Ranji Trophy: ಕರ್ನಾಟಕ ತಂಡಕ್ಕೆ ಪಡಿಕ್ಕಲ್ ನಾಯಕ; ರಾಹುಲ್ ಇನ್, ಕರುಣ್ ಔಟ್ – Kannada News | Devdutt Padikkal to Lead Karnataka Ranji; KL Rahul Returns for Punjab Clash
ಪಂಜಾಬ್ ವಿರುದ್ಧದ ಮುಂದಿನ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದ್ದು, ಅವರ ಬದಲಿಗೆ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇತ್ತೀಚಿಗಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ಇದೀಗ ಪಡಿಕ್ಕಲ್ಗೆ ತಂಡದ ನಾಯಕತ್ವ ನೀಡಲಾಗಿದೆ. ಇನ್ನೊಂದು ಪ್ರಮುಖ ಸುದ್ದಿಯೆಂದರೆ ಕೆಎಲ್ ರಾಹುಲ್ ಕೂಡ…