Category Archives: Blog

Your blog category

ಬೆಂಗಳೂರಲ್ಲಿ ಮನೆಗೆಲಸದವರಿಂದಲೇ ಬಿಲ್ಡರ್​​ ಮನೆಗೆ ಕನ್ನ: ದೋಚಿದ್ದು 18 ಕೋಟಿ ಮೌಲ್ಯದ ಸಂಪತ್ತು! – Kannada News | Bengaluru House Help Duo Robs Builder’s Home; 18 Crore Jewellery Stolen

ಬೆಂಗಳೂರು, ಜನವರಿ 28: ಮನೆಗೆಲಸ ಮಾಡುತ್ತಿದ್ದಿದ್ದ ದಂಪತಿ ಅದೇ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಬೆಲೆ ಬಾಳುವ ವಸ್ತುಗಳನ್ನು ದೋಚಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಯಮಲೂರಿನ ಬಿಲ್ಡರ್ ಶಿವಕುಮಾರ್ ಮನೆಯಲ್ಲಿ ಕಳ್ಳತನ ನಡೆದಿದ್ದು, 20 ದಿನದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ದಂಪತಿ ದಿನೇಶ್ ಮತ್ತು ಕಮಲಾ ಎಂಬವರೇ ಆರೋಪಿಗಳು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆಸಿ ಎಸ್ಕೇಪ್​​ ಆಗಿದ್ದಾರೆ ಎನ್ನಲಾಗಿದ್ದು, ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಕಾಶ, ಮಯಾ ವಿಷ್ಣು ಎಂಬುವವರ ಮೂಲಕ ಶಿವಕುಮಾರ್ ಮನೆಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ದಂಪತಿ ಸೇರಿದ್ದರು. ಜನವರಿ 25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿಗಳು ನೆಲಮಹಡಿ, ಮೊದಲ ಮಹಡಿಯ ಬೆಡ್ ರೂಂಗಳ ಲಾಕರ್ ಮುರಿದು ಕಳ್ಳತನ ನಡೆಸಿದ್ದಾರೆ. 11.5 ಕೆ.ಜಿ ಚಿನ್ನ ಮತ್ತು ವಜ್ರ, 5 ಕೆಜಿ ಬೆಳ್ಳಿ, 11.5 ಲಕ್ಷ ನಗದು ಎಗರಿಸಿ ಎಸ್ಕೇಪ್​​ ಆಗಿದ್ದು, ಮನೆಯ ಇತರ ಕೆಲಸಗಾರರು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಅವರು ದೂರವಾಣಿ ಕರೆ ಮಾಡಿ ಮನೆಯವರಿಗೆ ವಿಷಯ ತಿಳಿಸಿದ್ದು, ಅವರು ಬಂದು ಪರೀಕ್ಷಿಸಿದಾಗ ಲಾಕರ್​​ಗಳನ್ನು ಕಬ್ಬಿಣದ ಸಲಾಕೆಯಿಂದ ಮುರಿದು ಕಳವು ಮಾಡಿರೋದು ಗೊತ್ತಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಾರತ್ತಹಳ್ಳಿ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು; ಬೆಂಗಳೂರಿನಲ್ಲಿ ಗನ್​ ತೋರಿಸಿ ಬಂಗಾರದ ಅಂಗಡಿ ಲೂಟಿ

ಮನೆಗಳ್ಳರನ್ನು ಹಿಡಿದ ಗ್ರಾಮಸ್ಥರು

ಮನೆ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಗ್ರಾಮಸ್ಥರೇ ಹಿಡಿದಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದಲ್ಲಿ ನಿನ್ನೆ ನಡೆದಿದೆ. ಆಂಧ್ರದಿಂದ ಬಂದಿದ್ದ ಕಳ್ಳಲರು ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದರು. ಮಾಹಿತಿ ತಿಳಿದಿದ್ದೇ ತಡ ಮನೆ ಸುತ್ತುವರಿದ ಗ್ರಾಮಸ್ಥರು, ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳು ಆಂಧ್ರ ಪ್ರದೇಶದ ಚಿತ್ತೂರು ಮೂಲದವರು ಎನ್ನಲಾಗಿದೆ. ಕಳ್ಳರಿಂದ ಒಡವೆ, ಹಣ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದ್ದು, tಉರುವೇಕೆರೆ ಪೊಲೀಸ್​​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

Source link

Daily Devotional: ಸಣ್ಣ ವಿಷಯಗಳಿಗೆ ಕೋಪ ಬರೋದು ಯಾಕೆ ಗೊತ್ತಾ? – Kannada News | Daily Devotional: Why you get Angry on small things, managing anger

ಬೆಂಗಳೂರು, ಜನವರಿ 28: ಮಾನವನಲ್ಲಿ ತಾಮಸ, ರಜೋ, ಸತ್ವ ಗುಣಗಳಿದ್ದರೂ, ಪರಿಸ್ಥಿತಿಗಳು ಕೆಲವೊಮ್ಮೆ ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಅತಿಯಾದ ಕೋಪವು ದುಃಖಕ್ಕೆ ಮೂಲವಾಗಿದ್ದು, “ಅತಿ ಸರ್ವತ್ರ ವರ್ಜಯೇತ್” ಎಂಬ ತತ್ವದಂತೆ ಎಲ್ಲವೂ ಮಿತಿಯಲ್ಲಿರಬೇಕು. ಅನಗತ್ಯ ಕೋಪವು ಮನುಷ್ಯನ ಸರ್ವನಾಶಕ್ಕೆ ಕಾರಣವಾಗುತ್ತದೆ. ಅಧಿಕಾರದ ದರ್ಪ, ದುಡ್ಡಿನ ವ್ಯಾಮೋಹ, ಶ್ರೀಮಂತಿಕೆಯ ದರ್ಪ ಮತ್ತು ಅಹಂಕಾರದಿಂದ ಉಂಟಾಗುವ ಕೋಪ ವ್ಯಕ್ತಿಯ ಅವನತಿಗೆ ದಾರಿ ಮಾಡುತ್ತದೆ. ಜ್ಯೋತಿಷ್ಯದ ಪ್ರಕಾರ, ಬುದ್ಧಿಕಾರಕನಾದ ಬುಧ ಗ್ರಹ ದುರ್ಬಲವಾಗಿದ್ದಾಗ, ಪಾಪಗ್ರಹಗಳ ದೃಷ್ಟಿ ಇದ್ದಾಗ ಅಥವಾ ನೀಚನಾಗಿದ್ದಾಗ ವ್ಯಕ್ತಿಗಳಲ್ಲಿ ತಕ್ಷಣದ ಕೋಪ ಕಾಣಿಸಿಕೊಳ್ಳುತ್ತದೆ. ಇಂತಹವರಿಗೆ ಬುಧವಾರ ಮತ್ತು ಸೋಮವಾರದಂತಹ ಕೆಲವು ನಿರ್ದಿಷ್ಟ ದಿನಗಳಲ್ಲಿ ಕೋಪ ಹೆಚ್ಚಾಗುವ ಸಾಧ್ಯತೆ ಹೆಚ್ಚು ಎಂದು ಗುರೂಜಿ ಹೇಳಿದ್ದಾರೆ.

 

 

 

 

Source link

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್.

ಗಿಲ್ಲಿ ನಟ ಅವರು ಹಾಸ್ಯದ ಮೂಲಕ ಗಮನ ಸೆಳೆದವರು. ಅವರು ಮಾತಿನ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್​​ಸ್ಟಾಗ್ರಾಮ್​​ನಲ್ಲಿ ಒಂದು ಲಕ್ಷ ಇದ್ದ ಅವರ ಹಿಂಬಾಲಕರ ಸಂಖ್ಯೆ ಈಗ 20 ಲಕ್ಷ ತಲುಪಿದೆ. ಇದು ಅವರ ಜನಪ್ರಿಯತೆಗೆ ಸಾಕ್ಷಿ. ಅಧಿವೇಶನದಲ್ಲಿ ಗಿಲ್ಲಿ ಹೆಸರು ಚರ್ಚೆ ಆಗಿದ್ದು ಅವರ ಜನಪ್ರಿಯತೆ ಕಾರಣಕ್ಕೆ ಅಲ್ಲ, ಬದಲಿಗೆ ಕೇಂದ್ರ ಸರ್ಕಾರ ವಿಧಿಸುತ್ತಿರುವ ಟ್ಯಾಕ್ಸ್ ಕಾರಣಕ್ಕೆ.

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಶೋ ಕಡೆಯಿಂದ 50 ಕೋಟಿ ರೂಪಾಯಿ ಸಿಕ್ಕಿದೆ. ಆದರೆ, ಇದರಲ್ಲಿ ಸಂಪೂರ್ಣ ಹಣ ಗಿಲ್ಲಿಗೆ ಸೇರೋದಿಲ್ಲ. ಈ ವಿಷಯವನ್ನು ಪ್ರದೀಪ್ ಈಶ್ವರ್ ಪ್ರಸ್ತಾಪಿಸಿದ್ದಾರೆ. ‘ಎಲ್ಲರೂ ಬಿಗ್ ಬಾಸ್ ವಿನ್ನರ್ ಗಿಲ್ಲಿ ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಾರೆ. ಆದರೆ, ಶೋನ ವಿನ್ನರ್ ಅವರಲ್ಲ, ನಿರ್ಮಲಾ ಸೀತಾರಾಮನ್. ಕೊಟ್ಟಿರೋ 50 ಲಕ್ಷ ರೂಪಾಯಿಗೆ 18 ಪರ್ಸೆಂಟ್ ಜಿಎಸ್​ಟಿ, 13 ಇನ್​​ಕಮ್​ ಟ್ಯಾಕ್ಸ್, 4 ಪರ್ಸೆಂಟ್ ಸೆಸ್. ಎಲ್ಲಾ ಸೇರಿ 52 ಪರ್ಸೆಂಟ್ ನಿರ್ಮಲಾ ಅವರಿಗೆ ಹೋಗುತ್ತದೆ. ನಿಜವಾದ ಬಿಗ್ ಬಾಸ್ ವಿನ್ನರ್ ನಿರ್ಮಲಾ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಿಗ್ ಬಾಸ್ ಸತೀಶ್​ಗೆ ಕೊಲೆ ಬೆದರಿಕೆ ಹಾಕಿದ ಗಿಲ್ಲಿ ಫ್ಯಾನ್ಸ್ ಅರೆಸ್ಟ್: 80 ಜನರ ಮೇಲೆ ಕೇಸ್

ಗಿಲ್ಲಿ ನಟ ಅವರಿಗೆ 50 ಲಕ್ಷದಲ್ಲಿ 35 ಲಕ್ಷ ರೂಪಾಯಿ ಸಿಗುತ್ತಿದೆ ಎಂಬುದು ನಿಜವಾದ ಲೆಕ್ಕ. ಪ್ರದೀಪ್ ಅವರು ಇದನ್ನು ಸ್ವಲ್ಪ ಎಗ್ಸಾಗರೇಷನ್ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. 50 ಲಕ್ಷದ ಜೊತೆ ಗಿಲ್ಲಿ ನಟನಿಗೆ ಸುದೀಪ್ ಕಡೆಯಿಂದ 10 ಲಕ್ಷ ರೂಪಾಯಿ, ಮಾರುತು ಸುಜುಕಿ ಕಡೆಯಿಂದ ವಿಕ್ಟೋರಿಸ್ ಕಾರು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್​​ – Kannada News | Running Sleeper Bus Catches Fire in Hosanagara, 36 Passengers Safe

ಶಿವಮೊಗ್ಗ, ಜನವರಿ 28: ಚಿತ್ರದುರ್ಗದ ಬಳಿ ನಡೆದ ಬಸ್​​ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಗೃಹಾಲಂಕಾರ ವಸ್ತುಗಳ ಖರೀದಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಇದರಿಂದ ನಿಮಗೆ ಸಮಾಧಾನ- ತೃಪ್ತಿ ಸಿಗಲಿದೆ. ದೀರ್ಘ ಕಾಲದಿಂದ ನಿಮ್ಮ ಜತೆಗಿದ್ದು ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ದೂರದ ಪ್ರದೇಶಗಳಿಗೆ ತೆರಳುವ ವಿಚಾರ ತಿಳಿದುಬರಲಿದೆ. ಇದರಿಂದ ಭಾವನಾತ್ಮಕವಾಗಿ ಸ್ವಲ್ಪ ಕುಗ್ಗಿದಂತೆ ಭಾವನೆ ಮೂಡಲಿದೆ. ಆಸ್ತಮಾ ಸಮಸ್ಯೆ ಇರುವಂಥವರು ಸಾಮಾನ್ಯಕ್ಕಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿ. ಔಷಧ- ಮಾತ್ರೆಗಳಲ್ಲಿ ಬದಲಾವಣೆ ಮಾಡಿಕೊಂಡಿದ್ದೀರಿ ಅಂತಾದರೆ ಅದರಿಂದ ಆಗಿರುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಸಂಗಾತಿ ಜೊತೆಗೆ ಲಾಂಗ್ ಡ್ರೈವ್ ಗೆ ತೆರಳುವಂಥ ಯೋಗ ಇದೆ. ಇಷ್ಟು ಸಮಯ ನಿಮ್ಮ ಮನಸ್ಸಲ್ಲಿ ಇಟ್ಟುಕೊಂಡು, ಹೇಳದೇ ಇದ್ದಂಥ ಕೆಲವು ವಿಷಯಗಳನ್ನು ಹಂಚಿಕೊಳ್ಳಲಿದ್ದೀರಿ. ಹೊಸ ಕೋರ್ಸ್ ಸೇರಿಕೊಳ್ಳುವುದಕ್ಕೆ ವಿಚಾರಣೆ ನಡೆಸಲಿದ್ದೀರಿ. ವೃತ್ತಿಪರರು ನೀವಾಗಿದ್ದರೆ ನಿಮಗೆ ಗೊತ್ತಿರುವ ಮಾಹಿತಿಯೇ ಇದ್ದರೂ ಅದರ ಬಗ್ಗೆ ಇತರರಿಗೆ ಮಾಹಿತಿ ನೀಡುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಪರಿಶೀಲನೆ ಮಾಡಿಕೊಳ್ಳುವುದು ಒಳ್ಳೆಯದು. ಕುಟುಂಬದ ಸದಸ್ಯರು ಹೇಳುವ ಕೆಲವು ವಿಚಾರಗಳಿಗೆ ಖರ್ಚು- ವೆಚ್ಚದ ಕಾರಣ ನೀಡಿ, ಅದು ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಎತ್ತರದ ಸ್ಥಳಕ್ಕೆ ಹತ್ತುವಾಗ- ಇಳಿಯುವಾಗ ಎಚ್ಚರಿಕೆ ವಹಿಸಬೇಕು. ನಿಮ್ಮ ಉದ್ಯೋಗವೇ ಈ ರೀತಿಯಾದದ್ದು ಎಂದಾದಲ್ಲಿ ಸಾಮಾನ್ಯ ದಿನಗಳಲ್ಲಿ ನೀವು ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿನ ಎಚ್ಚರಿಕೆ ಹಾಗೂ ಏಕಾಗ್ರತೆ ಬಹಳ ಮುಖ್ಯ. ಆಪತ್ಕಾಲಕ್ಕೆ ಎಂದುಕೊಂಡು ನೀವು ಕೂಡಿಟ್ಟಿದ್ದ ಹಣವನ್ನು ತೆಗೆದುಕೊಳ್ಳಬೇಕು ಎಂಬ ಸ್ಥಿತಿ ಉದ್ಭವಿಸಲಿದೆ. ಸಂಗಾತಿಯಿಂದ, ನೀವು ಬಹಳ ಪ್ರೀತಿ- ಗೌರವದಿಂದ ಕಾಣುವ ವ್ಯಕ್ತಿಗಳಿಂದ ನಿಂದನೆ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಅಣಬೆ ಬೆಳೆಯುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಬಹಳ ಸಮಯದಿಂದ ನಿಂತು ಹೋಗಿರುವ ಸರ್ಕಾರಿ ಮಟ್ಟದಲ್ಲಿನ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ಮಕ್ಕಳ ಶಿಕ್ಷಣ- ಉದ್ಯೋಗದಲ್ಲಿ ಮನಸ್ಸಿಗೆ ಸಮಾಧಾನ ಆಗುವಂಥ ಬೆಳವಣಿಗೆ ಆಗಲಿದೆ. ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎಂದು ಪ್ರಯತ್ನ ಮಾಡುತ್ತಾ ಇರುವವರಿಗೆ ಉದ್ದೇಶ ಈಡೇರುವುದಕ್ಕೆ ಸೂಕ್ತ ಮಾರ್ಗದರ್ಶನ ದೊರೆಯಲಿದೆ. ಮನೆಯ ಮಟ್ಟಿಗೆ ಕೆಲವು ಕಾರ್ಯಕ್ರಮಗಳನ್ನು ಆಯೋಜಿಸುವಂಥ ನಿರ್ಧಾರ ಮಾಡಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಹಣದ ವಿಚಾರದಲ್ಲಿ ಕೆಲವು ವ್ಯಕ್ತಿಗಳ ಜೊತೆಗೆ ಅಭಿಪ್ರಾಯ ಭೇದ- ಮನಸ್ತಾಪ ಕಾಣಿಸಿಕೊಳ್ಳಬಹುದು. ನೀವು ಹೇಳುವುದೊಂದು ಅದು ಅರ್ಥವಾಗುವ ರೀತಿ ಮತ್ತೊಂದು ಎಂಬ ಸನ್ನಿವೇಶ ಸೃಷ್ಟಿ ಆಗುತ್ತದೆ. ಮುಖ್ಯ ವಿಚಾರಗಳು ಇದ್ದಲ್ಲಿ ಫೋನ್ ನಲ್ಲಿ ಮಾತನಾಡುವ ಬದಲಿಗೆ ನೇರಾನೇರ ಭೇಟಿ ಆಗಿಬಿಡುವುದು ಉತ್ತಮ. ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಮಾಡಿಕೊಡುವುದಾಗಿ ಯಾರೇ ಪ್ರಸ್ತಾವ ಮುಂದಿಟ್ಟರೂ ನೇರವಾಗಿ ‘ಬೇಡ” ಎಂದುಬಿಡುವುದು ಒಳ್ಳೆಯ ನಿರ್ಧಾರ ಎಂದೆನಿಸಿಕೊಳ್ಳುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ದಾನ- ಧರ್ಮಕ್ಕಾಗಿ ಹಣದ ವಿನಿಯೋಗ ಆಗಲಿದೆ. ಸ್ವಾದಿಷ್ಟವಾದ ಊಟ- ತಿಂಡಿಗಳನ್ನು ಮಾಡುವಂಥ ಯೋಗ ನಿಮ್ಮ ಪಾಲಿಗೆ ಇದೆ. ಇಷ್ಟು ಸಮಯ ನಿಮ್ಮ ಬಗ್ಗೆ ತಿರಸ್ಕಾರದಿಂದ ನೋಡುತ್ತಿದ್ದವರು, ದ್ವೇಷ ಸಾಧನೆ ಮಾಡುತ್ತಿದ್ದವರು ತಾವಾಗಿಯೇ ನಿಮ್ಮ ಬಳಿ ಬಂದು, ಸಹಾಯ ಕೇಳಲಿದ್ದಾರೆ. ದೂರ ಪ್ರಯಾಣ ಅನಿವಾರ್ಯ ಎಂಬಂತೆ ಆಗಲಿದೆ. ಒಬ್ಬರೇ ವ್ಯಕ್ತಿಯ ಸಲುವಾಗಿ ನಿಮ್ಮ ಹೆಚ್ಚು ಸಮಯವನ್ನು ನೀಡಬೇಕಾದ ಪರಿಸ್ಥಿತಿ ಸೃಷ್ಟಿ ಆಗಲಿದೆ. ತೀರಾ ಅನಿವಾರ್ಯ ಎಂದಾದಲ್ಲಿ ಮಾತ್ರ ಗ್ಯಾಜೆಟ್- ಮೊಬೈಲ್ ಫೋನ್ ಇಂಥವುಗಳ ಖರೀದಿ ಮಾಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ ತುಂಬ ಮುಖ್ಯ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಹೆಚ್ಚಿನ ಹಣ ಸಿಗುತ್ತದೆ ಎಂಬ ಕಾರಣಕ್ಕೆ ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಕೆಲಸಗಳನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ನಿಮ್ಮ ಮನವೊಲಿಸಲು ಕೆಲವು ಸ್ನೇಹಿತರು ನೀಡುವ ಕಾರಣಗಳನ್ನು ವಿಶ್ಲೇಷಣೆ ಮಾಡದೆ ಒಪ್ಪಿಕೊಂಡು ಬಿಟ್ಟರೆ ಆ ನಂತರ ಪರಿತಪಿಸುವಂತೆ ಆಗಲಿದೆ. ದಂಪತಿ ಮಧ್ಯೆ ಹಣಕಾಸಿನ ವಿಚಾರಕ್ಕೆ ಅಭಿಪ್ರಾಯ ಭೇದ ಕಾಣಿಸಿಕೊಳ್ಳಬಹುದು. ನಿಮಗೆ ಇಷ್ಟವಿಲ್ಲದ ಸ್ಥಳಕ್ಕೆ ಯಾರದೋ ಬಲವಂತಕ್ಕೆ ತೆರಳಿ, ಅಲ್ಲಿ ಅವಮಾನ ಪಡುವಂತೆ ಆಗಲಿದೆ. ಕೆಲವು ಕೆಲಸ- ಕಾರ್ಯಗಳು ನಿಧಾನವಾಗಿಯೇ ಆದರೂ ಪರವಾಗಿಲ್ಲ, ಆತುರ ಮಾಡುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಬಗ್ಗೆ ಮೂಡುವ ಅಸಮಾಧಾನದ ಮನಸ್ಥಿತಿಯಿಂದ ಆಚೆ ಬರುವುದಕ್ಕೆ ನಾನಾ ಪ್ರಯತ್ನಗಳನ್ನು ಮಾಡಲಿದ್ದೀರಿ. ನಿಮಗೆ ಬರಬೇಕಾದ ಹಣಕ್ಕೆ ಏನಾದರೊಂದು ಕಾರಣ ಒಡ್ಡಿ, ಅಡ್ಡಗಾಲು ಹಾಕಿದವರು ಯಾರು ಎಂಬ ಮಾಹಿತಿ ದೊರೆಯಲಿದೆ. ಕೆಲವು ಉದ್ಯೋಗಾವಕಾಶ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ನಿಮ್ಮ ಮಾತಿನ ಮೂಲಕ ಕೆಲವು ಕೆಲಸ- ಕಾರ್ಯ ಮಾಡಿಸಿಕೊಳ್ಳಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 28 January : ಇಂದು ಈ ರಾಶಿಯವರಿಗೆ ಆರ್ಥಿಕ ವಂಚನೆ ಸಂಭವ – Kannada News | Horoscope Today: January 28, Wednesday 2026 Daily Zodiac Predictions and Lucky Signs

ಮೇಷ ರಾಶಿ:

ನಿಮ್ಮ ಸಾಧನೆಗೆ ಸಣ್ಣ ಪ್ರೋತ್ಸಾಹವೂ ದೊಡ್ಡದೇ. ಕಳೆದುಕೊಂಡಿದ್ದು ನಿಮ್ಮ ಕೈಸೇರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಬಾಗುವಿಕೆಯಿಂದ ಏನನ್ನೂ ಕಳೆದುಕೊಳ್ಳುವುದಿಲ್ಲ. ಆ ಭಾವ ನಿಮ್ಮಲ್ಲಿದ್ದರೆ ತೆಗೆದುಹಾಕಿ. ಕ್ಷುಲ್ಲಕ ಕಾರಣಕ್ಕೆ ಸ್ನೇಹವನ್ನು ಮುರಿದುಕೊಳ್ಳುವಿರಿ.‌ ಯಾರಿಗೂ ಒತ್ತಾಯ ಪೂರ್ವಕ ಇಟ್ಟುಕೊಳ್ಳುವುದು ಬೇಡ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡಬಹುದು. ಅಪರಿಚಿತರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ಕುತೂಹಲವು ಬರಬಹುದು.

ವೃಷಭ ರಾಶಿ:

ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ಪುಣ್ಯ ಸ್ಥಳದ ದರ್ಶನದಿಂದ ಶಕ್ತಿಸಂಚಯವಾಗಲಿದೆ. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟವಾಗುವುದು. ನೀವು ಇಂದು ಮೌನವನ್ನೇ ಹೆಚ್ಚು ಇಷ್ಟಪಡುವಿರಿ.‌

ಮಿಥುನ ರಾಶಿ:

ಪ್ರೀತಿ ಕೊಟ್ಟವರ ನೋವಿಗೆ ಸ್ಪಂದಿಸುವಿರಿ. ಕೈಲಾಗದ ಕಾರ್ಯಕ್ಕೆ ಸೈ ಎನಿಸಿಕೊಳ್ಳುವ ಅಸೆ ನಿಮ್ಮದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು. ಪ್ರೇಮವು ಸ್ಥಾಯಿಯಾಗಿರಲು ಒಂದಿಷ್ಟು ಪೌಷ್ಟಿಕಾಂಶ ಬೇಕು. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಮಾತುಗಳಲ್ಲಿ ವಕ್ರತೆಯನ್ನು ಕಡಿಮೆ ಮಾಡಿ. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆಯಾಗುವುದು. ಅಧ್ಯಾತ್ಮದ ವಿಚಾರವು ಹೆಚ್ಚು ಇಷ್ಟವಾಗುವುದು. ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವಿರಿ. ಎಲ್ಲರ ಜೊತೆ ಉತ್ಸಾಹದಿಂದ ಮಾತನಾಡುವಿರಿ.

ಕರ್ಕಾಟಕ ರಾಶಿ:

ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು. ಮೇಲಧಿಕಾರಿಗಳ ಮನವೊಲಿಸಿ ನಿಮ್ಮ ಭಡ್ತಿಯನ್ನು ಮಾಡಿಸಿಕೊಳ್ಳುವಿರಿ. ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು. ಯಂತ್ರಗಳ ಜೊತೆ ಕೆಲಸ ಮಾಡುವುದು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಸಂಗಾತಿಯ ಮಾತಿನಿಂದ‌ ಕೆಲವು ಮಾರ್ಪಾಡು ಮಾಡಿಕೊಳ್ಳುವಿರಿ. ನಿಮ್ಮದೇ ಆದ ಕಾರ್ಯದಲ್ಲಿ ಮಗ್ನರಾಗಿ ಯಶಸ್ಸು ಸಾಧಿಸುವಿರಿ.

ಸಿಂಹ ರಾಶಿ:

ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು. ಪ್ರೇಮಪಾಶದಿಂದ ಬಿಡಿಸಿಕೊಳ್ಳುವ ಪ್ರಯತ್ನ ಇರಲಿದೆ. ಉನ್ನತ ವಿದ್ಯಾಭ್ಯಾಸದ ಕನಸು‌‌ ಬಂಧುಗಳ ಸಹಕಾರದಿಂದ ಆಗಲಿದೆ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ಅವಸರವಸರವಾಗಿ ಇಂದಿನ ಕಾರ್ಯಗಳನ್ನು ಮಾಡುವಿರಿ. ಆದರೂ ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳಲು ಆಗದು.

ಕನ್ಯಾ ರಾಶಿ:

ನಿಮ್ಮ ವ್ಯಕ್ತಿತ್ವವು ಸಕಾರಾತ್ಮಕವಾಗಿ ಬೆಳೆಯುತ್ತಿರುವುದು ನಿಮಗೂ ಇತರರಿಗೂ ಸಂತೋಷದ ಸಂಗತಿಯಾಗಿದೆ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ. ಕಳೆದುಕೊಳ್ಳಬೇಕಿದ್ದ ಭೂಭಾಗವನ್ನು ನೀವು ಪಡೆಯುವಿರಿ. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಮನೆಯ ಬಗ್ಗೆ ನಿಮಗೆ ಕಾಳಜಿ ಹೆಚ್ಚು.

ತುಲಾ ರಾಶಿ:

ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ಪ್ರಾಯೋಗಿಕ ವಿಭಾಗದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆಯುವಿರಿ. ಹಳೆಯ ಮನೆಯಲ್ಲಿ ವಾಸ ಮಾಡುವಿರಿ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಕೆಟ್ಟವರ ಸಹವಾಸದಿಂದ ಅಪಕೀರ್ತಿ ಬರಬಹುದು. ಕಟು ವಚನದಿಂದ ಬೇಸರವಾಗಲಿದೆ. ಅವಕಾಶಗಳನ್ನು ಕಳೆದುಕೊಂಡು ಮನಸ್ಸಿನಲ್ಲಿಯೇ ದುಃಖಿಸುವಿರಿ. ಕೋಪವನ್ನು ತಾನಾಗಿಯೇ ಕಡಿಮೆ ಆಗಿದ್ದು ನಿಮಗೆ ಆಶ್ಚರ್ಯವಾಗಬಹುದು.

ವೃಶ್ಚಿಕ ರಾಶಿ:

ಪರದೇಶದಲ್ಲಿ ಇರುವವರಿಗೆ ಅರಾಜಕತೆ ಬರುವ ಸಾಧ್ಯತೆ ಇದೆ. ಕಾರ್ಯಗಳಿಂದ ಹೆಚ್ಚಿನ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಸಣ್ಣ ಕಾರಣಕ್ಕೆ ಮನೆಯಲ್ಲಿ ದೊಡ್ಡ ಕಲಹವಾಗುವುದು. ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದು. ಮಕ್ಕಳ ತಪ್ಪನ್ನು ನೀವು ಸಮರ್ಥಿಸಿಕೊಳ್ಳಬೇಕಾದೀತು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಇಂದು ಸಾಧ್ಯವಾಗದು.

ಧನು ರಾಶಿ:

ಅನವಶ್ಯಕ ಕರೆಗಳು ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗ ತರುವುವು. ವಿದ್ಯಾಭ್ಯಾಸಕ್ಕೆ ಅತಿಯಾದ ಹಣಕಾಸಿನ ಖರ್ಚು ಬರಲಿದ್ದು, ನಿಮಗೆ ಕಷ್ಟವಾಗುವುದು. ನಿರೀಕ್ಷಿತ ಸಂದರ್ಭವು ಇಂದು ಬರಲಿದ್ದು ಅದನ್ನು ಬಳಸಿಕೊಳ್ಳುವಿರಿ. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ಜಾಣ್ಮಯಿಂದ ನಿಮ್ಮ ಕಾರ್ಯವನ್ನು ಸಾಧಿಸಿ. ಇಂದು ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ. ಇಂದು ನೀವಾಡವ ಮಾತು ತೂಕದ್ದಾಗಿರಲಿದೆ.

ಮಕರ ರಾಶಿ:

ನಿಮ್ಮ ಸಾರ್ವಜನಿಕ ಸಂಪರ್ಕದ ವ್ಯಾಪ್ತಿಯೂ ವಿಶಾಲವಾಗುವುದು. ಮಾರುಕಟ್ಟೆಗೆ ಸಂಬಂಧಿತ ಕಾರ್ಯಗಳನ್ನು ಮಾಡಲು ಸರಿಯಾದ ಸಮಯ. ಕೆಲವು ಕಠಿಣ ನಿರ್ಧಾರಗಳನ್ನೂ ತೆಗೆದುಕೊಳ್ಳುವುದು ಪ್ರಯೋಜನವಾದೀತು. ಅಪರಿಚಿತರ ಸಹಾಯದಿಂದ ಪೂರ್ಣ ನಂಬಿಕೆ ಬರದು. ನಿಮ್ಮ ನೆಮ್ಮದಿಯು ಇತರರ ಮಾತಿನಿಂದ ವಿಚಲಿತವಾಗುವುದು. ನಿಮ್ಮವರೇ ಆದರೂ ನಿಯಮ‌ ಮೀರದಂತೆ ನೋಡಿಕೊಳ್ಳಬೇಕು. ಮಾಡಬೇಕೆಂದುಕೊಂಡ ಕಾರ್ಯನ್ನು ತೊಂದರೆ ಬಂದರೂ ಬಿಡದೇ ಮುಂದುವರಿಯಿರಿ.

ಕುಂಭ ರಾಶಿ:

ವೈವಾಹಿಕ ಸಂಬಂಧಗಳಲ್ಲಿ ಮಾಧುರ್ಯವು ಇರಲಿದೆ. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಪ್ರಯೋಗಾತ್ಮಕ ವಿಚಾರಕಗಕೆ ನಿಮ್ಮ ಆಸಕ್ತಿ ಹೆಚ್ಚು. ಕಾರ್ಯದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ಯೋಚಿಸಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಇಂದು ಕೋಪಿಸಿಕೊಂಡು ಎಲ್ಲವನ್ನೂ ಶಪಿಸಬಹುದು. ಅತಿಯಾದ ಉತ್ಸಾಹದಲ್ಲಿರುವ ನಿಮಗೆ ಸಂಗಾತಿಯ ಮಾತು ಉತ್ಸಾಹಕ್ಕೆ ಭಂಗವನ್ನು ತಂದೀತು.

ಮೀನ ರಾಶಿ:

ನಿಮ್ಮ ಮೇಲೆ ನಂಬಿಕೆ ಇಟ್ಟು ಮುಂದುವರಿಯಿರಿ. ವೃತ್ತಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಕಛೇರಿಯಲ್ಲಿ ಹೆಚ್ಚಿನ ಕೆಲಸದ ಕಾರಣ ಹೆಚ್ಚುವರಿ ಸಮಯವನ್ನು ನೀಡಬೇಕಾಗಬಹುದು. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸರ್ಕಾರದ ಉದ್ಯೋಗಿಗಳಿಗೆ ಇಷ್ಟವಿಲ್ಲದ ಕಡೆ ವರ್ಗಾವಣೆ ಸಂಭವ. ನಿಮ್ಮ ಮೇಲೆ‌ ಹಿತಶತ್ರುಗಳು‌ ಇಲ್ಲದ ಆರೋಪವನ್ನು ಮಾಡಬಹುದು. ನಿಮ್ಮ ತಿಳಿವಳಿಕೆಯನ್ನು ಇನ್ನೊಬ್ಬರ‌ ಮುಂದೆ ತೋರಿಸಿಕೊಳ್ಳಲಾರಿರಿ.

ಜನವರಿ 28,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ದಶಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಶುಕ್ಲ, ಕರಣ : ಗರಜ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 20 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:37 – 14:03, ಯಮಗಂಡ ಕಾಲ 08:20 – 09:46, ಗುಳಿಕ ಕಾಲ 11:12 – 12:37

-ಲೋಹಿತ ಹೆಬ್ಬಾರ್ – 8762924271 (what’s app only)

Source link

ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್ – Kannada News | Duniya Vijay talks about his real life experience of Landlord movie story

ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ಹಿಟ್ ಆಗಿದೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಶೋಷಿತ ವರ್ಗದ ಕೊಡಲಿ ರಾಚಯ್ಯ ಎಂಬ ವ್ಯಕ್ತಿಯ ಪಾತ್ರ ಮಾಡಿದ್ದಾರೆ. ಈ ಕುರಿತು ಅವರು ಟಿವಿ9 ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಪಾತ್ರ ಅಷ್ಟು ಸಹಜವಾಗಿ ಮೂಡಿಬರಲು ಕಾರಣ ಆದ ಅಂಶಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಊರಿನಲ್ಲಿ ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು. ಅದನ್ನು ನಾನು ನೋಡಿದ್ದೇನೆ. ನಮ್ಮ ಊರಿನಲ್ಲಿ ನಾನು ಆ ಶೋಷಣೆ ನೋಡಿದ್ದೇನೆ. ನಮ್ಮ ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ಬಡತನದಲ್ಲಿ ಇದ್ದರು. ನನ್ನ ತಂದೆ ಒಬ್ಬರೇ ಓದಿದ್ದರು. ಅವರು ಕಷ್ಟಪಟ್ಟಿದ್ದನ್ನು ಕಣ್ಣಾರೆ ಕಂಡಿದ್ದೇನೆ. ಚಿಕ್ಕ ವಯಸ್ಸಿನಿಂದಲೂ ನಾನು ಶೋಷಣೆಗೆ ವಿರುದ್ಧವಾಗಿ ಇದ್ದವನು. ಆ ಕೆಟ್ಟ ಸಂಪ್ರದಾಯದಲ್ಲಿ ನಮ್ಮ ಮನೆಯವರೂ ಬದುಕಿದ್ದಾರೆ. ಅದನ್ನೆಲ್ಲ ನೆನಪಿಸಿಕೊಂಡರೆ ಮೈ ಜುಂ ಎನಿಸುತ್ತದೆ. ನಾನು ಅದನ್ನೆಲ್ಲ ಜೀವಿಸಿದ್ದರಿಂದ ಈ ಪಾತ್ರವನ್ನು ಮಾಡಲು ಸುಲಭ ಆಯ್ತು’ ಎಂದು ದುನಿಯಾ ವಿಜಯ್ (Duniya Vijay) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link