Category Archives: Blog

Your blog category

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – Kannada News | Big Relief for Rahul Gandhi in Karnataka High Court Over BJP Defamation Case During Assembly Elections

ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್Image Credit source: tv9

ಬೆಂಗಳೂರು, ಫೆಬ್ರವರಿ 17: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ಇದರೊಂದಿಗೆ ರಾಹುಲ್ ಗಾಂಧಿ ನಿರಾಳರಾದಂತಾಗಿದೆ.

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ‘ಕರಪ್ಶನ್ ರೇಟ್ ಕಾರ್ಡ್’ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಹಂಚಿಕೊಂಡಿದ್ದರು. ಈ ವಿಚಾರವಾಗಿ ಅವರ ವಿರುದ್ಧ ದೂರು ದಾಖಲಾಗಿತ್ತು. ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬವರು ಖಾಸಗಿ ದೂರು ಸಲ್ಲಿಸಿದ್ದರು.

ಖಾಸಗಿ ದೂರಿನ ಆಧಾರದ ಮೇಲೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿತ್ತು. ಅದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಖಾಸಗಿ ದೂರನ್ನು ರದ್ದುಪಡಿಸಿದೆ.

(ಮಾಹಿತಿ ಅಪ್​​ಡೇಟ್ ಆಗಲಿದೆ)

Source link

ಐನೂರಲ್ಲ, ಆರು ನೂರಂತು ಅಲ್ಲವೇ ಅಲ್ಲ: ದಾಖಲೆಯ ಮೊತ್ತ ಪೇರಿಸಿದ ಕರ್ನಾಟಕ – Kannada News | Top Ranji Trophy Team Totals for Karnataka

ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 736 ರನ್​ ಕಲೆಹಾಕುವ ಮೂಲಕ. ಇದು ರಣಜಿ ಟೂರ್ನಿ ಇತಿಹಾಸದಲ್ಲೇ ಕರ್ನಾಟಕ ತಂಡ ಕಲೆಹಾಕಿದ ಎರಡನೇ ಗರಿಷ್ಠ ಸ್ಕೋರ್. ಅದರಲ್ಲೂ ಒಂದು ದಶಕದ ಬಳಿಕ ಕರ್ನಾಟಕ ಬ್ಯಾಟರ್​ಗಳು ಇನಿಂಗ್ಸ್​ವೊಂದರಲ್ಲಿ 700 ಕ್ಕೂ ಅಧಿಕ ರನ್​ಗಳಿಸಿದ್ದಾರೆ.

ಇದಕ್ಕೂ ಮುನ್ನ ಕರ್ನಾಟಕ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ 762 ರನ್​ಗಳು.  2014-15ರ ರಣಜಿ ಸೀಸನ್‌ ಫೈನಲ್‌ನಲ್ಲಿ ತಮಿಳುನಾಡು ವಿರುದ್ಧ 762 ರನ್​ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಇದಾದ ಬಳಿಕ ಕರುನಾಡ ಪಡೆಗೆ ಏಳು ನೂರಕ್ಕಿಂತ ಅಧಿಕ ಮೊತ್ತ ಗಳಿಸಲು ಸಾಧ್ಯವಾಗಿರಲಿಲ್ಲ.

ಆದರೆ ಈ ಬಾರಿಯ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕರ್ನಾಟಕ ತಂಡವು ಬರೋಬ್ಬರಿ 736 ರನ್​ ಕಲೆಹಾಕಿದ್ದಾರೆ. ಈ ಮೂಲಕ ನಾಲ್ಕನೇ  ಬಾರಿ ರಣಜಿ ಇನಿಂಗ್ಸ್​ನಲ್ಲಿ 700+ ರನ್​ ಕಲೆಹಾಕಿದ ಐತಿಹಾಸಿಕ ಸಾಧನೆ ಮಾಡಿದೆ.

ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡದ ಗರಿಷ್ಠ ಸ್ಕೋರ್:

  • 762 ರನ್ಸ್​: 2014-15ರ ರಣಜಿ ಸೀಸನ್​ನ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ಬರೋಬ್ಬರಿ 762 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ತಮಿಳುನಾಡು ತಂಡ ಎರಡು ಇನಿಂಗ್ಸ್​ಗಳ ಮೂಲಕ ಕಲೆಹಾಕಿದ್ದು 545 ರನ್​ಗಳು ಮಾತ್ರ. ಈ ಮೂಲಕ ಕರ್ನಾಟಕ ತಂಡ ಇನಿಂಗ್ಸ್​ ಮತ್ತು 217 ರನ್‌ಗಳ ಜಯ ಸಾಧಿಸಿತ್ತು.
  • 736 ರನ್ಸ್​: 2025-26ರ ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಕರ್ನಾಟಕ ತಂಡ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 736 ರನ್​ ಕಲೆಹಾಕಿದೆ.
  • 719 ರನ್ಸ್​: 2014-15ರ ಸೀಸನ್​ನಲ್ಲೇ ಉತ್ತರ ಪ್ರದೇಶ್ ವಿರುದ್ಧ ಕೂಡ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 719 ರನ್​​ಗಳಿಸಿ ಡಿಕ್ಲೇರ್ ಘೋಷಿಸಿತ್ತು. ಇದಾಗ್ಯೂ ಈ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸುವಲ್ಲಿ ಉತ್ತರ ಪ್ರದೇಶ ತಂಡ ಯಶಸ್ವಿಯಾಗಿದ್ದರು.
  • 705 ರನ್ಸ್: 1981–82 ರಲ್ಲಿ ನಡೆದ ರಣಜಿ ಸೀಸನ್​ನಲ್ಲಿ ದೆಹಲಿ ವಿರುದ್ಧ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 705 ರನ್ ಕಲೆಹಾಕಿದ್ದರು. ಆದರೆ ಇದಕ್ಕುತ್ತರವಾಗಿ ದೆಹಲಿ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 707 ರನ್​ಗಳಿಸಿತು. ಇದಾಗ್ಯೂ  ಮೊದಲ ಇನಿಂಗ್ಸ್​ನಲ್ಲಿನ 2 ರನ್​ಗಳ ಮುನ್ನಡೆಯ ಆಧಾರದ ಮೇಲೆ ಈ ಪಂದ್ಯವನ್ನು ದೆಹಲಿ ಗೆದ್ದುಕೊಂಡಿದ್ದರು.

ಬೃಹತ್ ಮೊತ್ತ ಕಲೆಹಾಕಿದ ಕರ್ನಾಟಕ:

ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಕೆಎಲ್ ರಾಹುಲ್ (141) ಶತಕ ಬಾರಿಸಿದರೆ, ನಾಯಕ ದೇವದತ್ ಪಡಿಕ್ಕಲ್ (232) ದ್ವಿಶತಕ ಸಿಡಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸ್ಮರಣ್ ರವಿಚಂದ್ರನ್ 135 ರನ್​ಗಳ ಇನಿಂಗ್ಸ್ ಆಡಿದ್ದಾರೆ. ಹಾಗೆಯೇ ಕೃತಿಕ್ ಕೃಷ್ಣ 60 ರನ್​ ಗಳಿಸಿದರೆ, ಕೆಳ ಕ್ರಮಾಂಕದಲ್ಲಿ ವಿದ್ಯಾಧರ್ ಪಾಟೀಲ್ 54 ರನ್​ಗಳ ಕೊಡುಗೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ತಂಡವು 194.4 ಓವರ್​ಗಳಲ್ಲಿ ಬರೋಬ್ಬರಿ 736 ರನ್​ಗಳಿಸಿ ಆಲೌಟ್ ಆಗಿದೆ.

ಇದನ್ನೂ ಓದಿ: ಅವರು ಗೆದ್ದು, ಇವರು ಸೋತರೂ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಔಟ್!

ಇದೀಗ ಮೂರನೇ ದಿನದಾಟ ನಡೆಯುತ್ತಿದ್ದು, ಇನ್ನೂ ಎರಡು ದಿನದಾಟಗಳು ಬಾಕಿಯಿದೆ. ಹೀಗಾಗಿ ಉತ್ತರಾಖಂಡ್​ ತಂಡವು 737 ರನ್​ಗಳ ಟಾರ್ಗೆಟ್​ನೊಂದಿಗೆ ಬ್ಯಾಟಿಂಗ್ ಮುಂದುವರೆಸಲಿದೆ. ಇದರ ನಡುವೆ ಕರ್ನಾಟಕ ತಂಡವು ಉತ್ತರಾಖಂಡ್ ಅನ್ನು ಆಲೌಟ್ ಮಾಡಿದರೆ ಮಾತ್ರ ಫೈನಲ್​ಗೇರಬಹುದು.

Published On – 11:12 am, Tue, 17 February 26

Source link

ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ – Kannada News | Government Land Grab: BJP Releases Documents Claiming Congress Allotted Land for Party Offices Across Karnataka

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)Image Credit source: tv9

ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ (Civic Amenity) ಸೈಟ್‌ಗಳನ್ನು ಪಡೆದುಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಅವರು ದಾಖಲೆಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳು, ತಾಲೂಕು ಮತ್ತು ಪಂಚಾಯತ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿಗಳಿಗೆ ಭೂಮಿ ಪಡೆದುಕೊಳ್ಳಲಾಗುತ್ತಿದೆ. ಬಡವರಿಗೆ ಮನೆ ಭೂಮಿ ನೀಡದೇ ಸರ್ಕಾರವೇ ಭೂ ಕಬಳಿಕೆಯಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದರು.

ತುಮಕೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಕಡೆಗಳಲ್ಲಿ ಪಕ್ಷದ ಕಚೇರಿಗಳಿಗಾಗಿ ಸಿಎ ಸೈಟ್‌ಗಳನ್ನು ನೀಡಲಾಗಿದೆ ಎಂದು ದಾಖಲೆಗಳ ಸಮೇತ ತಿಳಿಸಿದರು.

ಎಲ್ಲೆಲ್ಲಿ ಕಡಿಮೆ ಬೆಲೆಗೆ ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರಿ ಭೂಮಿ?

ಚಿಕ್ಕಬಳ್ಳಾಪುರದಲ್ಲಿ ಲಕ್ಷಾಂತರ ಮೌಲ್ಯದ ಸೈಟ್ ಕೇವಲ 22 ಲಕ್ಷ ರೂಪಾಯಿಗೆ, ಬಾದಾಮಿಯಲ್ಲಿ 1.22 ಲಕ್ಷ ರೂ,ಗೆ ನೀಡಲಾಗಿದೆ. ಎಸ್‌ಆರ್ ವ್ಯಾಲ್ಯೂನ ಕೇವಲ ಶೇ 5 ರ ಹಣ ನೀಡಿ ಸರ್ಕಾರ ಸೈಟ್‌ಗಳನ್ನು ಕಬಳಿಸುತ್ತಿದೆ ಎಂದು ಅವರು ದೂರಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಬೆಲೆಬಾಳುವ ಸೈಟ್‌ಗಳನ್ನು ಪಡೆದುಕೊಳ್ಳಲಾಗಿದ್ದು, ಸುಮಾರು 40 ಕೋಟಿ ರೂ. ಮೌಲ್ಯದ ಭೂಮಿಯನ್ನು ಕೇವಲ 2 ಕೋಟಿ ರೂ.ಗೆ ಪಡೆದುಕೊಂಡಿರುವುದು ಸರ್ಕಾರವೇ ಭೂಕಬಳಿಕೆ ಮಾಡಿರುವುದನ್ನು ತೋರಿಸುತ್ತದೆ ಎಂದು ಹೇಳಿದರು.

ನಗರ ಯೋಜನಾ ನಿಯಮಗಳ ಪ್ರಕಾರ ಸಿಎ ಸೈಟ್‌ಗಳನ್ನು ಸಾರ್ವಜನಿಕ ಸೇವೆಗಳಾದ ಶಾಲೆ, ಆಸ್ಪತ್ರೆ, ಉದ್ಯಾನವನಗಳಿಗಾಗಿ ಮಾತ್ರ ಬಳಸಬೇಕು. ಆದರೆ ರಾಜಕೀಯ ಪಕ್ಷದ ಕಚೇರಿಗಳಿಗೆ ನೀಡುವುದು ನಿಯಮ ಉಲ್ಲಂಘನೆ ಎನ್ನಲಾಗಿದೆ. ಆದಾಗ್ಯೂ ದೇವನಹಳ್ಳಿ ಪಟ್ಟಣದಲ್ಲಿ ಸುಮಾರು 17 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಸಿಎ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೀಡುವ ಪ್ರಸ್ತಾವವೂ ವಿವಾದಕ್ಕೆ ಕಾರಣವಾಗಿದೆ.

ಏತನ್ಮಧ್ಯೆ, ಗ್ರಾಮ ಪಂಚಾಯತ್ ಭೂಮಿಯನ್ನು ಪಕ್ಷದ ಕಚೇರಿಗೆ ಲೀಸ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಪ್ರಸ್ತಾವವನ್ನು ತಿರಸ್ಕರಿಸಿರುವ ಘಟನೆ ಕೂಡ ನಡೆದಿರುವ ಬಗ್ಗೆ ವರದಿಯಾಗಿದೆ.

ವಿಧಾನ ಪರಿಷತ್​​ನಲ್ಲಿ ಸರ್ಕಾರ ತಿಳಿಸಿದ್ದೇನು?

ವಿಧಾನ ಪರಿಷತ್​​ನಲ್ಲಿ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಉಡುಪಿಯ ಅಂಜಾರು ಗ್ರಾಮ, ಕಾರ್ಕಳದ ಕುಕ್ಕುಂದೂರು ಹಾಗೂ ಕುಂದಾಪುರದಲ್ಲಿ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಭವನಕ್ಕೆ ನೀಡಲಾಗಿದೆ.

ಇದನ್ನೂ ಓದಿ: ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು: ಸಚಿವ ಪ್ರಿಯಾಂಕ್ ಖರ್ಗೆ

ಈ ಎಲ್ಲ ಬೆಳವಣಿಗೆಗಳನ್ನು ಉಲ್ಲೇಖಿಸಿರುವ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಆಸ್ತಿಯನ್ನು ಪಕ್ಷದ ಹಿತಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಈ ಸೈಟ್‌ಗಳನ್ನು ಸರ್ಕಾರ ವಾಪಸ್ ಪಡೆಯಬೇಕು, ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ – Kannada News | Bengaluru Police Seize 1.5 Crore Worth Drugs; Senegal National Detained in Major Bust

ಬೆಂಗಳೂರು, ಫೆಬ್ರವರಿ 17: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಡ್ರಗ್ಸ್​​ ದಂಧೆಕೋರರ ಹಾವಳಿ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಖಾಕಿ ಕಾರ್ಯಾಚರಣೆಗೂ ಬಗ್ಗದ ಖದೀಮರು ಪೊಲೀಸರ ಕಣ್ತಪ್ಪಿಸಿ ದಂಧೆ ಮುಂದುವರಿಸಿದ್ದಾರೆ. ನಗರದ ವಿವಿಧೆಡೆ ಡ್ರಗ್ಸ್ ಮಾರುತ್ತಿದ್ದ ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಎಂಬಾತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 29 LSD ಮಾತ್ರೆ, 546 ಗ್ರಾಂ MDMA, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್​​​, 27 LSD ಸ್ಟ್ರಿಪ್ಸ್​​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದು, ಈ ಹಿಂದೆಯೂ ಈತನನ್ನು ಬಂಧಿಸಿ ಗಡಿಪಾರು ಮಾಡಲಾಗಿತ್ತು. ಆದರೆ ಮತ್ತೆ ಡ್ರಗ್ಸ್ ಮಾರಾಟದಲ್ಲಿ ನಿರತನಾಗಿದ್ದ ಈತ ಖಾಕಿ ಕೈಗೆ ಸಿಕ್ಕಿಬಿದ್ದಿದ್ದು, ಮತ್ತೊಂದು ಹೆಸರಿನಲ್ಲಿ ಆರೋಪಿ ದಾಖಲಾತಿ ಮಾಡಿಸಿಕೊಂಡಿದ್ದೇಗೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಮಾದಕದ್ರವ್ಯ ಸಾಗಾಟ: ವಿದೇಶಿ ಮಹಿಳೆ ವಶಕ್ಕೆ

ವಶಕ್ಕೆ ಪಡೆಯಲಾದ ಮಾದಕ ವಸ್ತು

ಅಕ್ರಮವಾಗಿ ಬೆಂಗಳೂರಿಗೆ ಮಾದಕದ್ರವ್ಯ ಸಾಗಾಣೆ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್​​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಕಾಶ್ ಏರ್ ಲೈನ್ಸ್ ನಲ್ಲಿ‌ ಆಗಮಿಸಿದ್ದ ಮಹಿಳಾ ಪ್ರಯಾಣಿಕಳ ಬಳಿ ಇದ್ದ ಸುಮಾರು 2.5 ಕೆಜಿ ಮೆಥಾಂಪೆಟಮೈನ್ ಗಾಂಜಾವನ್ನು ಸೀಜ್​​ ಮಾಡಲಾಗಿದೆ. ವಶಕ್ಕೆ ಪಡೆಯಲಾದ ಮಹಿಳೆ ನೈಜಿರಿಯಾ ಮೂಲದ ವೆರೋನಿಕಾ ಎಮ್ಯಾನುಯೆಲ್ ಎಂದು ಗೊತ್ತಾಗಿದ್ದು, ಆಕೆಯ ವಿಚಾರಣೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು – Kannada News | The cow petted the calf despite the woman’s words.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ತನ್ನ ಸಾಕಿದ ಮಾಲೀಕರಿಗೆ ಈ ಪ್ರಾಣಿಗಳು ವಿಧೇಯವಾಗಿರುತ್ತದೆ. ಈ ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮುಗ್ಧತೆ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಮನೆ ಒಡತಿಯ ಮಾತು ಕೇಳಿ ಹಸುವೊಂದು ಕರುವನ್ನು ಮುದ್ದಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗೋಮಾತೆ ರಾಷ್ಟ್ರಧರ್ಮ (Gomathe Rastradharma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಹಸುವಿಗೆ ನಿನ್ನ ಮಗುವಿನ ಮೈಯನ್ನು ನೆಕ್ಕು ಮಗ ಎಂದು ಹೇಳುತ್ತಿರುವುದನ್ನು ಕಾಣಬಹುದು. ಮನೆ ಒಡತಿಯ ಮಾತು ಕೇಳಿದ ಹಸು ಕರುವಿನ ಮೈಯನ್ನೆಲ್ಲಾ ನೆಕ್ಕುತ್ತಾ ಮುದ್ದಿಸುತ್ತಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುದ್ದಾಗಿದೆ ಎಂದರೆ, ಮತ್ತೊಬ್ಬರು ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಪ್ರಾಣಿಗಳನ್ನು ಪ್ರೀತಿಸಿದರೆ, ಅವು ಅಷ್ಟೇ ಪ್ರೀತಿಯನ್ನು ನಮಗೆ ತೋರಿಸುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ?

ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ.

ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು ವಕ್ಕುಂದ ಸೇರಿದಂತೆ ಮೂವರು ಯುವಕರಿಗೆ ಮದುವೆಯ ಭರವಸೆ ನೀಡಿ ಹಣ ಪಡೆದುಕೊಂಡಿದ್ದಾಳೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ ಗರ್ಲ್​ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ಗುರು ವಕ್ಕುಂದ ಎನ್ನುವವರಿಂದ 7 ಲಕ್ಷ ರೂ. ಹಣ ಪಡೆದುಕೊಂಡಿದ್ದಾಳೆ ಎನ್ನಲಾಗಿದ್ದು, ಬಳಿಕ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದು ಗುರು ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ್ದು, ಸಧ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಗುರುನ ಆರೋಗ್ಯ ವಿಚಾರಿಸಲು ಬಂದಿದ್ದ ಐಶ್ವರ್ಯಳನ್ನು ಆತನ ಕುಟುಂಬಸ್ಥರು ಲಾಕ್ ಮಾಡಿ, ಹಣ ಮರಳಿ ನೀಡಬೇಕು ಅಥವಾ ಮದುವೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಜಿಲ್ಲಾಸ್ಪತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ಯುವತಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಳು. ಆದರೆ ಕುಟುಂಬಸ್ಥರು ಬೆನ್ನತ್ತಿ ಹಿಡಿದಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್ – Kannada News | Mohammed Shami Has taken 8 Wickets In Ranji Trophy

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಬೆಂಗಾಲ್ ತಂಡಗಳು ಮುಖಾಮುಖಿಯಾಗಿವೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಜಮ್ಮು-ಕಾಶ್ಮೀರ ತಂಡವು ಬೆಂಗಾಲ್ ತಂಡವನ್ನು 328 ರನ್​ಗಳಿಗೆ ಆಲೌಟ್ ಮಾಡಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್​ಗಳಿಸಿ ಆಲೌಟ್ ಆಗಿದೆ. ಬೆಂಗಾಲ್ ಪರ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಶಮಿ 22.1 ಓವರ್​ಗಳಲ್ಲಿ 90 ರನ್ ನೀಡಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದಾರೆ.

ವಿಶೇಷ ಎಂದರೆ ಇದು ಮೊಹಮ್ಮದ್ ಶಮಿ ಅವರ ಫಸ್ಟ್ ಕ್ಲಾಸ್ ಕ್ರಿಕೆಟ್​ನ ಬೆಸ್ಟ್ ಬೌಲಿಂಗ್ ಪ್ರದರ್ಶನವಾಗಿದೆ. ಈ ಹಿಂದೆ ಅವರು 79 ರನ್​ಗೆ 7 ವಿಕೆಟ್ ಪಡೆದಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಇದೀಗ 90 ರನ್​ಗಳಿಗೆ 8 ವಿಕೆಟ್ ಉರುಳಿಸುವ ಮೂಲಕ ಶಮಿ ಜೀವಮಾನದ ಬೆಸ್ಟ್ ಬೌಲಿಂಗ್ ಪ್ರದರ್ಶಿಸಿದ್ದಾರೆ.

ಈ ಬೌಲಿಂಗ್ ಪ್ರದರ್ಶನದೊಂದಿಗೆ ಮೊಹಮ್ಮದ್ ಶಮಿ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ. ಅದರಂತೆ ಮುಂಬರುವ ಟೆಸ್ಟ್ ಸರಣಿಯಲ್ಲಿ ಶಮಿಗೆ ಮತ್ತೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

 

Source link

ಇಳಯರಾಜಗೆ ತಿರುಗುಬಾಣವಾದ ಕಾಪಿರೈಟ್ ಅಸ್ತ್ರ, ಶಾಕ್ ಕೊಟ್ಟ ಹೈಕೋರ್ಟ್ – Kannada News | Delhi High court gives big shock to Ilaiyaraja in Copyright case

ಇಳಯರಾಜ (Ilayaraja) ಭಾರತದ ಲಿಜೆಂಡರಿ ಸಂಗೀತ ನಿರ್ದೇಶಕರುಗಲ್ಲಿ ಒಬ್ಬರು. ಹಲವಾರು ಅತ್ಯದ್ಭುತ ಹಾಡುಗಳನ್ನು ಇಳಯರಾಜ ನೀಡಿದ್ದಾರೆ. ಆದರೆ ಇತ್ತೀಚೆಗೆ ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ತಮ್ಮ ಕಾಪಿರೈಟ್ ಕೇಸುಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದರ ಹಿಂದೊಂದರಂತೆ ಇಳಯರಾಜ ಅವರು ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್ ಕೇಸುಗಳನ್ನು ಹಾಕಿದ್ದಾರೆ ಮಾತ್ರವಲ್ಲದೆ ಹಲವಾರು ಕೇಸುಗಳಲ್ಲಿ ಇಳಯರಾಜ ಪರವಾಗಿಯೇ ಆದೇಶ ಬಂದಿದೆ. ಆದರೆ ಈಗ ಅದೇ ಕಾಪಿರೈಟ್ ಅಸ್ತ್ರ ಇಳಯರಾಜ ಅವರಿಗೆ ತಿರುಗುಬಾಣವಾಗಿದೆ.

ಇಳಯರಾಜ, ವಿರುದ್ಧ ಖ್ಯಾತ ಸಂಗೀತ ಸಂಸ್ಥೆ ಸಾರೆಗಾಮ ದೆಹಲಿ ಹೈಕೋರ್ಟ್​​ನಲ್ಲಿ ದಾವೆ ಹೂಡಿತ್ತು. ತಮ್ಮ ಒಡೆತನದಲ್ಲಿರುವ ಹಾಡುಗಳನ್ನು ಇಳಯರಾಜ ಅವರು ಅಮೆಜಾನ್ ಮ್ಯೂಸಿಕ್ಸ್, ಐಟ್ಯೂನ್ ಸೇರಿದಂತೆ ಬೇರೆ ಬೇರೆ ಸಂಸ್ಥೆಗಳಿಗೆ ಹಾಗೂ ಕೆಲವು ನಿರ್ಮಾಣ ಸಂಸ್ಥೆಗಳಿಗೆ ಮಾರಾಟ ಮಾಡಿದ್ದಾರೆ ಎಂದು ಸಾರೆಗಾಮ ದೂರು ದಾಖಲಿಸಿತ್ತು.

ಸಾರೆಗಾಮದ ದೂರಿನ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಇಳಯರಾಜ ಅವರು ಸಾರೆಗಾಮದ ಒಡೆತನದಲ್ಲಿರುವ 130 ಸಿನಿಮಾಗಳ ಹಾಡುಗಳ ಮೇಲೆ ಹಕ್ಕು ಹೊಂದಿರುವುದಿಲ್ಲ ಎಂದು ಆದೇಶ ನೀಡಿದೆ. ಮಾತ್ರವಲ್ಲದೆ ಯಾವುದೇ ಸಿನಿಮಾದ ಸಂಗೀತಕ್ಕೆ ಆ ಸಿನಿಮಾದ ನಿರ್ಮಾಪಕನೇ ಮೊದಲ ಹಕ್ಕುದಾರ ಆಗಿರುತ್ತಾನೆ, ಆತನಿಂದ ಹಕ್ಕು ಪಡೆದ ಸಂಗೀತ ಸಂಸ್ಥೆಗಳು ಸಹ ಹಕ್ಕುದಾರರಾಗಿರುತ್ತವೆ. ಒಂದೊಮ್ಮೆ ಒಪ್ಪಂದ ಬೇರೆ ರೀತಿಯಲ್ಲಿ ಆಗಿದ್ದರೆ ಮಾತ್ರವೇ ಬೇರೆಯವರು ಹಕ್ಕುದಾರರಾಗಿರುತ್ತಾರೆ ಎಂದಿದೆ ನ್ಯಾಯಾಲಯ.

ಇದನ್ನೂ ಓದಿ:4.50 ಕೋಟಿ ಮೌಲ್ಯದ ವಜ್ರದ ಕಿರೀಟ ಕೊಟ್ಟ ಬಳಿಕ ಇಳಯರಾಜ ಮಾತು

ತಮಿಳು, ಹಿಂದಿ, ತೆಲುಗು, ಕನ್ನಡ, ಮಲಯಾಳಂನ 130 ಸಿನಿಮಾಗಳ ಮೇಲಿನ ಹಕ್ಕುಗಳನ್ನು ಇಳಯರಾಜ ಕಳೆದುಕೊಂಡಂತಾಗಿದೆ. ಇಳಯರಾಜ ಅವರು ಸಿನಿಮಾ ಹಾಡುಗಳನ್ನು ವಿವಿದ ಥರ್ಡ್ ಪಾರ್ಟಿ ಸಂಗೀತ ಅಪ್ಲಿಕೇಶನ್​​ಗಳಿಗೆ ತಮ್ಮ ಟೈಟಲ್​​ನ ಅಡಿಯಲ್ಲಿ ಹಾಡುಗಳನ್ನು ಮಾರಾಟ ಮಾಡಿದ್ದರು. ಆದರೆ ಈಗ ಸಾರೆಗಾಮದ ಕೇಸಿನಿಂದಾಗಿ ಇಳಯರಾಜ ಅವರು ಹಲವು ಹಾಡುಗಳ ಹಕ್ಕುಗಳನ್ನು ಕಳೆದುಕೊಂಡಂತಾಗಿದೆ.

ಇಳಯರಾಜ ಅವರು ಕಳೆದ ಕೆಲ ವರ್ಷಗಳಿಂದ ಹಲವಾರು ಸಿನಿಮಾಗಳು, ಗಾಯಕರುಗಳ ವಿರುದ್ಧ ಕಾಪಿರೈಟ್ ಪ್ರಕರಣಗಳನ್ನು ದಾಖಲಿಸುತ್ತಲೇ ಬಂದಿದ್ದಾರೆ. ತಮ್ಮ ಆತ್ಮೀಯ ಗೆಳೆಯ ಎಸ್​​ಪಿ ಬಾಲಸುಬ್ರಹ್ಮಣ್ಯಂ ಅವರಿಗೂ ಸಹ ತಮ್ಮ ನಿರ್ದೇಶನದ ಹಾಡುಗಳನ್ನು ಲೈವ್ ಶೋನಲ್ಲಿ ಹಾಡದಂತೆ ನೊಟೀಸ್ ನೀಡಿದ್ದರು. ಇತ್ತೀಚೆಗೆ ‘ಮಂಜ್ಞುಮೆಲ್ ಬಾಯ್ಸ್’, ‘ಡ್ಯೂಡ್’, ‘ಗುಡ್ ಬ್ಯಾಡ್ ಅಗ್ಲಿ’ ಇನ್ನೂ ಕೆಲವಾರು ಸಿನಿಮಾಗಳ ಮೇಲೆ ಕೇಸು ಹೂಡಿದ್ದಾರೆ. ಸೋನಿ ಮ್ಯೂಸಿಕ್, ಅಮೆಜಾನ್ ಮ್ಯೂಸಿಕ್, ಸಾರೆಗಾಮ ಇನ್ನೂ ಕೆಲವು ಸಂಸ್ಥೆಗಳ ಮೇಲೂ ಸಹ ಇಳಯರಾಜ ಅವರು ಕೇಸು ದಾಖಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ – Kannada News | Gilli Nata Happily Took Fans Gift in Anekal

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್​​ನಲ್ಲಿ ನಡೆದ ಈವೆಂಟ್​​​ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್​​ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಇರಲಿದೆ ಕಠಿಣ ನಿಯಮ – Kannada News | Vijay Rashmika Wedding: Udaipur Dates, Strict Mobile Ban and Reception Details Revealed

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandannna) ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತವಾಗಿದೆ. ಉದಯಪುರದಲ್ಲಿ ಇವರ ವಿವಾಹ ನಡೆಯುತ್ತಿದೆ. ಈಗಾಗಲೇ ದಂಪತಿಯ ವಿವಾಹ ಆಮಂತ್ರಣದ ಫೋಟೋಗಳು ವೈರಲ್ ಆಗಿವೆ. ಹೀಗಿರುವಾಗಲೇ ಈ ದಂಪತಿ ಮದುವೆ ನಡೆಯೋ ಜಾಗದಲ್ಲಿ ತೆಗೆದುಕೊಂಡು ಬಂದ ನಿಯಮದ ಬಗ್ಗೆ ಸುದ್ದಿ ಹರಿದಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಯ ಸುಂದರ ಕ್ಷಣಗಳನ್ನು ಸೆರೆ ಹಿಡಿಯಲು ಟೀಂ ಒಂದನ್ನು ಆಯ್ಕೆ ಮಾಡಿದೆ. ಈ ತಂಡ ತಮ್ಮ ಕ್ಯಾಮೆರಾ ಮೂಲಕ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಮಾಡಲಿದೆ. ಈ ಫೋಟೋಗನ್ನು ಎಲ್ಲಿಯೂ ರಿವೀಲ್ ಮಾಡುವುದಿಲ್ಲ ಮತ್ತು ಹಂಚಿಕೊಳ್ಳುವುದಿಲ್ಲ ಎಂದು ಒಪ್ಪಂದ ಮಾಡಿಕೊಂಡು ಸಹಿ ಹಾಕಿಸಿಕೊಳ್ಳಲಾಗಿದೆ.

ಇನ್ನು, ವಿಜಯ್ ಮದುವೆಗೆ ಆಪ್ತರು ಹಾಗೂ ಸ್ನೇಹಿತರು ಮಾತ್ರ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಹೀಗಾಗಿ, ಅವರ್ಯಾರು ಮೊಬೈಲ್ ತರದಂತೆ ಕಠಿಣ ನಿಯಮವನ್ನು ಮಾಡಲಾಗಿದೆ. ಮದುವೆಗೆ ಬರೋ ಅತಿಥಿಗಳು ಮೊಬೈಲ್​​​ ಅನ್ನು ತರುವಂತಿಲ್ಲ. ಮೊಬೈಲ್ ಬಳಕೆ ತಡೆಯಲು ಚೆಕಿಂಗ್ ಇರುತ್ತದೆ. ವಿವಾಹ ನಡೆಯೋ ಜಾಗದಲ್ಲಿಯೂ ಈ ಬಗ್ಗೆ ಕಣ್ಣಿಡಲು ಜನರನ್ನು ನೇಮಿಸಲಾಗಿದೆ.

ಈ ರೀತಿಯ ಫೋಟೋ-ವಿಡಿಯೋ ಲೀಕ್ ಆಗದಂತೆ ನೋಡಿಕೊಳ್ಳುವುದು ರಶ್ಮಿಕಾ-ವಿಜಯ್​​ಗೆ ಇರೋ ದೊಡ್ಡ ಚಾಲೆಂಜ್. ಈ ಮೊದಲು ಕತ್ರಿನಾ ಕೈಫ್-ವಿಕ್ಕಿ ಕೌಶಲ್ ದಂಪತಿ, ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಕೂಡ ಮೊಬೈಲ್ ತರದಂತೆ ನಿಯಮ ತಂದಿದ್ದರು. ಆ ತಂತ್ರ ಕೆಲಸ ಮಾಡಿತ್ತು. ಈಗ ರಶ್ಮಿಕಾ-ವಿಜಯ್ ಕೂಡ ಇದೇ ಪಾಲಿಸಿ ಅಳವಡಿಸಿಕೊಳ್ಳುತ್ತಿದ್ದಾರೆ.

ಚಿತ್ರರಂಗದ ಯಾರನ್ನೂ ಮದುವೆಗೆ ಆಮಂತ್ರಿಸಿಲ್ಲ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಅವರು ಹಲವು ಸೆಲೆಬ್ರಿಟಿಗಳ ಜೊತೆ ಕೆಲಸ ಮಾಡಿದ್ದಾರೆ. ಅವರೆಲ್ಲರನ್ನೂ ಹೈದರಾಬಾದ್​​ನ ಆರತಕ್ಷತೆಗೆ ಆಮಂತ್ರಿಸಲಾಗುತ್ತಿದೆ. ಮದುವೆ ಕೇವಲ ಆಪ್ತರ ಸಮ್ಮುಖದಲ್ಲಿ ನಡೆಯುತ್ತಿದೆ ಎಂಬುದು ವಿಶೇಷ.

ಇದನ್ನೂ ಓದಿ: ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ

ವಿಜಯ್ ಹಾಗೂ ರಶ್ಮಿಕಾ ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದೆ. ಇದರಲ್ಲಿ ವಿವಾಹ ದಿನಾಂಕ ಫೆಬ್ರವರಿ 26 ಎಂದಿದೆ. ಮಾರ್ಚ್​ 4ರಂದು ಹೈದರಾಬಾದ್​​​ನ್ಲಿ ಆರತಕ್ಷತೆ ಇದೆ ಎಂಬ ಮಾಹಿತಿಯೂ ರಿವೀಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link