ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ – Kannada News
ವಾಷಿಂಗ್ಟನ್, ಜೂನ್ 11: ಒಮಾನ್ (Oman) ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ, ಆ ಹಡಗಿನ ಇಂಜಿನ್ ಕೋಣೆಯನ್ನು ಗುರಿಯಾಗಿಸಿ 2 ‘ಹೆಲ್ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಒಪ್ಪಿಕೊಂಡಿದೆ. ಗಲ್ಫ್ ವಲಯದಲ್ಲಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಹಡಗಿನ ಮೇಲೆ ಈ ವಾರ ನಡೆದ ಮೂರನೇ ದಾಳಿ ಇದಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸಾಮಾಜಿಕ ಮಾಧ್ಯಮವಾದ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿನಿ-ಬಿಸೌ ದೇಶದ ಧ್ವಜವನ್ನು ಹೊಂದಿದ್ದ…