ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯ ತಿನ್ನಿ ಈ ಗಿಡದ ಎಲೆ – Kannada News
ಗಿಡಮೂಲಿಕೆಗಳ ರಾಣಿ ಎಂದೇ ಕರೆಯಲ್ಪಡುವ ತುಳಸಿ (Tulsi) ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಸಸ್ಯಕ್ಕೆ ಪೂಜ್ಯನೀಯ ಸ್ಥಾನವನ್ನು ನೀಡಲಾಗಿರುವುದರಿಂದ ಮನೆಗಳಲ್ಲಿ ಈ ಪವಿತ್ರ ಗಿಡವನ್ನು ನೆಟ್ಟು ಪೂಜಿಸಲಾಗುತ್ತದೆ. ಧಾರ್ಮಿಕ ಮಹತ್ವವನ್ನು ಪಡೆದಿರುವ ತುಳಸಿ ಹಲವಾರು ಔಷಧೀಯ ಗುಣಗಳನ್ನು ಸಹ ಹೊಂದಿದೆ. ತುಳಸಿ ಎಲೆಯಲ್ಲಿ ವಿಟಮಿನ್ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೇಸಿಯಂ, ರಂಜಕ, ಕಬ್ಬಿಣದಂತಹ ಹಲವಾರು ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳಿದ್ದು, ಪ್ರತಿನಿತ್ಯ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ದೈಹಿಕ ಮತ್ತು ಮಾನಸಿಕ…