ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Your blog category
ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸ್ಟಾರ್ ಹೀರೋಗಳು ಎದುರಾದರೆ ಸಾಕು ಅಭಿಮಾನಿಗಳು ಬಂದು ಮುತ್ತಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭದ್ರತೆಯೊಂದಿಗೆ ಬರುತ್ತಾರೆ. ಹೀಗಾಗಿ ಎಲ್ಲರಿಗೂ ಭೇಟಿಯ ಅದೃಷ್ಟ ಸಿಗೋದಿಲ್ಲ. ಈ ಕಾರಣದಿಂದಲೇ, ಅವರಂತೆ ಕಾಣೋ ಜೂನಿಯರ್ ಆರ್ಟಿಸ್ಟ್ಗಳಿಗೂ ಸಾಕಷ್ಟು ಬೇಡಿಕೆ ಇರುತ್ತದೆ.ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಜೂನಿಯರ್ ಮಹೇಶ್ ಬಾಬು (Mahesh Babu) ಅವರನ್ನು ನೋಡಿದ ಅಭಿಮಾನಿ ಸಖತ್ ಖುಷಿಯಾಗಿದ್ದಾರೆ. ಅವರನ್ನು ಎತ್ತಾಡಿಸಿದ್ದಾರೆ.
ಮಹೇಶ್ ಬಾಬು ಅವರು ಸ್ಟಾರ್ ನಟ. ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಾರೆ. ಅವರನ್ನು ಭೇಟಿ ಮಾಡೋದು ಅಸಾಧ್ಯವಾದ ಮಾತು. ಹೀಗಾಗಿ, ಜೂನಿಯರ್ ಮಹೇಶ್ ಬಾಬು ಅವರಲ್ಲಿ ತಮ್ಮ ಹೀರೋನ ಕಾಣುತ್ತಿದ್ದಾರೆ ಅಭಿಮಾನಿಗಳು. ಆಂಧ್ರ ಪ್ರದೇಶದ ಏಳೂರಲ್ಲಿ ಜಾತ್ರೆ ನಡೆದಿದ್ದು, ಇದಕ್ಕೆ ತೆಲುಗು ನಟರ ದಂಡೇ ನೆರೆದಿತ್ತು. ಆದರೆ, ಯಾರೊಬ್ಬರೂ ಒರಿಜಿನಲ್ ಆಗಿರಲಿಲ್ಲ.
ಇದನ್ನೂ ಓದಿ: ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್ ಜಾಗ ಇಲ್ಲವೆ? ಸತ್ಯವೇನು?
ಜೂನಿಯರ್ ಮಹೇಶ್ ಬಾಬು, ಜೂನಿಯರ್ ಬಾಲಯ್ಯ, ಜೂನಿಯರ್ ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಒಂದೆಡೆ ಸೇರಿದ್ದರು. ಈ ವೇಳೆ ಜೂನಿಯರ್ ಮಹೇಶ್ ಬಾಬು ಅವರು ವೇದಿಕೆ ಮೇಲೆ ಮಾತನಾಡಲು ಆರಂಭಿಸಿದರು. ಅವರನ್ನು ನೋಡಿ ಅಭಿಮಾನಿ ಖುಷಿಪಟ್ಟಿದ್ದಾನೆ. ಮಹೇಶ್ ಬಾಬು ಅವರನ್ನೇ ನೋಡಿದಂತಾಗಿ ಹೋಗಿ ಅವರನ್ನು ತಬ್ಬಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಹೇಶ್ ಬಾಬು ಅವರು ಸದ್ಯ ರಾಜಮೌಳಿ ಜೊತೆ ‘ವಾರಣಾಸಿ’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ 2027ರ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಸಿನಿಮಾಗೆ ಈಗಾಗಲೇ ಶೂಟಿಂಗ್ ನಡೆಯುತ್ತಿದೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದೇ ಸೀಸನ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ನಾಡಿನ್ ಡಿ ಕ್ಲರ್ಕ್ (Nadine de Klerk) ಪಾಲಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಸಂಘಟಿಸುವ ಮೂಲಕ ನಾಡಿಕ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ
ಬೆಂಗಳೂರು, ಜನವರಿ 31: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 16°C ಇದ್ದು, ಗರಿಷ್ಠ 30°C ಇರಲಿದ್ದು, ಬೆಳಗ್ಗೆ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಲಿಂಗಾಯತ ಆಗಿ ಧನಂಜಯ್ ಅವರು ಮಾಂಸ ತಿಂದಿದ್ದು ಚರ್ಚೆಗೆ ಕಾರಣ ಆಯಿತು. ಈ ವಿಡಿಯೋ ಸಾಕಷ್ಟು ವೈರಲ್ ಆಯಿತು. ಆದರೆ ಆಹಾರ ಎನ್ನೋದು ಅವರವರ ಆಯ್ಕೆ ಎಂದು ಧನಂಜಯ್ ನಂಬುತ್ತಾರೆ. ಅವರ ಬಳಿ ಹೋಗಿ ಏನು ತಿಂತೀರಿ ಎಂದು ಕೇಳಿದರೆ ಅವರು ಖುಷಿಯಿಂದ ಅದನ್ನು ವಿವರಿಸುತ್ತಾರಂತೆ. ‘ಧನಂಜಯ್ ನಾನ್ವೆಜ್ ತಿಂತಾರಾ ಎಂದು ಕೇಳೋದು ತಪ್ಪಲ್ಲ. ಆದರೆ, ಲಿಂಗಾಯುತರು, ಬ್ರಾಹ್ಮಣರೆಲ್ಲ ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅನುಶ್ರೀ (Anushree) ಅವರು ಈಗ ಆ್ಯಂಕರ್ ಅನುಶ್ರೀ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ವೃತ್ತಿ ಜೀವನ. ಅವರು ಆ್ಯಂಕರಿಂಗ್ ಮಾಡಿ, ಆ್ಯಂಕರ್ ಅನುಶ್ರೀ ಎಂದೇ ಫೇಮಸ್ ಆಗಿದ್ದಾರೆ. ಈಗ ಅನುಶ್ರೀ ಅವರು ವೃತ್ತಿ ಜೀವನಕ್ಕೆ 20 ವರ್ಷಗಳು ತುಂಬಿವೆ. ಈ ವಿಶೇಷ ಕ್ಷಣವನ್ನು ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್-2025 ಮತ್ತು ‘ಕಿಲಾಡಿ ಜೂನಿಯರ್ಸ್’ಮಹಾಸಂಗಮ’ದಲ್ಲಿ ಆಚರಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರು ಈ ಸಂದರ್ಭದಲ್ಲಿ ಭಾವುಕರಾದರು.
ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಗಮನ ಸೆಳೆದವರು. ಅವರು ನಟಿಯಾಗಿಯೂ ಪ್ರುತ್ನಿಸಿದರು. ಆದರೆ, ಅಷ್ಟಾಗಿ ಯಶಸ್ಸು ಕಾಣಲೇ ಇಲ್ಲ. ಅವರಿಗೆ ಹೊಸ ಬದುಕು ನೀಡಿದ್ದು ಜೀ ಕನ್ನಡ ವಾಹಿನಿ ಎಂದರೂ ತಪ್ಪಾಗಲಾರದರು. ಯಾವುದೇ ರಿಯಾಲಿಟಿ ಶೋ ಬಂದರು ಅವರ ಉಪಸ್ಥಿತಿ ಇದ್ದೇ ಇರುತ್ತದೆ. ಒಂದು ಶೋಗೆ ಅವರು ಆ್ಯಂಕರಿಂಗ್ ಮಾಡಿಯೇ ಮಾಡುತ್ತಾರೆ. ಈಗ ಅನುಶ್ರೀ ಅವರ ವೃತ್ತಿ ಜೀವನಕ್ಕೆ 20 ವರ್ಷ ಆಗಿದ್ದನ್ನು ಸಂಭ್ರಮಿಸಲಾಗಿದೆ.
‘ನೂರಾರು ಕನಸು ಇತ್ತು. ಎಲ್ಲವನ್ನೂ ಕಟ್ಟಿಟ್ಟು, ದುಡಿಮೆಯನ್ನೇ ಕನಸನ್ನಾಗಿ ಮಾಡಿಕೊಂಡ ಆ ಅನುಶ್ರೀಗೆ ಧನ್ಯವಾದಗಳು. ನನಗೆ ನಾನೇ ಧನ್ಯವಾದ ಹೇಳಿಕೊಳ್ಳುತ್ತೇನೆ’ ಎಂದು ಅವರು ಹೇಳಿದರು. ಆ ಬಳಿಕ ಅಕುಲ್ ಬಾಲಾಜಿ, ಕುರಿ ಪ್ರತಾಪ್, ಅನುಪಮಾ ಗೌಡ ಸೇರಿದಂತೆ ಅನೇಕರು ಅನುಶ್ರೀಗೆ ಅಭಿನಂದನೆ ತಿಳಿಸಿದರು. ಅವರ ಕೆಲಸವನ್ನು ಶ್ಲಾಘಿಸಿದರು.
ಇದನ್ನೂ ಓದಿ: ಬಡತನ ಇದ್ದರೆ ಡಿಕೆಡಿಲಿ ಚಾನ್ಸ್ ಸಿಗುತ್ತೆ ಎಂದವರಿಗೆ ಮುಖಕ್ಕೆ ಹೊಡೆದಂತೆ ಉತ್ತರಿಸಿದ ಅನುಶ್ರೀ
‘ನಾನು ಸಾಯೋವರೆಗೂ ಚಿರಋಣಿ ಆಗಿ ಇರುತ್ತೇನೆ’ ಎಂದು ಜೀ ಕನ್ನಡ ವಾಹಿನಿಗೆ ಅನುಶ್ರೀ ಧನ್ಯವಾದ ತಿಳಿಸಿದರು. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರ ಆ್ಯಂಕರ್ನ ಕರ್ನಾಟಕದ ಜನತೆ ಮೆಚ್ಚಿದೆ. ಆದರೆ, ಒಂದು ಒಳ್ಳೆಯ ವೇದಿಕೆ ನೀಡಿದ್ದು ಜೀ ಕನ್ನಡ ವಾಹಿನಿ. ಹೀಗಾಗಿ, ಜೀ ವಾಹಿನಿಗೆ ಅವರು ಚಿರಋಣಿ ಆಗಿರೋದಾಗಿ ತಿಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು!
ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್‌ನ ಕಿಟಕಿ ಹಾಗೂ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಅಡುಗೆ ಮಾಡಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಅವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ
ಘಟನೆಯ ಮಾಹಿತಿ ತಿಳಿದ ತಕ್ಷಣ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಸಿಜೆ ರಾಯ್ ಸಾವು ಮತ್ತು ತನಿಖೆImage Credit source: tv9
ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ.
ಸಿಜೆ ರಾಯ್ ಅವರಿಗೆ ಪ್ರತಿನಿತ್ಯ ಡೈರಿ ಬರೆಯುವ ಅಭ್ಯಾಸವಿತ್ತು. ಡೈರಿಯಲ್ಲಿ ರಾಜ್ಯದ ಇಬ್ಬರು ಪ್ರಭಾವಿ ಶಾಸಕರು ಮತ್ತು ಒಬ್ಬರು ಮಾಜಿ ಸಂಸದರ ಹೆಸರು ಉಲ್ಲೇಖವಾಗಿದೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಬೆಂಗಳೂರಿನ ಪ್ರಭಾವಿ ಶಾಸಕರು ಮತ್ತು ಕೋಲಾರ ಜಿಲ್ಲೆಯ ಶಾಸಕರ ಜೊತೆಗಿನ ವ್ಯವಹಾರಿಕ ಸಂಬಂಧಗಳ ಬಗ್ಗೆ ಮಾಹಿತಿಯಿದೆ ಎನ್ನಲಾಗುತ್ತಿದೆ.
ಅಷ್ಟೇ ಅಲ್ಲದೆ, ಡೈರಿಯಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ಮತ್ತು ಮಾಡೆಲ್‌ಗಳ ಹೆಸರುಗಳೂ ಉಲ್ಲೇಖವಾಗಿವೆ. ದುಬೈನಲ್ಲಿ ಅವರು ನಡೆಸುತ್ತಿದ್ದ ವ್ಯವಹಾರಗಳು ಮತ್ತು ಅಲ್ಲಿನ ಪ್ರಭಾವಿ ವ್ಯಕ್ತಿಗಳ ಸಂಪರ್ಕದ ಬಗ್ಗೆಯೂ ರಾಯ್ ಬರೆದಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬರಹಗಾರ ಚಂದ್ರಚೂಡ್ ಅವರು ವಿಡಿಯೋ ಬಿಡುಗಡೆ ಮಾಡಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಿಜೆ ರಾಯ್ ಅವರು ಶೂಟೌಟ್ ಮಾಡಿಕೊಳ್ಳುವಂತಹ ಪರಿಸ್ಥಿತಿ ಏನಿತ್ತು? ಅವರು ದೇಶ ಬಿಟ್ಟು ಹೋಗುವಂತಹ ಅನಿವಾರ್ಯತೆ ಎದುರಾಗಿತ್ತೇ? ದೊಡ್ಡಬಳ್ಳಾಪುರದ ರೆಸಾರ್ಟ್ ಒಂದರಲ್ಲಿ ನಡೆದ ವಿಚಾರಗಳು ಮತ್ತು ಒಬ್ಬರು ಖ್ಯಾತ ನಟಿಯ ಜೊತೆಗಿನ ಅವರ ಲಿಂಕ್ ಬಗ್ಗೆ ತನಿಖೆಯಾಗಬೇಕು. ಅವರ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ಅಕ್ರಮಗಳ ಬಗ್ಗೆಯೂ ಪೊಲೀಸ್ ತನಿಖೆ ನಡೆಯಲಿ’ ಚಕ್ರವರ್ತಿ ಚಂದ್ರಚೂಡ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಸಿಜೆ ರಾಯ್ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ!
ಸದ್ಯ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರು ಕಮಿಷನರ್ರಿಂದ ಮಾಹಿತಿ ಪಡೆದಿದ್ದಾರೆ.
ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ.
ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರು ಕಮಿಷನರ್ರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆಯಿದೆ. ಸಾವಿರಾರು ಕೋಟಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ರಾಯ್ ಅವರ ಈ ಹಠಾತ್ ನಿಧನಕ್ಕೆ ಕಾರಣ ಏನೆಂದು ಸ್ಪಷ್ಟವಾಗಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.
ವಿದೇಶದಲ್ಲಿದ್ದ ರಾಯ್ ಅವರ ಪತ್ನಿ ಮತ್ತು ಮಕ್ಕಳು ಬೆಂಗಳೂರಿಗೆ ಆಗಮಿಸಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ವೀಕ್ಷಿಸಿ ದುಃಖಿತರಾಗಿದ್ದಾರೆ. ರ್ಜಾಪುರದಲ್ಲಿರುವ ತೋಟದಲ್ಲಿ ಭಾನುವಾರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ. ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್ ಅವರು ಹನುಮಂತಗೆ ಲಕ್ಷ ಲಕ್ಷ ಹಣ ನೀಡಿದ್ದರು. ಪುನೀತ್ ವ್ಯಕ್ತಿತ್ವವನ್ನು ಬಹುವಾಗಿ ಇಷ್ಟಪಟ್ಟಿದ್ದರು.
ರಾಯ್ ಅವರು ತಮ್ಮ ಕಾನ್ಫಿಡೆಂಟ್ ಗ್ರೂಪ್ ಮೂಲಕ ಕನ್ನಡ ಹಾಗೂ ಮಲಯಾಳಂ ಸಿನಿಮಾ ನಿರ್ಮಾಣ ಮಾಡಿದ್ದರು. ಅವರು ಕಿರುತೆರೆ ಜೊತೆ ಒಳ್ಳೆಯ ಒಡನಾಟ ಹೊಂದಿದ್ದರು. ಅದರಲ್ಲೂ ಹನುಮಂತ ಮೇಲೆ ವಿಶೇಷ ಪ್ರೀತಿ ಇತ್ತು. ‘ಬಿಗ್ ಬಾಸ್ ಕನ್ನಡ’ ವಿನ್ನರ್ಗಳಿಗೆ ರಾಯ್ 50 ಲಕ್ಷ ಸ್ಪಾನ್ಸರ್ ಮಾಡುತ್ತಿದ್ದರು. ಬಿಗ್ ಬಾಸ್ ಗೆದ್ದ ಹನುಮಂತಗೆ ರಾಯ್ 50 ಲಕ್ಷ ರೂಪಾಯಿ ನೀಡಿದ್ದರು.
ಹನುಮಂತ ಹಾಗೂ ರಾಯ್ ಪರಿಚಯ ಮೊದಲೇ ಇತ್ತು. ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಸರಿಗಮಪ’ ಶೋನಲ್ಲಿ ಹನುಮಂತ ರನ್ನರ್ ಅಪ್ ಆದರು. ಈ ವೇಳೆ ಹನುಮಂತ ಅವರನ್ನು ಬಹುವಾಗಿ ಮೆಚ್ಚಿಕೊಂಡಿದ್ದರು ರಾಯ್. ಆಗಲೂ ಅವರು ಹಣದ ಸಹಾಯ ಮಾಡಿದ್ದರು.
ಇದನ್ನೂ ಓದಿ: ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್ ಅವರಿಗಿದ್ದ ಬಂಧ ಎಂಥದ್ದು?
ಪುನೀತ್ ಅವರ ಭೇಟಿ ಬಗ್ಗೆಯೂ ರಾಯ್ ಮಾತನಾಡಿದ್ದರು. ‘ಕೋರಮಂಗಲದಲ್ಲಿ ನಾನು ಮಗಳಿಗಾಗಿ ಒಂದು ಪ್ರಾಪರ್ಟಿ ಖರೀದಿ ಮಾಡಿದ್ದೆ. ನಾನು ಅದನ್ನು ಮಾರೋಕೆ ರೆಡಿ ಇದೀನಿ ಅಂತ ಬ್ರೋಕರ್ ಪುನೀತ್ ಬಳಿ ಹೇಳಿದ್ದರು. ಅವರು ನೇರವಾಗಿ ನನ್ನ ಮನೆಗೆ ಬಂದರು. ಅವರ ವಿನಯತೆ ನೋಡಿ ಮಾರಬೇಕು ಎನಿಸಿತು. ನನಗೆ ಅದನ್ನು ಕೊಡಬೇಕು ಎಂದಿರಲಿಲ್ಲ’ ಎಂದು ‘ಆಲ್ರೌಂಡರ್ಸ್’ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದರು. ‘ಕೆಲವರ ವ್ಯಕ್ತಿತ್ವ ನೋಡಿ ತುಂಬಾನೇ ಇಷ್ಟ ಆಗಿ ಬಿಡುತ್ತದೆ’ ಎಂದು ರಾಯ್ ಅವರು ಹೇಳಿದ್ದರು. ಈ ರೀತಿ ಇಷ್ಟ ಪಟ್ಟವರಲ್ಲಿ ಪುನೀತ್ ಕೂಡ ಒಬ್ಬರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.