ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್ ಮರ್ಡರ್ ಕೆಸ್ನಲ್ಲಿ 8 ಮಂದಿ ಅಂದರ್ – Kannada News | Mangammanapalya Rowdy Murder: 8 Held in Shabbir Killing Over Area Dominance
ಬೆಂಗಳೂರು, ಜನವರಿ 21: ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ನ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬರೋಬ್ಬರಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ರಾತ್ರಿ ತಮ್ಮ ಸ್ನೇಹಿತನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದ ಸಂದರ್ಭ ದಾಳಿ ನಡೆಸಿದ್ದ ಆರೋಪಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಶಬ್ಬೀರ್…