Category Archives: Blog

Your blog category

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ. ರವಿ ಬಸ್ರೂರು ಜೊತೆ ಸಿನಿಮಾದಲ್ಲಿ ಒಟ್ಟೂ ಐದು ಮ್ಯೂಸಿಕ್ ಡೈರೆಕ್ಟರ್​​​ಗಳು ಕೆಲಸ ಮಾಡಿದ್ದಾರೆ! ಸಿನಿಮಾದ ಮೆರುಗು ಹೆಚ್ಚಿಸಲು ಐವರು ಪ್ರತಿಭಾವಂತ ಸಂಗೀತ ನಿರ್ದೇಶಕರ ಸಮಾಗಮ ಆಗಿದೆ. ಈ ಚಿತ್ರದಲ್ಲಿ ಒಟ್ಟು 6 ಹಾಡುಗಳು ಇರಲಿವೆ.

ಇದನ್ನೂ ಓದಿ: ‘ಧುರಂಧರ್ 2 vs ಟಾಕ್ಸಿಕ್’ ಒಬ್ಬರ ಹೊಟ್ಟೆ ಇನ್ನೊಬ್ಬರು ಹೊಡೆದಂತೆ: ನಿರ್ದೇಶಕ ಬೇಸರ

ಈ ಕಾರಣದಿಂದ ಸಿನಿಮಾ ಹಾಡಿನ ಹಕ್ಕನ್ನು 42 ಕೋಟಿ ರೂಪಾಯಿಗೆ ಜೀ ಮ್ಯೂಸಿಕ್ ಖರೀದಿ ಮಾಡಿದೆ. ‘ಧುರಂಧರ್ 2’ ಹಾಡಿನ ಹಕ್ಕು 27 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಮೊದಲ ಭಾಗದ ಹಾಡುಗಳು ಸೂಪರ್ ಹಿಟ್ ಆದ ಬಳಿಕವೂ ಕೇವಲ 27 ಕೋಟಿ ರೂಪಾಯಿಗೆ ಇಷ್ಟು ಕಡಿಮೆ ಮೊತ್ತದಲ್ಲಿ ಹಾಡನ್ನು ಖರೀದಿ ಮಾಡಲಾಗಿದೆ. ಅಂದರೆ ‘ಟಾಕ್ಸಿಕ್’ ಚಿತ್ರಕ್ಕೆ ಹೆಚ್ಚುವರಿಯಾಗಿ 15 ಕೋಟಿ ರೂಪಾಯಿ ಸಿಕ್ಕಿದೆ.

‘ಟಾಕ್ಸಿಕ್​’ನಲ್ಲಿ ಬಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ, ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ಈ ಎಲ್ಲ ಪ್ರತಿಭಾವಂತರ ಸಂಗಮ ಆಗಿರುವುದರಿಂದ ‘ಟಾಕ್ಸಿಕ್’ ಸಿನಿಮಾದ ಹಾಡುಗಳ ಮೇಲೆ ಹೈಪ್ ಹೆಚ್ಚಾಗಿದೆ. ರವಿ ಬಸ್ರೂರು ಅವರು ಹಿನ್ನೆಲೆ ಸಂಗೀತದ ಜತೆಗೆ ಕೇವಲ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ಣ ರಕ್ಷಣೆಗೆ ನಿಂತ ಸ್ತ್ರೀ ಶಕ್ತಿ; ಭಲೇ ಭಲೇ ಎಂದ ವೀಕ್ಷಕರು – Kannada News | Karna Serial: Zee Kannada’s Stree Shakti Unites to Save Arrested Karna from Plot

‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣನಿಗೆ ಒಂದಲ್ಲಾ ಒಂದು ತೊಂದರೆಗಳು ಎದುರಾಗುತ್ತಲೇ ಇವೆ. ವೈರಿಗಳು ಆತನಿಗೆ ಬೇರೆ ಎಲ್ಲಿಯೂ ಇಲ್ಲ, ಇರೋದು ಮನೆಯಲ್ಲಿಯೇ ಎಂದರೂ ತಪ್ಪಾಗಲಾರದು. ಅಪ್ಪ ಎನಿಸಿಒಕೊಂಡವನು, ಅತ್ತೆ ಎನಿಸಿಕೊಂಡವಳು ಹಾಗೂ ತಮ್ಮನು ಈತನ ವಿರುದ್ಧ ಕತ್ತಿ ಮಸೆಯುವ ಕೆಲಸ ಮಾಡುತ್ತಿದ್ದಾನೆ. ಈ ಮೂಲಕ ಆತನಿಗೆ ಸಾಕಷ್ಟು ತೊಂದರೆ ಉಂಟು ಮಾಡುತ್ತಿದ್ದಾರೆ. ಆದರೆ, ಇದಕ್ಕೆಲ್ಲ ಕರ್ಣ ಹೆದರುವವನು ಅಲ್ಲ ಎಂದೇ ಹೇಳಬಹುದು. ಈಗ ಆತನಿಗೆ ಎದುರಾದ ಸಮಸ್ಯೆಗೆ ಇಡೀ ಜೀ ಕನ್ನಡ ವಾಹಿನಿಯ ಸ್ತ್ರೀ ಶಕ್ತಿ ಒಂದಾಗಿದೆ.

ಕರ್ಣ ಧಾರಾವಾಹಿಯಲ್ಲಿ ಕರ್ಣನ ವಿರುದ್ಧ ಆತನ ಅತ್ತೆಯೇ ಮಸಲತ್ತು ಮಾಡಿದ್ದಾಳೆ. ಹೌದು, ಕರ್ಣನ ಆಸ್ಪತ್ರೆಯಲ್ಲಿ ಔಷಧಿಗಳು ಎಕ್ಸ್​​ಪೈರಿ ಡೇಟ್ ಮುಗಿದರೂ ಅದನ್ನು ಬಳಸುವಂತೆ ಮಾಡಿದ್ದಾಳೆ ಆತನ ಅತ್ತೆ. ಆ ಬಳಿಕ ಶುರುವಾಯ್ತು ನೋಡಿ ಅಸಲಿ ಆಟ. ಈ ಔಷಧ ಸೇವನೆ ಮಾಡಿ ಕೆಲವರು ನಿಧನ ಹೊಂದಿದರು. ಹೀಗಾಗಿ, ಕರ್ಣನ ಅರೆಸ್ಟ್ ಮಾಡಲಾಗಿದೆ. ಕರ್ಣನ ತೆಗೆದುಕೊಂಡು ಹೋಗಿ ಜೈಲಿಗೆ ಹಾಕಲಾಗಿದೆ. ಇದರ ಹಿಂದೆ ಇರೋದು ಕರ್ಣನ ಅತ್ತೆ ಹಾಗೂ ತಂದೆ.

ಈಗ ಕರ್ಣನ ಬಿಡಿಸೋಕೆ ಜೀ ಕನ್ನಡದ ಇತರ ಧಾರಾವಾಹಿ ಕಲಾವಿದರು ಬಂದಿದ್ದಾರೆ. ದೀಪಾ, ಶ್ರಾವಣಿ, ರಾಣಿ, ಮಲ್ಲಿ, ನಿತ್ಯಾ ಹಾಗೂ ನಿಧಿ ಮೊದಲಾದವರು ಬಂದಿದ್ದಾರೆ. ಇದು ವೀಕ್ಷಕರ ಖುಷಿಗೆ ಕಾರಣ ಆಗಿದೆ. ‘ಕರ್ಣ’ ಧಾರಾವಾಹಿಯ ಈ ಟ್ವಿಸ್ಟ್ ವೀಕ್ಷಕರಿಗೆ ಖುಷಿ ಕೊಟ್ಟಿದೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಗೆ ಎಂಟ್ರಿ ಆಯ್ತು ಹೊಸ ಪಾತ್ರ; ಇನ್ಮುಂದೆ ಮತ್ತಷ್ಟು ಟ್ವಿಸ್ಟ್

ಕರ್ಣ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಎದುರಾಗುತ್ತಿದೆ. ಕರ್ಣ ಈಗಾಗಲೇ ನಿಧಿಯನ್ನು ಮದುವೆ ಆಗಿದ್ದಾಳೆ, ನಿತ್ಯಾಳನ್ನು ಆತ ಪ್ರೀತಿ ಮಾಡುತ್ತಿದ್ದಾನೆ. ಇವರ ಮದುವೆ ನೋಡಲು ಎಲ್ಲರೂ ಕಾದಿದ್ದಾರೆ. ನಿಧಿಗೆ ನಿಧಾನವಾಗಿ ಕರ್ಣನ ಮೇಲೆ ಪ್ರೀತಿ ಮೂಡುತ್ತಿದೆ. ಅಭಿಮಾನಿಗಳಿಗೆ ಇದು ಖುಷಿ ಕೊಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Mukul Roy Death: ಪಶ್ಚಿಮ ಬಂಗಾಳ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್ ನಿಧನ – Kannada News | Mukul Roy : Bengal’s Political Chanakya and Ex Railway Minister Passes Away at 71

ಕೋಲ್ಕತ್ತಾ, ಫೆಬ್ರವರಿ 23: ಪಶ್ಚಿಮ ಬಂಗಾಳದ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್(71) ನಿಧನರಾಗಿದ್ದಾರೆ. ಮುಕುಲ್ ರಾಯ್(Mukul Roy) ಮಾಜಿ ರೈಲ್ವೆ ಸಚಿವರು ಆಗಿದ್ದರು ಹಾಗೂ ಒಂದು ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕರು ಕೂಡ ಆಗಿದ್ದರು. ಅವರು ಬೆಳಗಿನ ಜಾವ 1.30ರ ವೇಳೆಗೆ ಕೋಲ್ಕತ್ತದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಕೆಲವು ದಿನಗಳ ಹಿಂದೆ ಕೋಮಾದಲ್ಲಿದ್ದರು. ಅದಕ್ಕೂ ಮುನ್ನ ಅವರು ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು.

ಕಳೆದ ಎರಡು ವರ್ಷಗಳಿಂದ ಮುಕುಲ್ ರಾಯ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು, ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿತ್ತು. ಪರಿಚಿತ ಮುಖಗಳನ್ನು ಗುರುತಿಸುವ ಸಾಮರ್ಥ್ಯವನ್ನು ಅವರು ಕಳೆದುಕೊಂಡಿದ್ದರು. ರೈಲ್ಸ್ ಟ್ಯೂಬ್ ಮೂಲಕ ದ್ರವ ಆಹಾರವನ್ನು ನೀಡಲಾಗುತ್ತಿತ್ತು. ಅವರ ದೇಹವನ್ನು ಅವರ ನಿವಾಸಕ್ಕೆ ಮರಳಿ ತಂದ ನಂತರ ಸೋಮವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಜ್ ತಕ್ ಬಾಂಗ್ಲಾ ವರದಿ ಮಾಡಿದೆ.

ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಯವರ ಆಪ್ತ ಸಹಾಯಕರಾಗಿದ್ದ ಮತ್ತು ಪಕ್ಷದ ಎರಡನೇ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದ ಮುಕುಲ್ ರಾಯ್, 2019 ರ ಲೋಕಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳ ಮೊದಲು 2017 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಅನೇಕರನ್ನು ಅಚ್ಚರಿಗೊಳಿಸಿದರು .

ರಾಜ್ಯದಲ್ಲಿ ಬಿಜೆಪಿಯ ಕಾರ್ಯತಂತ್ರದ ಕೇಂದ್ರಬಿಂದುವಾಗಿದ್ದ ರಾಯ್, 2019 ರಲ್ಲಿ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ಸಹಾಯ ಮಾಡಿದ್ದರು. ರಾಯ್ 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಕೃಷ್ಣನಗರದಿಂದ ಗೆದ್ದರು. ಆದಾಗ್ಯೂ, ರಾಜ್ಯದಲ್ಲಿ ಪಕ್ಷದೊಳಗಿನ ಅವರ ಪ್ರಭಾವ ಶೀಘ್ರದಲ್ಲೇ ಕ್ಷೀಣಿಸಲು ಪ್ರಾರಂಭಿಸಿತು, ಅಂತಿಮವಾಗಿ ಅವರು ಮತ್ತೆ ಮಮತಾ ಬ್ಯಾನರ್ಜಿ ಅವರನ್ನು ಸೇರಲು ಕಾರಣವಾಯಿತು.

ಮತ್ತಷ್ಟು ಓದಿ:

ಸಿಎಂ ಮಮತಾ ಬ್ಯಾನರ್ಜಿ ತನಿಖೆಗೆ ಅಡ್ಡಿಪಡಿಸಿ, ಬಲವಂತವಾಗಿ ದಾಖಲೆ ಹೊತ್ತೊಯ್ದಿದ್ದಾರೆ; ಹೈಕೋರ್ಟ್​ ಮೊರೆ ಹೋದ ಇಡಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಲ್ಪ ಅಂತರದ ಜಯಗಳಿಸಿದ ನಂತರ, ಸುವೇಂದು ಅಧಿಕಾರಿ ಬಂಗಾಳದಲ್ಲಿ ವಿರೋಧ ಪಕ್ಷದ ನಾಯಕರಾದ ಒಂದು ತಿಂಗಳ ನಂತರ ರಾಯ್ ಬಿಜೆಪಿಯನ್ನು ತೊರೆದರು. ತಮ್ಮ ರಾಜಕೀಯ ಚಾಣಾಕ್ಷತೆಗಾಗಿ ಬಂಗಾಳ ರಾಜಕೀಯದ ಚಾಣಕ್ಯ ಎಂದೂ ಕರೆಯಲ್ಪಡುವ ರಾಯ್, 1998 ರಲ್ಲಿ ಮಮತಾ ಬ್ಯಾನರ್ಜಿ ಅವರೊಂದಿಗೆ ಪಕ್ಷವನ್ನು ಸ್ಥಾಪಿಸಿದ ನಂತರ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗುವವರೆಗೆ ಶ್ರೇಣಿಯ ಮೂಲಕ ಏರಿದರು.

2025 ರಲ್ಲಿ, ಕಲ್ಕತ್ತಾ ಹೈಕೋರ್ಟ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿತು , ಅವರು ಟಿಎಂಸಿಗೆ ಮರಳಿರುವುದು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದೆ ಎಂದು ತೀರ್ಪು ನೀಡಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ – Kannada News | Cartel Turmoil Erupts After Reported Death of El Mencho in Military Operation

ಮೆಕ್ಸಿಕೋ, ಫೆಬ್ರವರಿ 23: ವಿಶ್ವದ ಮೋಸ್ಟ್ ವಾಂಟೆಡ್ ಮಾದಕವಸ್ತು ಕಳ್ಳಸಾಗಣೆದಾರರಲ್ಲಿ ಎಲ್ ಮೆಂಚೊ ಕೂಡ ಒಬ್ಬ. ಆತನ ನಿಜವಾದ ಹೆಸರು ನೆಮೆಸಿಯೊ ರುಬೆನ್ ಒಸೆಗುರಾ ಸೆರ್ವಾಂಟೆಸ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಒಸೆಗುರಾ ಸಾವು ಮೆಕ್ಸಿಕೊದಾದ್ಯಂತ ಹಿಂಸಾಚಾರ ಭುಗಿಲೆದ್ದಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಲಿಸ್ಕೊದಲ್ಲಿ ಮೆಕ್ಸಿಕನ್ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ. 59 ವರ್ಷದ ಪರಾರಿಯಾಗಿದ್ದ ಡ್ರಗ್ ಲಾರ್ಡ್​ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 15 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಓಡ್ತಿರೋದು ನೋಡಿ… ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ – Kannada News | Washington Sundar and David Miller were involved in a heated exchange

T20 World Cup 2026: ಟಿ20 ವಿಶ್ವಕಪ್​ನ 43ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ವಾಷಿಂಗ್ಟನ್ ಸುಂದರ್ ಹಾಗೂ ಸೌತ್ ಆಫ್ರಿಕಾ ದಾಂಡಿಗ ಡೇವಿಡ್ ಮಿಲ್ಲರ್ ನಡುವೆ ಮಾತಿನ ಚಕಮಕಿ ನಡೆದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಈ ಪಂದ್ಯದ ವೇಳೆ ಮಿಲ್ಲರ್ ಬೇಗನೆ ಕ್ರೀಸ್​ ಬಿಡುತ್ತಿರುವುದಕ್ಕೆ ಸುಂದರ್ ಆಕ್ಷೇಪ ವ್ಯಕ್ತಪಡಿಸಿದ್ದರು.

14ನೇ ಓವರ್​ ಎಸೆದ ವಾಷಿಂಗ್ಟನ್ ಸುಂದರ್, ನಾನ್-ಸ್ಟ್ರೈಕರ್ ತುದಿಯಲ್ಲಿದ್ದ ಮಿಲ್ಲರ್ ಅವರು ಚೆಂಡು ಎಸೆಯುವ ಮೊದಲೇ ಕ್ರೀಸ್‌ ಬಿಡುತ್ತಿರುವುದನ್ನು ಗಮನಿಸಿದ್ದಾರೆ. ಅಲ್ಲದೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಫೀಲ್ಡ್ ಅಂಪೈರ್​ಗೆ ದೂರು ನೀಡಿದ್ದಾರೆ.

ಇದನ್ನು ಗಮನಿಸಿದ ಡೇವಿಡ್ ಮಿಲ್ಲರ್ ಓವರ್ ಮುಗಿದ ವಾಷಿಂಗ್ಟನ್ ಸುಂದರ್ ಜೊತೆ ವಾಗ್ವಾದಕ್ಕಿಳಿದರು. ಅಲ್ಲದೆ  ಹರಿಹಾಯುವ ಮೂಲಕ ಸುಂದರ್​ನತ್ತ ಮಿಲ್ಲರ್ ಮುನ್ನುಗ್ಗುತ್ತಿದ್ದಂತೆ ಅಂಪೈರ್ ಕ್ರಿಸ್ ಗಾಫೆನಿ, ಟೀಮ್ ಇಂಡಿಯಾ ವಿಕೆಟ್ ಕೀಪರ್ ಇಶಾನ್ ಕಿಶನ್ ಮತ್ತು ಟ್ರಿಸ್ಟನ್ ಸ್ಟಬ್ಸ್ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇದೀಗ ವಾಷಿಂಗ್ಟನ್ ಸುಂದರ್ ಹಾಗೂ ಡೇವಿಡ್ ಮಿಲ್ಲರ್ ನಡುವಣ ಮಾತಿನ ಚಕಮಕಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ 111 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡ 76 ರನ್​ಗಳ ಭರ್ಜರಿ ಜಯ ಸಾಧಿಸಿದೆ.

 

 

Source link

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತನ್ನ ನಿರ್ಧಾರದಿಂದ ಯಾರಿಗಾದರೂ ನೋವಾದರೆ ಅದರಿಂದ ನನಗೇನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಅವರು ತಿರಸ್ಕಾರದ ಮನೋಭಾವವನ್ನು ತೋರಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಲೆಡ್ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ? – Kannada News | Shocking Report: Lead and Pesticides Found in Karnataka Vegetables

ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರೀನಾ?

ಬೆಂಗಳೂರು, ಫೆಬ್ರವರಿ 23: ರಾಜ್ಯದ ತರಕಾರಿಗಳಲ್ಲಿ ಲೆಡ್ (Lead)ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಕರ್ನಾಟಕದಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್​ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಸೀಸದ ಪ್ರಮಾಣ ಮಿತಿ ಮೀರಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಕೀಟನಾಶಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವಂತೆ ಸಮಿತಿ ಶಿಫಾರಸು ಮಾಡಿದೆ.

ಎರಡು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ ಎಂದು ಅಧ್ಯಯನ ವರದಿ ಪ್ರಕಟವಾಗಿತ್ತು. 2023ರ ಅಕ್ಟೋಬರ್ 25ರಂದು ಇಎಂಪ್ರಿ ಸಂಸ್ಥೆ 400 ಮಾದರಿಗಳ ಪರಿಶೀಲನೆ ಆಧಾರವಾಗಿ ಸೀಸ ಸೇರಿದಂತೆ ಭಾರಿ ಲೋಹಗಳ ಅಸ್ತಿತ್ವವಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, CPCBಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಆದರೀಗ ಮತ್ತೊಮ್ಮೆ ಮಾಡಿದ ಅಧ್ಯಯನದಿಂದ ರಾಜ್ಯದ ವಿವಿಧ ಭಾಗದ ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಿರುವುದು ತಿಳಿದು ಬಂದಿದೆ.

ರಾಜ್ಯದ 19 ಸ್ಯಾಂಪಲ್​ಗಳಲ್ಲಿ ಲೋಹದ ಅಂಶ ಪತ್ತೆ!

ಎಫ್‌ಎಸ್‌ಎಸ್‌ಎಐ ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಹೇಳಿದ ಸಿಪಿಸಿಬಿ, ಐದು ಸದಸ್ಯರ ಸಮಿತಿಯನ್ನು ರಚಿಸಿ 72 ತರಕಾರಿ ಮಾದರಿಗಳನ್ನು ಸಂಗ್ರಹಿಸಿತ್ತು. ಇದರಲ್ಲಿ ನೆಲಮಂಗಲ, ರಾಜಾಜಿನಗರ, ಕೋಲಾರ ಮಾರುಕಟ್ಟೆಗಳಿಂದ 53 ಮಾದರಿಗಳು ಹಾಗೂ ನೆಲಮಂಗಲ, ಕೋಲಾರ, ಚಿಕ್ಕಬಳ್ಳಾಪುರ ಕೃಷಿ ಕ್ಷೇತ್ರಗಳಿಂದ ಉಳಿದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೀಸ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದೆ.

ಇದನ್ನೂ ಓದಿ ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!

ಯಾವ್ಯಾವ ತರಕಾರಿಗಳಲ್ಲಿ ಸೀಸ?

72 ತರಕಾರಿ ಮಾದರಿಗಳಲ್ಲಿ 19 ಮಾದರಿಗಳು ಮಾನದಂಡಕ್ಕಿಂತ ಹೆಚ್ಚಾದ ಸೀಸದ ಅಂಶ ಹೊಂದಿರುವುದು ಎಫ್‌ಎಸ್‌ಎಸ್‌ಎಐ ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಆರ್ಗ್ಯಾನಿಕ್ ಎಂದು ಮಾರಾಟವಾಗಿದ್ದ ಬದನೆಕಾಯಿಯಲ್ಲಿ 1.953 ಮಿ.ಗ್ರಾಂ/ಕೆಜಿ ಸೀಸ ಪತ್ತೆಯಾಗಿದ್ದು, ಇದು ನಿಗದಿತ 0.1 ಮಿ.ಗ್ರಾಂ ಮಿತಿಗಿಂತ ಸುಮಾರು 20 ಪಟ್ಟು ಹೆಚ್ಚಾಗಿದೆ. ತೊಂಡೆಕಾಯಿ, ಅವರೆಕಾಯಿ, ಸೊಪ್ಪು, ಕೋಸು ಸೇರಿದಂತೆ ಹಲವು ತರಕಾರಿಗಳಲ್ಲೂ ಮಿತಿಗಿಂತ ಹಲವು ಪಟ್ಟು ಅಧಿಕ ಸೀಸ ಕಂಡುಬಂದಿದೆ. ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್‌ರೂಟ್, ಹಾಗಲಕಾಯಿ, ಶಲಗಂ, ಸ್ಕ್ವಾಶ್ ಮತ್ತು ಮೆಣಸಿನಕಾಯಿ ಮಾದರಿಗಳಲ್ಲೂ ಅತಿಯಾದ ಅಂಶ ಪತ್ತೆಯಾಗಿದೆ.

ಮಣ್ಣಿನಲ್ಲೂ ಸಿಕ್ತು ವಿಷಕಾರಿ ಅಂಶ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ನೆಲಮಂಗಲ ಪ್ರದೇಶಗಳಿಂದ ಸಂಗ್ರಹಿಸಿದ 26 ಮಣ್ಣಿನ ಮಾದರಿಗಳಲ್ಲಿ 23 ಮಾದರಿಗಳು ದೂಷಿತವಾಗಿವೆ. ಇದು ಪ್ರಾಥಮಿಕ ವರದಿ ಮಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಸಮಗ್ರ ಅಧ್ಯಯನ ನಡೆಸುವಂತೆ ಸೂಚಿಸಲಾಗಿದೆ. ಪರಿಶೀಲನೆ ವೇಳೆ ಎಫ್‌ಎಸ್‌ಎಸ್‌ಆರ್ ಮಾನದಂಡಕ್ಕಿಂತ ಹೆಚ್ಚು ಪ್ರಮಾಣದ 12 ವಿಧದ ಕೀಟನಾಶಕ ಅವಶೇಷಗಳು ಪತ್ತೆಯಾಗಿವೆ. ಕ್ಯಾಪ್ಸಿಕಂ, ಮೆಣಸಿನಕಾಯಿ (ಬಜ್ಜಿ ಮೆಣಸು), ಶುಂಠಿ ಹಾಗೂ ಸೌತೆಕಾಯಿ ಮಾದರಿಗಳಲ್ಲಿ ಅತಿಯಾದ ಕೀಟನಾಶಕ ಅಂಶ ಕಂಡುಬಂದಿದೆ.

ಭಾರೀ ವಿಷಕಾರಿ ಕೀಟನಾಶಕವಾದ ಮೊನೋಕ್ರೋಟೊಫೋಸ್ ಕೂಡ ಪತ್ತೆಯಾಗಿದ್ದು, ಭಾರತದಲ್ಲಿ 2023ರಲ್ಲಿ ಇದನ್ನು ನಿಷೇಧಿಸಲಾಗಿತ್ತು. ಮೆಣಸಿನಕಾಯಿ ಮಾದರಿಗಳಲ್ಲಿ ನಿಗದಿತ 0.2 ಮಿ.ಗ್ರಾಂ/ಕೆಜಿ ಮಿತಿಗಿಂತ ಎರಡು ಪಟ್ಟು ಹೆಚ್ಚು ಮೊನೋಕ್ರೋಟೊಫೋಸ್ ಕಂಡುಬಂದಿದೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್

ಇದಲ್ಲದೆ ಏಸಿಫೇಟ್, ಇಥಿಯಾನ್, ಫಿಪ್ರೋನಿಲ್ ಹಾಗೂ ಪ್ರೊಫೆನೋಫೋಸ್ ಮುಂತಾದ ಕೀಟನಾಶಕಗಳು ಸಹ ಪತ್ತೆಯಾಗಿದ್ದು, ಅವುಗಳ ವಿಷಕಾರಿ ಪರಿಣಾಮದ ಹಿನ್ನೆಲೆಯಲ್ಲಿ ಯುರೋಪಿಯನ್ ಯೂನಿಯನ್‌ನಲ್ಲಿ ಈಗಾಗಲೇ ನಿಷೇಧಿಸಲಾಗಿದೆ ಆದರೆ ನಮ್ಮಲ್ಲಿ ಬಳಕೆಯಲ್ಲಿರುವುದು ಆತಂಕ ಸೃಷ್ಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:43 am, Mon, 23 February 26

Source link

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ.

ಅಂದು ರಾತ್ರಿ ಮಸೀದಿ ಒಳಗೆ ಸೇರಿಕೊಂಡು ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಬೇಕೆಂದು ಸಭೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಈ ಹೋರಾಟದ ಮೂಲಕ ಆರೋಪಿಗಳ ಬಂಧನಕ್ಕೆ ಒತ್ತಾಯಿಸಲು ಹಿಂದೂ ಸಮುದಾಯ ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026

T20 World Cup 2026: ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ 111 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಈ ಪಂದ್ಯದ ಆರಂಭದಲ್ಲಿ ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ ಎಂದು ಭಾವಿಸುತ್ತೇನೆ. ಏಕೆಂದರೆ ಆರಂಭದಲ್ಲಿ ನಾವು ನಿಜವಾಗಿಯೂ ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ. ಕೇವಲ 21 ರನ್​ಗಳಿಗೆ 3 ವಿಕೆಟ್ ಕಬಳಿಸಿ ನಮ್ಮ ಬೌಲರ್​ಗಳು ಆರಂಭಿಕ ಆಘಾತ ನೀಡಿದ್ದರು.

ಆದರೆ ಆ ಬಳಿಕ 7 ರಿಂದ 15ನೇ ಓವರ್​ವರೆಗೆ ಸೌತ್ ಆಫ್ರಿಕಾ ಬ್ಯಾಟರ್​ಗಳು ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಇದಾಗ್ಯೂ ಕೊನೆಯ ಹಂತದಲ್ಲಿ ನಮ್ಮ ಬೌಲರ್​ಗಳು ಉತ್ತಮ ದಾಳಿ ಸಂಘಟಿಸಿದ್ದರು. ಒಟ್ಟಾರೆಯಾಗಿ, ನಾವು ನಿಜವಾಗಿಯೂ ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ. ಅದೇ ರೀತಿ ನಾವು ಸ್ವಲ್ಪ ಉತ್ತಮವಾಗಿ ಬ್ಯಾಟಿಂಗ್ ಮಾಡಬಹುದಿತ್ತು.

ಏಕೆಂದರೆ 180-185  ರನ್​ಗಳ ಗುರಿಯನ್ನು ಬೆನ್ನಟ್ಟುತ್ತಿದ್ದರೆ, ನೀವು ಪವರ್‌ಪ್ಲೇಯಲ್ಲಿ ಪಂದ್ಯವನ್ನು ಗೆಲ್ಲಲು ಸಾಧ್ಯವಿಲ್ಲ. ಆದರೆ ನೀವು ಪವರ್‌ಪ್ಲೇಯಲ್ಲಿ ಪಂದ್ಯವನ್ನು ಕಳೆದುಕೊಳ್ಳಬಹುದು. ನಾವು ಪವರ್‌ಪ್ಲೇನಲ್ಲಿ ಹಲವಾರು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ.

ಆರಂಭದಲ್ಲೇ ವಿಕೆಟ್ ಕಳೆದುಕೊಂಡರೆ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಲು ಸಣ್ಣ ಸಣ್ಣ ಜೊತೆಯಾಟವಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ನಮ್ಮ ಸೋಲಿಗೆ ಮುಖ್ಯ ಕಾರಣ ಪವರ್​ಪ್ಲೇನಲ್ಲೇ ವಿಕೆಟ್ ಕಳೆದುಕೊಂಡಿರುವುದು. ಇದರಿಂದ ನಾವು ಪಾಠ ಕಲಿತಿದ್ದೇವೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಈ ಸೋಲಿನ ಹೊರತಾಗಿಯೂ ಸಕರಾತ್ಮಕ ವಿಷಯ ಎಂದರೆ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡಿದ ರೀತಿ. ಇಬ್ಬರೂ ಅತ್ಯುತ್ತಮವಾಗಿ ದಾಳಿ ಸಂಘಟಿಸಿದ್ದರು. ಇವರಿಬ್ಬರೂ ಎಸೆದ 8 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ 8 ಓವರ್​ಗಳ ಮೂಲಕ 45 ರಿಂದ 50 ರನ್ ಮಾತ್ರ ನೀಡಿದ್ದಾರೆ.

ಇಬ್ಬರೂ ಅನುಭವಿ ವೇಗಿಗಳು ನಮ್ಮ ತಂಡದಲ್ಲಿ ಇರುವುದು ಪ್ಲಸ್ ಪಾಯಿಂಟ್. ಇದಾಗ್ಯೂ ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ರೆ ಪಂದ್ಯವನ್ನು ಗೆಲ್ಲಬಹುದಿತ್ತು. ಈ ಸೋಲಿನ ಹೊರತಾಗಿಯೂ ನಾವು ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಚೆನ್ನಾಗಿ ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ, ಫೀಲ್ಡಿಂಗ್ ಮಾಡಿ ಪಂದ್ಯವನ್ನು ಗೆಲ್ಲುತ್ತೇವೆ. ಅಲ್ಲದೆ ಟೀಮ್ ಇಂಡಿಯಾ ತನ್ನ ಬ್ರಾಂಡ್ ಕ್ರಿಕೆಟ್​ ಅನ್ನು ಆಡಲಿದೆ. ಈ ಮೂಲಕ ಮುಂದಿನ ಪಂದ್ಯದಲ್ಲಿ ಕಂಬ್ಯಾಕ್ ಮಾಡುವುದಾಗಿ ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

Source link

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link