PAK vs NAM: ಟಿ20 ವಿಶ್ವಕಪ್ನಲ್ಲಿ ಚೊಚ್ಚಲ ಶತಕ ಬಾರಿಸಿದ ಪಾಕ್ ಆರಂಭಿಕ – Kannada News | Sahibzada Farhan’s Maiden T20 Century: Pakistan Star Smashes 100 vs Namibia in World Cup
ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ನಮೀಬಿಯಾ ವಿರುದ್ಧದ ನಿರ್ಣಾಯಕ ಟಿ20 ವಿಶ್ವಕಪ್ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿ ತಂಡವನ್ನು 200 ರನ್ಗಳ ಗಡಿ ಮುಟ್ಟಿಸಿದರು. ಕೇವಲ 57 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ ಶತಕ ಬಾರಿಸಿದ ಸಾಹಿಬ್ಜಾದಾ ಫರ್ಹಾನ್ ಅವರಿಗೆ ಇದು ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಮೊದಲ ಶತಕವಾಗಿದೆ. ಈ ಪಂದ್ಯದಲ್ಲಿ ಕೊನೆಯವರೆಗೂ ಅಜೇಯರಾಗಿ ಉಳಿದ ಸಾಹಿಬ್ಜಾದಾ ಫರ್ಹಾನ್ 58 ಎಸೆತಗಳಲ್ಲಿ 100 ರನ್ ಕಲೆಹಾಕಿದರು. ತಮ್ಮ ಶತಕದ ಇನ್ನಿಂಗ್ಸ್ ಜೊತೆಗೆ…