ಆಸ್ಟ್ರೇಲಿಯಾ ಟಿ20 ತಂಡದಲ್ಲಿ ಭಾರತೀಯ..! – Kannada News
ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಈ ತಂಡದಲ್ಲಿ ದೆಹಲಿ ಮೂಲದ ಆಲ್ರೌಂಡರ್ ನಿಖಿಲ್ ಚೌಧರಿ (Nikhil Chaudhary) ಕಾಣಿಸಿಕೊಂಡಿದ್ದಾರೆ. ನಿಖಿಲ್ ಭಾರತೀಯ ಮೂಲದ ಆಸ್ಟ್ರೇಲಿಯನ್ ಕ್ರಿಕೆಟಿಗ. ಈ ಹಿಂದೆ ಪಂಜಾಬ್ ಪರ ದೇಶೀಯ ಅಂಗಳದಲ್ಲಿ ಕಣಕ್ಕಿಳಿದಿದ್ದರು. ಇದೀಗ ಆಸ್ಟ್ರೇಲಿಯಾ ಪರ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ ಪ್ರಕಟಿಸಲಾಗಿದ್ದ ಆಸ್ಟ್ರೇಲಿಯಾ ಟಿ20 ತಂಡದಲ್ಲಿ ನಿಖಿಲ್ ಚೌಧರಿ ಸ್ಥಾನ ಪಡೆದಿರಲಿಲ್ಲ. ಆದರೆ ವೈಯುಕ್ತಿಕ ಕಾರಣಗಳಿಮದಾಗಿ ಟ್ರಾವಿಸ್ ಹೆಡ್ ಈ…