Category Archives: Blog

Your blog category

ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ! ಹತ್ತಾರು ಬಾರಿ ಗುಂಡು ಹಾರಿಸಿ ಕ್ರೌರ್ಯ – Kannada News | Kannadiga murder in Canada: Nelamangala’s Chandan Kumar Shot Dead in Brutal Attack

ನೆಲಮಂಗಲ, ಫೆಬ್ರವರಿ 09: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ (Nelamangala) ವ್ಯಕ್ತಿಯ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ.

ನಡೆದಿದ್ದೇನು?

ಮೃತ ವ್ಯಕ್ತಿ ಚಂದನ್ ಕುಮಾರ್ (37) ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರಾಗಿದ್ದು, ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದು, ಎಲ್ ಅಂಡ್ ಟಿ (L&T) ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆ (ಫೆ.8) ಚಂದನ್ ಕೆನಡಾದ ವುಡ್​ಬೈನ್ ಮಾಲ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ದುಷ್ಕರ್ಮಿಗಳು ಗುಂಡಿನ ಸುರಿಮಳೆ ಸುರಿಸಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಗುಂಡಿನ ದಾಳಿ ನೋಡಿದ ಸ್ಥಳೀಯ ಹೇಳಿದ್ದೇನು?

ಶೂಟೌಟ್ ನಡೆದ ಸಂದರ್ಭದಲ್ಲಿ ಅದನ್ನು ತನ್ನ ಕಣ್ಣಾರೆ ನೋಡಿದ ಸ್ಥಳೀಯರು ಗಾಬರಿಗೊಂಡಿದ್ದು, ತಾವು ನೋಡಿತ ಭೀಕರತೆಯನ್ನು ವಿವರಿಸಿದ್ದಾರೆ. ಮಾಲ್​ ಹೊರಗೆ ತಮ್ಮ ಕಾರಿನಲ್ಲಿ ಕುಳಿತು ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಓರ್ವ ವ್ಯಕ್ತಿಗೆ 5-6 ಬಾರಿ ಗುಂಡು ಹಾರಿಸಿದ ಶಬ್ಧ ಕೇಳಿತ್ತಂತೆ. ಈ ವೇಳೆ ಕಾರಿನ ಕನ್ನಡಿಯ ಮೂಲಕ ನೋಡಿದಾಗ ವ್ಯಕ್ತಿಯೊಬ್ಬ ಗನ್ ಹಿಡಿದು ನಿಂತಿದ್ದೂ ಕಾಣಿಸಿತೆಂದು ಕೆನಡಾದ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ.

ಚಂದನ್ ಅಪ್ಪಟ ಕನ್ನಡಾಭಿಮಾನಿಯಾಗಿದ್ದ ಎಂದ ಆತನ ಸಂಬಂಧಿ

ಚಂದನ್ ತಂದೆ ನಂದಕುಮಾರ್ ಅವರು ನಿವೃತ್ತ ಶಿಕ್ಷಕರಾಗಿದ್ದು, ತಾಯಿ ಹಾಗೂ ಕುಟುಂಬದವರು ತ್ಯಾಮಗೊಂಡ್ಲು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ಕೆನಡಾದಲ್ಲಿ ಘಟನೆ ನಡೆದ ತಕ್ಷಣ ಅಲ್ಲಿನ ಪೊಲೀಸರು ಚಂದನ್ ತಂದೆಯನ್ನು ಸಂಪರ್ಕಿಸಿದ್ದರು. ಆದರೆ ಭಾಷೆಯ ವಿಷಯವಾಗಿ ಅಡೆತಡೆಗಳು ಬಂದಾಗ, ಭಾರತೀಯರೊಬ್ಬರ ಮೂಲಕ ಮೃತರ ತಂದೆ-ತಾಯಿಗೆ ವಿಷಯ ರವಾನಿಸಲಾಗಿತ್ತು ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ!

ಚಂದನ್ ತನ್ನ ಕೆಲಸದ ಜೊತೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ವಿದೇಶದಲ್ಲಿ ಹರಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಲಸವನ್ನರಸಿ ಕೆನಡಾಗೆ ಹೋದ ಭಾರತೀಯರಿಗೆ, ಅದರಲ್ಲಿಯೂ ಕನ್ನಡಿಗರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದರು. ಕನ್ನಡಿಗರಿಗಾಗಿ ಸಂಘಟನೆಗಳ ಮುಖಾಂತರ ಅಗತ್ಯ ಸೇವೆಗಳನ್ನೂ ಒದಗಿಸುತ್ತಿದ್ದರೆಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

ವರದಿ: ಮಂಜುನಾಥ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Tumakuru: ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ; ವ್ಯಕ್ತಿಗೆ ಡಬಲ್​​ ಶಾಕ್​

ತುಮಕೂರು, ಫೆಬ್ರವರಿ 09: ಪತ್ನಿಗೆ ವಿಚ್ಛೇದನ ನೀಡದೆ ಮತ್ತೊಬ್ಬಳ ಜೊತೆ ವಿವಾಹವಾಗಲು ಹೊರಟಿದ್ದ ವೇಳೆ ಕಲ್ಯಾಣಮಂಟಪಕ್ಖೇ ಪೊಲೀಸರ ಜೊತೆ ನುಗ್ಗಿ ಪತಿಗೆ ಮಹಿಳೆ ಶಾಕ್​​ ಕೊಟ್ಟ ಘಟನೆ ನಿನ್ನೆ ತುಮಕೂರಿನ ಎಡೆಯೂರಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಅರೋಪಿ ಹರಿಪ್ರಸಾದ್​​ಗೆ ಈಗ ಮತ್ತೊಂದು ಶಾಕ್​​ ಸಿಕ್ಕಿದೆ. ಈತ ಎರಡನೇ ವಿವಾಹವಾಗಲು ಹೊರಟಿದ್ದ ಮಂಡ್ಯ ಮೂಲದ ಯುವತಿಯೂ ಈಗ ದೂರು ನೀಡಿದ್ದಾಳೆ. ಮೊದಲ ಮದುವೆ ಮುಚ್ಚಿಟ್ಟು 2ನೇ ಮದುವೆಯಾಗ್ತಿದ್ದ ಹರಿಪ್ರಸಾದ್​​, ವಿವಾಹಕ್ಕೆಂದು ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ ಯುವತಿಯ ಕೆಲ ಫೋಟೋ ಇಟ್ಟುಕೊಂಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಎನ್​ಸಿಆರ್ ದಾಖಲಿಸಿದ ಅಮೃತೂರು ಪೊಲೀಸರು, ವಂಚನೆ ಸಂಬಂಧ ಮಂಡ್ಯದಲ್ಲಿ ದೂರು ನೀಡುವಂತೆ ಸೂಚನೆ ನೀಡಿದ್ದಾರೆ. ಮೊದಲ ಹೆಂಡತಿ ಡೈವರ್ಸ್ ವಿಚಾರ ಇನ್ನೂ ಕೋರ್ಟ್​ನಲ್ಲಿ ಇರುವಾಗಲೇ ಈತ ಮತ್ತೊಂದು ಮದುವೆಗೆ ಮುಂದಾಗಿದ್ದ. ಬೆಂಗಳೂರಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕನಾಗಿರುವ ಹರಿಪ್ರಸಾದ್​​ಗೆ ಮಂಡ್ಯದ ಯುವತಿ ಕಳೆದ 3 ವರ್ಷಗಳ ಹಿಂದೆ ಪರಿಚಯವಾಗಿದ್ದಳು. ಆದರೆ ಮೊದಲನೇ ಮದುವೆ ವಿಚಾರ ಯುವತಿ ಹಾಗೂ ಆಕೆಯ ತಾಯಿಗೆ ಗೊತ್ತಿತ್ತು ಎಂದು ಹರಿಪ್ರಸಾದ್ ಹೇಳಿದ್ದಾನೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೊರೊನಾದಲ್ಲಿ ಟ್ರಾವೆಲ್ಸ್ ಲಾಸ್ ಆಗಿದ್ದಕ್ಕೆ ಕಳ್ಳತನಕ್ಕಿಳಿತ ವ್ಯಕ್ತಿ! ಕೆಜಿಗಟ್ಟಲೇ ಚಿನ್ನ ದೋಚಿದ್ದ ಮಾಸ್ಕ್​ಮ್ಯಾನ್ ಅರೆಸ್ಟ್ – Kannada News | Mask Man Arrested in Bengaluru After Stealing Kilos of Gold Post COVID Travel Business Loss

ಬೆಂಗಳೂರು, ಫೆಬ್ರವರಿ 9: ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬ ಬಳಿಕ ಕಳ್ಳತನಕ್ಕೆ ಇಳಿದು ‘ಮಾಸ್ಕ್ ಮ್ಯಾನ್’ ಆಗಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ (Bangalore) ಬೈಯಪ್ಪನಹಳ್ಳಿ ಪೊಲೀಸರು ರಾಜಾ ಎಂಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 1.84 ಕೋಟಿ ರೂ. ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಭಾಗದಲ್ಲಿ ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ರಾಜಾ, ಕೊರೋನಾ ಸಮಯದಲ್ಲಿ ಭಾರೀ ನಷ್ಟ ಅನುಭವಿಸಿದ್ದ. ಜೀವನ ಸಾಗಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆ ಮಾಸ್ಕ್ ಧರಿಸಿ ಕಳ್ಳತನ ಮಾಡಲು ಆರಂಭಿಸಿದ್ದ.

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡುತ್ತಿದ್ದ ಈತನ ವಿರುದ್ಧ ಈಗಾಗಲೇ 18 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಬಂಧನದ ಬಳಿಕ ಬೆಂಗಳೂರಿನ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಬೈಯಪ್ಪನಹಳ್ಳಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಸಂಬಂಧಿಕರ ಮನೆಗೆ ಸ್ನೇಹಿತರನ್ನು ಕಳುಹಿಸಿ ದರೋಡೆ!

ಬೆಂಗಳೂರು ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಸ್ನೇಹಿತರನ್ನು ಕಳುಹಿಸಿ ದರೋಡೆ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಮೊಹಮ್ಮದ್ ಶಬಾಜ್ ಖಾನ್ ಹಾಗೂ ಸೂರಜ್ ಬಿ.ಎನ್ ಅಕ್ಬರ್ ಬಂಧಿತರಾಗಿದ್ದು, ಅಫ್ರೀದ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಸಮೀರ್ ಎಂಬ ಸಂಬಂಧಿಕನಿಗೆ ಆಸ್ತಿ ಸಂಬಂಧ ಹಣ ಬಂದಿರುವ ಮಾಹಿತಿ ತಿಳಿದಿದ್ದ ಅಫ್ರೀದ್, ತನ್ನ ಸ್ನೇಹಿತರನ್ನು ಕಳುಹಿಸಿ ಮನೆಗೆ ನುಗ್ಗಿಸಿ ರಾಬರಿ ಮಾಡಿಸಿದ್ದಾನೆ. ಸಮೀರ್ ಪತ್ನಿ ಒಬ್ಬರೇ ಇದ್ದ ವೇಳೆ ಮಚ್ಚು ತೋರಿಸಿ ಬೆದರಿಸಿ ಚಿನ್ನ ಹಾಗೂ 4 ಲಕ್ಷ ನಗದು ಕದ್ದಿದ್ದಾರೆ. ಬಂಧಿತರಿಂದ 2.96 ಲಕ್ಷ ನಗದು ಮತ್ತು ಬಂಗಾರ ಸೇರಿ 7.4 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯಪುರದಲ್ಲಿ ಸರ ಕಳ್ಳರ ಹಾವಳಿ ಮುಂದುವರಿಕೆ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಸರ ಕಳವು ಪ್ರಕರಣಗಳು ಹೆಚ್ಚಾಗಿವೆ. ಇಂಡಿ ಹಾಗೂ ಆಲಮೇಲ ಬಸ್ ನಿಲ್ದಾಣಗಳಲ್ಲಿ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬಸ್ ಏರುವ ವೇಳೆ ಟಾರ್ಗೆಟ್ ಮಾಡಿ ಹಾಡಹಗಲೇ ಕೃತ್ಯ ಎಸಗಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆ ಇಂಡಿ ನಗರ ಮತ್ತು ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ವೃದ್ಧನನ್ನು ಅಡ್ಡಗಟ್ಟಿ ದರೋಡೆ

ಬೆಂಗಳೂರು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧನೊಬ್ಬನನ್ನು ಅಡ್ಡಗಟ್ಟಿ ದರೋಡೆ ಮಾಡಿದ ಘಟನೆ ನಡೆದಿದೆ. ಅಗ್ರಹಾರ ದಾಸರಹಳ್ಳಿಯಿಂದ ಕೆ.ಆರ್.ಮಾರ್ಕೆಟ್‌ಗೆ ಹೂವು ಖರೀದಿಸಲು ನಡೆದುಕೊಂಡು ಹೋಗುತ್ತಿದ್ದ ಸಿದ್ದಮಾದು ಎಂಬವರನ್ನು ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಚಾಕು ತೋರಿಸಿ ಬೆದರಿಸಿದ್ದಾರೆ.

ಇದನ್ನೂ ಓದಿ: ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ!

ಹಣ ನೀಡಲು ಒಪ್ಪದಿದ್ದಾಗ ವೃದ್ಧನನ್ನು ಥಳಿಸಿ 10 ಸಾವಿರ ರೂ. ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಬೈಕ್ ಹಾಗೂ ದೃಶ್ಯಗಳ ಆಧಾರದಲ್ಲಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್ – Kannada News | Sonam Kapoor to be mom soon at the age of 40 Sonam Kapoor Baby Shower Photos

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರು ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ.

ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ ನಡೆಯಿತು. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ.

2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ. ಈಗ ಎರಡನೇ ಬಾರಿಗೆ ಅವರು ತಾಯಿ ಆಗುತ್ತಿದ್ದಾರೆ. ಅವರ ಸೀಮಂತ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.

ಸೋನಂ ಕಪೂರ್ ಬಾಲಿವುಡ್​​ನಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದರು. ಇವರು ಖ್ಯಾತ ನಟ ಅನಿಲ್ ಕಪೂರ್ ಮಗಳು ಎಂಬ ಕಾರಣಕ್ಕೆ ಸಾಕಷ್ಟು ಆಫರ್​​ಗಳು ಬಂದವು. ಈ ಆಫರ್​​ಗಳನ್ನು ಒಪ್ಪಿ ನಟಿಸಿದರು. ಆದರೆ, ದೊಡ್ಡ ಗೆಲುವು ಸಿಕ್ಕಿಲ್ಲ.

ಸೋನಂ ಅವರಿಗೆ ಈಗ 40 ವರ್ಷ. ಅವರಿಗೆ ಅಭಿಮಾನಿಗಳ ಕಡೆಯಿಂದ ಸಾಕಷ್ಟು ವಿಶ್​​ಗಳು ಬಂದಿವೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

Published On – 12:56 pm, Mon, 9 February 26

Source link

Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು – Kannada News | One Man, Three Women Held in Case Linked to Temple Work Obstruction in Pratapgarh

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! – Kannada News | Bengaluru Airport security breach: Giant Balloon on Runway, Air Disaster Averted by a Whisker

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​!

ದೇವನಹಳ್ಳಿ, ಫೆಬ್ರವರಿ 09: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಮತ್ತೊಂದು ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ವಿಮಾನ ನಿಲ್ದಾಣದ ರನ್‌ವೇ ಪ್ರದೇಶಕ್ಕೆ ಹಾರಿ ಬಂದ ಬೃಹತ್ ಬಲೂನ್ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್ಪೋರ್ಟ್​ ರನ್​ವೇಗೆ ಬೀದಿ ನಾಯಿಗಳು ಲಗ್ಗೆಯಿಟ್ಟಿದ್ದು ನಿಲ್ದಾಣದ ಭದ್ರತಾ ಲೋಪದ ಕುರಿತಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೊಮ್ಮೆ ಅಂತದ್ದೇ ಘಟನೆ ನಡೆದಿದೆ.

ವಿಮಾನಗಳು ಟೇಕ್‌ಆಫ್ ಮತ್ತು ಲ್ಯಾಂಡಿಂಗ್ ಆಗುವ ಪ್ರಮುಖ ರನ್‌ವೇ ಭಾಗಕ್ಕೆ ಈ ಬಲೂನ್ ಹಾರಿ ಬಂದಿದ್ದು, ಅದೃಷ್ಟವಶಾತ್ ಆ ಸಮಯದಲ್ಲಿ ಯಾವುದೇ ವಿಮಾನಗಳ ಸಂಚಾರ ಇಲ್ಲದ ಕಾರಣ ಭಾರೀ ಅಪಾಯ ತಪ್ಪಿದೆ. ಈ ಬೃಹತ್ ಬಲೂನ್ ಬಿಸಿಡಿ ಕನ್‌ಸ್ಟ್ರಕ್ಷನ್ ಎಂಬ ಖಾಸಗಿ ಕಂಪನಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಕನ್‌ಸ್ಟ್ರಕ್ಷನ್ ಸ್ಥಳದ ಬಳಿ ಅಳವಡಿಸಲಾಗಿದ್ದ ಬಲೂನ್ ಗಾಳಿಯ ಒತ್ತಡಕ್ಕೆ ದಾರ ಕಟ್ ಆಗಿ ರನ್‌ವೇ ಕಡೆಗೆ ಹಾರಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ದೊರೆತ ತಕ್ಷಣ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಬಿಸಿಡಿ ಕನ್‌ಸ್ಟ್ರಕ್ಷನ್ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏರ್​ಪೋರ್ಟ್​ನಲ್ಲಿ ಬಲೂನ್ನ ದೃಶ್ಯ ಇಲ್ಲಿದೆ

ಏರ್​ಪೋರ್ಟ್​ನಲ್ಲಿ 2 ಕೋಟಿ ರೂ. ಗಾಂಜಾ ವಶ!

ಇದೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಪ್ರಕರಣದಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್ ಹಾಗೂ ಹಾಂಗ್‌ಕಾಂಗ್‌ನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಬಳಿ ಈ ಮಾದಕ ವಸ್ತು ಪತ್ತೆಯಾಗಿದೆ. ಪ್ರಯಾಣಿಕರು ಲಗೇಜ್ ಬ್ಯಾಗ್‌ನ ಕೆಳಭಾಗದಲ್ಲಿ ಅಧಿಕಾರಿಗಳಿಗೆ ಅನುಮಾನ ಬಾರದಂತೆ ಹೈಡ್ರೋಪೋನಿಕ್ ಗಾಂಜಾವನ್ನು ಅಡಗಿಸಿಟ್ಟಿದ್ದರು ಎಂದು ತಿಳಿದು ಬಂದಿದೆ. ತಪಾಸಣೆ ವೇಳೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಲಗೇಜ್ ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ.

ಇದನ್ನೂ ಓದಿ ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ

ಈ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 7.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 2 ಕೋಟಿ ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎರಡು ದಿನಗಳ ಹಿಂದೆಯೂ ಏರ್​ಪೋರ್ಟ್​ನಲ್ಲಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾದ ಕಾರಣ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! – Kannada News | Bengaluru: Girl Sends Mother and Relative’s Private Photos to Boyfriend, Case Filed

ಬೆಂಗಳೂರು, ಫೆಬ್ರವರಿ 9: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದ್ಯಾಭ್ಯಾಸಕ್ಕಾಗಿ ಮೊಬೈಲ್ ಬೇಕೆಂದು ಯುವತಿ ಕೇಳಿದ್ದ ಕಾರಣ ಪೋಷಕರು ಮೊಬೈಲ್ ತೆಗೆದು ಕೊಟ್ಟಿದ್ದರು. ಕೆಲವು ದಿನಗಳ ಹಿಂದೆ ಆಕೆ ಅಪರಿಚಿತ ಯುವಕನೊಂದಿಗೆ ಮಾತನಾಡುತ್ತಿದ್ದ ವಿಚಾರ ಕುಟುಂಬದ ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಆಕೆಯ ತಾಯಿ ಪತಿಗೆ ತಿಳಿಸಿದ್ದರು. ಅದಾದ ನಂತರ ಅನುಮಾನ ಬಂದು ಮೊಬೈಲ್ ಪರಿಶೀಲನೆ ನಡೆಸಿದಾಗ ಕುಟುಂಬ ಸದಸ್ಯರ ಖಾಸಗಿ ಅಂಗಾಗಗಳ ಫೋಟೋಗಳನ್ನು ರಹಸ್ಯವಾಗಿ ತೆಗೆದು ಪ್ರಿಯಕರನಿಗೆ ಕಳುಹಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದಿದ್ದ ಯುವತಿ

ಆರೋಪಿ ಯುವತಿಯು ತಾಯಿ ಮಲಗಿದ್ದ ವೇಳೆ ಅವರ ಖಾಸಗಿ ಅಂಗಾಂಗಗಳ ಫೋಟೋಗಳನ್ನು ತೆಗೆದು ಕಳುಹಿಸಿದ್ದಳು ಎಂಬುದು ಮೊಬೈಲ್ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲದೆ, ಯುವತಿಯು ತನ್ನ ದೊಡ್ಡಮ್ಮ ಸ್ನಾನ ಮಾಡುತ್ತಿದ್ದಾಗ ಅವರಿಗೆ ಗೊತ್ತಾಗದಂತೆ ನಗ್ನ ಫೋಟೊ ತೆಗೆದಿದ್ದಾಳೆ. ಅದನ್ನು ಕೂಡ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಷಯ ತಿಳಿದು ಮಗಳಿಗೆ ಬುದ್ಧಿ ಹೇಳಿ ಫೋಟೋಗಳನ್ನು ಅಳಿಸಿಹಾಕಿದ್ದೇವೆ ಎಂದು ತಾಯಿ ಹೇಳಿದ್ದಾರೆ. ಅಲ್ಲದೆ, ಭವಿಷ್ಯದಲ್ಲಿ ಆ ಫೋಟೊಗಳು ದುರುಪಯೋಗವಾಗುವ ಭಯದಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಡ್ಡೆ ಹುಡುಗರ ಬಲೆಗೆ ಬೀಳಿಸಲು ಹೆಸರೇ ಬದಲಾಯಿಸಿದ್ದ ಸುಚಿತ್ರಾ! ಖತರ್ನಾಕ್ ಪ್ಲಾನ್ ರಹಸ್ಯ ಬಟಾಬಯಲು

ಸದ್ಯ, ಯುವತಿ ಹಾಗೂ ಆಕೆಯ ಪ್ರಿಯಕರ ವರುಣ್ ಅಲಿಯಾಸ್ ಗಿರಿಧರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಕಾಲೇಜಿಗೆ ಹೋಗುವ ಮಗಳು ಓದುವುದಕ್ಕೆ ಅಗತ್ಯ ಎಂದು ಕೇಳಿದ್ದರಿಂದ ಮೊಬೈಲ್ ತೆಗೆದುಕೊಟ್ಟ ಪೋಷಕರು ಅದರಿಂದಲೇ ಇಕ್ಕಟ್ಟಿಗೆ ಸಿಲುಕುವಂತಾಗಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ? – Kannada News | Bengaluru Metro Fare Hike Decision: BMRCL Board Meets Today for Final Call

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್

ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ.

ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ?

ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ ಐವರು ಹಿರಿಯ ಅಧಿಕಾರಿಗಳು, ರಾಜ್ಯ ಸರ್ಕಾರದ ಪರವಾಗಿ BMRCL ವ್ಯವಸ್ಥಾಪಕ ನಿರ್ದೇಶಕರನ್ನು ಒಳಗೊಂಡಂತೆ ಐವರು ಅಧಿಕಾರಿಗಳು ಹಾಗೂ BMRCLನ ನಾಲ್ವರು ನಿರ್ದೇಶಕರು ಸಭೆಗೆ ಹಾಜರಾಗಲಿದ್ದಾರೆ. ಕೇಂದ್ರ ಸರ್ಕಾರದ ಕೆಲ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ

ಮೆಟ್ರೋ ಪ್ರಯಾಣಿಕರಿಗೆ ನೇರವಾಗಿ ಪರಿಣಾಮ ಬೀರುವ ದರ ಏರಿಕೆ ವಿಚಾರವೇ ಇಂದು ನಡೆಯಲಿರುವ ಸಭೆಯ ಪ್ರಮುಖ ಅಜೆಂಡಾ ಆಗಿರಲಿದೆ. ಇತ್ತೀಚೆಗೆ ದರ ಏರಿಕೆ ಕುರಿತಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು, ಈ ಹಿನ್ನೆಲೆ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ನಿರ್ದೇಶಕರ ಮಂಡಳಿ ಸಭೆಯಲ್ಲಿ ದರ ನಿಗದಿ ಸಮಿತಿಯೂ ಭಾಗವಹಿಸುವ ಸಾಧ್ಯತೆ ಇದೆ. ದರ ಏರಿಕೆಯನ್ನು ಮುಂದುವರಿಸಬೇಕೇ, ತಿದ್ದುಪಡಿ ಮಾಡಬೇಕೇ ಅಥವಾ ಸಂಪೂರ್ಣವಾಗಿ ಹಿಂಪಡೆಯಬೇಕೇ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆ ಮುಗಿದ ಬಳಿಕ ಮೆಟ್ರೋ ದರ ಏರಿಕೆ ಕುರಿತು ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಿದ್ದು, ಲಕ್ಷಾಂತರ ಮೆಟ್ರೋ ಪ್ರಯಾಣಿಕರು ಸಭೆಯ ಫಲಿತಾಂಶದತ್ತ ಕಾದು ನೋಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:48 am, Mon, 9 February 26

Source link

ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕೈಚಿಗೆ ಭರ್ಜರಿ ಗೆಲುವು, ಪ್ರಧಾನಿ ಮೋದಿ ಅಭಿನಂದನೆ – Kannada News | India Japan Ties in Focus as Modi Greets Japanese PM on Election Victory

ಟೋಕಿಯೋ, ಫೆಬ್ರವರಿ 09: ಜಪಾನ್​​ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ನೇತೃತ್ವದ ಒಕ್ಕೂಟವು ಭರ್ಜರಿ ಜಯ ಸಾಧಿಸಿದೆ. 465 ಸ್ಥಾನಗಳ ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 233 ಸ್ಥಾನಗಳನ್ನು ತಕೈಚಿಯ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮಾತ್ರ ಪಡೆದುಕೊಂಡಿದೆ.

ಸಾರ್ವತ್ರಿಕ ಚುನಾವಣೆಗೆ ಮತದಾನದ ನಂತರ ಸಂಜೆ ಜಪಾನ್‌ನಲ್ಲಿ ಮತ ಎಣಿಕೆ ಪ್ರಾರಂಭವಾಯಿತು. ಎಣಿಕೆಯ ಮೊದಲ ಗಂಟೆಯೊಳಗೆ, ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ನೇತೃತ್ವದ ಒಕ್ಕೂಟವು ಗೆಲ್ಲಲಿದೆ ಎಂಬುದು ಸ್ಪಷ್ಟವಾಗಿತ್ತು.

ಎಣಿಕೆಯ ಎರಡು ಗಂಟೆಗಳ ಅಂತ್ಯದ ವೇಳೆಗೆ, ಎಲ್‌ಡಿಪಿ ಬಹುಮತದ ಗಡಿಯನ್ನು ದಾಟಿತ್ತು. ಸಂಸತ್ತಿನ ಕೆಳಮನೆಯ 465 ಸ್ಥಾನಗಳಿಗೆ 1,200 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ಜನವರಿ 23 ರಂದು ಪ್ರಧಾನಿ ಸನೇ ತಕೈಚಿ ಜಪಾನ್ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿ ಚುನಾವಣೆಗೆ ಕರೆ ನೀಡಿದರು. ಈ ನಿರ್ಧಾರವು 1990 ರ ನಂತರ ಫೆಬ್ರವರಿಯಲ್ಲಿ ಜಪಾನ್‌ನಲ್ಲಿ ಮೊದಲ ಕೆಳಮನೆ ಚುನಾವಣೆಗೆ ಕಾರಣವಾಯಿತು.

ಮತ್ತಷ್ಟು ಓದಿ: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ!

ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು.ನಿಮ್ಮ ಸಮರ್ಥ ನಾಯಕತ್ವದಲ್ಲಿ ನಾವು ಭಾರತ-ಜಪಾನ್ ಸ್ನೇಹವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಹೇಳಿದರು.ತಕೈಚಿ ಅವರ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನೇತೃತ್ವದ ಮೈತ್ರಿಕೂಟವು ಮೂರನೇ ಎರಡರಷ್ಟು ಕ್ಷೇತ್ರಗಳಲ್ಲಿ ವಿಜಯ ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿತ್ತು.

ಜಪಾನ್​ನ ಕೆಳಮನೆಯು 465 ಸಂಖ್ಯಾಬಲವನ್ನು ಹೊಂದಿದೆ. ತಕೈಚಿ ನೇತೃತ್ವದ ಪಕ್ಷವು ಹಾಲಿ ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಸಮೀಕ್ಷೆ ತಿಳಿಸಿತ್ತು. ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸೇನಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಜಪಾನ್ ಆರ್ಥಿಕತೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿರುವ ಬಲಪಂಥೀಯ ಕಾರ್ಯಸೂಚಿಯನ್ನು ಜಾರಿಗೊಳಿಸಲು ಈ ಫಲಿತಾಂಶವು ಅವಕಾಶ ಕಲ್ಪಿಸಲಿದೆ ಎನ್ನಲಾಗಿತ್ತು.

ಮೋದಿ ಪೋಸ್ಟ್​

ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷ ಮತ್ತು ವಿರೋಧ ಪಕ್ಷದ ಬಣದ ನಡುವೆ ಪ್ರಮುಖ ಸ್ಪರ್ಧೆ ಇತ್ತು. ವೇತನ ಹೆಚ್ಚಳ ಮತ್ತು ಹೆಚ್ಚುತ್ತಿರುವ ಹಣದುಬ್ಬರವು ಸಾರ್ವಜನಿಕರನ್ನು ತೊಂದರೆಗೊಳಿಸುತ್ತಿದೆ. 2023 ರಲ್ಲಿ ಕಳಪೆ ಫಸಲು ಅಕ್ಕಿ ಬೆಲೆಗಳಲ್ಲಿ ಶೇ. 68 ರಷ್ಟು ಹೆಚ್ಚಳಕ್ಕೆ ಕಾರಣವಾಗಿದೆ.

ದುರ್ಬಲಗೊಳ್ಳುತ್ತಿರುವ ಯೆನ್ ದಿನನಿತ್ಯದ ಆಹಾರ ಪದಾರ್ಥಗಳನ್ನು ಸಹ ಹೆಚ್ಚು ದುಬಾರಿಯನ್ನಾಗಿ ಮಾಡಿದೆ. ಪ್ರಧಾನಿ ತಕೈಚಿಯವರ ಲಿಬರಲ್ ಡೆಮಾಕ್ರಟಿಕ್ ಪಕ್ಷ ಮತ್ತು ಜಪಾನ್ ಇನ್ನೋವೇಶನ್ ಪಕ್ಷದ ಒಕ್ಕೂಟವು 310 ಸ್ಥಾನಗಳನ್ನು ಗೆದ್ದರೆ, ವಿರೋಧ ಪಕ್ಷಗಳ ನಿಯಂತ್ರಣದಲ್ಲಿರುವ ಸಂಸತ್ತಿನ ಮೇಲ್ಮನೆಯಲ್ಲಿ ಅದು ಬಹುಮತವನ್ನು ಪಡೆಯುತ್ತದೆ.

ಬಹುಮತ ಗಳಿಸಲು ವಿಫಲವಾದರೆ ರಾಜೀನಾಮೆ ನೀಡುವುದಾಗಿ ತಕೈಚಿ ಭರವಸೆ ನೀಡಿದ್ದರು. ಒಂದು ವಾರದ ಹಿಂದಿನ ವೇಳೆಗೆ ಸುಮಾರು 4.6 ಮಿಲಿಯನ್ ಜನರು ತಮ್ಮ ಆರಂಭಿಕ ಮತ ಚಲಾಯಿಸಿದ್ದರು, ಇದು 2024 ರ ಹಿಂದಿನ ಚುನಾವಣೆಗಿಂತ ಶೇ. 2.5 ರಷ್ಟು ಕುಸಿತವಾಗಿದೆ. ಉತ್ತರ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಭಾರೀ ಹಿಮಪಾತವು ಮತದಾನದ ಇಳಿಕೆಗೆ ಕಾರಣವೆಂದು ಉಲ್ಲೇಖಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ! – Kannada News | Tejasvi Surya Protests Bengaluru Metro Fare Hike, Citing Karnataka Governments Empty Treasury

ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ಶಾಸಕ ರಾಮಮೂರ್ತಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ನಂತರ ಪೊಲೀಸರು ತೇಜಸ್ವಿ ಸೂರ್ಯ ಮತ್ತು ರಾಮಮೂರ್ತಿ ಅವರನ್ನು ವಶಕ್ಕೆ ಪಡೆದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link