ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ – Kannada News | Bangalore Victoria Hospital Scanning Crisis: MRI Breakdown Leaves Patients Stranded
ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ರೋಗಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಎಂಆರ್‌ಐ ಸ್ಕ್ಯಾನ್ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಬಿಲ್ಡಿಂಗ್ನಿಂದ ಬಿಲ್ಡಿಂಗ್ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ. ಮೂರೂ ಯಂತ್ರಗಳು ಖರಾಬು! ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ…