ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ! ಕಳ್ಳರ ಕಾಟಕ್ಕೆ ಜನ ಕಂಗಾಲು – Kannada News
ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ!Image Credit source: The Hindu ಬೆಂಗಳೂರು, ಜೂನ್ 12: ಗಾಂಧಿ ಬಜಾರ್‌ನಲ್ಲಿ (Gandhibazar) ಹಬ್ಬ ಹರಿದಿನಗಳಿರಲಿ ಅಥವಾ ವೀಕೆಂಡ್ ಇರಲಿ, ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸುತ್ತಾರೆ. ಆದರೆ, ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಇಲ್ಲಿಗೆ ಬರಲು ಮಹಿಳೆಯರು ಮತ್ತು ಮಕ್ಕಳು ತೀವ್ರ ಭಯಪಡುತ್ತಿದ್ದಾರೆ. ಇದಕ್ಕೆ ಕಾರಣ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬಸವನಗುಡಿಯ ಗಾಂಧಿ ಬಜಾರ್ ರಸ್ತೆ ಈಗ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಮುಖ್ಯಾಂಶಗಳು…