚ್ಚಿಸಿದೆ. ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಲಿರುವ ಹಿನ್ನೆಲೆ, ರಾಜ್ಯ ರಾಜಕೀಯದಲ್ಲಿ ಸಹಜವಾಗಿ ಚುನಾವಣಾ ವಾತಾವರಣ ರೂಪುಗೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪರ್ಯಾಯ ನಾಯಕತ್ವದ ರೂಪರೇಖೆ ಸಿದ್ಧಪಡಿಸುವ ಯತ್ನವೇ ಈ ಚಟುವಟಿಕೆಗಳ ಹಿಂದೆ ಇದೆ ಎನ್ನಲಾಗುತ್ತಿದೆ.

ಇನ್ನೊಂದೆಡೆ, ನಾಯಕತ್ವ ಬದಲಾವಣೆ ಗೊಂದಲಗಳ ನಡುವೆ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳತ್ತ ಗಮನಹರಿಸಿದ್ದಾರೆ. ಸ್ವಲ್ಪ ವಿರಾಮದ ನಂತರ ಮತ್ತೆ ಮ್ಯಾರಥಾನ್‌ ಬಜೆಟ್ ಸಭೆಗಳನ್ನು ಆರಂಭಿಸಿರುವ ಅವರು, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಆಡಳಿತ ಪಕ್ಷದ ಪರಿಶಿಷ್ಟ ಪಂಗಡ ಶಾಸಕರು ಮತ್ತು ಮುಖಂಡರು, ದಲಿತ ಸಂಘರ್ಷ ಸಮಿತಿಯ ನಾಯಕರು ಹಾಗೂ ಒಬಿಸಿ ಸಚಿವರು ಮತ್ತು ಮುಖಂಡರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!

ಗೃಹ ಕಚೇರಿ ಕೃಷ್ಣದಲ್ಲಿ ನಡೆಯುತ್ತಿರುವ ಈ ಸಭೆಗಳು ಮಾರ್ಚ್ 6ರಂದು ಮಂಡಿಸಲಿರುವ ಐತಿಹಾಸಿಕ ಬಜೆಟ್‌ಗೆ ಪೂರ್ವಭಾವಿ ಸಿದ್ಧತೆ ಎಂದು ತಿಳಿದುಬಂದಿದೆ. ಪಕ್ಷದ ಒಳರಾಜಕೀಯ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಆಡಳಿತ ಕಾರ್ಯಚಟುವಟಿಕೆಗಳತ್ತ ಸಿಎಂ ಗಮನ ಹರಿಸಿರುವುದು ಮತ್ತೊಂದು ರಾಜಕೀಯ ಸಂದೇಶವನ್ನೇ ನೀಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್! – Kannada News | India’s Struggle Against Off Spin in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಫ್ ಸ್ಪಿನ್ನರ್​ಗಳ ವಿರುದ್ಧ ಟೀಮ್ ಇಂಡಿಯಾದ ತಿಣುಕಾಟ ಮುಂದುವರೆದಿದೆ. ಈ ತಿಣುಕಾಟವನ್ನೇ ಇದಿಗ ಎದುರಾಳಿ ತಂಡಗಳು ಅಸ್ತ್ರವಾಗಿ ಪ್ರಯೋಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಮೊದಲ ಓವರ್ ಎಸೆದಿದ್ದು ಐಡೆನ್ ಮಾರ್ಕ್ರಾಮ್. ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಆಗಿರುವ ಮಾರ್ಕ್ರಾಮ್ ಇಶಾನ್ ಕಿಶನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇದಕ್ಕೂ ಮುನ್ನ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಲ್ಮಾನ್ ಅಲಿ ಅಘಾ ಮೊದಲ ಓವರ್ ಎಸೆದಿದ್ದರು. ಅಲ್ಲದೆ ಅಭಿಷೇಕ್ ಶರ್ಮಾ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಸಲ್ಮಾನ್ ಅಲಿ ಅಘಾ ಕೂಡ ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಎಂಬುದು.

ಇನ್ನು ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಮೊದಲ ಓವರ್​ನಲ್ಲೇ ಆರ್ಯನ್ ದತ್ ಔಟ್ ಮಾಡಿದ್ದರು. ಆರ್ಯನ್ ದತ್ ಕೂಡ ಆಫ್ ಸ್ಪಿನ್ನರ್ ಎಂಬುದು ವಿಶೇಷ.

ಆಫ್​ ಸ್ಪಿನ್​ಗೆ ಆಫ್​:

  • ಕಡಿಮೆ ರನ್ ಗತಿ: ಈ ಟೂರ್ನಿಯಲ್ಲಿ ಆಫ್-ಸ್ಪಿನ್ ವಿರುದ್ಧ ಭಾರತದ ಸರಾಸರಿ ರನ್ ಗತಿ ಕೇವಲ 6.23 ರನ್‌ ಮಾತ್ರ. ಅಂದರೆ ಆಫ್ ಸ್ಪಿನ್ನರ್​ಗಳ ಓವರ್​ನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಕೇವಲ 6.23 ರ ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.
  • ವಿಕೆಟ್ ನಷ್ಟ: ಕಳೆದ 5 ಪಂದ್ಯಗಳಲ್ಲಿ ಭಾರತ ಕಳೆದುಕೊಂಡ 41 ವಿಕೆಟ್‌ಗಳಲ್ಲಿ 12 ವಿಕೆಟ್‌ಗಳನ್ನು ಆಫ್-ಸ್ಪಿನ್ನರ್‌ಗಳೇ ಪಡೆದಿದ್ದಾರೆ.
  • ಪಾರ್ಟ್-ಟೈಮ್ ಸ್ಪಿನ್ನರ್: ವಿಶೇಷವೆಂದರೆ, ಐಡೆನ್ ಮಾರ್ಕ್ರಾಮ್ ಮತ್ತು ಸಲ್ಮಾನ್ ಅಲಿ ಅಘಾ ಅವರಂತಹ ಪಾರ್ಟ್-ಟೈಮ್ ಬೌಲರ್‌ಗಳೇ ಭಾರತದ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ದಾಂಡಿಗರ ವೈಫಲ್ಯ:

  • ಎಡಗೈ ಬ್ಯಾಟರ್‌ಗಳ ಸಮಸ್ಯೆ: ಭಾರತದ ಟಾಪ್ ಆರ್ಡರ್‌ನಲ್ಲಿರುವ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಅವರಂತಹ ಎಡಗೈ ಬ್ಯಾಟರ್‌ಗಳನ್ನು ಗುರಿಯಾಗಿಸಿ ಎದುರಾಳಿ ತಂಡಗಳು ಆಫ್-ಸ್ಪಿನ್ನರ್‌ಗಳನ್ನು ಬಳಸುತ್ತಿವೆ.
  • ಅಭಿಷೇಕ್ ಶರ್ಮಾ: ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಆಫ್-ಸ್ಪಿನ್ ವಿರುದ್ಧ ರನ್ ಗಳಿಸಲು ಪರದಾಡುತ್ತಿದ್ದು, ಸತತ ವೈಫಲ್ಯ ಅನುಭವಿಸಿದ್ದಾರೆ.
  • ಇಶಾನ್ ಕಿಶನ್: ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಮೊದಲ ಓವರ್‌ನಲ್ಲೇ ಆಫ್-ಸ್ಪಿನ್ನರ್ ಮಾರ್ಕ್ರಾಮ್‌ಗೆ ವಿಕೆಟ್ ಒಪ್ಪಿಸಿದ್ದರು.
  • ಸೂರ್ಯಕುಮಾರ್ ಯಾದವ್: ಸಾಮಾನ್ಯವಾಗಿ ವೇಗವಾಗಿ ಆಡುವ ಸೂರ್ಯ ಕೂಡ ಆಫ್-ಸ್ಪಿನ್ನರ್‌ಗಳ ವಿರುದ್ಧ 27 ಎಸೆತಗಳಲ್ಲಿ ಕೇವಲ 28 ರನ್ ಗಳಿಸಿ ತಿಣುಕಾಡಿದ್ದಾರೆ.

ಬದಲಾವಣೆ ಸಾಧ್ಯತೆ:

ಟೀಮ್ ಇಂಡಿಯಾದ ಟಾಪ್-3 ಬ್ಯಾಟರ್​ಗಳು, ಅಂದರೆ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಆಫ್ ಸ್ಪಿನ್ ಎಸೆತಗಳಲ್ಲಿ ವಿಕೆಟ್ ಒಪ್ಪಿಸುತ್ತಿದ್ದಾರೆ. ಇಲ್ಲಾ ರನ್​ಗಳಿಸಲು ಪರದಾಡುತ್ತಿದ್ದಾರೆ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಪಂದ್ಯಕ್ಕಾಗಿ ಟಾಪ್-3 ನಲ್ಲಿ ಬದಲಾವಣೆ ಕಂಡು ಬರಲಿದೆ.

ಅಂದರೆ ಈ ಮೂವರು ಎಡಗೈ ದಾಂಡಿಗರಲ್ಲಿ ಒಬ್ಬರನ್ನು ಕೈ ಬಿಟ್ಟು ಅವರ ಬದಲಿಗೆ ಬಲಗೈ ದಾಂಡಿಗನನ್ನು ಕಣಕ್ಕಿಳಿಸಬಹುದು. ಅದರಂತೆ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ!

ನಿರ್ಣಾಯಕ ಪಂದ್ಯ:

ಸೂಪರ್-8 ಸುತ್ತಿನಲ್ಲಿ ಭಾರತ ತಂಡಕ್ಕೆ ಉಳಿದಿರುವುದು ಕೇವಲ 2 ಮ್ಯಾಚ್ ಮಾತ್ರ. ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಭಾರತ ತಂಡವು ಸೆಮಿಫೈನಲ್​ಗೆ ಪ್ರವೇಶಿಸಬೇಕಿದ್ದರೆ ಮುಂದಿನ ಎರಡು ಮ್ಯಾಚ್​ಗಳಲ್ಲೂ ಜಯ ಸಾಧಿಸಬೇಕು. ಅದಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ ಆಫ್ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

Source link

Video: ರಸ್ತೆ ಬದಿ ತಾವು ಕಸ ಎಸೆದ್ರೆ ದಂಡ ಬೀಳುತ್ತೆ ಎಂದು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ – Kannada News | CCTV Footage Shows Man Using Dog to Dispose of Trash Illegally in Italy

ಇಟಲಿ, ಫೆಬ್ರವರಿ 23: ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್​ಬಿನ್ ಒಳಗೆ ಕಸ ಹಾಕುವುದಕ್ಕಲ್ಲ ಬದಲಾಗಿ ರಸ್ತೆ ಪಕ್ಕದಲ್ಲೇ ಎಸೆಯುವುದಕ್ಕೆ. ಕ್ಯಾಟಾನಿಯಾದಲ್ಲಿ, ಕ್ಯಾಮೆರಾ ದಂಡದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ನಾಯಿಗೆ ಕಸ ಎಸೆಯಲು ತರಬೇತಿ ನೀಡಿದ್ದ. ಆ ನಾಯಿ ರಸ್ತೆಬದಿಯಲ್ಲಿ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಮತ್ತು ಅಧಿಕಾರಿಗಳು ಅಂತಿಮವಾಗಿ ಮಾಲೀಕರನ್ನು ಗುರುತಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪ್ರಯಾಣಿಕರಿಗೆ ನಿರಾಸೆ ಮಾಡುತ್ತಾ ಬೆಂಗಳೂರು – ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್? ಪ್ರಯಾಣದ ಸಮಯದ ಬಗ್ಗೆ ಚರ್ಚೆ – Kannada News | Vande Bharat Bengaluru Goa: Experts Demand Shorter Travel and Sleeper Coaches for New Route

ಬೆಂಗಳೂರು, ಫೆ.23: ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ (Vande Bharat Bengaluru Goa) ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಈ ರೈಲಿನ ಅಂದಾಜು ಪ್ರಯಾಣದ ಸಮಯ ಮತ್ತು ವೇಳಾಪಟ್ಟಿಯ ಬಗ್ಗೆ ಈಗ ಭಾರಿ ಚರ್ಚೆ ಶುರುವಾಗಿದೆ. ವಂದೇ ಭಾರತ್ ರೈಲು ಬೆಂಗಳೂರಿನಿಂದ ಗೋವಾ ತಲುಪಲು ಸುಮಾರು 13 ಗಂಟೆಗಳ ಸಮಯ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದು ಪ್ರೀಮಿಯಂ ರೈಲಿಗೆ ಬಹಳ ದೀರ್ಘ ಸಮಯ ಎಂಬುದು ತಜ್ಞರ ಅಭಿಪ್ರಾಯ. ಜತೆಗೆ ಇದು ಪ್ರಯಾಣಿಕರಿಗೂ ತೊಂದರೆ ಆಗಲಿದೆ.

ಇನ್ನು ರೈಲ್ವೆ ತಜ್ಞ ಸಂಜೀವ್ ದ್ಯಾಮನವರ್ ಅವರ ಪ್ರಕಾರ, ಈ ರೈಲು ಹಗಲು ಹೊತ್ತಿನಲ್ಲಿ ಸಂಚರಿಸಿದರೆ ಪ್ರವಾಸಿಗರು ಇಡೀ ದಿನವನ್ನು ಪ್ರಯಾಣದಲ್ಲೇ ಕಳೆಯಬೇಕಾಗುತ್ತದೆ. ಬೆಳಿಗ್ಗೆ 4 ಗಂಟೆಗೆ ರೈಲು ಬಿಟ್ಟರೆ ಪ್ರವಾಸಿಗರಿಗೆ ತೊಂದರೆಯಾಗಲಿದೆ. ಅದರ ಬದಲು ಸಂಜೆ 6 ಅಥವಾ 7 ಗಂಟೆಗೆ ಹೊರಟು ಬೆಳಿಗ್ಗೆ 7 ಗಂಟೆಗೆ ಗೋವಾ ತಲುಪುವಂತಿದ್ದರೆ ಹೆಚ್ಚು ಅನುಕೂಲಕರ.

ವಂದೇ ಭಾರತ್ ಒಂದು ಪ್ರೀಮಿಯಂ ರೈಲಾದ್ದರಿಂದ ಇದರ ಟಿಕೆಟ್ ದರ ಎಲ್ಲರಿಗೂ ಕೈಗೆಟುಕುವಂತಿರಲಿಕ್ಕಿಲ್ಲ. ಅಲ್ಲದೆ, 12-13 ಗಂಟೆಗಳ ಕಾಲ ಕುಳಿತು ಪ್ರಯಾಣಿಸುವುದು ಕಷ್ಟಕರ. ಹೀಗಾಗಿ ಈ ಮಾರ್ಗಕ್ಕೆ ಸ್ಲೀಪರ್ ಕೋಚ್‌ಗಳಿರುವ (Sleeper Configuration) ರೈಲು ಹೆಚ್ಚು ಪ್ರಾಯೋಗಿಕ ಎಂದು ರೈಲ್ವೆ ಹೋರಾಟಗಾರ ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಬೆಂಗಳೂರನ್ನು ಮತ್ತೆ ಶ್ರೇಷ್ಠ ನಗರವನ್ನಾಗಿಸೋಣ”: ಈ ಬದಲಾವಣೆಯಾದರೆ ಸಿಲಿಕಾನ್ ಸಿಟಿ ವಿಶ್ವ ದರ್ಜೆಯ ನಗರ ಆಗುವುದು ಖಂಡಿತ

ಪ್ರಯಾಣದ ಸಮಯವನ್ನು ಕನಿಷ್ಠ 11 ಗಂಟೆಯೊಳಗೆ ತರಬೇಕು ಎಂದು ರೈಲ್ವೆ ತಜ್ಞರು ಒತ್ತಾಯಿಸಿದ್ದಾರೆ. ಪ್ರಸ್ತುತ ಬೆಂಗಳೂರು-ಬೆಳಗಾವಿ ವಂದೇ ಭಾರತ್ 9 ರಿಂದ 10 ಗಂಟೆ ತೆಗೆದುಕೊಳ್ಳುತ್ತಿದ್ದು, ಅದನ್ನು ಲೊಂಡಾ ಮಾರ್ಗವಾಗಿ ಗೋವಾಕ್ಕೆ ವಿಸ್ತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ನೈಋತ್ಯ ರೈಲ್ವೆಯ ಈ ಪ್ರಸ್ತಾವನೆಯು ಈಗ ರೈಲ್ವೆ ಮಂಡಳಿಯ (Railway Board) ಅನುಮೋದನೆಗಾಗಿ ಕಾಯುತ್ತಿದೆ. ಸಾರ್ವಜನಿಕರ ಈ ಆಕ್ಷೇಪಣೆಗಳನ್ನು ಮಂಡಳಿಯು ಪರಿಗಣಿಸುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾಸನ: ಅವೈಜ್ಞಾನಿಕ ಹಂಪ್​​ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ – Kannada News | Hassan Road Safety Crisis: Unscientific Speed Hump Kills Student, Injures Another

ಹಾಸನ/ಚಾಮರಾಜನಗರ, ಫೆಬ್ರವರಿ 23: ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್​​ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸ್ವಾತಿ(24) ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಘಟನೆ, ನಡೆದಿದ್ದು, ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅವೈಜ್ಞಾನಿಕ ಸ್ಪೀಡ್ ಬ್ರೇಕರ್​​ಗಳನ್ನು ಹಾಕಲಾಗಿದ್ದು, ಈ ಬಗ್ಗೆ ಕನಿಷ್ಠ ಸೂಚನಾ ಫಲಕಗಳನ್ನೂ ಹಾಕಿಲ್ಲ. ಈ ರೀತಿಯ ಅವೈಜ್ಞಾನಿಕ ಹಂಪ್​​ಗಳ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಆರೋಪಿಸಿದ್ದಾರೆ. ಹಂಪ್​​ಗಳ ಮೇಲೆ ಬಿಳಿ ಬಣ್ಣದ ಪಟ್ಟಿ ಬಳಿಯಲಾಗಿತ್ತಾದರೂ ಅವು ಈಗ ಅಳಿಸಿಹೋಗಿವೆ. ಹೀಗಾಗಿ ಅವುಗಳಿಗೆ ಮತ್ತೆ ಬಣ್ಣ ಬಳಿಯುವ ಜೊತೆಗೆ ಸೂಚನಾ ಫಲಕಗಳನ್ನು ಅಳವಡಿಸಬೇಕೆಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಇದನ್ನೂ ಓದಿ: ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!

ಟ್ರ್ಯಾಕ್ಟರ್‌ ಪಲ್ಟಿಯಾಗಿ ಚಾಲಕ ಸಾವು

ಮಣ್ಣು ಸಾಗಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸರಗೂರು ಸಮೀಪ ನಡೆದಿದೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ರಾಜೇಶ್(25) ಮೃತ ದುರ್ದೈವಿಯಾಗಿದ್ದು, ಜಮೀನಿನ ಬಳಿಯ ಹಳ್ಳದಿಂದ ರಸ್ತೆಯತ್ತ ಬರುವಾಗ ಅಪಘಾತ ನಡೆದಿದೆ. ಚಾಲಕ ಟ್ರ್ಯಾಕ್ಟರ್‌ ಅಡಿ ಸಿಲುಕಿಕೊಂಡ ಹಿನ್ನೆಲೆ ಸ್ಥಳದಲ್ಲೇ ಕೊನೆಯುಸಿರು ಎಳೆದಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ! – Kannada News | Snehamayi Krishna Audio Bomb Takes Dramatic Turn: Money Trap Angle Emerges Involving Former MUDA Commissioner

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವುImage Credit source: tv9

ಮೈಸೂರು, ಫೆಬ್ರವರಿ 23: ಸ್ನೇಹಮಯಿ ಕೃಷ್ಣ (Snehamayi Krishna) ಆಡಿಯೋ ಬಾಂಬ್ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ರೂಪಿಸಿದ್ದಾರಾ ಎಂಬ ಗಂಭೀರ ಅನುಮಾನಗಳು ಸಿಸಿಬಿ (CCB Police) ತನಿಖೆಯಲ್ಲಿ ಮೂಡಿವೆ. ಬೆಂಗಳೂರು ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್ ಜೊತೆಗಿರುವ ಹಲವು ಫೋಟೋಗಳನ್ನು ಪತ್ತೆ ಮಾಡಿದ್ದು, ಇದೀಗ ಸ್ನೇಹಮಯಿ ಕೃಷ್ಣರನ್ನು ಟ್ರ್ಯಾಪ್ ಮಾಡುವ ಯತ್ನ ನಡೆದಿತ್ತೇ ಎಂಬ ಸಂಶಯ ಬಲವಾಗಿದೆ.

ವಿನೋದ್ ಆರಂಭದಲ್ಲಿ ಸ್ನೇಹಮಯಿ ಕೃಷ್ಣರ ವಿಶ್ವಾಸ ಗಳಿಸಿದ್ದರು. ನಟೇಶ್ ಮಾತನಾಡಿದ್ದು ಎನ್ನಲಾದ ಆಡಿಯೋ ಒಂದನ್ನು ಸ್ನೇಹಮಯಿ ಕೃಷ್ಣರಿಗೆ ನೀಡಿದ್ದರು. ಈ ಆಡಿಯೋದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ ಲಂಚ ನೀಡಿದ ಬಗೆಗೆ ಮಾತನಾಡಲಾಗಿದೆ ಎಂದು ವಿನೋದ್ ತಿಳಿಸಿದ್ದರು. ಲಂಚವಾಗಿ ನೀಡಿದ ಕಾರು ಮತ್ತು ಹಣದ ಚೀಲದ ಬಗ್ಗೆ ಕಥೆ ಹೇಳಿ, ಕಾರಿನ ಫೋಟೋಗಳನ್ನೂ ಸ್ನೇಹಮಯಿ ಕೃಷ್ಣರಿಗೆ ವಿನೋದ್ ಕೊಟ್ಟಿದ್ದರು. ವಿನೋದ್ ಮಾತುಗಳನ್ನು ನಂಬಿದ ಸ್ನೇಹಮಯಿ ಕೃಷ್ಣ, ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅಷ್ಟೇ ಅಲ್ಲದೆ, ಮಾಧ್ಯಮಗಳ ಎದುರು ಸಹ ಇದೇ ಆರೋಪಗಳನ್ನು ಪುನರುಚ್ಚರಿಸಿ, ದೂರು ಸಹ ದಾಖಲಿಸಿದ್ದರು.

ಆದರೆ, ಪ್ರಕರಣದ ತನಿಖೆ ಮುಂದುವರಿದಂತೆ, ಸ್ನೇಹಮಯಿ ಕೃಷ್ಣ ಅವರು ಸಿಎಸ್‌ಗೆ ಕ್ಷಮೆಯಾಚಿಸಿ ತಾವು ನೀಡಿದ ದೂರನ್ನು ವಾಪಸ್ ಪಡೆದರು. ಸಿಎಸ್ ಮೇಲಿನ ಆರೋಪಗಳು ಸುಳ್ಳು ಎಂದು ಹೇಳಿದ್ದರು. ಆದರೂ, ನಟೇಶ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಲಂಚದ ವಿಚಾರ ಸತ್ಯ ಎಂದು ಸ್ನೇಹಮಯಿ ಕೃಷ್ಣ ಸಮರ್ಥಿಸಿಕೊಂಡಿದ್ದರು. ಇದೀಗ ಪ್ರಕರಣದಲ್ಲಿ ಹೊಸ ವಿಚಾರ ಬಯಲಾಗಿದ್ದು, ವಿನೋದ್ ಮತ್ತು ನಟೇಶ್ ಇಬ್ಬರು ಪರಸ್ಪರ ಸ್ನೇಹಿತರು ಎಂಬ ಅಂಶ ಬೆಳಕಿಗೆ ಬಂದಿದೆ.

ವಿನೋದ್, ನಟೇಶ್ ಸ್ನೇಹ ಬಯಲು: ಸಿಸಿಬಿ ತನಿಖೆಯ ದಿಕ್ಕೇ ಬದಲು

ವಿನೋದ್ ಮತ್ತು ನಟೇಶ್ ಸ್ನೇಹ ಬಯಲಾದ ನಂತರ, ಸಿಸಿಬಿ ತನಿಖೆಯ ದಿಕ್ಕು ಬದಲಾಗಿದೆ. ಸ್ನೇಹಮಯಿ ಕೃಷ್ಣರನ್ನು ಬಲೆಗೆ ಬೀಳಿಸಲು ಇವರಿಬ್ಬರು ಉದ್ದೇಶಪೂರ್ವಕವಾಗಿ ಪಿತೂರಿ ನಡೆಸಿದ್ದಾರಾ ಎಂಬ ಅನುಮಾನ ಬಲವಾಗಿದೆ. ವಿಶೇಷವಾಗಿ ವಿನೋದ್, ಈಗ ತಾನು ಸಿಎಸ್ ವಿಚಾರ ಹೇಳಿಯೇ ಇಲ್ಲ ಎಂದು ಉಲ್ಟಾ ಹೊಡೆಯುತ್ತಿದ್ದು, ಇವರ ಮಾತುಗಳಲ್ಲಿನ ವೈರುಧ್ಯಗಳು ಮತ್ತಷ್ಟು ಸಂಶಯಗಳಿಗೆ ಕಾರಣವಾಗಿವೆ.

ಇದನ್ನೂ ಓದಿ: ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ

ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್‌ರನ್ನು ಈಗಾಗಲೇ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆಡಿಯೋ ಸತ್ಯವಾಗಿದ್ದರೂ, ಸಿಎಸ್ ಮೇಲಿನ ಆರೋಪಗಳು ಸುಳ್ಳು ಎಂದು ಸಾಬೀತುಪಡಿಸಲು ಹೊರಟಿರುವುದು ಈ ಪಿತೂರಿಯ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರಕರಣದ ಮೂಲವನ್ನು ಭೇದಿಸಲು ಸಿಸಿಬಿ ತೀವ್ರ ತನಿಖೆ ನಡೆಸುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ – Kannada News | Parappana Agrahara Jail: Officers Seize Illicit Luxury Items in Major Raid

ಬೆಂಗಳೂರು, ಫೆಬ್ರವರಿ 23: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿರುವ ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ಸಂಗತಿ ಮತ್ತೆ ಬಯಲಾಗಿದೆ. ಈ ಹಿಂದೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳನ್ನು ಎದುರಿಸಿದ್ದ ಕಾರಾಗೃಹದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದನ್ನುಈ ಕಾರ್ಯಾಚರಣೆ ದೃಢಪಡಿಸಿದೆ. ಕೈದಿಗಳ ಬಳಿ ಇದ್ದ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳಲ್ಲಿ ಹಲವನ್ನು ನಾಶಪಡಿಸಲಾಗಿದೆ. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈದಿಗಳಿಗೆ ಬೇಕಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪಗಳು ಈ ಹಿಂದೆಯೂ ಕೇಳಿಬಂದಿದ್ದವು.  ದರ್ಶನ್ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲು ಪರಿಸ್ಥಿತಿ ಕುರಿತು ತರಾಟೆಗೆ ತೆಗೆದುಕೊಂಡಿದ್ದರೂ, ವಾಸ್ತವದಲ್ಲಿ ಯಾವುದೇ ಸುಧಾರಣೆ ಆಗಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗಗೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಎಐ ಸಮ್ಮಿಟ್​ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ – Kannada News | Margaret Alva Slams Youth Congress Over Shirtless Protest at India AI Summit in Delhi

ಎಐ ಸಮ್ಮಿಟ್​ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠImage Credit source: TV9 Network and IANS

ಬೆಂಗಳೂರು, ಫೆಬ್ರವರಿ 23: ‘ಇಂಡಿಯಾ ಎಐ ಸಮ್ಮಿಟ್ (India AI Summit)’ ಸಂದರ್ಭ ಯುವ ಕಾಂಗ್ರೆಸ್ (Youth Congress) ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ (Margaret Alva) ಅವರೇ ಯುವ ಕಾಂಗ್ರೆಸ್ ನಾಯಕರ ನಡೆಯನ್ನು ಖಂಡಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಅರೆನಗ್ನ ಪ್ರತಿಭಟನೆ ಕುರಿತು ಉದ್ಭವಿಸಿರುವ ವಿವಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಘನತೆ, ಶಿಸ್ತು ಮತ್ತು ಜವಾಬ್ದಾರಿ ಇರಬೇಕು ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐ ಶೃಂಗಸಭೆ ಸಂದರ್ಭ ಭಾರತ ಯುವ ಕಾಂಗ್ರೆಸ್ ಸದಸ್ಯರು ಶರ್ಟ್‌ಗಳನ್ನು ಬಿಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದರು. ಈ ಘಟನೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಮಾರ್ಗೆರೇಟ್ ಆಳ್ವಾ ಮಾತಿನ ವಿಡಿಯೋ

ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಎಐ ಶೃಂಗಸಭೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಂಡವಾಳಗಾರರ ಗಮನಸೆಳೆದ ಕಾರ್ಯಕ್ರಮವಾಗಿತ್ತು. ಆ ಸಂದರ್ಭದಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆ ವೇಳೆ ಭಾರತ ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ನರಸಿಂಹ ಅವರನ್ನು ಪೊಲೀಸರು ಬಂಧಿಸಿದ್ದರು.

ಇನ್ನೊಂದೆಡೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಯುವ ಕಾಂಗ್ರೆಸ್ ನಾಯಕರ ಅರೆನಗ್ನ ಪ್ರತಿಭಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.

ಎಐ ಶೃಂಗಸಭೆ ವೇಳೆ ನಡೆದಿದ್ದೇನು?

ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಇದನ್ನೂ ಓದಿ: ‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್​ಗೆ ಪ್ರಧಾನಿ ಮೋದಿ ತರಾಟೆ

ಈ ಬಗ್ಗೆ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಕಾಂಗ್ರೆಸ್ ಪಕ್ಷದ ಕೊಳಕು ಮತ್ತು ಬೆತ್ತಲೆ ರಾಜಕಾರಣ ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂಬುದನ್ನು ಈ ಪ್ರತಿಭಟನೆ ತೋರಿಸಿಕೊಟ್ಟಿದೆ ಎಂದು ಮೋದಿ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:04 pm, Mon, 23 February 26

Source link

ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್! – Kannada News | Bengaluru School Bus Accident in Mahalakshmi Layout: Kids Safe After Brake Failure Incident

ಬೆಂಗಳೂರು, ಫೆಬ್ರವರಿ 23: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶಾಲಾ ಬಸ್ ಅಪಘಾತ ನಡೆದಿದೆ. ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದ್ದರಿಂದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಸ್ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಲ್ಲೇಶ್ವರ ಸಂಚಾರ ವಿಭಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link