Headlines

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ? – Kannada News

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026)​ ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ…

Read More

ಒಂದೇ ಸಮುದಾಯಕ್ಕೆ ಸೀಮಿತಾವಾಯ್ತಾ ಒಬಿಸಿ ಅನುದಾನ? ಕುರುಬ ಸಮುದಾಯದ 89 ಸಂಸ್ಥೆಗಳಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 11): ಒಂದು ಸರ್ಕಾರ ಅಧಿಕಾರದಿಂದ ನಿರ್ಗಮಿಸುವ ಅಥವಾ ನಾಯಕತ್ವ ಬದಲಾವಣೆಯಾಗುವ ಸಂಕ್ರಮಣ ಕಾಲದಲ್ಲಿ ಅತ್ಯಂತ ತರಾತುರಿಯಲ್ಲಿ ಕೈಗೊಳ್ಳುವ ನಿರ್ಧಾರಗಳು ಯಾವಾಗಲೂ ಅನುಮಾನದ ಕಣ್ಣೋಟಕ್ಕೆ ಗುರಿಯಾಗುತ್ತವೆ. ಹೌದು..ಹಿಂದುಳಿದ ವರ್ಗಗಳ ಅನುದಾನ (Karnataka Backward Classes fund) ಹಂಚಿಕೆಯಲ್ಲೂ ಬೇಧ ಭಾವ ತಾರತಮ್ಯ ಎಸಗಿದ ಮತ್ತೊಂದು ಮುಖ ಹೊರ ಬಿದ್ದಿದೆ‌. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ, ಆರ್ಥಿಕ ಇಲಾಖೆಯ ಮೂಲಕ 155 ವಿವಿಧ ಸಂಸ್ಥೆಗಳಿಗೆ 71.85…

Read More

ಇಂದು ರಾತ್ರಿ ಇರಾನ್ ಮೇಲೆ ಬೃಹತ್ ದಾಳಿ ನಡೆಸುತ್ತೇವೆ; ಟ್ರಂಪ್ ಎಚ್ಚರಿಕೆ – Kannada News

ವಾಷಿಂಗ್ಟನ್, ಜೂನ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ ಜೊತೆ ಕದನ ವಿರಾಮದ ಪ್ರಸ್ತಾಪವನ್ನಿಟ್ಟಿದ್ದ ಅಮೆರಿಕ ಇದೀಗ ಇರಾನ್ ಮೇಲೆ ಸಮರ ಸಾರುವುದಾಗಿ ಘೋಷಿಸಿದೆ. ಇಂದು ರಾತ್ರಿ ಇರಾನ್ ಮೇಲೆ ಭೀಕರ ದಾಳಿ ನಡೆಸುತ್ತೇವೆ ಎಂದು ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ಸಂಘರ್ಷ ಇನ್ನಷ್ಟು ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ. ಅಮೆರಿಕ (United States) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಇರಾನ್ ವಿರುದ್ಧ ಹೊಸ ಮಿಲಿಟರಿ ದಾಳಿಗಳ…

Read More

ವೆಸ್ಟ್ ನೈಲ್ ಜ್ವರ ಎಂದರೇನು? ಲಕ್ಷಣಗಳು ಹೇಗಿರುತ್ತದೆ? ಇದನ್ನು ತಡೆಗಟ್ಟುವುದು ಹೇಗೆ ತಿಳಿಯಿರಿ – Kannada News

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Virus) ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೆಚ್ಚಿನ ನಿಗಾವಹಿಸುತ್ತಿದೆ. ಅದಲ್ಲದೆ ರಾಜ್ಯದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಈ ಎರಡೂ ಕಾಯಿಲೆಗಳು ಪರಸ್ಪರ ಸಂಬಂಧ ಹೊಂದಿಲ್ಲದಿದ್ದರೂ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚುತ್ತಿರುವುದರಿಂದ ಜನರು ಆದಷ್ಟು ಜಾಗರೂಕರಾಗಿರಬೇಕಾಗಿದೆ. ಹಾಗಾದರೆ ವೆಸ್ಟ್ ನೈಲ್ ಜ್ವರ ಯಾವ ರೀತಿ ಬರುತ್ತದೆ, ಲಕ್ಷಣಗಳು ಹೇಗಿರುತ್ತದೆ ಮತ್ತು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

ಹೊರಗೆ ಸಿಗುವ ಮಾವಿನ ಜ್ಯೂಸ್ ಇಷ್ಟಪಟ್ಟು ಕುಡಿಯುತ್ತೀರಾ? ಹಾಗಿದ್ರೆ ನೀವು ಈ ಸ್ಟೋರಿ ಓದಲೇಬೇಕು – Kannada News

ಇತ್ತೀಚೆಗೆ ಗುಜರಾತ್‌ನಲ್ಲಿ ಹಾಳಾಗಿರುವ, ಹುಳ ಬಿದ್ದ ಮಾವಿನ ಹಣ್ಣುಗಳನ್ನು ಜ್ಯೂಸ್ ತಯಾರಿಕೆಗೆ ಬಳಸಲಾಗುತ್ತಿದ್ದ ಘಟನೆ ಬೆಳಕಿಗೆ ಬಂದಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ (FSSAI) ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಹಾಳಾದ ಹಣ್ಣುಗಳನ್ನು ವಶಪಡಿಸಿಕೊಂಡಿದ್ದರು. ಈ ಘಟನೆ ಬಳಿಕ ಹೊರಗೆ ಸಿಗುವ ಜ್ಯೂಸ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಸ್ವಲ್ಪ ಹೆಚ್ಚು ಹಣ್ಣಾದದ್ದು ಸಾಮಾನ್ಯವಾಗಿ ದೊಡ್ಡ ಸಮಸ್ಯೆ ಉಂಟುಮಾಡದೇ ಇರಬಹುದು. ಆದರೆ ಕೊಳೆತ ಅಥವಾ ಸಣ್ಣ ಹುಳ ಇರುವ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾ,…

Read More

‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್ – Kannada News

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಬಗ್ಗೆ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡುತ್ತಿದೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಲೈವಾ ಜೊತೆ ಬಾಲಿವುಡ್‌ನ ಯಾವ ಸ್ಟಾರ್ ನಟ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ತಾಜಾ ವರದಿಗಳ ಪ್ರಕಾರ, ಬಾಲಿವುಡ್‌ನ ಗ್ರೀಕ್ ಗಾಡ್ ಹೃತಿಕ್ ರೋಷನ್ (Hrithik Roshan) ಈ ಚಿತ್ರದ ಪ್ರಮುಖ ಅತಿಥಿ ಪಾತ್ರಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಈ ಪಾತ್ರಕ್ಕಾಗಿ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್​​ಗೆ ಈಗಾಗಲೇ ಹಣ ಕಟ್ಟಿದ್ರೆ ವಾಪಸ್ ಸಿಗಲಿದೆ; ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ – Kannada News

ಬೆಂಗಳೂರು, ಜೂ.11: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಶಕ್ತಿ ಯೋಜನೆಯಡಿ ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು, ಇದೀಗ ಗಂಡು ಮಕ್ಕಳಿಗೂ ವಿಸ್ತರಿಸುವ ಮೂಲಕ ರಾಜ್ಯದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ…

Read More

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್, ಸರ್ಕಾರಕ್ಕೆ ಎಷ್ಟು ಉಳಿತಾಯ ಗೊತ್ತಾ? – Kannada News

ಬೆಂಗಳೂರು, (ಜೂನ್ 11): ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಫಿಲ್ಟರ್ ಮಾಡಿದ್ದು, ನೋಂದಣಿಯಾದ 1.30 ಕೋಟಿ ಮಂದಿ ಪೈಕಿ 3.89 ಲಕ್ಷ ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. 1.94 ಲಕ್ಷ ಫನಾನುಭವಿಗಳು ಐಟಿ ಜಿಎಸ್​ಟಿ ಪಾವತಿಸುವವರು ಆಗಿದ್ದರೆ, 1.95 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು 3.89 ಲಕ್ಷ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಬಂದ್ ಮಾಡಲಾಗಿದೆ. ಅದರಲ್ಲೂ ಬೆಂಗಳೂರು…

Read More

ಅಡುಗೆ ಮನೆಯಲ್ಲಿ ಅಜ್ಜಿ ಉಪ್ಪಿನಕಾಯಿ ಮಾಡ್ತಿದ್ರೆ, ತನ್ನನ್ನು ಎತ್ತಿಕೊಳ್ಳಲು ಕೈ ಚಾಚಿದ ಪುಟಾಣಿ – Kannada News

ಅಜ್ಜಿ ಮೊಮ್ಮಗ ಕ್ಯೂಟ್‌ ಸಂಭಾಷಣೆImage Credit source: Instagram ಕೆಲವರಿಗೆ ತಮ್ಮ ಹೆತ್ತವರಿಗಿಂತ ತಮ್ಮ ಅಜ್ಜ ಅಜ್ಜಿಯೇ (grand parents) ಎಲ್ಲವೂ ಆಗಿರುತ್ತಾರೆ. ಈ ಹಿರಿಜೀವಗಳ ಪ್ರೀತಿ, ಕಾಳಜಿಯೊಂದಿಗೆ ಬೆಳೆಯುತ್ತಾರೆ. ಇದೀಗ ಪುಟಾಣಿಯೊಂದು ತನ್ನ ಅಜ್ಜಿಯ ಮಾತಿಗೆ ಕ್ಯೂಟ್ ರಿಯಾಕ್ಷನ್ ನೀಡಿದೆ. ಅಡುಗೆ ಮನೆಯಲ್ಲಿ ಅಜ್ಜಿ ಹಾಗೂ ಮೊಮ್ಮಗನ ಸಿಹಿಯಾದ ಸಂವಾದವು ಹೃದಯಸ್ಪರ್ಶಿ ಕ್ಷಣವಾಗಿ ಮಾರ್ಪಟ್ಟಿದೆ. ಅಜ್ಜಿ ಉಪ್ಪಿನಕಾಯಿ ತಯಾರಿಸುವುದರಲ್ಲಿ ಬ್ಯುಸಿಯಾಗಿದ್ರೆ ಪುಟ್ಟ ಕಂದಮ್ಮ ತನ್ನನ್ನು ಎತ್ತಿಕೊಳ್ಳುವಂತೆ ಕೈ ಚಾಚಿರುವ  ವಿಡಿಯೋ ವೈರಲ್ ಆಗಿದೆ. ಈ ಹೃದಯಸ್ಪರ್ಶಿ…

Read More

ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು – Kannada News

ಶಿವಮೊಗ್ಗ, ಜೂ.11: ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಸ್ವಂತ ಪತ್ನಿಯ ಮೇಲೆಯೇ ದಾಳಿ ನಡೆಸಲು ಬುರ್ಖಾಧಾರಿ ಗ್ಯಾಂಗ್ ಕಳುಹಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗದ ಕೆ.ಆರ್. ಪುರಂನಲ್ಲಿ ನಡೆದಿದೆ. ಆದರೆ, ಸ್ಥಳೀಯ ನಾಗರಿಕರ ಸಮಯಪ್ರಜ್ಞೆಯಿಂದಾಗಿ ಬುರ್ಖಾ ಧರಿಸಿ ಬಂದಿದ್ದ ಗ್ಯಾಂಗ್ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಧರ್ಮದೇಟು ತಿಂದು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ಒಂದು ವರ್ಷದಿಂದ ಕೊಲೆ ಪ್ರಕರಣವೊಂದರ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೇ ಈ ಇಡೀ ಷಡ್ಯಂತ್ರದ…

Read More