Category Archives: Blog

Your blog category

ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು! – Kannada News | Ajit Pawar aircraft crashed in Pune his body identified by his watch

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ (Ajit Pawar) ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದ ವಿಮಾನವೊಂದು ಇಂದು ಬೆಳಗ್ಗೆ ಮಹಾರಾಷ್ಟ್ರದ ಪುಣೆಯಲ್ಲಿ ಅಪಘಾತಕ್ಕೀಡಾಗಿ ಎಲ್ಲರೂ ಸಾವನ್ನಪ್ಪಿದ್ದಾರೆ. ದೆಹಲಿ ಮೂಲದ ವಿಎಸ್‌ಆರ್ ವೆಂಚರ್ಸ್ ನಿರ್ವಹಿಸುತ್ತಿದ್ದ ಲಿಯರ್‌ಜೆಟ್ 46 ಮುಂಬೈನಿಂದ ಟೇಕ್ ಆಫ್ ಆದ 35 ನಿಮಿಷಗಳ ನಂತರ ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪತನವಾಗಿದೆ.

ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮಾತ್ರವಲ್ಲದೆ ಅಜಿತ್ ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಫ್ಲೈಟ್ ಅಟೆಂಡೆಂಟ್ ಮತ್ತು ಇಬ್ಬರು ಸಿಬ್ಬಂದಿ (ಇಬ್ಬರು ಪೈಲಟ್​ಗಳು) ಕೂಡ ಈ ದುರಂತದಲ್ಲಿ ಮೃತಪಟ್ಟಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ. ದಟ್ಟ ಮಂಜಿನಿಂದಾಗಿ ಏನೂ ಗೋಚರವಾಗದ ಪರಿಸ್ಥಿತಿ ಇದ್ದುದರಿಂದ ಪೈಲಟ್ ತುರ್ತು ಲ್ಯಾಂಡಿಂಗ್​ಗೆ ಪ್ರಯತ್ನಿಸುತ್ತಿದ್ದರು.

ಇದನ್ನೂ ಓದಿ: ವಿಮಾನ ಪತನದಲ್ಲಿ ಅಜಿತ್ ಪವಾರ್ ಸಾವು: 2023ರಲ್ಲಿ ಕೂಡ ಈ ವಿಮಾನ ಪತನಗೊಂಡಿತ್ತು

ಆದರೆ, ಅಷ್ಟರಲ್ಲೇ ವಿಮಾನ ಅಪಘಾತಕ್ಕೀಡಾಗಿದೆ. ಪತನದ ಬಳಿಕ ವಿಮಾನಕ್ಕೆ ಬೆಂಕಿ ತಗುಲಿದೆ. ಇದರಿಂದ ವಿಮಾನದಲ್ಲಿದ್ದ ಎಲ್ಲರ ದೇಹವೂ ಛಿದ್ರವಾಗಿತ್ತು. ಅದನ್ನು ಗುರುತಿಸಲು ಸಾಧ್ಯವಾಗದ ಸ್ಥಿತಿಯಲ್ಲಿತ್ತು. ಈ ವೇಳೆ ಅಜಿತ್ ಪವಾರ್ ಅವರ ದೇಹವನ್ನು ಅವರ ಕೈಗಡಿಯಾರದಿಂದ ಗುರುತಿಸಲಾಗಿದೆ. ವಿಪರ್ಯಾಸವೆಂದರೆ ಎನ್‌ಸಿಪಿಯ ಅಧಿಕೃತ ಚುನಾವಣಾ ಚಿಹ್ನೆ ಕೂಡ ಗಡಿಯಾರ.

ಮಹಾರಾಷ್ಟ್ರದಲ್ಲಿ ಫೆಬ್ರವರಿ 5ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಚಾರದ ಭಾಗವಾಗಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು 66 ವರ್ಷದ ಅಜಿತ್ ಪವಾರ್ ಬಾರಾಮತಿಗೆ ಪ್ರಯಾಣಿಸುತ್ತಿದ್ದರು. ಅಜಿತ್ ಪವಾರ್ ರಾಜ್ಯಸಭೆಯ ಸದಸ್ಯರಾದ ತಮ್ಮ ಪತ್ನಿ ಸುನೇತ್ರಾ ಮತ್ತು ಇಬ್ಬರು ಪುತ್ರರಾದ ಪಾರ್ಥ್ ಮತ್ತು ಜೇ ಅವರನ್ನು ಅಗಲಿದ್ದಾರೆ.

ಇದನ್ನೂ ಓದಿ: ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಈಗಾಗಲೇ ತನ್ನ ತನಿಖೆಯನ್ನು ಆರಂಭಿಸಿದೆ. ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್ ವಿಮಾನದ ಅಂತಿಮ ಕ್ಷಣಗಳನ್ನು ಸ್ಥಾಪಿಸುವಲ್ಲಿ ನಿರ್ಣಾಯಕವಾಗಿರುತ್ತದೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಅವರು ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು. ಆದರೆ, ಅವರಿಂದು ದುರಂತವಾಗಿ ಮೃತಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ – Kannada News | Karnataka Government doctors cannot treat inpatients in private hospitals

ಪ್ರಾತಿನಿಧಿಕ ಚಿತ್ರImage Credit source: ehealth.com

ಬೆಂಗಳೂರು, ಜನವರಿ 28: ಸರ್ಕಾರಿ ವೈದ್ಯರು (government doctors) ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ಸರ್ಕಾರ ನಿರ್ಬಂಧ ವಿಧಿಸಿದೆ. ಆ ಮೂಲಕ ಸರ್ಕಾರಿ ವೈದ್ಯರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರು ಖಾಸಗಿ ವೈದ್ಯಕೀಯ ಅಭ್ಯಾಸ ನಡೆಸುವ ಕುರಿತು ಸರ್ಕಾರ ಸುತ್ತೋಲೆ ಹೊರಡಿಸುವ ಮೂಲಕ ಸ್ಪಷ್ಟೀಕರಣ ನೀಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ನಿರಂತರ ಚಿಕಿತ್ಸೆ ಒದಗಿಸುವ ಅಗತ್ಯವಿರುವುದರಿಂದ ಹಾಗೂ ರೋಗಿಗಳ ಆರೈಕೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ OPD ಸೇವೆಗೆ ಮಾತ್ರ ಅನುಮತಿ

ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ. ಹೀಗಾಗಿ ಸರ್ಕಾರಿ ವೈದ್ಯರು ಖಾಸಗಿ ವೈದ್ಯಕೀಯ ಅಭ್ಯಾಸದ ಭಾಗವಾಗಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಕಡ್ಡಾಯ ನಿಷೇಧಿಸಲಾಗಿದೆ. ಆದರೆ ಅಧಿಕೃತ ಕರ್ತವ್ಯ ಸಮಯ ಹೊರತು ಪಡಿಸಿ ಖಾಸಗಿ OPD ಸೇವೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್‌ನಲ್ಲಿ ಮಾತ್ರ ಅಭ್ಯಾಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಆ ಕುರಿತ ಸಂಪೂರ್ಣ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇನ್ನು ನಿಯಮ ಉಲ್ಲಂಘಸುವ ವೈದ್ಯರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪೌಷ್ಟಿಕ ಆಹಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಆಹಾರದ ಬಗ್ಗೆ ಸಾಲು ಸಾಲು ದೂರು ಹಿನ್ನೆಲೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪೌಷ್ಟಿಕ ಆಹಾರ ನೀಡಲು ಮುಂದಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಹೊಸ ಊಟದ ಮೆನು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: ಟಿವಿ9 ವರದಿ ಫಲಶ್ರುತಿ: ಸಿವಿ ರಾಮನ್ ನಗರ ಆಸ್ಪತ್ರೆಗೆ ಕ್ಯಾಥ್‌ಲಾಬ್ ಭಾಗ್ಯ

ಇಸ್ಕಾನ್ ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಪೌಷ್ಟಿಕ ಆಹಾರ ಒದಗಿಸುವ ಕುರಿತಾಗಿ ಆರೋಗ್ಯ ಇಲಾಖೆ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಹೊಸ ಊಟದ ಮೆನುನಲ್ಲಿ ಬೆಳಗ್ಗೆ ತಿಂಡಿಗೆ ರವೆ ಉಪ್ಪಿಟ್ಟು, ಗೋಧಿಯ ತಿನಿಸು, ಪೊಂಗಲ್, 100 ಗ್ರಾಂ ಬ್ರೆಡ್​, ಬಾಳೆಹಣ್ಣು ನೀಡಲಾಗುತ್ತೆ. ಮಧ್ಯಾಹ್ನ ಊಟಕ್ಕೆ ರಾಗಿ ಮುದ್ದೆ, ಅನ್ನ, ಸಾಂಬಾರ್, ಸೋಯಾ ಚಂಕ್ಸ್ ನೀಡಿದರೆ, ಸಂಜೆ ತಿಂಡಿಗೆ ಟೀ ಹಾಗೂ ಬಿಸ್ಕೆಟ್ ನೀಡಲಾಗುತ್ತದೆ. ರಾತ್ರಿ ಊಟಕ್ಕೆ ಚಪಾತಿ, ತರಕಾರಿ ಪಲ್ಯ, ಅನ್ನ-ಸಾಂಬಾರ್​, ಕಾಳುಗಳ ಪಲ್ಯ ನೀಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್​ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ  ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಇಬ್ಬರು ಯುವತಿಯರು ಕ್ಯಾಬ್ ಚಾಲಕನೊಂದಿಗೆ ಬಾಡಿಗೆ ವಿಚಾರವಾಗಿ ಚರ್ಚಿಸುತ್ತಿರುವುದು ಕಂಡುಬರುತ್ತದೆ. ಕೇವಲ 100 ರೂ. ಡಿಸ್ಕೌಂಟ್ (ರಿಯಾಯಿತಿ) ಪಡೆಯಲು ಅವರು ಚಾಲಕನಿಗೆ “ಫ್ರೀ ಎಂಟರ್ಟೈನ್ಮೆಂಟ್” (ಉಚಿತ ಮನರಂಜನೆ) ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಕೇವಲ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಅಥವಾ ‘ವ್ಯೂಸ್’ (Views) ಪಡೆಯಲು ಯುವತಿಯರು ಈ ರೀತಿ ವರ್ತಿಸಿದ್ದಾರೆಯೇ? ಎಂಬ ಪ್ರಶ್ನೆಯನ್ನು ಸೋಶಿಯಲ್​ ಮೀಡಿಯಾದಲ್ಲಿ ಕೇಳಿದ್ದಾರೆ. ಇಂತಹ ವರ್ತನೆಗಳು ಚಾಲಕರ ಮೇಲೆ ಎಂತಹ ಪ್ರಭಾವ ಬೀರುತ್ತವೆ ಮತ್ತು ಇದು ಸಾಮಾಜಿಕ ನೈತಿಕತೆಗೆ ಎಷ್ಟು ಸರಿ ಎಂಬ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಚಾರಕ್ಕಾಗಿ ಇಂತಹ ಕೆಟ್ಟ ವರ್ತನೆಗಳನ್ನು ತೋರುವುದು ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಅನೇಕರು ಇದನ್ನು “ಲಜ್ಜೆಗೆಟ್ಟ ವರ್ತನೆ” ಎಂದು ಕರೆದಿದ್ದಾರೆ ಮತ್ತು ಶಿಸ್ತುಕ್ರಮಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ದಿನವಿಡೀ ಕಷ್ಟಪಟ್ಟು ದುಡಿಯುವ ಕ್ಯಾಬ್ ಚಾಲಕರನ್ನು ಇಂತಹ ಹಾಸ್ಯಾಸ್ಪದ ಅಥವಾ ಮುಜುಗರದ ಸನ್ನಿವೇಶಗಳಿಗೆ ಸಿಲುಕಿಸುವುದು ತಪ್ಪು ಎಂಬ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇನ್ನು ಕೆಲವು ಜನರು ಇದು ಕೇವಲ ಸೋಷಿಯಲ್ ಮೀಡಿಯಾ ರೀಲ್ಸ್‌ಗಾಗಿ ಮಾಡಲಾದ ‘ಪ್ರಾಂಕ್’ ಎಂದು ಹೇಳಿದ್ದಾರೆ. ಒಂದು ವೇಳೆ ಹುಡುಗಿಯರಿಗೆ ಹೀಗೆ ಮಾಡಿದ್ರೆ ಏನಾಗುತ್ತಿತ್ತು. ಇಲ್ಲಿ ಕೂಡ ಲಿಂಗ ತಾರತಾಮ್ಯ ಇದೆ. ಪೊಲೀಸರು ಕೂಡ ಈ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ. ಮಹಿಳೆಯರಿಗೆ ಹೀಗೆ ಆದ್ರೆ ಪೊಲೀಸರೇ ಸ್ವತಃ ದೂರು ದಾಖಲಾಗುತ್ತಿತ್ತು ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ತನ್ನ ಅಜ್ಜಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಹೇಳಿಕೊಟ್ಟ ಮೊಮ್ಮಗಳು

ಇನ್ನು ಈ ಪೋಸ್ಟ್ ಗೆ ಎಕ್ಸ್​​​ ಖಾತೆಯಲ್ಲಿ @ShoneeKapoor ಎಂಬುವವರು ಹೇಳಿಕೆಯೊಂದನ್ನು ನೀಡಿದ್ದಾರೆ. ಕ್ಯಾಬ್ ಚಾಲಕರು ಅಥವಾ ಯಾವುದೇ ಸೇವಾ ವಲಯದ ಕಾರ್ಮಿಕರು ಸಾರ್ವಜನಿಕ ಸೇವೆಯಲ್ಲಿರುವವರು. ಅವರನ್ನು ವೈಯಕ್ತಿಕ ಲಾಭಕ್ಕಾಗಿ ಅಥವಾ ಅಗ್ಗದ ಮನರಂಜನೆಗಾಗಿ ಬಳಸಿಕೊಳ್ಳುವುದು ಅವರ ವೃತ್ತಿ ಮತ್ತು ಘನತೆಗೆ ಮಾಡುವ ಅವಮಾನ. ಸಾರ್ವಜನಿಕ ಸ್ಥಳಗಳು ಎಂದಿಗೂ ಇಂತಹ “ಬಾರ್ಗೇನಿಂಗ್ ಟೂಲ್ಸ್” ಆಗಬಾರದು. ಇಂತಹ ಘಟನೆಗಳು ಸಮಾಜದಲ್ಲಿ ಜವಾಬ್ದಾರಿಯುತ ನಡವಳಿಕೆಯ ಅಗತ್ಯತೆಯನ್ನು ಸಾರುತ್ತವೆ. ಕೇವಲ ‘ವ್ಯೂಸ್’ಗಾಗಿ ಗೌರವ ಮತ್ತು ಜವಾಬ್ದಾರಿಯನ್ನು ಬಲಿ ಕೊಡುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:53 pm, Wed, 28 January 26

Source link

‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್​ಪಾಲ್ – Kannada News | Dhurandhar 2 Shooting Update: No extra shoot with Arjun Rampal and other actors

2025ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಈ ಸಿನಿಮಾದ ಸೀಕ್ವೆಲ್ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಸಿನಿಮಾ ಬಗ್ಗೆ ಒಂದಷ್ಟು ಗಾಸಿಪ್ ಕೇಳಿಬರುತ್ತಿದೆ. ಈ ಸಿನಿಮಾದ ಹೆಚ್ಚುವರಿ ದೃಶ್ಯಗಳ ಶೂಟಿಂಗ್​​ನಲ್ಲಿ ನಟ ಅರ್ಜುನ್ ರಾಮ್​ಪಾಲ್ (Arjun Rampal) ಅವರು ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅದು ನಿಜವಲ್ಲ.

‘ಧುರಂಧರ್’ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಮ್​​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದರು. ಈ ಪಾತ್ರಗಳು ‘ಧುರಂಧರ್ 2’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿವೆ. ಮೊದಲ ಸಿನಿಮಾಗೆ ಅಭೂತಪೂರ್ವ ಯಶಸ್ಸು ಸಿಕ್ಕಿದ್ದರೂ ಕೂಡ ಸೀಕ್ವೆಲ್​​ನಲ್ಲಿ ಹೆಚ್ಚಿನ ಬದಲಾವಣೆ ಮಾಡಲು ಚಿತ್ರತಂಡ ಮುಂದಾಗಿಲ್ಲ.

‘ಅರ್ಜುನ್ ರಾಮ್​​ಪಾಲ್ ಅಥವಾ ಯಾವುದೇ ಕಲಾವಿದರು ಧುರಂಧರ್ 2 ಸಿನಿಮಾಗಾಗಿ ಹೆಚ್ಚುವರಿ ಚಿತ್ರೀಕರಣ ಮಾಡುವುದಿಲ್ಲ. ಈ ಸಿನಿಮಾದ ಕಂಟೆಂಟ್ ಈಗಾಗಲೇ ಎಡಿಟ್ ಆಗಿ, ಅಂತಿಮಗೊಂಡಿದೆ. ಮಾರ್ಚ್ 19ರಂದು ಬಿಡುಗಡೆಯಾಗಲು ರೆಡಿ ಇದೆ’ ಎಂದು ಚಿತ್ರತಂಡದ ಮೂಲಗಳು ಮಾಹಿತಿ ನೀಡಿವೆ ಎಂದು ‘ಬಾಲಿವುಡ್ ಹಂಗಾಮಾ’ ವರದಿ ಮಾಡಿದೆ.

ಈ ಸಿನಿಮಾಗೆ ಆದಿತ್ಯ ಧಾರ್ ಅವರ ನಿರ್ದೇಶನ ಮಾಡಿದ್ದಾರೆ. ಈ ಮೊದಲು ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಸೈ ಎನಿಸಿಕೊಂಡಿದ್ದರು. ‘ಧುರಂಧರ್ 2’ ಸಿನಿಮಾದಲ್ಲಿ ‘ಉರಿ’ ಸಿನಿಮಾ ಹೀರೋ ವಿಕ್ಕಿ ಕೌಶಲ್ ಅವರು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೂಡ ಗಾಸಿಪ್ ಹಬ್ಬಿತ್ತು. ಆದರೆ ಅದು ನಿಜವಲ್ಲ ಎಂದು ಚಿತ್ರತಂಡದ ಮೂಲಗಳು ಹೇಳಿವೆ.

ಇದನ್ನೂ ಓದಿ: ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ?

‘ಧುರಂಧರ್’ ಸಿನಿಮಾಗೆ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಹಾಗಾಗಿ ‘ಧುರಂಧರ್ 2’ ಸಿನಿಮಾ ಮೇಲೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಕೂಡ ರಿಲೀಸ್ ಆಗುವುದರಿಂದ ಬಾಕ್ಸ್ ಆಫೀಸ್​ನಲ್ಲಿ ಪೈಪೋಟಿ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್ – Kannada News | EXIM Bank MT Recruitment 2026: Apply Online for 40 Management Trainee Posts Now!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ನಿರ್ಮಿಸಲು ಬಯಸುವ ಯುವಜನರಿಗೆ ಒಳ್ಳೆಯ ಸುದ್ದಿ ಇದೆ. ಎಕ್ಸ್ಪೋರ್ಟ್–ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM Bank) 2026ನೇ ಸಾಲಿನ ನೇಮಕಾತಿಗಾಗಿ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 40 ಹುದ್ದೆಗಳು ಭರ್ತಿಯಾಗಲಿವೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜನವರಿ 17 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 1ರ ವರೆಗೆ ಅವಕಾಶವಿದೆ.

ಆಸಕ್ತ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ eximbankindia.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ಕ್ಷಣದವರೆಗೆ ಕಾಯದೆ ಅರ್ಜಿ ಸಲ್ಲಿಸುವಂತೆ ಬ್ಯಾಂಕ್ ಸಲಹೆ ನೀಡಿದೆ, ಇದರಿಂದ ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಬಹುದು.

ಅರ್ಜಿ ಶುಲ್ಕದ ವಿಚಾರದಲ್ಲಿ, ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲರು, ಇಡಬ್ಲ್ಯೂಎಸ್ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕೇವಲ 100ರೂ. ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.

ಶೈಕ್ಷಣಿಕ ಅರ್ಹತೆಯಾಗಿ, ಅಭ್ಯರ್ಥಿಗಳು ಕನಿಷ್ಠ ಶೇ.60 ಅಂಕಗಳೊಂದಿಗೆ ಯಾವುದೇ ಸ್ಟ್ರೀಮ್‌ನಲ್ಲಿ ಮೂರು ವರ್ಷಗಳ ಪೂರ್ಣಕಾಲಿಕ ಪದವಿ ಹೊಂದಿರಬೇಕು. ಜೊತೆಗೆ ಹಣಕಾಸು, ಅಂತರರಾಷ್ಟ್ರೀಯ ವ್ಯವಹಾರ ಅಥವಾ ವಿದೇಶಿ ವ್ಯಾಪಾರದಲ್ಲಿ ವಿಶೇಷತೆಯೊಂದಿಗೆ MBA / PGDBA / PGDBM / MMS ಅಥವಾ CA ಮುಂತಾದ ಎರಡು ವರ್ಷಗಳ ಪೂರ್ಣಕಾಲಿಕ ಕೋರ್ಸ್ ಪೂರ್ಣಗೊಳಿಸಿರುವವರು ಅರ್ಹರಾಗಿರುತ್ತಾರೆ. ಜನವರಿ 2026ರಲ್ಲಿ ಅಂತಿಮ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.

ವಯೋಮಿತಿಯಂತೆ, ಅಭ್ಯರ್ಥಿಗಳು ಡಿಸೆಂಬರ್ 31, 2025ರ ವೇಳೆಗೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷ ವಯಸ್ಸಿನವರಾಗಿರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲು ಲಿಖಿತ ಪರೀಕ್ಷೆ, ನಂತರ ಸಂದರ್ಶನ ನಡೆಯಲಿದೆ. ಲಿಖಿತ ಪರೀಕ್ಷೆಯನ್ನು ಫೆಬ್ರವರಿ 2026ರಲ್ಲಿ ನಡೆಸುವ ಸಾಧ್ಯತೆ ಇದೆ. ಪರೀಕ್ಷೆಯ ಮಾದರಿ ಮತ್ತು ಪಠ್ಯಕ್ರಮವನ್ನು ಬ್ಯಾಂಕ್ ಶೀಘ್ರದಲ್ಲೇ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ನೀಡಲಾಗುತ್ತದೆ. ಈ ತರಬೇತಿ ಅವಧಿಯಲ್ಲಿ ಅವರಿಗೆ ತಿಂಗಳಿಗೆ 65,000ರೂ. ಸ್ಟೈಫಂಡ್ ನೀಡಲಾಗುತ್ತದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಅಭ್ಯರ್ಥಿಗಳನ್ನು ಡೆಪ್ಯೂಟಿ ಮ್ಯಾನೇಜರ್ (JM–I) ಹುದ್ದೆಗೆ ನೇಮಿಸಲಾಗುತ್ತದೆ. ಈ ಹುದ್ದೆಗೆ 48,480 ರಿಂದ 85,920ರೂ. ವರೆಗೆ ವೇತನದ ಜೊತೆಗೆ ಇತರ ಭತ್ಯೆಗಳು ಮತ್ತು ಸೌಲಭ್ಯಗಳು ದೊರೆಯುತ್ತವೆ. ಒಟ್ಟಿನಲ್ಲಿ, ಭದ್ರ ಮತ್ತು ಗೌರವಯುತ ಬ್ಯಾಂಕಿಂಗ್ ವೃತ್ತಿಜೀವನವನ್ನು ಬಯಸುವ ಯುವಜನರಿಗೆ ಎಕ್ಸಿಮ್ ಬ್ಯಾಂಕ್ ನೇಮಕಾತಿ ಅತ್ಯುತ್ತಮ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಕೈ ತಪ್ಪಿಸಿಕೊಳ್ಳಬೇಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ.

ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್ ಸೀಫರ್ಟ್, ಟಿಮ್ ಡೇವಿಡ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಹಿಂದಿಕ್ಕಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಆಡಿರುವ ಮೂರು ಪಂದ್ಯಗಳಲ್ಲಿ 171 ರನ್ ಕಲೆಹಾಕಿ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ 2 ಅರ್ಧಶತಕಗಳನ್ನು ಬಾರಿಸಿರುವ ಸೂರ್ಯ 200 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದಾರೆ.

ಈ ಟಿ20 ಸರಣಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಸೂರ್ಯ ಎಂಟು ಸಿಕ್ಸರ್‌ಗಳು ಮತ್ತು 19 ಬೌಂಡರಿಗಳನ್ನು ಬಾರಿಸಿದ್ದಾರೆ. ಟಿ20 ಸರಣಿಯಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇದ್ದು ಈ ಪಂದ್ಯಗಳಲ್ಲೂ ಸೂರ್ಯಕುಮಾರ್ ಅಬ್ಬರಿಸಿದರೆ, ಮುಂದಿನ ಐಸಿಸಿ ಶ್ರೇಯಾಂಕದಲ್ಲಿ ಮತ್ತೆ ಮುಂಬಡ್ತಿ ಪಡೆಯಲಿದ್ದಾರೆ.

ಸೂರ್ಯಕುಮಾರ್ ಮಾತ್ರವಲ್ಲದೆ ಟಿ20 ಶ್ರೇಯಾಂಕದಲ್ಲಿ ಭಾರತೀಯ ಆಟಗಾರರ ಪ್ರಾಬಲ್ಯವೇ ಹೆಚ್ಚಿದೆ. ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ತಿಲಕ್ ವರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಐದು ಸ್ಥಾನ ಮೇಲೇರಿದ್ದಾರೆ. ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ನಾಲ್ಕು ಬೌಲರ್‌ಗಳನ್ನು ಹಿಂದಿಕ್ಕಿ 13 ನೇ ಸ್ಥಾನಕ್ಕೆ ತಲುಪಿದ್ದು, ವರುಣ್ ಚಕ್ರವರ್ತಿ ಮೊದಲ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್‌ಗಳಲ್ಲಿ ಹಾರ್ದಿಕ್ ಪಾಂಡ್ಯ ಒಂದು ಸ್ಥಾನ ಬಡ್ತಿ ಪಡೆದು ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

Published On – 4:32 pm, Wed, 28 January 26

Source link

ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea

ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ವಿಕ್ರಮನಾಥ್ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ರಾಮಮೂರ್ತಿ ಅವರು ಕಾಂಗ್ರೆಸ್​​​ನ ಸೌಮ್ಯಾ ರೆಡ್ಡಿ ಅವರನ್ನು 16 ಮತಗಳಿಂದ ಸೋಲಿಸಿದ್ದರು. ಆದ್ರೆ, ಮತ ಎಣಿಕೆಯಲ್ಲಿ ಚುನಾವನಾಧಿಕಾರಿಗಳು ಸರಿಯಾಗಿ ನಿಯಮ ಪಾಲನೆ ಮಾಡಿಲ್ಲ ಎಂದು ಸೌಮ್ಯ ರೆಡ್ಡಿ ಅವರು ಹೈಕೋರ್ಟ್​​ಗೆ ಫಲಿತಾಂಶ ತಕರಾರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಪ್ರಕರಣದ ಟ್ರಯಲ್ ತಡೆ ಕೋರಿ ರಾಮಮೂರ್ತಿ ಸಹ ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ರಾಮಮುರ್ತಿ ಅವರ ಅರ್ಜಿಯನ್ನು ವಜಾ ಮಾಡಿತ್ತು. ಬಳಿಕ ಇದನ್ನು ಪ್ರಶ್ನಿಸಿ ರಾಮಮೂರ್ತಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು. ಆದ್ರೆ, ಇದೀಗ ಸುಪ್ರೀಂಕೋರ್ಟ್​​ನಲ್ಲೂ ಸಹ ಹಿನ್ನಡೆಯಾಗಿದೆ.

ಇದನ್ನೂ ಓದಿ: ‘ಕೈ’ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! ಕೊನೆಗೂ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟ, ಬಿಜೆಪಿಗೆ ಗೆಲುವು – ನಡುರಾತ್ರಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ

ಮೊದಲು ಕಾಂಗ್ರೆಸ್​​​ನ ಸೌಮ್ಯ ರೆಡ್ಡಿ ಅವರು 116 ಮತಗಳಿಂದ ಗೆದ್ದುಬೀಗಿದ್ದರು.  ಆದ್ರೆ, ಕೆಲ ಗೊಂದಲಗಳು ಏರ್ಪಟ್ಟಿದ್ದರಿಂದ ಮರು ಎಣಿಕೆಯಾದಾಗ ಫಲಿತಾಂಶ ಕಾಂಗ್ರೆಸ್​ನ ‘ಕೈ’ ಚೆಲ್ಲಿದ್ದು, ವಿಜಯದ ಲಕ್ಷ್ಮೀ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರ ಪಲಾಗಿತ್ತು. ಕೊನೆ ಕ್ಷಣದಲ್ಲಿ ರಿಸಲ್ಟ್ ಕೈಕೊಟ್ಟಿದ್ದರಿಂದ ಸೌಮ್ಯ ರೆಡ್ಡಿ ಸ್ಥಳದಲ್ಲೇ ಕಣ್ಣೀರಿಟ್ಟಿದ್ದರು. ಅಲ್ಲದೇ ಚುನಾವಣಾ ಆಯೋಗದ ಆದೇಶದನ್ವಯ ಮತ ಎಣಿಕೆ ಆಗಿಲ್ಲ. ಮರು ಮತ ಎಣಿಕೆ ನಿಯಮಬಾಹಿರವಾಗಿ ಆಗಿದೆ. 837 ಅಂಚೆ ಮತ ಮರು ಎಣಿಕೆ ಆಗಬೇಕು. ವಿಡಿಯೋ ಫೂಟೇಜ್ ಪರಿಶೀಲಿಸಬೇಕೆಂದು ಕೋರ್ಟ್​ ಮೊರೆ ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:17 pm, Wed, 28 January 26

Source link

ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ! – Kannada News | 63 year old spikes soft drinks at supermarket with urine for over year viral news

ನವದೆಹಲಿ, ಜನವರಿ 28: ತಾನು ಕೆಲಸ ಮಾಡುವ ಸೂಪರ್ ಮಾರ್ಕೆಟ್​​ನಲ್ಲಿ ತಂಪು ಪಾನೀಯಗಳಿಗೆ ಮೂತ್ರ ಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಹಾಂಗ್​ಕಾಂಗ್​ನಲ್ಲಿ (Hong Kong) ನಡೆದಿದೆ. 63 ವರ್ಷದ ಮಾಜಿ ಆಸ್ತಿ ಏಜೆಂಟ್ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ಕಲುಷಿತ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿ ಸೂಪರ್ ಮಾರ್ಕೆಟ್ ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಾಟಲಿಗಳನ್ನು ಇಟ್ಟಿದ್ದ ಎಂದು ವರದಿ ತಿಳಿಸಿದೆ.

1 ವರ್ಷಕ್ಕೂ ಹೆಚ್ಚು ಕಾಲ ಆತ ಈ ರೀತಿ ಸೂಪರ್ ಮಾರ್ಕೆಟ್​ಗಳಲ್ಲಿ ಇತರ ವಸ್ತುಗಳ ಜೊತೆಗೆ ಮೂತ್ರ ಹಾಕಿದ ತಂಪು ಪಾನೀಯಗಳನ್ನು ಇರಿಸಿದ್ದ. ಈ ವಿಷಯ ಬಯಲಾಗುತ್ತಿದ್ದಂತೆ ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿ ಹಾಂಗ್ ಕಾಂಗ್ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ತನ್ನ ನಿವೃತ್ತಿ ಮತ್ತು ವಿಚ್ಛೇದನದ ಖಿನ್ನತೆಯಿಂದಾಗಿ ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾನೆ.

ಇದನ್ನೂ ಓದಿ: ಹಿಮಪಾತದಿಂದ ಯಜಮಾನ ಸತ್ತರೂ 3 ದಿನ ಹೆಣದ ಬಳಿಯೇ ನಿಂತು ಕಾದ ಸಾಕುನಾಯಿ!

ಫ್ರಾಂಕ್ಲಿನ್ ಲೋ ಕಿಂಗೈ ಎಂಬ ವ್ಯಕ್ತಿ ಸೂಪರ್ ಮಾರ್ಕೆಟ್ ಸಿಬ್ಬಂದಿಯ ಬಗ್ಗೆ ಅತೃಪ್ತಿ ಹೊಂದಿದ್ದ. ನಂತರ ಮೂತ್ರ ಹಾಕಿದ ಬಾಟಲಿಗಳನ್ನು ಇಡಲು ಪ್ರಾರಂಭಿಸಿದನು. ಅವರು ಕೋಕಾ-ಕೋಲಾ ಪ್ಲಸ್ ಮತ್ತು 7-ಅಪ್ ಪಾನೀಯಗಳಿಗೆ ಮೂತ್ರವನ್ನು ಸೇರಿಸಿ ವೆಲ್ಕಮ್ ಮತ್ತು ಪಾರ್ಕ್ನ್ಶಾಪ್ ಔಟ್​ಲೆಟ್​ಗಳಲ್ಲಿ ಇರಿಸಿದರು. ಈ ಘಟನೆ 2024ರ ಜುಲೈ 21 ಮತ್ತು ಕಳೆದ ವರ್ಷ ಆಗಸ್ಟ್ 6ರ ನಡುವೆ ನಡೆದಿದೆ.

ತಮ್ಮ ತಪ್ಪನ್ನು ಅವರು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ. ಆ ವ್ಯಕ್ತಿ ಮಾಡಿದ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಆ ವ್ಯಕ್ತಿ ವಿಚ್ಛೇದನದ ನಂತರ ಖಿನ್ನತೆಗೆ ಒಳಗಾಗಿದ್ದರು. ಅವರಿಗೆ ಯಾವುದೇ ಭಾವನಾತ್ಮಕ ಬೆಂಬಲ ಇರಲಿಲ್ಲ. ಅವರ ಮಾಜಿ ಪತ್ನಿ ಮತ್ತು ಮಗ ವಿದೇಶಕ್ಕೆ ಸ್ಥಳಾಂತರಗೊಂಡಿದ್ದರು. ಅವರಿಬ್ಬರ ಜೊತೆ ಆ ವ್ಯಕ್ತಿಗೆ ಯಾವುದೇ ಸಂಪರ್ಕವೂ ಇರಲಿಲ್ಲ. ಅವರು ತಮ್ಮ ಪೋಷಕರನ್ನು ಸಹ ಕಳೆದುಕೊಂಡಿದ್ದರು. ಅಲ್ಲದೆ, ಶಾಪ್​ನ ಸಿಬ್ಬಂದಿಯ ಬಗ್ಗೆಯೂ ಅವರು ಅತೃಪ್ತಿ ಹೊಂದಿದ್ದರು. ಹೀಗಾಗಿ, ಖಿನ್ನತೆಯಿಂದ ಬಳಲುತ್ತಿದ್ದ ಅವರು ಈ ಕೃತ್ಯ ಎಸಗಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್​​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ

ಹಲವಾರು ವೆಲ್‌ಕಮ್ ಮತ್ತು ಪಾರ್ಕ್‌ಶಾಪ್ ಔಟ್‌ಲೆಟ್‌ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಗ್ಗೆ ಹಲವಾರು ವರದಿಗಳು ಬಂದ ನಂತರ ಜನರಿಗೆ ಅದರ ಬಗ್ಗೆ ತಿಳಿದುಬಂದಿತು. ಜುಲೈ 2025ರಲ್ಲಿ ಮಾಂಗ್ ಕೋಕ್‌ನ ಯೂನಿಯನ್ ಪಾರ್ಕ್ ಸೆಂಟರ್‌ನಲ್ಲಿರುವ ವೆಲ್‌ಕಮ್ ಶಾಖೆಯಿಂದ ಮೂತ್ರ ಮಿಶ್ರಿತ ತಂಪು ಪಾನೀಯಗಳ ಬಾಟಲಿಯ ಕೂಲ್ ಡ್ರಿಂಕ್ಸ್ ಸೇವಿಸಿದ ನಂತರ 9 ವರ್ಷದ ಬಾಲಕನೊಬ್ಬ ಅಸ್ವಸ್ಥನಾಗಿದ್ದ. ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತ ಚೇತರಿಸಿಕೊಂಡ. ಆದರೆ, ಆ ಘಟನೆಯ ಬಳಿಕ ಈ ಸುದ್ದಿ ಹೆಚ್ಚು ಪ್ರಚಲಿತಕ್ಕೆ ಬಂದಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police

ಬೆಂಗಳೂರು, ಜನವರಿ 28: ಡ್ರಗ್ಸ್​ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜ.19ರ ಮಧ್ಯಾಹ್ನ ಜಕ್ಕೂರು ರೈಲ್ವೆ ಟ್ರ್ಯಾಕ್ ಬಳಿ ಡ್ರಗ್ಸ್​ ಪತ್ತೆಯಾಗಿತ್ತು. ಜ.21ರಂದು ಜಿಕೆವಿಕೆ ಮೈದಾನದಲ್ಲಿ 2 ಕೆಜಿ ಹೈಡ್ರೋ ಗಾಂಜಾ ಸೀಜ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: Bengaluru: ಡ್ರಗ್ಸ್​ ದಂಧೆಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಮೈಸೂರು ರಸ್ತೆ ಸ್ಯಾಟ್​ಲೈಟ್​ ನಿಲ್ದಾಣ ಬಳಿ 2 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. 500 ಎಲ್​ಎಸ್​ಡಿ ಸ್ಟ್ರಿಪ್ಸ್​ ವಶಕ್ಕೆ ಪಡೆಯಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಅಮೃತಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​ ಮಾಹಿತಿ ನೀಡಿದ್ದಾರೆ.

3 ಕೋಟಿ ರೂ ಮೌಲ್ಯದ ಡ್ರಗ್ಸ್​​ ಸೀಜ್​

ಇನ್ನು ಇತ್ತೀಚೆಗೆ ನಗರದಲ್ಲಿ ಡ್ರಗ್ಸ್ ಸಪ್ಲೈಗೆ ಸಿದ್ದವಾಗಿದ್ದ 3 ಕೋಟಿ ರೂ ಮೌಲ್ಯದ ಡ್ರಗ್ಸ್​​ ಸೀಜ್​ ಮಾಡಲಾಗಿದ್ದು, ಇಬ್ಬರು ಪೆಡ್ಲರ್​ಗಳನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದರು. ಹೊಸ ವರ್ಷದ ಪಾರ್ಟಿಗಳಿಗೆ ಮಾರಾಟ ಮಾಡಲು ಸಿದ್ಧವಾಗಿದ್ದ 3 ಕೋಟಿ ರೂ. ಮೌಲ್ಯದ 3.2 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು, ಇಬ್ಬರು ಡ್ರಗ್ಸ್​ ಪೆಡ್ಲರ್‌ಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ ಪತ್ತೆ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್

ಈ ಕೋಟ್ಯಂತರ ಮೌಲ್ಯದ ಡ್ರಗ್ಸ್ ಡೀಲ್ ಹಿಂದೆ ನೈಜೀರಿಯಾ ಮೂಲದ ಪ್ರಮುಖ ಪೆಡ್ಲರ್‌ನ ಲಿಂಕ್ ಇರುವುದು ದೃಢಪಟ್ಟಿತ್ತು. ಪ್ರಮುಖ ಆರೋಪಿ ನೈಜೀರಿಯಾ ಮೂಲದ ಪೆಡ್ಲರ್‌ನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್ – Kannada News | Ajit Pawar’s Human Side: How He Broke Protocol to Help an Injured Man 20 Days Ago

ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು.

ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು. ಇದಲ್ಲದೆ, ಅವರು ತಕ್ಷಣವೇ ಗಾಯಗೊಂಡ ಯುವಕನಿಗೆ ಸ್ಥಳದಲ್ಲೇ ಸಹಾಯ ಮಾಡಿದ್ದರು ಮತ್ತು ತಕ್ಷಣದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲು ಸಹಾಯ ಮಾಡಿದ್ದರು.

ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವುದನ್ನು ಅವರು ಹೆಚ್ಚು ಮುಖ್ಯವೆಂದು ಅವರು ಭಾವಿಸಿದ್ದರು. ಅವರನ್ನು ಚಿಕಿತ್ಸೆಗೆ ಕರೆದೊಯ್ಯಲು ಶಿಷ್ಟಾಚಾರವನ್ನು ಮುರಿದಿದ್ದರು. ಆ ದಿನ, ಅಜಿತ್ ಪವಾರ್ ಪುಣೆಯಲ್ಲಿರುವ ತಮ್ಮ ನಿವಾಸ ಜಿಜೈನಿಂದ ಪಿಂಪ್ರಿ-ಚಿಂಚ್‌ವಾಡ್‌ಗೆ ಪ್ರಯಾಣಿಸುತ್ತಿದ್ದಾಗ, ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ಕಂಡಿದ್ದರು.

ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಮುಂಬೈನಿಂದ ಬಾರಾಮತಿಗೆ ಹಾರುತ್ತಿದ್ದ ಖಾಸಗಿ ಚಾರ್ಟರ್ ವಿಮಾನವು ಇಳಿಯುವ ಕೆಲವೇ ಕ್ಷಣಗಳ ಮೊದಲು ಕೆಳಗೆ ಅಪ್ಪಳಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದರಿಂದ ವಿಮಾನವನ್ನು ಕ್ರ್ಯಾಶ್​ ಲ್ಯಾಂಡಿಂಗ್ ಮಾಡಿದ ಕಾರಣ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು ಎಂದು ವರದಿಯಾಗಿದೆ.

ಅಜಿತ್ ಪವಾರ್ 1982 ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಯಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. 1991 ರಲ್ಲಿ, ಅವರು ಪುಣೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದರು.

ಮತ್ತಷ್ಟು ಓದಿ: ಅಜಿತ್ ಪವಾರ್ ಇದ್ದ ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅವರು ಮೊದಲು 1991 ರಲ್ಲಿ ಬಾರಾಮತಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು ಆದರೆ ನಂತರ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಟ್ಟರು. ಪವಾರ್ ಅವರು ಬಾರಾಮತಿಯಿಂದ ಏಳು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು. 1991 ರ ಉಪಚುನಾವಣೆಯಲ್ಲಿ ಮತ್ತು ನಂತರ 1995, 1999, 2004, 2009 ಮತ್ತು 2014 ರಲ್ಲಿ ಗೆದ್ದಿದ್ದರು.

ನವೆಂಬರ್ 2019 ರಲ್ಲಿ, ಅವರು NCPಯನ್ನು ಒಡೆದು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವನ್ನು ಸೇರಿಕೊಂಡಿದ್ದರು ಮತ್ತು ಉಪಮುಖ್ಯಮಂತ್ರಿಯಾಗಿದ್ದರು. ಫೆಬ್ರವರಿ 2024 ರಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link