ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election
ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ….