ಸರ್ಕಾರಿ ಇಲಾಖೆಗಳೇ ಹೀಗೆ ಮಾಡೋದು ಸರೀನಾ? ತುಮಕೂರಿನ ಕಚೇರಿಗಳಲ್ಲಿ 44 ಕೋಟಿ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ – Kannada News | Tumakuru Govt Depts Owe Rs.44 Cr Electricity Bills: BESCOM Warns Power Disconnection
44 ಕೋಟಿ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ Image Credit source: Tv9 ತುಮಕೂರು, ಜನವರಿ 30: ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆಗಳ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ತುಮಕೂರಿನ (Tumakuru) ವಿವಿಧ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಪಾವತಿಸದೇ ಬರೋಬ್ಬರಿ 44 ಕೋಟಿ 05 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ವರ್ಷವೇ ಈ ಬಿಲ್ಗಳನ್ನು ಪಾವತಿಸುವಂತೆ ಬೆಸ್ಕಾಂ ಹೇಳಿದ್ದರೂ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ. ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ…