Headlines

ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…

Read More

ಸಾವು ಹೀಗೂ ಬರಬಹುದು: ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು – Kannada News

ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವುImage Credit source: Tv9 kannada ಬ್ರಹ್ಮಾವರ, ಜೂ.11: ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ ಕಂದಮ್ಮನ ಮೇಲೆ ಆಕಸ್ಮಿಕವಾಗಿ ತೆಂಗಿನಕಾಯಿ ಬಿದ್ದು ಪ್ರಾಣ ಕಳೆದುಕೊಂಡ ಅತ್ಯಂತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ಈ ಘಟನೆ…

Read More

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ…

Read More

ಕೈಯಿಂದ ಪ್ರೀಮಿಯಮ್ ಕಟ್ಟಬೇಕಿಲ್ಲ; ಉಚಿತ 7 ಲಕ್ಷ ರೂ ವಿಮಾ ಸೌಲಭ್ಯ ಪಡೆಯುವುದು ಹೇಗೆ? – Kannada News

ಹೆಚ್ಚಿನ ಜನರಿಗೆ ಗೊತ್ತಿಲ್ಲದ ಸಂಗತಿ ಇದು. ಇಪಿಎಫ್ (EPF) ಅಥವಾ ನೌಕರರ ಭವಿಷ್ಯ ನಿಧಿ ಖಾತೆ ಹೊಂದಿರುವವರಿಗೆ ಯಾವುದೇ ಹೆಚ್ಚುವರಿ ಪ್ರೀಮಿಯಂ ಇಲ್ಲದೆ ₹7 ಲಕ್ಷದವರೆಗೆ ಉಚಿತ ಜೀವ ವಿಮೆ (Life Insurance) ಸೌಲಭ್ಯ ಸಿಗುತ್ತದೆ. ಇದನ್ನು ‘ಇಡಿಎಲ್‌ಐ’ (Employees’ Deposit Linked Insurance Scheme – EDLI) ಯೋಜನೆ ಎಂದು ಕರೆಯಲಾಗುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿಯೊಬ್ಬ ಉದ್ಯೋಗಿಗೂ ಈ ವಿಮಾ ರಕ್ಷಣೆ ಸ್ವಯಂಚಾಲಿತವಾಗಿ ಅನ್ವಯಿಸುತ್ತದೆ. ಈ ವಿಮಾ ಸೌಲಭ್ಯದ ಬಗ್ಗೆ ಇಪಿಎಫ್ ಖಾತೆದಾರರಲ್ಲೇ ಹೆಚ್ಚಿನ…

Read More

ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು – Kannada News

ಕೊಲ್ಕತ್ತಾ, ಜೂನ್ 11: ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಇಂದು ಮಮತಾ ಬ್ಯಾನರ್ಜಿ (Mamata Banerjee) ಮತ್ತು ಅವರ ಸೋದರಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ನಕಲಿ ಸಹಿ ಪ್ರಕರಣವೊಂದರಲ್ಲಿ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅಭಿಷೇಕ್ ಬ್ಯಾನರ್ಜಿ ಅವರು ಕೊನೆಯ ಕ್ಷಣದಲ್ಲಿ ತಮ್ಮನ್ನು ಕಾನೂನು ಸಲಹೆಗಾರ ಸ್ಥಾನದಿಂದ ಮುಕ್ತಗೊಳಿಸಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದು, ಈ ಕ್ರಮವು ತಮಗೆ ಉಂಟಾದ ತೀವ್ರ ಅವಮಾನ ಎಂದು…

Read More

‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ – Kannada News

ಪ್ರಖ್ಯಾತ ಬಾಲಿವುಡ್ ರ‍್ಯಾಪ್ ಸಿಂಗರ್ ಬಾದ್‌ಶಾ (Badshah) ಮತ್ತು ಪಂಜಾಬಿ ನಟಿ, ಮಾಡೆಲ್ ಇಶಾ ರಿಖಿ (Isha Rikhi) ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮದುವೆಯ (Badshah Wedding) ಊಹಾಪೋಹಗಳಿಗೆ ಇಶಾ ರಿಖಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಕುತೂಹಲಗಳಿಗೂ ತೆರೆ ಎಳೆದಿದ್ದಾರೆ. ಬಾದ್‌ಶಾ ಈ ವಿಷಯವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ಇಶಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ‘ಆಸ್ಕ್ ಮಿ…

Read More

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು – Kannada News

ಕನ್ನಡದಲ್ಲಿ ಹಾಸ್ಯ ಮಿಶ್ರಿತ ಹಾರರ್ ಸಿನಿಮಾ (Horror Cinema) ‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಪ್ರವಾಸಕ್ಕೆ ಹೋಗುವ ಯುವಕರಿಗೆ ಎದುರಾಗುವ ಸಂದರ್ಭಗಳು, ಹಾರರ್ ಅನುಭವಗಳು, ಆಘಾತಗಳ ಕತೆಯನ್ನು ಈ ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಸಿನಿಮಾವನ್ನು ಹರೀಶ್ ಸೀನು ಮತ್ತು ಕೋಲಾರ್ ಸೀನು ಒಟ್ಟಿಗೆ ನಿರ್ದೇಶನ ಮಾಡಿದ್ದು, ಉಜ್ವಲ ನಾಗರಾಜ್ ರಾವ್ ಜಗದಲೆ ಎಂಬುವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ…

Read More

ಕೋವಿಡ್​ನಿಂದ ಖುಲಾಯಿಸಿದ ಅದೃಷ್ಟ: ಆಸ್ಟ್ರೇಲಿಯಾ ತಂಡಕ್ಕೆ ಭಾರತೀಯನ ಎಂಟ್ರಿ! – Kannada News

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರುಗಳ ಈ ತಂಡದಲ್ಲಿ ಭಾರತೀಯ ಮೂಲದ ನಿಖಿಲ್ ಚೌಧರಿ ಸ್ಥಾನ ಪಡೆದಿದ್ದಾರೆ. 30 ವರ್ಷದ ನಿಖಿಲ್ ದೆಹಲಿ ಮೂಲದ ಕ್ರಿಕೆಟಿಗ. ಈ ಹಿಂದೆ ಪಂಜಾಬ್ ತಂಡದ ಪರವಾಗಿ ಟಿ20 ಮತ್ತು ಲಿಸ್ಟ್-ಎ ಕ್ರಿಕೆಟ್‌ ಕೂಡ ಆಡಿದ್ದರು. ಆದರೆ ಕೋವಿಡ್​ ಸಂದರ್ಭದಲ್ಲಿನ ಒಂದು ಟ್ವಿಸ್ಟ್ ನಿಖಿಲ್ ಅವರ ಕೆರಿಯರ್​ ಅನ್ನೇ ಬದಲಿಸಿರುವುದು ವಿಶೇಷ. ನಿಖಿಲ್ ರೋಚಕ ಪ್ರಯಣ: ನಿಖಿಲ್ ಚೌಧರಿ ಅವರ ಕ್ರಿಕೆಟ್ ಜೀವನದ…

Read More

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’:ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ – Kannada News

ಬೆಂಗಳೂರು, (ಜೂನ್ 11): ರಾಜಕೀಯದಲ್ಲಿ ಯಾರು ಯಾರಿಗೂ ಶತ್ರುಗಳಲ್ಲ, ಮಿತ್ರರಲ್ಲ ಎಂಬ ಮಾತಿದೆ. ಇದಕ್ಕೆ ಪೂರಕವೆಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದಲೇ ಜಮಿರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ ಎನ್ನಲಾಗುತ್ತಿದೆ. ಹೌದು..ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್)…

Read More

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ 15 ವಿದ್ಯಾರ್ಥಿನಿಯರು ಅಸ್ವಸ್ಥ – Kannada News

ಹಾಸನ ಹಾಸ್ಟೆಲ್​​​ನಲ್ಲಿ ಊಟದಲ್ಲಿ ಹಲ್ಲಿ ಪತ್ತೆ: 15 ವಿದ್ಯಾರ್ಥಿಗಳು ಅಸ್ವಸ್ಥImage Credit source: Tv9 kannada ಹಾಸನ, ಜೂ.11: ಜಿಲ್ಲೆಯ ತಾಲ್ಲೂಕಿನ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ದೊಡ್ಡ ಅಚಾತುರ್ಯವೊಂದು ನಡೆದಿದೆ. ವಿದ್ಯಾರ್ಥಿನಿಯರು ರಾತ್ರಿಯ ಊಟ ಮಾಡುವ ವೇಳೆ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾಗಿದ್ದು, ಅದೇ ವಿಷಪೂರಿತ ಆಹಾರವನ್ನು ಸೇವಿಸಿದ ಸುಮಾರು 15 ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಊಟ ಮಾಡುವಾಗ ಸಾಂಬಾರ್‌ನಲ್ಲಿ ಹಲ್ಲಿ ಇರುವುದು ತಡವಾಗಿ ಬೆಳಕಿಗೆ ಬಂದಿರುವ ಕಾರಣ ಅಷ್ಟರಲ್ಲಾಗಲೇ ಊಟ ಸವಿದಿದ್ದ 15…

Read More