ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು: 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು – Kannada News | BSNL Officials Arrested for 70 Lakh Value Copper Cable Theft in Mangaluru
ಮಂಗಳೂರು/ಬೆಂಗಳೂರು, ಫೆಬ್ರವರಿ 20: ಬಿಎಸ್ಎನ್ಎಲ್ ಕಚೇರಿಯಲ್ಲಿ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರಿಂದ ಮೂವರು ಆರೋಪಿಗಳ ಬಂಧಿಸಲಾಗಿದ್ದು, BSNL ಅಸಿಸ್ಟೆಂಟ್ ಆಫೀಸ್ ಸೂಪರಿಂಟೆಂಡೆಂಟ್ ತನ್ವೀರ್ ಪಾಷಾ(50), ಟೆಲಿಕಾಂ ಟೆಕ್ನಿಶಿಯನ್ ಕೆ.ಕೆ.ಚಾಮಿ(59) ಹಾಗೂ L&T ಕಂಪನಿ ಕೇಬಲ್ ಜಾಯಿಂಟರ್ ಡಿ.ಮಂಜುನಾಥ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಉಂಡ ಮನೆಗೇ ಕನ್ನ…