Category Archives: Blog

Your blog category

ದಶಕಗಳ ಕನಸು ನನಸು: ಮೆಜೆಸ್ಟಿಕ್‌ TO ಏರ್‌ಪೋರ್ಟ್‌ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್ – Kannada News | Railways approves Rs 4100 crore suburban rail link to Bengaluru airport from majestic

ಬೆಂಗಳೂರು, (ಜನವರಿ 24): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport)  ಉಪನಗರ ರೈಲು  (suburban railway)ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಹೌದು…ಮೆಜೆಸ್ಟಿಕ್​​​​ನಿಂದ ಬೆಂಗಳೂರು (Bengaluru) ಏರ್​ಪೋರ್ಟ್​ ವರೆಗೆ 4,100 ಕೋಟಿ ರೂಪಾಯಿ ವೆಚ್ಚದ ಸಬ್​ಅರ್ಬನ್ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಇನ್ನುಸುಮಾರು 4,100 ಕೋಟಿ ರೂ.ವೆಚ್ಚದ ಯೋಜನೆಯ ಅಂತಿಮ ವಿನ್ಯಾಸಕ್ಕೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ಸೂಚಿಸಿದೆ. ಒಟ್ಟು 8.5 ಕಿ.ಮೀ ರೈಲು ಮಾರ್ಗವಿದ್ದು, ಈ ಯೋಜನೆ 2030ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಬಹುಮುಖ್ಯವಾಗಿ ಈ ಯೋಜನೆಯಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿದೆ.

2030ರ ವೇಳೆಗೆ ಪೂರ್ಣಗೊಳಿಸುವ ಗುರಿ

ಈ ಯೋಜನೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಅನುದಾನ ನೀಡಲು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಮತ್ತು ಭಾರತೀಯ ರೈಲ್ವೆಯಿಂದ ಈಕ್ವಿಟಿ ಹಣಕಾಸು ಪಡೆಯಲು ಪ್ರಯತ್ನಗಳು ನಡೆಯುತ್ತಿವೆ. ಯೋಜನೆಯ ವರದಿಯನ್ನು ರೈಟ್ಸ್ ಸಂಸ್ಥೆ ಸಿದ್ಧಪಡಿಸಿದ್ದು, ಈ ಸಂಪೂರ್ಣ ಸಂಪಿಗೆ ಲೈನ್ ಮತ್ತು ವಿಮಾನ ನಿಲ್ದಾಣದ ಕೊಂಡಿಯನ್ನು ಮಾರ್ಚ್ 2030ರ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

ಮೆಜೆಸ್ಟಿಕ್ ಟು ಏರ್​​ಪೋರ್ಟ್ ಮಾರ್ಗ

ಈ ಮಾರ್ಗ ಕೆಎಸ್‌ಆರ್ ಬೆಂಗಳೂರು ಸಿಟಿಯಿಂದ ಹೊರಟು ಯಶವಂತಪುರ, ಯಲಹಂಕ ಮೂಲಕ ಸಾಗಿ, ಟ್ರಂಪೆಟ್ ಇಂಟರ್‌ಚೇಂಜ್ ಬಳಿ ತಿರುವು ಪಡೆದು, ಬಿಕೆ ಹಳ್ಳಿ ಮತ್ತು ಏರೋಸ್ಪೇಸ್ ಪಾರ್ಕ್ ಮೂಲಕ ದೇವನಹಳ್ಳಿ ಏರ್‌ಪೋರ್ಟ್ ಟರ್ಮಿನಲ್ ತಲುಪಲಿದೆ.

ಬೆಂಗಳೂರು ಉಪನಗರ ರೈಲು ಯೋಜನೆಯ ಮೊದಲನೇ ಕಾರಿಡಾರ್ ಆದ ‘ಸಂಪಿಗೆ ಲೈನ್’ ಅಡಿಯಲ್ಲಿ ಮೆಜೆಸ್ಟಿಕ್‌ನಿಂದ ದೇವನಹಳ್ಳಿಯವರೆಗೆ ಈ ವಿಮಾನ ನಿಲ್ದಾಣದ ಸಂಪರ್ಕ ಕೊಂಡಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಟ್ರಂಪೆಟ್ ಜಂಕ್ಷನ್‌ನಿಂದ ವಿಮಾನ ನಿಲ್ದಾಣದ ಟರ್ಮಿನಲ್‌ವರೆಗೆ ಒಟ್ಟು 8.5 ಕಿ.ಮೀ ಉದ್ದದ ಮಾರ್ಗವನ್ನು ಇದು ಒಳಗೊಂಡಿದೆ. ಈ ಯೋಜನೆಯಲ್ಲಿ 5.5 ಕಿ.ಮೀ ಮಾರ್ಗವು ನೆಲಮಟ್ಟದಲ್ಲಿ ಹಾಗೂ ಉಳಿದ 3.5 ಕಿ.ಮೀ ಮಾರ್ಗವು ವಿಮಾನ ನಿಲ್ದಾಣದ ಸಂಕೀರ್ಣದೊಳಗೆ ಸಂಪೂರ್ಣ ಭೂಗತವಾಗಿ ನಿರ್ಮಾಣವಾಗಲಿದೆ.

ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಟ್ರಾಫಿಕ್‌ನಿಂದ ಬಳಲುತ್ತಿರುವ ಬೆಂಗಳೂರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಉಪನಗರ ರೈಲು ಯೋಜನೆ ಮಹತ್ವದ್ದಾಗಿದೆ.   ಪ್ರಸ್ತುತ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳಲ್ಲಿ ಪ್ರತಿದಿನ ಬಹಳಷ್ಟು ವಾಹನಗಳು ಸಂಚರಿಸುತ್ತಿವೆ. ಇದರಿಂದ ಈ ಭಾಗದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈಗ ಈ ರೈಲು ಮಾರ್ಗವು ಕಾರ್ಯಾರಂಭ ಮಾಡಿದರೆ ವಾಹನ ಸಂಚಾರ ದಟ್ಟಣೆಗೆ ಮುಕ್ತಿ ಸಿಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ.

ನಡೆದದ್ದೇನು?

ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು ಮೇಯ್ದಿತ್ತು. ಹೀಗಾಗಿ ಅಂಗಮುತ್ತು ಮತ್ತು ಕುಟುಂಬ ಸದಸ್ಯರು ಕಣ್ಣಮ್ಮರನ್ನು ಕಂಬಕ್ಕೆ ಕಟ್ಟಿಹಾಕಿ ಸತತ ಎರಡು ಗಂಟೆ ಥಳಿಸಿದ್ದಾರೆ.

ಬೈಕ್​ ಡಿಕ್ಕಿಯಾಗಿ ಶಾಲೆಗೆ ಹೋಗ್ತಿದ್ದ ಐವರು ವಿದ್ಯಾರ್ಥಿನಿಯರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಬಳಿ ಬೈಕ್​ ಡಿಕ್ಕಿಯಾಗಿ ಶಾಲೆಗೆ ಹೋಗುತ್ತಿದ್ದ ಐವರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿನಿಯರಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ವಿದ್ಯಾರ್ಥಿನಿಯರು ಪಾರಾಗಿದ್ದಾರೆ.

ಇದನ್ನೂ ಓದಿ: ಚಾಲಕ ಸಮೇತ ಅಕ್ಕಿ ಲಾರಿ ಕಿಡ್ನ್ಯಾಪ್ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ?

ಸದ್ಯ ಶಾಲಾ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದು ವಾಪಸ್​ ತೆರಳಿದ್ದಾರೆ. ಪೊಲೀಸರು ಬೈಕ್ ಜಪ್ತಿ ಮಾಡಿ ಸವಾರನನ್ನು ವಶಕ್ಕೆ ಪಡೆದಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿಯುರಿದ ಎಲೆಕ್ಟ್ರಿಕಲ್ ವಸ್ತುಗಳು: ಮನೆಯವರು ಜಸ್ಟ್​ ಮಿಸ್​

ಶಾರ್ಟ್ ಸರ್ಕ್ಯೂಟ್​ನಿಂದ ಮನೆಯಲ್ಲಿದ್ದ ಟಿವಿ ಹಾಗೂ ಎಲೆಕ್ಟ್ರಿಕಲ್ ವಸ್ತುಗಳು ಹೊತ್ತಿ ಉರಿದಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಬಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬಂಡಳ್ಳಿಯ ಜಯಲಕ್ಷ್ಮೀ ಎಂಬುವವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗ್ಗೆ ಎಂದಿನಂತೆ ಎದ್ದು ಟಿವಿ ಆನ್ ಮಾಡಿ ಕೆಲಸದಲ್ಲಿ ನಿರತರಾಗಿದ್ದಾರೆ. ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್​ನಿಂದ ಟಿವಿ ಹೊತ್ತಿ ಉರಿದಿದೆ. ಕುಟುಂಬಸ್ಥರು ಗಾಬರಿಯಿಂದ ಮನೆಯಿಂದ ಆಚೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.  ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಏಕಾಂಗಿಯಾಗಿ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದ ಮೊಹಮ್ಮದ್ ಶಮಿ

Source link

ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್ – Kannada News | First time regulations framed regarding providing food, bedding clothes to the Under Trial And Civil prisoners In Karnataka Jails

ಬೆಂಗಳೂರು, (ಜನವರಿ 24): ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯಗಳ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ಮಹತ್ವದ ಸುತ್ತೋಲೆ ಹೊರಡಿಸಿದ್ದು, ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮವಹಿಸುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರಾಗೃಹ ಡಿಜಿಪಿ ಅವರ ಹೊಸ ಆದೇಶದಿಂದಾಗಿ ಕೊಲೆ ಆರೋಪದಲ್ಲಿ ಜೈಲಲ್ಲಿರುವ ದರ್ಶನ್ (Darshan) ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಮನೆ ಊಟಕ್ಕೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಮನೆ ಊಟ ಹಾಗೂ ಇತರ ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತು ಮಾರ್ಗಸೂಚಿಗಳನ್ನು ರೂಪಿಸಲು ಇದು ಸಕಾಲ ಎಂದು ಹೈಕೋರ್ಟ್‌ ಮೌಖಿಕವಾಗಿ ಹೇಳಿತ್ತು. ಇದರ ಬೆನ್ನಲ್ಲೇ ಫುಡ್ ಮತ್ತು ಬೆಡ್ ಬಗ್ಗೆ ಹೊಸ ಆದೇಶ ಹೊರಬಿದ್ದಿದೆ.

ಇದನ್ನೂ ನೋಡಿ: ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ 

ವಿಚಾರಣಾಧೀನ ಕೈದಿಗಳು ಮತ್ತು ಸಿವಿಲ್ ಕೈದಿಗಳಿಗೆ ಆಹಾರ, ಹಾಸಿಗೆ ಮತ್ತು ಬಟ್ಟೆಗಳನ್ನು ಒದಗಿಸುವ ಬಗ್ಗೆ ಮೊದಲ ಬಾರಿಗೆ ನಿಯಮಗಳನ್ನು ರೂಪಿಸಲಾಗಿದೆ. ನಾವು ಹೊರಗಿನಿಂದ ಯಾವುದೇ ಆಹಾರವನ್ನು ಅನುಮತಿಸುವುದಿಲ್ಲ. ಬೆಂಗಳೂರು ಜೈಲಿನ ಆಹಾರವನ್ನು FSSAI ಪ್ರಮಾಣೀಕರಿಸಿದೆ ಮತ್ತು ಉತ್ತಮ ಗುಣಮಟ್ಟದ್ದಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಸೂತ್ತೋಲೆಯಲ್ಲೇನಿದೆ?

ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತೆ. ಯಾವುದೇ ಹಾಸಿಗೆಯ ಸೌಲಭ್ಯ ಇರುವುದಿಲ್ಲ. ಇನ್ನು ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸೂಚಿಸಲಾಗಿದ್ದು, ಜೈಲಿನ ನಿಯಾಮವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗುತ್ತದೆ. ಇನ್ನು ಸಂದರ್ಶನ ವೇಳೆ ಕೈದಿಗಳಿಗೆ ಖಾಸಗಿ ವ್ಯಕ್ತಿಗಳಿಂದ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರ ಪೂರೈಕೆಗೆ ಸೂಚಿಸಲಾಗಿದೆ.

ನಿರ್ದಿಷ್ಟ ಪ್ರಮಾಣದಲ್ಲಿ ಆಹಾರ ಪೂರೈಕೆ

ನಿರ್ದಿಷ್ಟ ಪ್ರಮಾಣದಲ್ಲಿ ಪ್ಯಾಕ್ ಮಾಡಿರುವ ಆಹಾರ ನೀಡಲು ಅವಕಾಶವಿದ್ದು, ಬಾಳೆಹಣ್ಣು, ಸೇಬು, ಸೀಬೆಹಣ್ಣು, ಸಪೋಟ ಸೇರಿ 2 ಕೆಜಿಯಷ್ಟಿರಬೇಕು. ಡ್ರೈಫ್ರೂಟ್ಸ್, ಬೇಕರಿ ತಿನಿಸು ಸೇರಿದಂತೆ 500 ಗ್ರಾಮ್ ಮೀರುವಂತಿಲ್ಲ. ವಿಚಾರಣಾಧೀನ ಕೈದಿಗಳಿಗೆ 2 ಜೊತೆ ಬಟ್ಟೆ, 2 ಒಳಉಡುಪು ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಜೈಲಿನಲ್ಲಿ ದೈಹಿಕ ತಪಾಸಣೆ, ಸೆಕ್ಯೂರಿಟಿ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದು, ಅಗತ್ಯವಿದ್ದರೆ ಜೈಲಿನ ಅಧಿಕಾರಿಗಳಿಂದ ಯಾವುದೇ ರೀತಿಯ ತಪಾಸಣೆ ಮಾಡಬಹುದು. ತಕ್ಷಣವೇ ಈ ನಿಯಮ ಜಾರಿಮಾಡುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಕಾರಾಗೃಹ ಡಿಜಿಪಿ ಸುತ್ತೋಲೆ ಹೊರಡಿಸಿದ್ದಾರೆ.

  • ಕರ್ನಾಟಕ ಕಾರಾಗೃಹ ಕಾಯ್ದೆ, 1963 ರ ಸೆಕ್ಷನ್ 30, ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೊಳಗಾಗದ ಕ್ರಿಮಿನಲ್ ಕೈದಿಗಳು, ಖಾಸಗಿ ಮೂಲಗಳಿಂದ ಆಹಾರ, ಬಟ್ಟೆ, ಹಾಸಿಗೆ ಅಥವಾ ಇತರ ಅಗತ್ಯ ವಸ್ತುಗಳನ್ನು ಸರಿಯಾದ ಸಮಯದಲ್ಲಿ, ಪರೀಕ್ಷೆಗೆ ಒಳಪಟ್ಟು ಮತ್ತು ಇನ್ಸ್‌ಪೆಕ್ಟರ್ ಜನರಲ್ ಅನುಮೋದಿಸಬಹುದಾದ ನಿಯಮಗಳಿಗೆ ಅನುಸಾರವಾಗಿ ಖರೀದಿಸುವ ಅಥವಾ ಸ್ವೀಕರಿಸುವ ಮೂಲಕ ತಮ್ಮನ್ನು ತಾವು ನಿರ್ವಹಿಸಲು ಅನುಮತಿಸುತ್ತದೆ.
  • ಕೈದಿಗಳು ಮತ್ತು ಶಿಕ್ಷೆಗೊಳಗಾಗದ ಕ್ರಿಮಿನಲ್ (ವಿಚಾರಣೆಯಲ್ಲಿರುವ) ಕೈದಿಗಳು ಸೇರಿದಂತೆ ಎಲ್ಲಾ ಕೈದಿಗಳಿಗೆ ಕರ್ನಾಟಕ ಕಾರಾಗೃಹ ಕಾಯ್ದೆ, 1963, ಕರ್ನಾಟಕ ಕಾರಾಗೃಹ ನಿಯಮಗಳು, 1974 ಮತ್ತು ಕರ್ನಾಟಕ ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಕೈಪಿಡಿ, 2021 ರ ಪ್ರಕಾರ ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಇಲಾಖೆಯು ಈಗಾಗಲೇ ಸಾಕಷ್ಟು ಆಹಾರ, ಬಟ್ಟೆ ಮತ್ತು ಹಾಸಿಗೆಗಳನ್ನು ಒದಗಿಸುತ್ತಿದೆ.
  • ಜೈಲು ಭದ್ರತೆ, ಸುರಕ್ಷತೆ, ಸಿಬ್ಬಂದಿ ಕೊರತೆ, ಜನದಟ್ಟಣೆ, ಆಡಳಿತಾತ್ಮಕ ಕಾರ್ಯಸಾಧ್ಯತೆ ಮತ್ತು ಆರೋಗ್ಯ ಕಾಳಜಿಗಳ ಸಮಸ್ಯೆಗಳನ್ನು ಪರಿಗಣಿಸಿ, ಖಾಸಗಿ ಮೂಲಗಳಿಂದ ಆಹಾರ, ಬಟ್ಟೆ ಮತ್ತು ಹಾಸಿಗೆಗಳ ಸ್ವೀಕೃತಿಯನ್ನು ನಿಯಂತ್ರಿಸುವುದು ಮತ್ತು ನಿರ್ಬಂಧಿಸುವುದು ಅಗತ್ಯವಾಗಿದೆ.

ಹೈಕೋರ್ಟ್ ಆದೇಶ ಸ್ವಾಗತಿಸಿದ್ದ ಅಲೋಕ್ ಕುಮಾರ್

ಪವಿತ್ರಗೌಡಗೆ ಮನೆಯೂಟಕ್ಕೆ ಹೈಕೋರ್ಟ್ ನಿಷೇಧ ಹೇರಿದ ಬಗ್ಗೆ ಪ್ರತಿಕ್ರಿಯಿಸಿದ್ದ ಅಲೋಕ್ ಕುಮಾರ್, ಪವಿತ್ರಗೌಡಗೆ (Pavitra Gowda) ಮನೆ ಊಟ ಕೊಡದೇ ಇರೋದು ಒಳ್ಳೆಯದು. ನಾವು ಕಾರಾಗೃಹದಲ್ಲಿ ಒಳ್ಳೆಯ ಊಟ ನೀಡುತ್ತಿದ್ದೇವೆ. ಮನೆಯಿಂದ ತರುವ ಊಟಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾರಾಗೃಹದಲ್ಲಿ ತಯಾರಿಸುವ ಊಟದ ಗುಣಮಟ್ಟವನ್ನು ಎಫ್ಎಸ್ಐಎಲ್‌ಗೆ ಪರೀಕ್ಷೆಗೆ ಕಳುಹಿಸಿ ಸರ್ಟಿಪೈಟ್ ಪಡೆದ ಬಳಿಕ ಕೈದಿಗಳಿಗೆ ನೀಡುತ್ತಿದ್ದೇವೆ ಎಂದಿದ್ದಾರೆ.

ಜೈಲಿನಲ್ಲಿರುವ ಕೈದಿಗಳಲ್ಲಿ ಪ್ರಭಾವಶಾಲಿ ಯಾರು, ಕೆಳಮಟ್ಟದಲ್ಲಿರೋರು ಯಾರು ಎಂದು ನೋಡಲು ಸಾಧ್ಯವಿಲ್ಲ. ಸೆಕ್ಷನ್ 30 ಕರ್ನಾಟಕ ಪ್ರಿಜನರ್ಸ್‌ ಆಕ್ಟ್ 1963 ಪ್ರಕಾರ ಕೈದಿಗಳಿಗೆ ಊಟ, ಬಟ್ಟೆ ಪುಸ್ತಕ ಕೂಡಬೇಕು. ಈ ನಿಯಮದ ಅಡಿ ತೀರ್ಮಾನ ಮಾಡಲಾಗುತ್ತದೆ. ಕಾರಗೃಹದ ಕೈದಿಗಳಿಗೆ ನಾವು ನೀಡುತ್ತಿರುವ ಊಟ ಸರ್ಟಿಫೈಡ್ ಆಗಿರುವುದರಿಂದ ಒಬ್ಬರಿಗೆ ಮನೆಯಿಂದ ಊಟ ನೀಡಿದ್ರೆ, ಮುಂದೆ ಸಾವಿರಾರು ಜನ ಇದೇ ರೀತಿ ಕೇಳುತ್ತಾರೆ. ಇದರಿಂದ ಪವಿತ್ರಗೌಡಗೆ ಮನೆ ಊಟ ನೀಡಲು ನಿರಾಕರಿಸಿರುವುದು ಒಳ್ಳೆಯದು ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ, ಜನವರಿ 24: ವೀರಪ್ಪನ್​ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್​ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

37 ವರ್ಷದ ಹಿಂದೆ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆ ಆಗುತ್ತಿದೆ ರಜನೀಕಾಂತ್ ಸಿನಿಮಾ – Kannada News | Rajinikanth’s movie releasing after 37 year after completing its shooting

ರಜನೀಕಾಂತ್ (Rajinikanth) ಭಾರತದ ಸೂಪರ್ ಸ್ಟಾರ್ ನಟ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರ ರಜನೀಕಾಂತ್. ಈಗಲೂ ಸಹ ರಜನೀಕಾಂತ್ ಅವರ ಕಾಲ್​​ಶೀಟ್​​ಗಾಗಿ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ 37 ವರ್ಷಗಳ ಹಿಂದೆ ರಜನೀಕಾಂತ್ ಮಾತ್ರವಲ್ಲ ಇನ್ನೂ ಕೆಲವು ದೊಡ್ಡ ಸ್ಟಾರ್ ನಟರುಗಳನ್ನು ಹಾಕಿಕೊಂಡು ಭಾರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ ಬಳಿಕ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ.

ನಟಿ ರೀನಾ ರಾಯ್ ಅವರ ಸಹೋದರ ರಾಜಾ ರಾಯ್ ಅವರು 1989 ರಲ್ಲಿ ನಿರ್ಮಾಣ ಮಾಡಿದ್ದ ಸಿನಿಮಾ ‘ಹಮ್ ಮೇ ಶೆಹೆನ್ಶಾ ಕೌನ್’ ಇದೀಗ ಸುಮಾರು ನಾಲ್ಕು ದಶಕಗಳ ಬಳಿಕ ಬಿಡುಗಡೆ ಆಗುತ್ತಿದೆ. ರಜನೀಕಾಂತ್ ಮಾತ್ರವೇ ಅಲ್ಲದೆ ಆಗ ಸೂಪರ್ ಸ್ಟಾರ್ ಬಾಲಿವುಡ್​ ನಟ ಶತೃಘ್ನ ಸಿನ್ಹಾ, ಸ್ಟಾರ್ ನಟಿ ಹೇಮಾ ಮಾಲಿನಿ, ಖ್ಯಾತ ವಿಲನ್ ಅಮರೀಶ್ ಪುರಿ, ಪ್ರೇಮ್ ಚೋಪ್ರಾ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದರು.

‘ಹಮ್ ಮೇ ಶೆಹೆನ್ಶಾ ಕೌನ್’ ಸಿನಿಮಾವನ್ನು ಆಗಿನ ಜನಪ್ರಿಯ ನಿರ್ದೇಶಕ ಹರ್ಮೇಶ್ ಮಲ್ಹೋತ್ರಾ ನಿರ್ದೇಶನ ಮಾಡಿದ್ದರು. ಸಿನಿಮಾಕ್ಕೆ ಸಂಗೀತ ನೀಡಿದ್ದಿದ್ದು ಲಕ್ಷ್ಮಿಕಾಂತ್ ಪ್ಯಾರೇಲಾಲ್, ಸಿನಿಮಾಕ್ಕೆ ಡೈಲಾಗ್ ಬರೆದಿದ್ದು ಸಲ್ಮಾನ್ ಖಾನ್ ತಂದೆ ಸಲೀಂ, ಸರೋಜ್ ಖಾನ್ ನೃತ್ಯ ನಿರ್ದೇಶಕಿ. ಅದ್ಧೂರಿ ತಾರಾಗಾಣ, ಅದ್ದೂರಿ ಸೆಟ್​​ಗಳನ್ನು ಹಾಕಿ ಬಲು ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದ್ದ ಸಿನಿಮಾವು ಅನಿವಾರ್ಯ ಕಾರಣಗಳಿಂದ ಪೂರ್ಣಗೊಂಡಿರಲಿಲ್ಲ. ಆದರೆ ಇದೀಗ ಎಐ ಬಳಸಿ ಸಿನಿಮಾವನ್ನು ಪೂರ್ತಿ ಮಾಡಲಾಗಿದ್ದು, ಬಿಡುಗಡೆಗೆ ಸಜ್ಜು ಮಾಡಲಾಗಿದೆ.

ಇದನ್ನೂ ಓದಿ:ರಜನೀಕಾಂತ್ ಮತ್ತು ಗಿಲ್ಲಿ: ಒಂದು ಬಿರಿಯಾನಿಯ ಕತೆ

ಇದೀಗ ಸಿನಿಮಾ ಬಿಡುಗಡೆ ಬಗ್ಗೆ ಘೋಷಿಸಿರುವ ನಿರ್ಮಾಪಕ ಮತ್ತು ಸಹ ನಿರ್ಮಾಪಕರು, ಸಿನಿಮಾವನ್ನು ನಾವು ಪೂರ್ಣ ಮಾಡಿದ್ದೆವು, ಆದರೆ ಈಗ ಎಐ ಮತ್ತು ಇತರೆ ತಂತ್ರಜ್ಞಾನಗಳನ್ನು ಬಳಸಿ, ಈಗಿನ ತಂತ್ರಜ್ಞಾನಕ್ಕೆ ತಕ್ಕಂತೆ ಸಿನಿಮಾವನ್ನು ಅಪ್​​ಡೇಟ್ ಮಾಡಲಾಗಿದೆ. ದೃಶ್ಯಗಳನ್ನು ಇನ್ನಷ್ಟು ಪರಿಣಾಮಕಾರಿ ಗೊಳಿಸಲು ನಾವು ಎಐ ಅನ್ನು ಬಳಸಿದ್ದೇವೆ ಎಂದಿದ್ದಾರೆ. ಸಿನಿಮಾವನ್ನು 4ಕ ಫಾರ್ಮ್ಯಾಟ್​​ಗೆ ಬದಲಾಯಿಸಲಾಗಿದ್ದು, 5.1 ಸರೌಂಡ್ ಸೌಂಡ್ ಅನ್ನು ಅಳವಡಿಸಲಾಗಿದೆ.

‘ಹಮ್ ಮೇ ಶೆಹೆನ್ಶಾ ಕೌನ್’ ಸಿನಿಮಾವನ್ನು ಆಗ 35 ಎಂಎಂ ಈಸ್ಟಮನ್​​ ಕಲರ್​​ನಲ್ಲಿ ಚಿತ್ರೀಕರಣ ಮಾಡಲಾಗಿತ್ತಂತೆ. ಸಿನಿಮಾದ ಚಿತ್ರೀಕರಣ ಆಗಲೇ ಪೂರ್ಣಗೊಂಡಿದ್ದರೂ ಸಹ ಕೆಲವು ಕಾರಣಗಳಿಂದಾಗಿ ಸೆನ್ಸಾರ್ ಸರ್ಟಿಫಿಕೇಟ್​​ಗೆ ಸಿನಿಮಾವನ್ನು ಸಲ್ಲಿಸಲಾಗಿರಲಿಲ್ಲ. ಆದರೆ ಈಗ ಮತ್ತೊಮ್ಮೆ ಸಿನಿಮಾಕ್ಕೆ ಅಂತಿಮ ಸ್ಪರ್ಷ ನೀಡಿದ್ದು, ಸಿನಿಮಾವನ್ನು ಸೆನ್ಸಾರ್​​ಗೆ ಕಳಿಸಿ ಬಿಡುಗಡೆ ಮಾಡಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್? – Kannada News | 2026 T20 World Cup: Pakistan’s Participation Doubtful After Bangladesh’s Exclusion

2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶವನ್ನು ಪಂದ್ಯಾವಳಿಯಿಂದ ಹೊರಗಿಟ್ಟ ನಂತರ ಪಾಕ್ ಮಂಡಳಿ ಅಧ್ಯಕ್ಷನಿಂದ ಈ ಹೇಳಿಕೆ ಬಂದಿದೆ. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಪಂದ್ಯಗಳನ್ನು ಆಡದಿರಲು ನಿರ್ಧರಿಸಿತ್ತು. ಬಿಸಿಬಿ ತನ್ನ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸುವಂತೆ ಐಸಿಸಿಯನ್ನು ವಿನಂತಿಸಿತು, ಆದರೆ ಜನವರಿ 21 ರಂದು ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ಪ್ರಸ್ತಾಪವನ್ನು ತಿರಸ್ಕರಿಸಲಾಯಿತು. ಇದರ ನಂತರ, ಐಸಿಸಿ ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಆಡುವ ಅವಕಾಶ ನೀಡಿದೆ.

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಬಗ್ಗೆ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳುತ್ತದೆ. ಪ್ರಧಾನಿ ದೇಶಕ್ಕೆ ಮರಳಲು ನಾವು ಕಾಯುತ್ತಿದ್ದೇವೆ. ಬಾಂಗ್ಲಾದೇಶಕ್ಕೆ ಅನ್ಯಾಯ ಮಾಡಲಾಗಿದೆ. ಪಾಕಿಸ್ತಾನ ಸರ್ಕಾರ ಪಂದ್ಯಾವಳಿಯನ್ನು ಬಹಿಷ್ಕರಿಸುವಂತೆ ಕೇಳಿದರೆ, ಐಸಿಸಿ 22 ನೇ ತಂಡವನ್ನು ಸೇರಿಸಿಕೊಳ್ಳಬಹುದು. ಅದು ನಮಗೆ ಮುಖ್ಯವಲ್ಲ. ಬಾಂಗ್ಲಾದೇಶವನ್ನು ಅನ್ಯಾಯಕ್ಕೆ ಬಲಿಪಶುವನ್ನಾಗಿ ಮಾಡಬಾರದು. ಅವರು ಕೂಡ ಪ್ರಮುಖ ಸದಸ್ಯರಾಗಿದ್ದಾರೆ ಎಂದು ಮೊಹ್ಸಿನ್ ನಖ್ವಿ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ – Kannada News | WPL 2026: RCB vs DC Match 15 – Playoffs Battle, Toss and Playing XI Revealed

2026 ರ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್​ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್‌ ಈ ಪಂದ್ಯವನ್ನು ಗೆದ್ದು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ವಡೋದರಾದಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾಗಿ ಹೇಳಿದರು. ಇತ್ತ ಟಾಸ್ ಸೋತ ಸ್ಮೃತಿ ಕೂಡ ಟಾಸ್ ಗೆದ್ದಿದ್ದರೆ, ಬೌಲಿಂಗ್ ಮಾಡುವುದಾಗಿ ಹೇಳಿದರು. ಟಾಸ್ ಬಳಿಕ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಗೌತಮಿ ನಾಯ್ಕ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಅರುಂಧತಿ ರೆಡ್ಡಿ (ಪ್ರೇಮಾ ರಾವತ್ ಬದಲಿಗೆ), ಶ್ರೇಯಾಂಕಾ ಪಾಟೀಲ್, ಸಯಾಲಿ ಸತ್ಘರೆ, ಮತ್ತು ಲಾರೆನ್ ಬೆಲ್.

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರಾಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ನಿಕಿ ಪ್ರಸಾದ್, ಚಿನೆಲ್ಲೆ ಹೆನ್ರಿ (ಲೂಸಿ ಹ್ಯಾಮಿಲ್ಟನ್ ಬದಲಿಗೆ), ಸ್ನೇಹ ರಾಣಾ, ಮಿನ್ನು ಮಣಿ (ದೀಯಾ ಯಾದವ್ ಬದಲಿಗೆ), ಶ್ರೀ ಚರಣಿ ಮತ್ತು ನಂದಿನಿ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:13 pm, Sat, 24 January 26

Source link

ಚಾಲಕ ಸಮೇತ ಅಕ್ಕಿ ಲಾರಿ ದರೋಡೆ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ? – Kannada News | Bagalkote: Mahalingapura Police Nab 8 Interstate Robbers in Rice Truck Heist Operation

ದರೋಡೆಕೋರರನ್ನು ಬಂಧಿಸಿದ ಮಹಾಲಿಂಗಪುರ ಪೊಲೀಸರು

ಬಾಗಲಕೋಟೆ, ಜನವರಿ 24: ಅಕ್ಕಿ (Rice) ಸಾಗಾಟ ಮಾಡುತ್ತಿದ್ದ ಚಾಲಕ ಸೇರಿದಂತೆ ಲಾರಿ ಅಪಹರಿಸಿದ್ದ 8 ಜನ ಅಂತಾರಾಜ್ಯ ದರೋಡೆಕೋರರನ್ನು (Robbers) ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಪೊಲೀಸರು ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಮೂಲದ ಜಾಕೀರ್ ಮಕಾಂದಾರ್, ಸಚಿನ್ ನಾಯ್ಕೊಡಿ, ಅರ್ಪಾತ್ ತಾಳಿಕೋಟಿ, ಸಂತೋಷ್​ ಕಾಂಬಳೆ, ಫಯಾಜ್ ಮಕಾಂದಾರ್, ಜಮಖಂಡಿಯ ಸಂಜು ಕಡಕೋಳ, ವಿಶ್ವನಾಥ ಲಗಳಿ, ಜಮಖಂಡಿ ತಾಲ್ಲೂಕಿನ ಮೈಗೂರು ಗ್ರಾಮದ ಸಂಗಮೇಶ್ ಕಾಂಬಳೆ ಬಂಧಿತರು. 3 ಲಕ್ಷ 90 ಸಾವಿರ ರೂ ಹಣ, ಸ್ಕಾರ್ಪಿಯೋ, ಇನ್ನೋವಾ ಮತ್ತು ಲಾರಿ ಜಪ್ತಿ ಮಾಡಲಾಗಿದೆ.

ನಡೆದದ್ದೇನು?

ಜನವರಿ 10ರ ರಾತ್ರಿ 12.45ಕ್ಕೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರ ಬಳಿ ಘಟನೆ ನಡೆದಿದೆ. ಸ್ಕಾರ್ಪಿಯೋ ಕಾರಿನಲ್ಲಿ ವಿಜಯಪುರ ಗ್ಯಾಂಗ್​​ ಬಂದಿದ್ದು, ಇನ್ನೋವಾ ಕಾರಿನಲ್ಲಿ ಜಮಖಂಡಿ ಗ್ಯಾಂಗ್​​ ಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಕೊಲ್ಲಾಪುರಕ್ಕೆ ಹೊರಟಿದ್ದ (MH 09 UC 8190) ನಂಬರಿನ ಲಾರಿಯನ್ನ ಸೈದಾಪುರ ಬಳಿ ಅಡ್ಡಗಟ್ಟಿದ ದರೋಡೆಕೋರರು ಚಾಲಕನನ್ನು ಥಳಿಸಿ‌ದ್ದಾರೆ. ಅಷ್ಟೇ ಅಲ್ಲದೆ ಚಾಲಕನ ಕಣ್ಣಿಗೆ ಬಟ್ಟೆ ಕಟ್ಟಿ ಕಿಡ್ನ್ಯಾಪ್​​ ಮಾಡಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಕೊಪ್ಪಳದಿಂದ ದುಬೈಗೆ ಕಳ್ಳ ಸಾಗಾಟ? ‘ಟಿವಿ9’ ವರದಿ ಬೆನ್ನಲ್ಲೇ ನಾಲ್ವರ ವಿರುದ್ಧ ಎಫ್​ಐಆರ್

ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ 6 ಲಕ್ಷ 12 ಸಾವಿರ 500 ರೂ ಮೌಲ್ಯದ 25 ಟನ್​​​ ಅಕ್ಕಿಯನ್ನು​ ಒಬ್ಬರಿಗೆ ಮಾರಾಟ ಮಾಡಿದ್ದಾರೆ. ಅಕ್ಕಿ ಮಾರಾಟದಿಂದ ಬಂದ ಹಣ ತೆಗೆದುಕೊಂಡು ದರೋಡೆಕೋರರು ಪರಾರಿ ಆಗಿದ್ದಾರೆ. ಸದ್ಯ ಲಾರಿ ಚಾಲಕ ಬಾಬಾಸಾಬ ರಾಮದುರ್ಗ ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ದರೋಡೆಕೋರರು ಲಾಕ್​​ ಆಗಿದ್ದೇಗೆ?

ಇನ್‌ಸ್ಟಾಗ್ರಾಮ್​ ವಾಯ್ಸ್​​ ಕಾಲ್​ ಆಧಾರವಾಗಿಟ್ಟುಕೊಂಡು ಮಹಾಲಿಂಗಪುರ ಪೊಲೀಸರು ರೋಚಕ ಕಾರ್ಯಾಚರಣೆ ಮಾಡಿದ್ದಾರೆ. ದರೋಡೆಕೋರರ ಪರಿಚಿತರಿಂದ ಅವರಿಗೆ ಮೆಸೇಜ್​ ಕಳುಹಿಸಲಾಗಿದೆ. ಬಳಿಕ ಐಡಿಪಿಆರ್, ಇಂಟರ್ನೆಟ್ ಆಪರೇಟ್ ಸ್ಥಳ ಗುರುತಿಸಿ ದರೋಡೆಕೋರರ ಕೈಗೆ ಕೋಳ ತೊಡಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ರೇಷನ್ ಅಕ್ಕಿಗೆ ಕನ್ನ; ಖಡಕ್ ವಾರ್ನಿಂಗ್ ಕೊಟ್ಟ ಆಹಾರ ಇಲಾಖೆ

ಇನ್ನು ಅಕ್ಕಿ ಕಳ್ಳ ಸಾಗಾಣಿಕೆ ಮೂಲಕ ಸಾಗಾಟ ಮಾಡಲಾಗುತ್ತಿತ್ತಾ ಅಥವಾ ಕಾನೂನುಬದ್ಧ ಆಗಿತ್ತಾ, ಪಡಿತರ ಅಕ್ಕಿನಾ, ರೈಸ್ ಸ್ಮಗ್ಲಿಂಗ್ ಮಾಫಿಯಾನಾ ಎಂದು ಪೊಲೀಸರು‌ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ – Kannada News | Bigg Boss Kannada 12: Gilli visited his old school

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಗೆದ್ದ ಗಿಲ್ಲಿ, ಗೆದ್ದ ಬಳಿಕ ಬಿಡುವಿಲ್ಲದಂತೆ ಪರ್ಯಟನೆ ಮಾಡುತ್ತಿದ್ದಾರೆ. ಸುದೀಪ್, ಶಿವರಾಜ್ ಕುಮಾರ್ ಅವರ ಭೇಟಿ ಆಗಿ ಆಶೀರ್ವಾದ ಪಡೆದ ಬಳಿಕ ಸಿಎಂ ಸೇರಿದಂತೆ ರಾಜ್ಯದ ಕೆಲವು ಪ್ರಮುಖ ರಾಜಕಾರಣಿಗಳನ್ನು ಸಹ ಭೇಟಿಯಾಗಿ ಆಶೀರ್ವಾದ ಪಡೆದರು. ಇದೀಗ ತಮ್ಮ ಹುಟ್ಟೂರಿಗೆ ತೆರಳಿದ ಗಿಲ್ಲಿ, ಅಲ್ಲಿ ತಾವು ಪ್ರೌಢಶಾಲೆ ಕಲಿತ ಬಂಡೂರಿನ ಶಾಲೆಗೆ ಭೇಟಿ ನೀಡಿದ್ದರು. ಶಿಕ್ಷಕರು, ಊರಿನವರು, ಕೆಲವು ಹಳೆ ಗೆಳೆಯರ ಭೇಟಿ ಮಾಡಿದ ಗಿಲ್ಲಿ ನಟ, ತಾವು ಕೂರುತ್ತಿದ್ದ ಶಾಲೆಯ ಬೆಂಚಿನ ಮೇಲೆ ಕೂತು ಹಳೆಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link