ಪ್ರೇಯಸಿಯನ್ನು ಸೇತುವೆಯಿಂದ ತಳ್ಳಿ ಕೊಂದು, ಅಪಘಾತವೆಂದು ಬಿಂಬಿಸಿದ ಪ್ರೇಮಿ! – Kannada News
ಭುವನೇಶ್ವರ, ಜೂನ್ 11: ಒಡಿಶಾದ ಗಂಜಾಂ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಕಾರಣಕ್ಕಾಗಿ ಆಕೆಯ ಪ್ರಿಯಕರನೇ ಆಕೆಯನ್ನು ಕ್ರೂರವಾಗಿ ಕೊಂದಿದ್ದಾನೆ. ಮೃತರನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಆರೋಪಿಯು ಈ ಕೊಲೆಯನ್ನು ರಸ್ತೆ ಅಪಘಾತ (Accident) ಎಂದು ಬಿಂಬಿಸಲು ಸಕಲ ಪ್ರಯತ್ನ ನಡೆಸಿದ್ದರೂ, ಪೊಲೀಸರ ಚುರುಕಿನ ತನಿಖೆಯಿಂದಾಗಿ ಸತ್ಯ ಹೊರಬಂದಿದೆ. ದಿಗಪಹಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಮಖಂಡಿ ಪೆಂತ್ ನಿವಾಸಿ ರಾಕೇಶ್ ಆಚಾರ್ಯ ಎಂಬ ಆರೋಪಿಯನ್ನು…