ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಭದ್ರತಾ ವ್ಯವಸ್ಥೆಗಳ ಕುರಿತು ಸಹ ಪ್ರಶ್ನೆಗಳು ಎದ್ದಿವೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ವಿಶ್ವ ದ್ವಿದಳ ಧಾನ್ಯ ದಿನImage Credit source: vecteezy
ಕಡಲೆ, ತೊಗರಿ, ಉದ್ದಿನ ಬೇಳೆ, ಅವರೆ, ಸೋಯಾಬೀನ್, ರಾಜ್ಮಾ, ಹುರುಳಿ, ಬಟಾಣಿ ಇವೆಲ್ಲವೂ ದ್ವಿದಳ ಧಾನ್ಯಗಳಾಗಿದ್ದು (Pulses), ಹೆಚ್ಚಿನ ಅಡುಗೆಗಳಲ್ಲಿ ಈ ಎಲ್ಲಾ ಧಾನ್ಯಗಳನ್ನು ಬಳಸಲಾಗುತ್ತದೆ. ದ್ವಿದಳ ಧಾನ್ಯಗಳು ಕೇವಲ ಕಾಳುಗಳಲ್ಲ, ಪೌಷ್ಟಿಕಾಂಶದ ನಿಧಿಯೂ ಹೌದು. ಇವುಗಳಲ್ಲಿ ಅಮೈನೋ ಆಮ್ಲ, ಪ್ರೋಟೀನ್, ಕಬ್ಬಿಣ, ಪೋಲಿಕ್ ಆಮ್ಲ ಇತ್ಯಾದಿ ಪೋಷಕಾಂಶಗಳಿದ್ದು, ಇವು ಹೃದಯ ಮತ್ತು ಸಂಪೂರ್ಣ ದೇಹಾರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಾಗಾಗಿ ದ್ವಿದಳ ಧಾನ್ಯಗಳ ಪೌಷ್ಟಿಕಾಂಶ ಮೌಲ್ಯಗಳು ಮತ್ತು ಅವುಗಳ ಸೇವನೆಯಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಪ್ರತಿವರ್ಷ ಫೆಬ್ರವರಿ 10 ರಂದು ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ವಿಶ್ವ ದ್ವಿದಳ ಧಾನ್ಯ ದಿನದ ಇತಿಹಾಸವೇನು?
ದ್ವಿದಳ ಧಾನ್ಯಗಳ ಮಹತ್ವವನ್ನು ಎತ್ತಿ ತೋರಿಸಲು ಮತ್ತು ಜನರಿಗೆ ಅವುಗಳ ಮಹತ್ವದ ಬಗ್ಗೆ ಅರಿವು ಮೂಡಿಸಲು, 2016 ನೇ ವರ್ಷವನ್ನು ಅಂತರರಾಷ್ಟ್ರೀಯ ದ್ವಿದಳ ಧಾನ್ಯಗಳ ವರ್ಷವೆಂದು ಘೋಷಿಸಲಾಯಿತು. ಇದರ ನಂತರ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಫೆಬ್ರವರಿ 10 ಅನ್ನು ವಿಶ್ವ ದ್ವಿದಳ ಧಾನ್ಯಗಳ ದಿನವೆಂದು ಗೊತ್ತುಪಡಿಸುವ ನಿರ್ಣಯವನ್ನು ಅಂಗೀಕರಿಸಿತು. ಅಂದಿನಿಂದ, ಫೆಬ್ರವರಿ 10 ಅನ್ನು ವಿಶ್ವ ದ್ವಿದಳ ಧಾನ್ಯಗಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ವಿಶ್ವ ದ್ವಿದಳ ಧಾನ್ಯಗಳ ದಿನವನ್ನು ಏಕೆ ಆಚರಿಸಲಾಗುತ್ತದೆ ?
ಆಧುನಿಕತೆಯ ಓಟದಲ್ಲಿ, ತ್ವರಿತ ಆಹಾರದ ವ್ಯಾಪಕತೆಯು ನಮ್ಮ ಆಹಾರಕ್ರಮದಲ್ಲಿ ದ್ವಿದಳ ಧಾನ್ಯಗಳ ಬಳಕೆಯನ್ನು ಕಡಿಮೆ ಮಾಡುತ್ತಿದೆ. ಇದು ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ನೀಡದೆ ವಂಚಿತಗೊಳಿಸುತ್ತದೆ, ಇದು ಜನರ, ವಿಶೇಷವಾಗಿ ಮಕ್ಕಳು ಮತ್ತು ಯುವಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಾನವನ ಆರೋಗ್ಯ ಮತ್ತು ಆಹಾರ ಸುರಕ್ಷತೆಗಾಗಿ ದ್ವಿದಳ ಧಾನ್ಯಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರು ತಮ್ಮ ಆಹಾರಕ್ರಮದಲ್ಲಿ ಅವುಗಳನ್ನು ಸೇರಿಸಿಕೊಳ್ಳಲು ಪ್ರೋತ್ಸಾಹಿಸಲು ಅಂತರರಾಷ್ಟ್ರೀಯ ದ್ವಿದಳ ಧಾನ್ಯಗಳ ದಿನವನ್ನು ಆಚರಿಸಲಾಗುತ್ತದೆ.
ದ್ವಿದಳ ಧಾನ್ಯಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಅವು ಕಡಿಮೆ ಕೊಬ್ಬು ಮತ್ತ ಫೈಬರ್‌ನಲ್ಲಿ ಸಮೃದ್ಧವಾಗಿವೆ, ಗ್ಲುಟನ್-ಮುಕ್ತವಾಗಿವೆ. ಅವುಗಳಲ್ಲಿ ಕಡಿಮೆ ಸೋಡಿಯಂ ಅಂಶವಿದ್ದು, ಇದು ಹೃದಯ ರೋಗಿಗಳು ಮತ್ತು ಮಧುಮೇಹದಿಂದ ಬಳಲುತ್ತಿರುವವರಿಗೆ ಸೂಕ್ತವಾದ ಸೂಪರ್‌ಫುಡ್ ಆಗಿದೆ. ಅಲದೆ ದ್ವಿದಳ ಧಾನ್ಯಗಳು ಖನಿಜಗಳು, ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು, ಪ್ರೋಟೀನ್ ಮತ್ತು ನಾರಿನಾಂಶ ಹೆಚ್ಚಿದ್ದು, ಇದು ದೇಹಕ್ಕೆ ಶಕ್ತಿ ನೀಡುವುದರೊಂದಿಗೆ ಸ್ನಾಯುಗಳನ್ನು ನಿರ್ಮಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ದ್ವಿದಳ ಧಾನ್ಯಗಳು ದೇಹಕ್ಕೆ ಕಬ್ಬಿಣಾಂಶವನ್ನು ಪೂರೈಸುತ್ತವೆ, ಶಕ್ತಿಯನ್ನು ಉತ್ಪಾದಿಸಲು ಮತ್ತು ಚಯಾಪಚಯಕ್ರಿಯೆಯನ್ನು ಉತ್ತೇಜಿಸಲೂ ಸಹಾಯ ಮಾಡುತ್ತದೆ.
ವಿಶ್ವ ದ್ವಿದಳ ಧಾನ್ಯಗಳ ದಿನದ ಮಹತ್ವವೇನು?
ವಿಶ್ವ ದ್ವಿದಳ ಧಾನ್ಯಗಳ ದಿನದ ಪ್ರಮುಖ ಉದ್ದೇಶವೆಂದರೆ ಜಾಗತಿಕವಾಗಿ ಅಪೌಷ್ಟಿಕತೆ ಮತ್ತು ಹಸಿವನ್ನು ಕಡಿಮೆ ಮಾಡಲು ದ್ವಿದಳ ಧಾನ್ಯಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವುದು.
ಹೆಚ್ಚುವರಿಯಾಗಿ, ಸುಸ್ಥಿರ ಕೃಷಿಯನ್ನು ಪ್ರೋತ್ಸಾಹಿಸಲು ಮತ್ತು ದ್ವಿದಳ ಧಾನ್ಯಗಳ ಪರಿಸರ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವು ಸಹಾಯ ಮಾಡುತ್ತದೆ.
ದ್ವಿದಳ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯ ಮತ್ತು ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನ ಸಹಾಯ ಮಾಡುತ್ತದೆ.
ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಪ್ರಕೃತಿಯಲ್ಲಿರುವ ಪ್ರತಿಯೊಂದು ಸಸ್ಯವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಅನೇಕ ಗಿಡಗಳು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತವೆ. ತುಳಸಿ, ಬಿಲ್ವಪತ್ರೆಯಂತೆ, ಪಾರಿಜಾತ ಗಿಡವು ವಿಶೇಷ ಸ್ಥಾನವನ್ನು ಹೊಂದಿದೆ. ಇದನ್ನು ದೇವಲೋಕದ ಗಿಡ, ದೈವಿಕ ವೃಕ್ಷ ಎಂದೂ ಕರೆಯಲಾಗುತ್ತದೆ. ಮನೆಯ ಹತ್ತಿರ ಪಾರಿಜಾತ ಗಿಡವನ್ನು ಬೆಳೆಸುವುದು ಉತ್ತಮವೇ, ಇದರ ನಿರ್ವಹಣೆ ಹೇಗೆ, ಇದರ ಮಹತ್ವವೇನು ಮತ್ತು ಇದರ ಹಿಂದಿನ ಇತಿಹಾಸವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ.
ಗುರೂಜಿಯವರು ಹೇಳುವಂತೆ, ಪಾರಿಜಾತ ಗಿಡವು ಭಗವಂತನಿಗೆ ಹೂವುಗಳನ್ನು ಅರ್ಪಿಸಲು ಬಳಸಲಾಗುವ ಒಂದು ಪವಿತ್ರ ಸಸ್ಯ. ಇದರ ಹೂವುಗಳು ಮನಸ್ಸಿಗೆ ಧನಾತ್ಮಕ ಚಿಂತನೆಗಳನ್ನು ನೀಡುತ್ತವೆ. ಮನೆಯ ಸುತ್ತಲೂ ಪಾರಿಜಾತ ಗಿಡವನ್ನು ಬೆಳೆಸುವುದರಿಂದ ಹಲವು ಪ್ರಯೋಜನಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ, ಇದನ್ನು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಅಥವಾ ಸಾಧ್ಯವಾದರೆ ದಕ್ಷಿಣ-ನೈರುತ್ಯ ದಿಕ್ಕಿನಲ್ಲಿ ಬೆಳೆಸುವುದು ಅತ್ಯಂತ ಶುಭಕರ. ಇದು ವಾಸ್ತು ದೋಷಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಮನೆಯ ಮೇಲೆ ಬೀಳುವ ಯಾವುದೇ ನಕಾರಾತ್ಮಕ ದೃಷ್ಟಿ ಅಥವಾ ಮಾಟ ಮಂತ್ರದಂತಹ ಪ್ರಭಾವಗಳನ್ನು ಹೀರಿಕೊಳ್ಳುವ ಶಕ್ತಿ ಈ ಗಿಡಕ್ಕಿದೆ ಎಂದು ನಂಬಲಾಗಿದೆ.
ಪುರಾಣಗಳ ಪ್ರಕಾರ, ಪಾರಿಜಾತ ಗಿಡವು ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದ ಹದಿನಾಲ್ಕು ರತ್ನಗಳಲ್ಲಿ ಒಂದಾಗಿದೆ. ಈ ಕಾರಣಕ್ಕಾಗಿ, ಇದನ್ನು ಮಹಾಲಕ್ಷ್ಮಿಯ ಸಹೋದರ ಎಂದೂ ಕರೆಯಲಾಗುತ್ತದೆ. ಮನೆಯಲ್ಲಿ ಪಾರಿಜಾತ ಗಿಡವಿದ್ದರೆ, ಮಹಾಲಕ್ಷ್ಮಿ, ಮಹಾಸರಸ್ವತಿ ಮತ್ತು ಮಹಾಕಾಳಿ ಈ ತ್ರಿಶಕ್ತಿಗಳ ಅನುಗ್ರಹ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. “ದರ್ಶನಂ ಪುಣ್ಯಂ, ಸ್ಪರ್ಶನಂ ಪಾಪನಾಶನಂ” ಎಂಬ ಮಾತು ಈ ಗಿಡಕ್ಕೆ ಅನ್ವಯಿಸುತ್ತದೆ. ರಾತ್ರಿಯ ಸಮಯದಲ್ಲಿ ಈ ಗಿಡದ ಸುತ್ತಲೂ ಹರಡುವ ಸುಗಂಧವು ಮನಸ್ಸಿಗೆ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.
ಪಾರಿಜಾತ ಗಿಡಕ್ಕೆ ಸೂರ್ಯನ ಕಿರಣಗಳು ಚೆನ್ನಾಗಿ ಬೀಳುವುದು ಅತ್ಯವಶ್ಯಕ. ಸೂರ್ಯನ ಕಿರಣಗಳಿಲ್ಲದೆ ಗಿಡದ ಬೆಳವಣಿಗೆ ಕಷ್ಟವಾಗಬಹುದು. ಇದರ ಮತ್ತೊಂದು ವಿಶೇಷವೆಂದರೆ, ಸಾಮಾನ್ಯವಾಗಿ ನಾವು ಗಿಡಗಳಿಂದ ನೇರವಾಗಿ ಹೂವುಗಳನ್ನು ಬಿಡಿಸಿಕೊಳ್ಳುತ್ತೇವೆ. ಆದರೆ ಪಾರಿಜಾತದ ಹೂವುಗಳು ಮರದಿಂದ ಉದುರಿ ನೆಲಕ್ಕೆ ಬಿದ್ದ ನಂತರವೂ ಅವುಗಳನ್ನು ಪೂಜೆಗೆ ಬಳಸಬಹುದು. ಇದು ಇಂದ್ರನ ನಂದನವನದಲ್ಲಿದ್ದ ಗಿಡವಾಗಿದ್ದು, ಶ್ರೀಕೃಷ್ಣ ಭಗವಾನರು ಇಂದ್ರನೊಂದಿಗೆ ಹೋರಾಡಿ ಇದನ್ನು ಭೂಲೋಕಕ್ಕೆ ತಂದರು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ.
ಪ್ರೀತಿ, ಭಕ್ತಿ, ಭಾವನೆ, ತ್ಯಾಗ ಮತ್ತು ಆತ್ಮವಿಶ್ವಾಸದಿಂದ ಈ ಗಿಡವನ್ನು ಪೂಜಿಸಿದರೆ ಸಕಲ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಇದೆ. ಆಯುರ್ವೇದದಲ್ಲಿಯೂ ಸಹ ಪಾರಿಜಾತದ ಮಹತ್ವವನ್ನು ವಿವರಿಸಲಾಗಿದೆ. ಮನೆಯ ಅಂಗಳದಲ್ಲಿ, ತೋಟದಲ್ಲಿ ಅಥವಾ ಹೊಲಗಳಲ್ಲಿ ಕನಿಷ್ಠ ಒಂದು ಪಾರಿಜಾತ ಗಿಡವನ್ನು ಬೆಳೆಸುವುದು ಬಹಳಷ್ಟು ಶುಭವನ್ನು ತರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಣಜಿ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್ನಲ್ಲಿ 295 ರನ್ಗಳಿಸಿ ಆಲೌಟ್ ಆಯಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು ಸುಮಂತ ಗುಪ್ತಾ 81 ರನ್ ಬಾರಿಸಿದರೆ, ಶಕೀರ್ ಹಬೀಬಿ 95 ರನ್ಗಳ ಇನಿಂಗ್ಸ್ ಆಡಿದರು. ಹಾಗೆಯೇ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮೊಹಮ್ಮದ್ ಶಮಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಹೊಡಿಬಡಿ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದ ಶಮಿ 33 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 53 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಬೆಂಗಾಲ್ ತಂಡವು ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 629 ರನ್ ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಶುರು ಮಾಡಿರುವ ಆಂಧ್ರ ತಂಡವು 30 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 83 ರನ್ ಕಲೆಹಾಕಿದೆ.
ಇತ್ತ ಐದನೇ ದಿನದಾಟ ಚಾಲ್ತಿಯಲ್ಲಿರುವ ಕಾರಣ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವ ಅಥವಾ ಬೆಂಗಾಲ್ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು. ಹೀಗಾಗಿ 3ನೇ ಕ್ವಾರ್ಟರ್ ಫೈನಲ್ ಮೂಲಕ ಬೆಂಗಾಲ್ ತಂಡವು ಸೆಮಿಫೈನಲ್ಗೆ ಅರ್ಹತೆ ಪಡೆಯುವುದನ್ನು ನಿರೀಕ್ಷಿಸಬಹುದು.
ಗುನಾ, ಫೆಬ್ರವರಿ 10: ಲಲ್ಲು ಸಿಂಗ್ ಎಂಬುವವರಿಗೆ ಅಸ್ತಮಾ ಜೋರಾಗಿತ್ತು, ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ರಾತ್ರಿ ಡ್ಯೂಟಿಯಲ್ಲಿದ್ದ ವೈದ್ಯ ಕುಡಿದ ಮತ್ತಿನಲ್ಲಿದ್ದರು, ರೋಗಿಯನ್ನು ಅಡ್ಮಿಟ್ ಮಾಡಬೇಕೆಂದು ಹೇಳಿ, ಒಂದಷ್ಟು ಔಷಧಿಗಳನ್ನು ತೂರಾಡುತ್ತಲೇ ಬರೆದುಕೊಟ್ಟಿದ್ದರು. ಆ ಔಷಧಿಯನ್ನು ತೆಗೆದುಕೊಂಡು ಆಸ್ಪತ್ರೆಗೆ ಬರುವಷ್ಟರಲ್ಲಿ ರೋಗಿಯೇ ಅಲ್ಲಿರಲಿಲ್ಲ, ಯಾವ ವಾರ್ಡ್‌ನಲ್ಲಿ ಅಡ್ಮಿಟ್ ಮಾಡಲಾಗಿದೆ ಎಂದು ಕೇಳಿದರೆ ಉತ್ತರ ಕೊಡುವ ಸ್ಥಿತಿಯಲ್ಲಿ ವೈದ್ಯರಿರಲಿಲ್ಲ ಇದನ್ನು ಕಂಡು ರೋಗಿಯ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ.
ರೋಗಿಯನ್ನು ದಾಖಲಿಸಿಕೊಂಡ ನಂತರ, ವೈದ್ಯರು ತಮ್ಮನ್ನು ಯಾವ ವಾರ್ಡ್‌ನಲ್ಲಿ ಇರಿಸಲಾಗಿತ್ತು ಎಂಬುದನ್ನು ಮರೆತಿದ್ದಾರೆ. ಸಣ್ಣ ಪ್ರಶ್ನೆಗೂ ಉತ್ತರ ಕೊಡಲು ವೈದ್ಯರು ಹೆಣಗಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವಾರಗಳವರೆಗೆ ಅವರನ್ನು ಅಮಾನತು ಮಾಡಲಾಗಿದ್ದು, ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಬದೌನ್, ಫೆಬ್ರವರಿ 10: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.
ಪೊಲೀಸರು ಇಬ್ಬರು ಸ್ನೇಹಿತರು ಮತ್ತು ಮಹಿಳೆಯ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯ ಪತಿಯ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಮಹಿಳೆಯ ಪತಿಗಾಗಿ ಹುಡುಕಾಟ ನಡೆಯುತ್ತಿದೆ.ಬದೌನ್ ಜಿಲ್ಲೆಯ ಫೈಜ್‌ಗಂಜ್ ಬೆಹ್ತಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಮಹಿಳೆಯೊಬ್ಬರ ಮೇಲೆ ಆಕೆಯ ಪತಿಯ ಸ್ನೇಹಿತರೇ ಅತ್ಯಾಚಾರವೆಸಗಿದ್ದಾರೆ. ಆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ಸಂಜೆ ಗ್ಯಾಸ್ ಏಜೆನ್ಸಿಗೆ ಹೋಗುತ್ತಿದ್ದಾಗ, ತನ್ನ ಪತಿ ಬಾಲ್ ಕಿಶನ್ ಮತ್ತು ಪಪ್ಪು ಎಂಬ ಯುವಕರಿಂದ ಒಂದು ಸಾವಿರ ರೂಪಾಯಿಗಳನ್ನು ತೆಗೆದುಕೊಂಡು ತನ್ನನ್ನು ಅವರೊಂದಿಗೆ ಕಳುಹಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ಪೊಲೀಸರ ಪ್ರಕಾರ, ಮಹಿಳೆ ತನ್ನ ಗಂಡನ ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದಾಗ, ಇಬ್ಬರೂ ತನ್ನನ್ನು ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಘಟನೆ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಬಾಲ್ ಕಿಶನ್, ಪಪ್ಪು ಮತ್ತು ಮಹಿಳೆಯ ಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಆರೋಪಿ ಬಾಲ್ಕಿಶನ್ ಮತ್ತು ಪಪ್ಪುವನ್ನು ಬಂಧಿಸಿದ್ದಾರೆ, ಮಹಿಳೆಯ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ, ಸೋಮವಾರ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (ಅಮಿತಾಭ್ ಬಚ್ಚನ್) ಪ್ರತಿ ಭಾನುವಾರ ತಮ್ಮ ಬಂಗಲೆಯ ಹೊರಗೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ. ಅಭಿಮಾನಿಗಳು ಅವರನ್ನು ನೋಡಲು ಅವರ ಬಂಗಲೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾರೆ. ಬಿಗ್ ಬಿ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಅಷ್ಟೇ ಉತ್ಸುಕರಾಗಿದ್ದಾರೆ. ಆದ್ದರಿಂದ, ಯಾವುದೇ ಕಾರಣದಿಂದ ಅವರು ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದು ಕ್ಷಮೆಯಾಚಿಸುತ್ತಾರೆ. ಬಿಗ್ ಬಿ ಅವರ ಬಂಗಲೆಯ ಹೊರಗೆ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಅಮಿತಾಭ್ ಬಚ್ಚನ್ ಅವರಿಗೆ ವಯಸ್ಸು 83 ಆದರೂ ಉತ್ಸಾಹ ಕಡಿಮೆ ಆಗಿಲ್ಲ. ಈ ಬಾರಿ ಅವರು ಮನೆಯ ಹೊರಗೆ ಕಾಣಿಸಿಕೊಳ್ಳುವಾಗ ಅವರ ಕೈಯಲ್ಲಿರುವ ಪೋಸ್ಟರ್ ಗಮನ ಸೆಳೆಯಿತು. ಈ ಪೋಸ್ಟರ್‌ನಲ್ಲಿರುವುದನ್ನು ಓದಿದ ಬಳಿಕ ಎಲ್ಲರೂ ಗೊಂದಲಕ್ಕೆ ಒಳಗಾದರು.
ಪಾಪರಾಜಿ ಖಾತೆಯಲ್ಲಿ ಹಂಚಿಕೊಂಡಿರುವ ಈ ವೀಡಿಯೊದಲ್ಲಿ, ಬಿಗ್ ಬಿ ಪೋಸ್ಟರ್ ಹಿಡಿದುಕೊಂಡಿರುವುದನ್ನು ಕಾಣಬಹುದು. ಈ ಪೋಸ್ಟರ್‌ನಲ್ಲಿ ‘ನನ್ನನ್ನು ಬೆಂಬಲಿಸಿ. ನನ್ನ ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ. 1992ರ ಪ್ರೇಮ ವಿವಾಹ’ ಎಂದು ಬರೆಯಲಾಗಿದೆ. ಈ ಪೋಸ್ಟರ್ ನೋಡಿ ಎಲ್ಲರೂ ಮೂಕವಿಸ್ಮಿತರಾಗಿದ್ದಾರೆ.
ಅಮಿತಾಭ್ ಬಚ್ಚನ್ ಏನು ಹೇಳಲು ಹೊರಟಿದ್ದಾರೆ ಎಂಬ ಕುತೂಹಲ ಇತ್ತು. ಅದಕ್ಕೂ ಉತ್ತರ ಸಿಕ್ಕಿದೆ. ಈ ಪೋಸ್ಟರ್‌ಗೂ ಅಮಿತಾಭ್ ಬಚ್ಚನ್‌ಗೂ ಯಾವುದೇ ಸಂಬಂಧವಿಲ್ಲ. ಇದು ಫೆಬ್ರವರಿ 13 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಮುಂಬರುವ ಚಿತ್ರದ ಪ್ರಚಾರದ ಪೋಸ್ಟರ್ ಆಗಿತ್ತು. ಬಿಗ್ ಬಿ ಈ ಪೋಸ್ಟರ್ ಅನ್ನು ಸ್ವಲ್ಪ ಸಮಯದವರೆಗೆ ಕೈಯಲ್ಲಿ ಹಿಡಿದು ನಂತರ ಅದನ್ನು ತಂಡಕ್ಕೆ ಹಿಂತಿರುಗಿಸಿದರು. ಸದ್ಯ ಆ ಸಿನಿಮಾ ಯಾವುದು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಅಮಿತಾಭ್ ಬಚ್ಚನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ನಟಿಸಬೇಕಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗಾಗಲೇ ಸಿನಿಮಾದಿಂದ ದೀಪಿಕಾ ಪಡುಕೋಣೆ ಅವರು ಹೊರ ನಡೆದಿದ್ದಾರೆ.
ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ.
ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅಲೆದಾಡಿದರೂ ಹಿಟಾಚಿ ಸರಿಪಡಿಸಲಾಗಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಲು ಗಿರೀಶ್ ಬೆಳಿಗ್ಗೆ ಶೋರೂಂಗೆ ಭೇಟಿ ನೀಡಿದರು. ಆದರೆ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಶೋರೂಂ ಬಾಗಿಲಿಗೆ ಹಿಟಾಚಿ ಯಂತ್ರವನ್ನು ಅಡ್ಡಲಾಗಿ ನಿಲ್ಲಿಸಿ ಗಮನ ಸೆಳೆದರು.
‘ಹಿಟಾಚಿ ಸರಿಪಡಿಸಿ ಕೊಡಬೇಕು, ಇಲ್ಲವಾದರೆ ನಾವು ಕಟ್ಟಿದ ಹಣವನ್ನು ವಾಪಸ್ ನೀಡಬೇಕು. ಯಂತ್ರ ಖರೀದಿ ಮಾಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದೇನೆ. ಕಂಪನಿ ಹೇಳುವುದೊಂದು, ಖರೀದಿಸಿದ ನಂತರ ಮಾಡುವುದೊಂದು’ ಎಂದು ಗಿರೀಶ್ ಆರೋಪಿಸಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಗ್ರಾಹಕ ಶೋರೂಂಗೆ ಬೀಗ ಹಾಕಿರುವುದನ್ನು ನೋಡಲು ಜನ ಆಗಮಿಸುತ್ತಿದ್ದಾರೆ. ಈ ಬಗ್ಗೆ ಶೋರೂಂ ಹಾಗೂ ಹಿಟಾಚಿ ಕಂಪನಿ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ.
ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.
ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ನಿಂದ ಕೈ ಬಿಡಲಾಯಿತು.
ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮಕ್ಕೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ನಡೆಯನ್ನು ಖಂಡಿಸುವ ಸಲುವಾಗಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಿಸಿಬಿ ತಿಳಿಸಿತ್ತು.
ಇತ್ತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದೇ ಇದ್ದರೆ ಐಸಿಸಿ ಆದಾಯಕ್ಕೆ ಆರ್ಥಿಕ ನಷ್ಟ ಉಂಟಾಗಲಿದೆ. ಹೀಗಾಗಿ ಇದೀಗ ಐಸಿಸಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಕಾಯಕಕ್ಕೆ ಕೈ ಹಾಕಿದ್ದರು. ಅದರಂತೆ ಇದೀಗ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುವ ಮೂಲಕ ಐಸಿಸಿ ಪಿಸಿಬಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದರೊಂದಿಗೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನಡೆಯುವುದು ಖಚಿತವಾಗಿದೆ. ಅದರಂತೆ ಮುಂದಿನ ಭಾನುವಾರ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದ್ದು, ಈ ಮ್ಯಾಚ್ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಬಹುತೇಕ ಖಚಿತವಾಗಲಿದೆ.
ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ನೆದರ್ಲೆಂಡ್ಸ್ ವಿರುದ್ಧ ಆಡಬೇಕಿದೆ. ಹೀಗಾಗಿ ಈ ಮ್ಯಾಚ್ಗೂ ಮುನ್ನ ಭಾರತ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ.