ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ – Kannada News | Davangere: Student commits suicide in private medical college hostel
ಪ್ರಾತಿನಿಧಿಕ ಚಿತ್ರImage Credit source: deccanchronicle ದಾವಣಗೆರೆ, ಫೆಬ್ರವರಿ 22: ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ (student) ಹಾಸ್ಟೆಲ್ನಲ್ಲಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿ ಇರುವ ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್ನ್ಯಾಷನಲ್ ಹಾಸ್ಟೆಲ್ನಲ್ಲಿ ನಡೆದಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ವಿಭಾಗದಲ್ಲಿ ಸ್ನಾತಕೋತ್ತರ…