ಅಮೆರಿಕದ ಹಲವೆಡೆ ಭಾರಿ ಹಿಮಪಾತ: 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – Kannada News | US Winter Storm: 9000 Flights Cancelled, 15 States Declare Emergency as Extreme Cold Hits
ಡಲ್ಲಾಸ್ (ಎಪಿ), ಜನವರಿ 25: ಅಮೆರಿಕದ ಹಲವೆಡೆ ದಟ್ಟ ಮಂಜು ಮತ್ತು ಭಾರಿ ಹಿಮಪಾತ (Winter Storm) ಹಿನ್ನೆಲೆ ನಿಗದಿಯಾಗಿದ್ದ 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ (Flights Cancelled). ಈ ಚಂಡಮಾರುತದಿಂದ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಅಸ್ತವ್ಯಸ್ತತೆ ಉಂಟಾಗುವ ನಿರೀಕ್ಷೆಯಿದೆ. ಅಲ್ಲದೆ, 15 ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಮಾತನಾಡಿ, ತಮ್ಮ ಆಡಳಿತವು ರಾಜ್ಯ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಯಾವುದೇ…