Headlines

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಸೀಸನಲ್ ರೋಗಗಳಿಂದ ದೂರವಿರಲು ಈ ರೀತಿ ಮಾಡಿ! – Kannada News

ದೇಶದ ಹಲವೆಡೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದನ್ನು ನೀವು ಕಾಣಬಹುದು. ಕೆಲವು ಕಡೆ ಮಳೆ ಸುರಿಯುತ್ತಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ರೀತಿ ಹವಾಮಾನ ಬದಲಾಗುವ ಸಮಯದಲ್ಲಿ ಜ್ವರ, ಶೀತ, ಗಂಟಲು ಸೋಂಕು, ಫ್ಲೂ ಮುಂತಾದ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ಈ ರೀತಿಯಾಗುವುದಕ್ಕೆ ಪ್ರಮುಖ ಕಾರಣ ದೇಹದ ರೋಗನಿರೋಧಕ ಶಕ್ತಿ ದುರ್ಬಲವಾಗಿರುವುದು. ವೈದ್ಯರ ಪ್ರಕಾರ, ಏನೇ ಮಾಡಿದರೂ ಒಂದು ರಾತ್ರಿಯಲ್ಲಿ ಇಮ್ಯೂನಿಟಿ (Immunity) ಹೆಚ್ಚಿಸಿಕೊಳ್ಳುವ ಯಾವುದೇ ತ್ವರಿತ ವಿಧಾನಗಳಿಲ್ಲ. ಆದರೆ ಆರೋಗ್ಯಕರ ಜೀವನಶೈಲಿ, ಸಮತೋಲನ…

Read More

ದಾಳಿ ಕೊನೆಗೊಳ್ಳಬೇಕು; 3 ಭಾರತೀಯರು ಸಾವನ್ನಪ್ಪಿದ ಒಮಾನ್ ಹಡಗಿನ ಮೇಲಿನ ಅಮೆರಿಕದ ದಾಳಿಗೆ ಭಾರತ ಖಂಡನೆ – Kannada News

ನವದೆಹಲಿ, ಜೂನ್ 11: ಒಮಾನ್ ಕರಾವಳಿಯ ಬಳಿ ವಾಣಿಜ್ಯ ಹಡಗೊಂದರ ಮೇಲೆ ನಡೆದ ಭೀಕರ ದಾಳಿಯಲ್ಲಿ ಮೂವರು ಭಾರತೀಯ ನಾಗರಿಕರು ಸಾವನ್ನಪ್ಪಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಈ ದಾಳಿಯನ್ನು “ಅತ್ಯಂತ ಆತಂಕಕಾರಿ” ಎಂದು ಹೇಳಿರುವ ಭಾರತ, ಇಂತಹ ದಾಳಿಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಆಗ್ರಹಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಕಡಲ ಸಂಘರ್ಷಗಳ ನಡುವೆ, ಒಮಾನ್ ದೇಶದ ಕರಾವಳಿ ತೀರದ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ನೌಕೆಯೊಂದರ ಮೇಲೆ ಇತ್ತೀಚೆಗೆ ಭೀಕರ ದಾಳಿ ನಡೆದಿತ್ತು. ಈ ದಾಳಿಯಲ್ಲಿ…

Read More

ಪರಿಷತ್‌ ಚುನಾವಣೆ : ಕಾಂಗ್ರೆಸ್‌‍ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು – Kannada News

ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್‌‍ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್‌ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್‌‍ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಅಫಿಡವಿಟ್‌ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್‌‍ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಮುಖ್ಯಾಂಶಗಳು ಪರಿಷತ್ ಚುನಾವಣೆ…

Read More

ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ಸದಾ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇದೀಗ ಕಾಲಿವುಡ್ ಸ್ಟಾರ್ ಧನುಷ್ (Dhanush) ಹಾಗೂ ಮಾಲಿವುಡ್ ಸ್ಟಾರ್ ಹೀರೋ ಮಮ್ಮುಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ‘D55’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹರಿದಾಡುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಖಾಕಿ ಖದರ್ ತೋರಿಸಲಿದ್ದಾರೆ. ಅಂದರೆ, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಗಾಸಿಪ್ ಜೋರಾಗಿ ಕೇಳಿಬರುತ್ತಿದೆ. ರಾಜ್‌ಕುಮಾರ್…

Read More

ಗೊರಗುಂಟೆಪಾಳ್ಯದಲ್ಲಿ ಗ್ಯಾಸ್ ಲಾರಿ ಬ್ರೇಕ್ ಫೇಲ್ ಆಗಿ ಕೆಟಿಎಂ ಬೈಕ್‌ಗೆ ಡಿಕ್ಕಿ; ಲಾರಿ ಚಕ್ರದಡಿ ಸಿಲುಕಿ ದಂಪತಿ ಸಾವು – Kannada News

ಬೆಂಗಳೂರು, ಜೂ.11: ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಇಂದು (ಜೂ.11) ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಲಿಂಡರ್‌ಗಳಿಂದ ತುಂಬಿದ್ದ ಗ್ಯಾಸ್ ಲಾರಿಯೊಂದರ ಬ್ರೇಕ್ ಫೇಲ್ ಆದ ಪರಿಣಾಮ, ನಿಯಂತ್ರಣ ತಪ್ಪಿ ಕೆಟಿಎಂ ಡ್ಯೂಕ್ (KTM Duke) ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಬೈಕ್‌ನಲ್ಲಿದ್ದ ಪತಿ-ಪತ್ನಿ ಇಬ್ಬರೂ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ನಾಗರಬಾವಿ ನಿವಾಸಿಗಳಾದ ಶಬ್ರಾಜ್ (28) ಮತ್ತು ಆತನ ಪತ್ನಿ ಶಬ್ರೀನ್ (24) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ತಮ್ಮ ಕೆಟಿಎಂ…

Read More

ಅನಿವಾಸಿ ಭಾರತೀಯರ FCNR-B ಠೇವಣಿಗಳಿಗೆ ಭಾರತದ ಬ್ಯಾಂಕುಗಳಿಂದ ಭರ್ಜರಿ ಬಡ್ಡಿ ಆಫರ್ – Kannada News

ನವದೆಹಲಿ, ಜೂನ್ 11: ಅನಿವಾಸಿ ಭಾರತೀಯರಿಂದ (NRI) ಅವರ ದೇಶಗಳ ಕರೆನ್ಸಿಯನ್ನು ಆಕರ್ಷಿಸುವ ಸಲುವಾಗಿ ಆರ್​ಬಿಐ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡಿದ ಬೆನ್ನಲ್ಲೇ ಭಾರತದ ಹಲವು ಬ್ಯಾಂಕುಗಳು ಎನ್​ಆರ್​ಐ ಠೇವಣಿಗಳ (FCNR-B) ದರಗಳನ್ನು ಗಣನೀಯವಾಗಿ ಹೆಚ್ಚಿಸತೊಡಗಿವೆ. ಸರ್ಕಾರಿ ಸ್ವಾಮ್ಯದ ಎಸ್​ಬಿಐನಿಂದ ಹಿಡಿದು ಖಾಸಗಿಯ ಯೆಸ್ ಬ್ಯಾಂಕ್​ವರೆಗೆ ಹಲವು ಬ್ಯಾಂಕುಗಳು ವಿದೇಶೀ ಕರೆನ್ಸಿಗಳ ಠೇವಣಿ ದರಗಳನ್ನು ಏರಿಸಿವೆ. ಕೆಲ ಠೇವಣಿಗಳಿಗೆ ಶೇ. 7.1ರವರೆಗೂ ಬಡ್ಡಿ ಆಫರ್ ಮಾಡಲಾಗಿದೆ. ಯೆಸ್ ಬ್ಯಾಂಕ್ (Yes Bank) ತನ್ನ ವಿದೇಶಿ ಕರೆನ್ಸಿ ಅನಿವಾಸಿ…

Read More

ಇಂಗ್ಲೆಂಡ್​ನಲ್ಲಿ ಮಂಕಾದ ಮಂಧಾನ; ತಂಡಕ್ಕೆ ಎದುರಾಯ್ತು ಹೊಸ ತಲೆನೋವು – Kannada News

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಇಂಗ್ಲೆಂಡ್​ನಲ್ಲಿ ಆರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಟೀಂ ಇಂಡಿಯಾ ಕೂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಅದರ ಭಾಗವಾಗಿ ಭಾರತ ವನಿತಾ ಪಡೆ, ಆತಿಥೇಯ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಿತು. ಆದರೆ ಆ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿತು. ಇದಾದ ನಂತರ ಎರಡು ಅಭ್ಯಾಸ ಪಂದ್ಯಗಳನ್ನು ಆಡಿತು. ಅದರಲ್ಲಿ ಒಂದು ಪಂದ್ಯದಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿತು….

Read More

ನೀರಿನ ಬಾಟಲಿನ ಕ್ಯಾಪ್​ಗಳು ಏಕೆ ಬೇರೆ ಬೇರೆ ಬಣ್ಣದಲ್ಲಿರುವುದು ಏಕೆ? – Kannada News

ಸಾಮಾನ್ಯವಾಗಿ ನಾವು ದಿನನಿತ್ಯ ಬಳಸುವ ವಸ್ತುಗಳ ಬಗ್ಗೆ ಅಷ್ಟಾಗಿ ಯೋಚನೆ ಮಾಡಲ್ಲ. ಹೌದು, ಪ್ರತಿದಿನ ಬಳಸುವ ಸಾಮಾನ್ಯ ವಸ್ತುಗಳಲ್ಲಿ ಈ ನೀರಿನ ಬಾಟಲಿ (water bottle) ಕೂಡ ಒಂದು. ಪ್ರಯಾಣದ ವೇಳೆ ಖರೀದಿ ಮಾಡುವ ಈ ನೀರಿನ ಬಾಟಲಿಯ ಕ್ಯಾಪ್ ಬಣ್ಣವು ಹೆಚ್ಚಾಗಿ ನೀಲಿಯಾಗಿರುತ್ತದೆ. ಆದರೆ ಇನ್ನು ಕೆಲವು ಬಾಟಲಿ ಮುಚ್ಚಳವು ಬಿಳಿ, ಕಪ್ಪು, ಹಸಿರು, ಹಳದಿ ಹೀಗೆ ವಿವಿಧ ಬಣ್ಣದಲ್ಲಿರುವುದನ್ನು ನೀವು ನೋಡಿರುತ್ತೀರಿ. ಬಾಟಲಿ ಮುಚ್ಚಳಗಳು ಬೇರೆ ಬೇರೆ ಬಣ್ಣದಲ್ಲಿರುವುದು ಯಾಕೆ ಎನ್ನುವುದಕ್ಕೆ ಕಾರಣವೂ ಇದೆ….

Read More

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ – Kannada News

ಬೆಂಗಳೂರು (ಜೂ.11): ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ (Karnataka Rajya Sabha) ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ (Congress) ಮತ್ತು ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ. ಆವಿರೋಧವಾಗಿ ರಾಜ್ಯಸಭೆಗೆ ಪ್ರವೇಸಿಸಿದ…

Read More

BAN vs AUS: ಸೊನ್ನೆಗೆ 3 ವಿಕೆಟ್; ಬಾಂಗ್ಲಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ (Bangladesh vs Australia), ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಹೀನಾಯವಾಗಿ ಸೋತು ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತ್ತು. ಇದೀಗ ಸರಣಿಯ ಎರಡನೇ ಪಂದ್ಯದಲ್ಲೂ ಕಾಂಗರೂಗಳ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದೆ. ಬಾಂಗ್ಲಾ ನೆಲದಲ್ಲಿ ನೆಲಕಚ್ಚಿ ಆಡುವುದನ್ನು ಮರೆತಿರುವ ಆಸೀಸ್ ಬ್ಯಾಟರ್​ಗಳು ಒಂದಂಕಿ ದಾಟಲು ಪರದಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ಅಗ್ರ ಮೂವರು ಬ್ಯಾಟರ್​ಗಳು…

Read More