ಗೊರಗುಂಟೆಪಾಳ್ಯದಲ್ಲಿ ಗ್ಯಾಸ್ ಲಾರಿ ಬ್ರೇಕ್ ಫೇಲ್ ಆಗಿ ಕೆಟಿಎಂ ಬೈಕ್‌ಗೆ ಡಿಕ್ಕಿ; ಲಾರಿ ಚಕ್ರದಡಿ ಸಿಲುಕಿ ದಂಪತಿ ಸಾವು – Kannada News
ಬೆಂಗಳೂರು, ಜೂ.11: ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಇಂದು (ಜೂ.11) ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಲಿಂಡರ್‌ಗಳಿಂದ ತುಂಬಿದ್ದ ಗ್ಯಾಸ್ ಲಾರಿಯೊಂದರ ಬ್ರೇಕ್ ಫೇಲ್ ಆದ ಪರಿಣಾಮ, ನಿಯಂತ್ರಣ ತಪ್ಪಿ ಕೆಟಿಎಂ ಡ್ಯೂಕ್ (KTM Duke) ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಬೈಕ್‌ನಲ್ಲಿದ್ದ ಪತಿ-ಪತ್ನಿ ಇಬ್ಬರೂ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ನಾಗರಬಾವಿ ನಿವಾಸಿಗಳಾದ ಶಬ್ರಾಜ್ (28) ಮತ್ತು ಆತನ ಪತ್ನಿ ಶಬ್ರೀನ್ (24) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ತಮ್ಮ ಕೆಟಿಎಂ…