Category Archives: Blog

Your blog category

IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ – Kannada News | India Women Dominate Australia T20s: Harmanpreet’s Team Wins Series 2 1

ಪ್ರಸ್ತುತ ಭಾರತ ಮಹಿಳಾ ಪಡೆ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಮೂರು ಮಾದರಿಗಳ ಸರಣಿಯನ್ನು ಆಡಲಿದೆ. ಅದರ ಭಾಗವಾಗಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಹರ್ಮನ್​ಪ್ರೀತ್ ಕೌರ್ ಪಡೆ ಪ್ರವಾಸವನ್ನು ಸರಣಿ ಗೆಲುವಿನೊಂದಿಗೆ ಆರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿದ್ದ ಭಾರತ ವನಿತಾ ಪಡೆ, ಎರಡನೇ ಪಂದ್ಯದಲ್ಲಿ ಸೋಲು ಕಂಡಿತ್ತು. ಆದರೆ ಮೂರನೇ ಹಾಗೂ ಸರಣಿ ನಿರ್ಧಾರಕ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಸ್ಪಿನ್ ಮ್ಯಾಜಿಕ್​ನ ನೆರವಿನಿಂದ ಭಾರತ ತಂಡ ಮೂರನೇ ಪಂದ್ಯವನ್ನು 17 ರನ್​ಗಳಿಂದ ಗೆದ್ದುಕೊಂಡು ಸರಣಿ ವಶಪಡಿಸಿಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 176 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 159 ರನ್ ಗಳಿಸಲಷ್ಟೇ ಶಕ್ತವಾಯಿತು.

Published On – 5:52 pm, Sat, 21 February 26

Source link

‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ – Kannada News | Priyanka Chopra Reveals Shocking Truth: “Was Forced to Leave Bollywood for Global Career

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ  (Priyanka Chopra) ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ಪ್ರಿಯಾಂಕಾ ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಅಮೆರಿಕಕ್ಕೆ ಹೋದರು. ಅಲ್ಲಿ ಅವರು ಮತ್ತೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದಾಗ್ಯೂ, ಅವರು ತಮ್ಮ ಹಾಲಿವುಡ್ ಪ್ರಯಾಣದ ಬಗ್ಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ನಾನು ಎಂದಿಗೂ ಬಾಲಿವುಡ್ ಬಿಡಲು ಬಯಸಲಿಲ್ಲ, ಆದರೆ ಹೊರಗೆ ಅವಕಾಶಗಳನ್ನು ಹುಡುಕಲು ನನ್ನನ್ನು ಬಲವಂತವಾಗಿ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ ಹೇಳಿದ್ದಾರೆ.

ಬಾಲಿವುಡ್‌ನಿಂದ ಹಾಲಿವುಡ್‌ಗೆ ಪ್ರಯಾಣ ಮಾಡಿದ ಬಗ್ಗೆ ಪ್ರಿಯಾಂಕಾ ಮುಕ್ತವಾಗಿ ಮಾತನಾಡಿದರು.
‘ನಾನು ಬಾಲಿವುಡ್ ಬಿಡಲು ಎಂದಿಗೂ ಬಯಸಿರಲಿಲ್ಲ. ನಾನು ಹಿಂದಿ ಚಿತ್ರಗಳಲ್ಲಿ ಕೆಲಸ ಮಾಡುತ್ತಿದ್ದಾಗ, ಅದಕ್ಕೆ ಸಾಕಷ್ಟು ಲಿಮಿಟೇಷನ್ ಇದೆ ಎನಿಸಿತು. ನಾನು ಏಳ್ಗೆ ಕಾಣಲು ಬಯಸಿದ್ದೆ. ಕಲಾವಿದನಾಗಿ ಅವಕಾಶಗಳನ್ನು ಹುಡುಕಲು ನನ್ನ ಮೇಲೆ ಒತ್ತಡವಿತ್ತು. ನಾನು ಅಮೆರಿಕದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದೆ’ ಎಂದಿದ್ದಾರೆ ಅವರು.

‘ನಮ್ಮ ಭಾರತೀಯ ಚಲನಚಿತ್ರಗಳು ನನಗೆ ತುಂಬಾ ಇಷ್ಟ. ವಾರಣಾಸಿ ಚಿತ್ರದ ಮೂಲಕ ಭಾರತಕ್ಕೆ ಮರಳುತ್ತಿದ್ದೇನೆ. ಈ ಬಗ್ಗೆ ನನಗೆ ತುಂಬಾ ಸಂತೋಷ ಇದೆ. ನಾನು ಎರಡರಲ್ಲಿ ಒಂದನ್ನು ಆಯ್ಕೆ ಮಾಡಬೇಕಾಗಿಲ್ಲ. ನಾನು ಎಂದಿಗೂ ಆಯ್ಕೆ ಮಾಡಿಲ್ಲ. ನಾನು ಎರಡರಲ್ಲೂ ಆ್ಯಕ್ಟೀವ್ ಆಗಿದ್ದೇನೆ. ಎರಡೂ ಕಡೆ ಕೆಲಸ ಮಾಡಲು ನನಗೆ ಇಷ್ಟ’ ಎಂದು ಪ್ರಿಯಾಂಕಾ ಹೇಳಿದರು.ಎರಡೂ ಸ್ಥಳಗಳಲ್ಲಿ ಕೆಲಸ ಮಾಡೋದು ಎಂದರೆ ಖುಷಿ ಎಂದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಗೆ ಹೋಲಿಸಿದ ಹಾಲಿವುಡ್ ಸ್ಟಾರ್ ವಿನ್ ಡೀಸೆಲ್

ಪ್ರಿಯಾಂಕಾ, ನಿಕ್ ಜೋನಸ್​​ನ ವಿವಾಹ ಆಗಿದ್ದಾರೆ. ಅವರು ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಪ್ರಾರಂಭಿಸಿದರು. ಆ ಬಳಿಕ ಅಲ್ಲಿಯೇ ಸೆಟಲ್ ಆದರು. ಮಹೇಶ್ ಬಾಬು ನಟನೆಯ ‘ವಾರಣಾಸಿ’ ಸಿನಿಮಾಗೆ ನಾಯಕಿ. ಈ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ – Kannada News | HD Kumaraswamy Reacts to Siddaramaiahs CM Tweet

ಬೆಂಗಳೂರು, ಫೆಬ್ರವರಿ 21: ಸಿಎಂ ಆಗಿರುವುದನ್ನು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದು ಸಿದ್ದರಾಮಯ್ಯ ಅವರ ಒಳಗಿನ ದುಗುಡವನ್ನು ತೋರಿಸುತ್ತದೆ. ಅಧಿಕಾರ ಶಾಶ್ವತವಲ್ಲ, ಸಿದ್ದರಾಮಯ್ಯ ಅವರು ಎಂಟು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಕೇವಲ ಕುರುಬ ಸಮುದಾಯದವರು ಮಾತ್ರವಲ್ಲ, ಮೈಸೂರಿನ ರಾಜಕಾರಣದಲ್ಲಿ ಜಾತಿ ಭೇದ ಮರೆತು ಹಲವು ಸಮಾಜಗಳು ಅವರ ರಾಜಕೀಯ ಬೆಳವಣಿಗೆಗೆ ಶಕ್ತಿ ತುಂಬಿವೆ. ಈ ಸಾಮಾನ್ಯ ಜ್ಞಾನ ಅವರಿಗೆ ಇಲ್ವಾ ಎಂದು ಪ್ರಶ್ನಿಸಿದರು. ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಸಮಾಜದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ನನ್ನ ಅಭಿಪ್ರಾಯ. ತಮ್ಮ ಪಕ್ಷದಲ್ಲಿ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ, ಆದರೆ ರಾಜ್ಯದ ಜನತೆಗೆ ನಿರಾಸೆ ಮಾಡಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ – Kannada News | Shirahatti MLA Dr Chandru Lamani Arrested in Bribery Case by Lokayukta

ಗದಗ, ಫೆ.21: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಅವರು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅವರ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗುತ್ತಿಗೆದಾರರೊಬ್ಬರಿಂದ 5 ಲಕ್ಷ ರೂ. ಕಮಿಷನ್ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಏಕಾಏಕಿ ದಾಳಿ ನಡೆಸಿದರು. ರಸ್ತೆ ಪಕ್ಕದಲ್ಲಿ ಒಂದು ಕೋಟಿ ರೂಪಾಯಿ ಮೊತ್ತದ ವಾಲ್ ನಿರ್ಮಾಣ ಮಾಡುವ ಕೆಲಸಕ್ಕೆ ಶಾಸಕರು 12 ಪರ್ಸೆಂಟ್ ಕಮಿಷನ್ ಕೇಳಿದ್ದರು. ನಂತರ 11 ಪರ್ಸೆಂಟ್​​​ ಗೆ ವ್ಯವಹಾರ ಕುದುರಿತ್ತು ಎನ್ನಲಾಗಿದೆ. ಈ ಹಣವನ್ನು ಅವರ ಪಿಎ ಮೂಲಕ ಸ್ವೀಕರಿಸಲು ಸೂಚಿಸಿದಾಗ, ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಇದೀಗ ಅವರನ್ನು ವಶಪಡೆದುಕೊಂಡು ವಿಚಾರಣೆ ಕರೆದುಕೊಂಡು ಹೋಗುವ ದೃಶ್ಯ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ.

ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್ ಬ್ರೋಸ್​​ನ ಖರೀದಿ ಮಾಡಿತ್ತು. ಈ ಡೀಲ್​​ನಿಂದ ನೆಟ್​ಫ್ಲಿಕ್ಸ್ ದೊಡ್ಡ ಲಾಭ ಕಾಣುತ್ತಿದೆ. ಅತಿ ದೊಡ್ಡ ಸ್ಟುಡಿಯೋನ ತನ್ನ ತೆಕ್ಕೆಗೆ ತೆಗೆದುಕೊಂಡ ಖುಷಿ ನೆಟ್​ಫ್ಲಿಕ್ಸ್​ಗೆ ಇದೆ. ಆದರೆ, ಈ ಸಂಸ್ಥೆ ಒಟಿಟಿ ಚಿತ್ರಗಳನ್ನು ನಿರ್ಮಿಸುತ್ತದೆ. ಹೀಗಾಗಿ, ಆ ನಿಟ್ಟಿನಲ್ಲಿ ಮಾತ್ರ ಯೋಚಿಸುತ್ತದೆ ಎಂಬ ಭಯ ಜೆಮ್ಸ್ ಕ್ಯಾಮೆರೂನ್ ಅವರದ್ದು.

‘ವಾರ್ನರ್ ಬ್ರದರ್ಸ್ ಡಿಸ್ಕವರಿಯನ್ನು ನೆಟ್‌ಫ್ಲಿಕ್ಸ್‌ಗೆ ಮಾರಾಟ ಮಾಡುವ ಪ್ರಸ್ತಾಪವು ಸಿನಿಮಾ ರಂಗಕ್ಕೆ ಹಾನಿ ತರುವಂಥದ್ದು. ನಾನು ಚಿತ್ರರಂಗ ಹಾಗೂ ರಂಗಭೂಮಿಗೆ ನನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದೇನೆ. ನನ್ನ ಎಲ್ಲಾ ಸಿನಿಮಾಗಳು ಕೆಳಮಟ್ಟದ ವಿಡಯೋ ಮಾರುಕಟ್ಟೆಗಳಲ್ಲಿಯೂ ಪ್ರದರ್ಶನಗೊಳ್ಳುತ್ತವೆ ಅನ್ನೋದು ನನಗೆ ಗೊತ್ತು. ಆದರೆ ನನ್ನ ಮೊದಲ ಪ್ರೀತಿ ಸಿನಿಮಾ’ ಎಂದು ಜೇಮ್ಸ್ ಕ್ಯಾಮೆರಾನ್ ಅಮೇರಿಕನ್ ಸೆನೆಟರ್ ಮೈಕ್ ಲೀಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಇಂತಹ ಒಪ್ಪಂದ ಜಾರಿಗೆ ಬಂದರೆ ಚಿತ್ರಮಂದಿರಗಳು ಮುಚ್ಚಲ್ಪಡುತ್ತವೆ ಎಂದು ಜೇಮ್ಸ್ ಕ್ಯಾಮೆರಾನ್ ಆತಂಕ ಹೊರಹಾಕಿದ್ದಾರೆ. ಈ ಡೀಲ್​​ನಿಂದ ಕೆಲವೇ ಸಿನಿಮಾಗಳು ನಿರ್ಮಾಣ ಆಗುತ್ತವಂತೆ. ಸಾಕಷ್ಟು ಜನರಿಗೆ ಕೆಲಸ ಕೊಟ್ಟ ಚಿತ್ರರಂಗಕ್ಕೆ ಇದರಿಂದ ನಷ್ಟ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಲಿವುಡ್ ಫೇಮಸ್ ಸ್ಟುಡಿಯೋನ 74 ಲಕ್ಷ ಕೋಟಿ ರೂಪಾಯಿಗೆ ಖರೀದಿಸಿದ ನೆಟ್​ಫ್ಲಿಕ್ಸ್

‘ಉಳಿದಿರುವ ಕೆಲವೇ ಚಲನಚಿತ್ರ ನಿರ್ಮಾಣ ಸ್ಟುಡಿಯೋಗಳಲ್ಲಿ ವಾರ್ನರ್ ಬ್ರದರ್ಸ್ ಒಂದಾಗಿದೆ. ಅದು ಕೂಡ ಪಥವನ್ನು ಬದಲಾಯಿಸಿದರೆ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಲಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ – Kannada News | LeT and Jaish may Target Temples In Delhi and Uttar Pradesh around Red Fort Intel Suggests

ನವದೆಹಲಿ, ಫೆಬ್ರವರಿ 21: ಪಾಕಿಸ್ತಾನ ಮೂಲದ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಕೆಂಪು ಕೋಟೆ ಮತ್ತು ಚಾಂದನಿ ಚೌಕ್ ಸುತ್ತಮುತ್ತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಒಳಗೊಂಡ ಪ್ರಮುಖ ಭಯೋತ್ಪಾದಕ ದಾಳಿಯನ್ನು (Terror Attack) ಪ್ಲಾನ್ ಮಾಡುತ್ತಿದೆ ಎಂಬ ಹೊಸ ಗುಪ್ತಚರ ಮಾಹಿತಿಯ ನಂತರ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರ ಟಾರ್ಗೆಟ್ ಪಟ್ಟಿಯಲ್ಲಿ ದೆಹಲಿ ಹಾಗೂ ಉತ್ತರ ಪ್ರದೇಶದ ದೇವಾಲಯವೂ ಸೇರಿರುವ ಸಾಧ್ಯತೆಯಿದೆ. ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ಪ್ರಯತ್ನವಾಗಿ ದಾಳಿಯ ಪ್ಲಾನ್ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ.

ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರ ವಹಿಸಿವೆ, ಪ್ರಮುಖ ಧಾರ್ಮಿಕ ಮತ್ತು ಪರಂಪರೆಯ ತಾಣಗಳ ಸುತ್ತಲೂ ನಿಯೋಜನೆಗಳನ್ನು ಹೆಚ್ಚಿಸಿವೆ. ವಾಹನಗಳು ಮತ್ತು ಜನಸಂದಣಿ ಕೇಂದ್ರಗಳ ಮೇಲೆ ತಪಾಸಣೆಗಳನ್ನು ತೀವ್ರಗೊಳಿಸಿವೆ. ಗುಪ್ತಚರ ಇಲಾಖೆ ಈ ಬಗ್ಗೆ ನಿರಂತರವಾಗಿ ತನಿಖೆ ನಡೆಸುತ್ತಿದೆ. ನವೆಂಬರ್ 2025ರಲ್ಲಿ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟದ ನಂತರವೂ ಈ ಎಚ್ಚರಿಕೆ ನೀಡಲಾಗಿತ್ತು. ದೇಶಾದ್ಯಂತದ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಏಜೆನ್ಸಿಗಳು ಈ ಬಗ್ಗೆ ಕಣ್ಣಿಟ್ಟಿವೆ.

ಇದನ್ನೂ ಓದಿ: Video: ಐಇಡಿ ನಿಷ್ಕ್ರಿಯ, ದೀಪಾವಳಿ ಸಮಯದಲ್ಲಿ ತಪ್ಪಿದ ದೊಡ್ಡ ಅನಾಹುತ, ಶೋಪಿಯಾನ್​ನಲ್ಲಿ ಭಯೋತ್ಪಾದಕ ದಾಳಿ ವಿಫಲ

ದೆಹಲಿಯ ಭದ್ರತಾ ಸಂಸ್ಥೆಗಳು ಮತ್ತು ಕೇಂದ್ರ ಪಡೆಗಳು ಸೂಕ್ಷ್ಮ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ಭಾರತದ ಅತ್ಯಂತ ಪ್ರಸಿದ್ಧ ಪರಂಪರೆಯ ತಾಣಗಳಲ್ಲಿ ಒಂದಾದ ಮತ್ತು ರಾಷ್ಟ್ರೀಯ ಹೆಮ್ಮೆಯ ಸಾಂಕೇತಿಕ ಸ್ಥಳವಾದ ಐತಿಹಾಸಿಕ ಕೆಂಪು ಕೋಟೆ ಮತ್ತು ಹಳೆಯ ದೆಹಲಿಯನ್ನು ಸುತ್ತುವರೆದಿರುವ ಜನನಿಬಿಡ ಮಾರುಕಟ್ಟೆಗಳು ಮತ್ತು ದೇವಾಲಯಗಳ ಸುತ್ತಲೂ ಭದ್ರತೆ ಹೆಚ್ಚಿಸಿವೆ. ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳ ನಡುವೆ ಹಂಚಿಕೊಂಡ ಗುಪ್ತಚರ ಮಾಹಿತಿಗಳು, ಲಷ್ಕರ್-ಎ-ತೈಬಾ ನಗರದಲ್ಲಿ ಐಇಡಿ ದಾಳಿಯನ್ನು ಯೋಜಿಸುತ್ತಿರಬಹುದು ಎಂದು ಹೇಳಿವೆ. ಇದು ಜನದಟ್ಟಣೆಯ ಸಾರ್ವಜನಿಕ ಪ್ರದೇಶಗಳು, ದೇವಸ್ಥಾನಗಳು ಮತ್ತು ಚಾಂದನಿ ಚೌಕ್ ಪ್ರದೇಶವನ್ನು ಗುರಿಯಾಗಿರಿಸಿಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ; ಕಾಶ್ಮೀರದ 1,500 ಜನರು ವಶಕ್ಕೆ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತೀಯ ಪಡೆಗಳು ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡವು. ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಮತ್ತು ಎಲ್‌ಇಟಿ ಸಂಸ್ಥಾಪಕ ಹಫೀಜ್ ಸಯೀದ್‌ನ ಸಹಚರರೊಂದಿಗೆ ಸಂಪರ್ಕ ಹೊಂದಿರುವ ಪ್ರಮುಖ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು.

Source link

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ – Kannada News | Snehamayi Krishna U turns after CCB interrogation; social activist apologizes to Shalini Rajneesh over alleged bribe claim

ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google

ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್​ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ ಹೊಡೆದಿದ್ದಾರೆ.

ನಿನ್ನೆಯಷ್ಟೇ ದೂರುದಾರ ಸ್ನೇಹಮಯಿ ಕೃಷ್ಣರನ್ನ ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ ಮಾಡಿತ್ತು. ಆಡಿಯೋವನ್ನ ಕೋರ್ಟ್​ಗೂ ಸಲ್ಲಿಕೆ ಮಾಡೋಕೂ ಸಜ್ಜಾಗಿದ್ದರು. ಆದರೆ ಕೋರ್ಟ್​ಗೆ ಸಲ್ಲಿಸೋಕೆ ಮುಂದಾಗ್ತಿದ್ದಂತೆಯೇ ಸಿಸಿಬಿ ವಶಕ್ಕೆ ಪಡೆದಿತ್ತು. ಜೊತೆಗೆ ಮೈಸೂರಿನ 2 ಮನೆ, ಒಂದು ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಕೆಲವು ಪ್ರಮುಖ ದಾಖಲೆಗಳನ್ನ ಸೀಜ್ ಮಾಡಿದ್ದರು.

ಇದನ್ನೂ ಓದಿ: ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ಇದೀಗ ಸಿಸಿಬಿ ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ.

ಮುಡಾ ಕೇಸ್​ಗೂ ಇದಕ್ಕೂ ಸಂಬಂಧ ಇಲ್ಲ ಅಂತಿರೋ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ನನ್ನ ಆರೋಪ ಸರಿಯಾಗೇ ಇದೆ ಅಂತಿದ್ದಾರೆ. ನಟೇಶ್, ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ಇದರಲ್ಲಿ ನನ್ನನ್ನೂ ಬಳಸಿಕೊಳ್ಳೋ ಪ್ರಯತ್ನ ಆಗಿತ್ತು ಅಂದಿದ್ದಾರೆ.

ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸ್ನೇಹಮಯಿ ಕೃಷ್ಣ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ವಿನೋದ್ ಮತ್ತು ನಟೇಶ್ ನಡುವಿನ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಆಡಿಯೋದಲ್ಲಿ, ಶಾಲಿನಿ ರಜನೀಶ್ ಅವರ ಬಗ್ಗೆ ನೀಡಲಾದ ಮಾಹಿತಿ ಸುಳ್ಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಹೀಗಾಗಿ ತಮ್ಮ ತಪ್ಪಿಗಾಗಿ ಶಾಲಿನಿ ರಜನೀಶ್​ಗೆ ಕ್ಷಮೆ ಕೋರಿದ್ದಾರೆ.

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಹಲವು ಅನುಮಾನ!

ಇನ್ನು ಶಾಲಿನಿ ರಜನೀಶ್ ವಿರುದ್ಧ ಆರೋಪದಲ್ಲಿ ಕೋರ್ಟ್​ಗೆ ಸಾಕ್ಷಿ ಸಲ್ಲಿಕೆಯಾಗೋದನ್ನ ತಪ್ಪಿಸೋ ಹುನ್ನಾರ ನಡೀತಾ? ಅನ್ನೋ ಅನುಮಾನವೂ ಇದೆ. ಇಂದು ಜನಪ್ರತಿನಿಧಿಗಳ ಕೋರ್ಟ್​ಗೆ ನಟೇಶ್​ ಮಾತನಾಡಿದ್ದ ಆಡಿಯೋ ಸಲ್ಲಿಕೆಗೂ ಮುಂದಾಗಿದ್ದರು. ಆದರೆ ಕೋರ್ಟ್​ಗೆ ಆಡಿಯೋ ಸಲ್ಲಿಕೆಗೂ ಮುನ್ನವೇ ಸ್ನೇಹಮಯಿಯನ್ನ ವಶಕ್ಕೆ ಪಡೆದಿರೋದು ಹಲವು ಅನುಮಾನಕ್ಕೂ ಕಾರಣವಾಗಿತ್ತು.

ಇನ್ನು ಕೇಸ್ ಇಲ್ಲಿಗೆ ಮುಗೀತಾ? ಇಲ್ಲ, ಆಡಿಯೋ ಮಾಡಿದ್ದ ವಿನೋದ್​ನನ್ನ ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಹಣಕಾಸು ವಿಚಾರದಲ್ಲಿ ನಟೇಶ್ ಮಾತನಾಡಿದ್ದ ಆಡಿಯೋವನ್ನ ಪರಿಶೀಲನೆ ಮಾಡಲಾಗುತ್ತಿದೆ. ಸ್ನೇಹಮಯಿ ವಶದ ವಿಚಾರದಲ್ಲಿ ಸಿಎಂ ಸೇರಿ ಹಲವರ ಕೈವಾಡ ಇದೆ ಅಂತಾ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಆರೋಪಿಸಿದರು. ಇದಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ, ಎಲ್ಲದನ್ನೂ ದ್ವೇಷ ಅನ್ನೋದು ಸರಿಯಲ್ಲ ಎಂದಿದ್ದಾರೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಆಗುತ್ತೆ ಅಂತಾ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಒಟ್ಟಿನಲ್ಲಿ ಶಾಲಿನಿ ರಜನೀಶ್ ವಿರುದ್ಧ ನನ್ನ ಆರೋಪ ಸುಳ್ಳು ಅಂತಾ ಸ್ನೇಹಮಯಿ ಕೃಷ್ಣ ಇದೀಗ ಉಲ್ಟಾ ಹೊಡೆದಿದ್ದಾರೆ. ಆದರೆ ಮುಡಾ ಮಾಜಿ ಆಯುಕ್ತ ನಟೇಶ್​ ಆಡಿಯೋದ ಬಗ್ಗೆ ಸಿಸಿಬಿ ತನಿಖೆ ಮುಂದುವರಿದಿದೆ.

ವರದಿ: ಬ್ಯರೋ ರಿಪೋರ್ಟ್​ TV9

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ವಾಯು ಮಾಲಿನ್ಯದಿಂದ ಅಲ್ಝೈಮರ್ ಹೇಗೆ ಉಂಟಾಗುತ್ತದೆ?

ಈ ಸಂಶೋಧನೆಯನ್ನು ಎಮೋರಿ ವಿಶ್ವವಿದ್ಯಾಲಯದ ತಂಡ ವೃದ್ಧರ ಮೇಲೆ ನಡೆಸಿದ್ದು ಅಧ್ಯಯನವು ಮಾಲಿನ್ಯದಲ್ಲಿರುವ ಅತ್ಯಂತ ಸಣ್ಣ ಕಣಗಳು ಉಸಿರಾಟದ ಮೂಲಕ ದೇಹವನ್ನು ಪ್ರವೇಶಿಸಿ ರಕ್ತಪ್ರವಾಹವನ್ನು ತಲುಪಬಹುದು ಇದೆ ಕಣಗಳು ಮುಂದೆ ಆಲ್ಝೈಮರ್ನ ಅಪಾಯವನ್ನು ಹೆಚ್ಚಿಸಬಹುದು ಎಂಬುದನ್ನು ಕಂಡುಹಿಡಿದಿದೆ. ಕಲುಷಿತ ಕಣಗಳು ಮೆದುಳನ್ನು ಪ್ರವೇಶಿಸಿ ಮೆದುಳಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದರಿಂದ ಈ ರೀತಿಯ ಅಪಾಯ ಹೆಚ್ಚಾಗುತ್ತದೆ. ಅದರಲ್ಲಿಯೂ ವಯಸ್ಸಾದವರಲ್ಲಿ ಇದು ಹೆಚ್ಚಾಗಿ ಕಂಡುಬರಬಹುದು. ಜೊತೆಗೆ ಈ ಹಿಂದೆ ಪಾರ್ಶ್ವವಾಯುವಿಗೆ ಒಳಗಾದವರಿಗೆ ಮಾಲಿನ್ಯದಿಂದಾಗಿ ಆಲ್ಝೈಮರ್ ಬರುವ ಅಪಾಯ ಹೆಚ್ಚಿದ್ದು ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಮತ್ತು ಖಿನ್ನತೆಗೆ ಕಾರಣವಾಗಬಹುದು.

ಇದನ್ನೂ ಓದಿ: ಅಲ್​ಝೈಮರ್​, ಕ್ಯಾನ್ಸರ್​ ನಿಯಂತ್ರಣಕ್ಕೆ ಅಣಬೆ!

ವಾಯು ಮಾಲಿನ್ಯದಿಂದ ದೇಹವನ್ನು ಸೇರುವ ಕಣಗಳು ಮೆದುಳಿನಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ, ಇದರಿಂದ ನರ ಅಸ್ವಸ್ಥತೆಗಳ ಅಪಾಯ ಹೆಚ್ಚಾಗುತ್ತದೆ, ಮೆದುಳಿನ ಕೋಶಗಳ (ನ್ಯೂರಾನ್‌ಗಳು) ನಡುವಿನ ಸಂವಹನವು ದುರ್ಬಲಗೊಳ್ಳುತ್ತದೆ. ಅಷ್ಟೇಅಲ್ಲ ಇದು ಮೆದುಳಿನಲ್ಲಿ ಟೌ ಪ್ರೋಟೀನ್ ಸಂಗ್ರಹಕ್ಕೂ ಕಾರಣವಾಗುತ್ತದೆ. ಇದು ಮೆದುಳಿನ ಸ್ಮರಣಶಕ್ತಿಗೆ ಸಂಬಂಧಿಸಿದ ಭಾಗಗಳ ಮೇಲೆ ಪರಿಣಾಮ ಬೀರುತ್ತದೆ ಕ್ರಮೇಣ ಆಲ್ಝೈಮರ್‌ಗೆ ಕಾರಣವಾಗಬಹುದು. ಹಾಗಾಗಿ ಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ವಾಸಿಸುವವರು ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಸಂಶೋಧನೆ ಹೇಳುತ್ತದೆ. ಮಾಲಿನ್ಯವು ಶ್ವಾಸಕೋಶದ ಕ್ಯಾನ್ಸರ್ ಮತ್ತು ಆಸ್ತಮಾದಂತಹ ಶ್ವಾಸಕೋಶದ ಕಾಯಿಲೆಗಳನ್ನು ಉಂಟುಮಾಡುವುದಲ್ಲದೆ, ಮೆದುಳಿಗೆ ಹಾನಿ ಮಾಡುತ್ತಿದೆ. ಇದು ಆಲ್ಝೈಮರ್ ಅಪಾಯವನ್ನು ಹೆಚ್ಚಿಸುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ! – Kannada News | Karnataka CET 2026: KEA Extends Application Date to Feb 27 – Don’t Miss Out!

ಬೆಂಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ.

ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು 3.18 ಲಕ್ಷ ಅಭ್ಯರ್ಥಿಗಳು ಯಶಸ್ವಿಯಾಗಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದಾರೆ.

ಎಕ್ಸ್​​ ಪೋಸ್ಟ್​​ ಇಲ್ಲಿದೆ ನೋಡಿ:

ಪ್ರಮುಖ ದಿನಾಂಕಗಳು:

ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2026 ರ ರಾತ್ರಿ 11:59 ರವರೆಗೆ.

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-03-2026 ರ ಸಂಜೆ 5:30 ರವರೆಗೆ.

ಇದನ್ನೂ ಓದಿ: SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಅರ್ಜಿ ಸಲ್ಲಿಸಿದವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ‘ಸ್ಯಾಟ್ಸ್’ (SATS) ಮೂಲಕ ಆನ್‌ಲೈನ್‌ನಲ್ಲಿ ಪರಿಶೀಲಿಸಲಾಗಿದೆ. ಇನ್ನು 1.08 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಲಾಗಿದೆ. ಅಭ್ಯರ್ಥಿಗಳು ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ತಕ್ಷಣವೇ ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ತನ್ನ ಎಕ್ಸ್​​ ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದೆ. ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in, ಕೆಇಎ ವೆಬ್‌ಸೈಟ್‌ನ ‘UGCET 2026 Online Application’ ಲಿಂಕ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ತೊಂದರೆ ಎದುರಾದರೆ 080-23460460 ಸಂಖ್ಯೆಗೆ ಕರೆ ಮಾಡಬಹುದು ಅಥವಾ keaugcet2026@gmail.com ಗೆ ಇಮೇಲ್ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link