ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation
ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…