ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ – Kannada News | Kunigal Native Priyanka Missing After Attending Wedding: Undergarments, Slippers, Bag Found Near Kalkere in Belur
ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತಯಾದ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದಾರೆ. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ (Hassan) ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಅವರು ನಿಗೂಢವಾಗಿ ಕಣ್ಮರೆಯಾಗಿರುವುದು ತಿಳಿದುಬಂದಿದೆ. ಕಾಣೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ…