ಅಡ್ಡ ಬಂದ ನಾಗರ ಹಾವು: ಬೈಕ್ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್ – Kannada News
ಚಿಕ್ಕಮಗಳೂರು, ಜೂ.11: ರಸ್ತೆಗೆ ಏಕಾಏಕಿ ಅಡ್ಡ ಬಂದ ನಾಗರ ಹಾವನ್ನು ತಪ್ಪಿಸಲು ಹೋದ ಬೈಕ್ ಸವಾರನ ಎಡವಟ್ಟಿನಿಂದಾಗಿ, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿರುವ ವಿಲಕ್ಷಣ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಪ್ರಾಣಾಪಾಯವೊಂದು ಕೂದಲೆಳೆತದಲ್ಲಿ ತಪ್ಪಿದೆ. ಬೈಕ್ ಸವಾರರಿಬ್ಬರು ನಾರಾಯಣಪುರ ಗೇಟ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬೃಹತ್ ಗಾತ್ರದ ನಾಗರ ಹಾವೊಂದು ಏಕಾಏಕಿ ರಸ್ತೆಗೆ ಅಡ್ಡ…